ಯುಕೆ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

November 19th, 05:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಕಿಂಗ್‌ಡಂನ ಪ್ರಧಾನಮಂತ್ರಿ ಗೌರವಾನ್ವಿತ ಸರ್ ಕೀರ್ ಸ್ಟಾರ್ಮರ್ ಅವರನ್ನು ಭೇಟಿ ಮಾಡಿದ್ದರು. ಉಭಯ ಪ್ರಧಾನಿಗಳ ನಡುವಿನ ಮೊದಲ ಭೇಟಿ ಇದಾಗಿದೆ. ಪ್ರಧಾನಮಂತ್ರಿಯಾಗಿ ಸ್ಟಾರ್ಮರ್ ಅಧಿಕಾರ ಸ್ವೀಕರಿಸುವುದಕ್ಕೆ ಪ್ರಧಾನಿ ಅಭಿನಂದಿಸಿದರು. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಐತಿಹಾಸಿಕ ಮೂರನೇ ಅವಧಿಯ ಅಧಿಕಾರ ವಹಿಸಿಕೊಂಡಿರುವುದಕ್ಕೆ ಪ್ರಧಾನಮಂತ್ರಿ ಸ್ಟಾರ್ಮರ್ ಅವರಿಗೆ ಶುಭಾಶಯಗಳನ್ನು ತಿಳಿಸಿದರು.

ಯುನೈಟೆಡ್ ಕಿಂಗ್‌ಡಂನ ವಿದೇಶಾಂಗ ಕಾರ್ಯದರ್ಶಿ ಗೌರವಾನ್ವಿತ ಡೇವಿಡ್ ಲ್ಯಾಮ್ಮಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು

July 24th, 08:00 pm

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುನೈಟೆಡ್ ಕಿಂಗ್‌ಡಂನ ವಿದೇಶಾಂಗ ಕಾರ್ಯದರ್ಶಿ ಆರ್ಟಿ ಹಾನ್ ಡೇವಿಡ್ ಲ್ಯಾಮಿ ಅವರೊಂದಿಗೆ ಸಮಾಲೋಚನೆ ನಡೆಸಿದರು.

ಯುನೈಟೆಡ್ ಕಿಂಗ್ಡಮ್ ನ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಕೀರ್ ಸ್ಟಾರ್ಮರ್ ಅವರನ್ನು ಅಭಿನಂದಿಸಿ, ಅವರೊಂದಿಗೆ ಮಾತನಾಡಿದ ಪ್ರಧಾನಮಂತ್ರಿಯವರು

July 06th, 03:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಯುನೈಟೆಡ್ ಕಿಂಗ್ಡಮ್ ನ ಪ್ರಧಾನಮಂತ್ರಿಯವರಾದ ಗೌರವಾನ್ವಿತ ಕೀರ್ ಸ್ಟಾರ್ಮರ್ ಅವರೊಂದಿಗೆ ಮಾತುಕತೆ ನಡೆಸಿದರು.

ಯುಕೆ ಸಾರ್ವತ್ರಿಕ ಚುನಾವಣೆಯಲ್ಲಿ ಜಯಶಾಲಿಯಾದ ಕೀರ್ ಸ್ಟಾರ್ಮರ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

July 05th, 07:14 pm

ಯುನೈಟೆಡ್ ಕಿಂಗ್ಡಮ್ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೀರ್ ಸ್ಟಾರ್ಮರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಅಭಿನಂದಿಸಿದ್ದಾರೆ.