ಅಂತಾರಾಷ್ಟ್ರೀಯ ಅಭಿಧಮ್ಮ ದಿನ ಉದ್ಘಾಟಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ

October 17th, 10:05 am

ಸಂಸ್ಕೃತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರೆನ್ ರಿಜಿಜು ಜೀ, ಬಂದಂತ್ ರಾಹುಲ್ ಬೊಧಿ ಮಹಥೆರೋ ಜೀ, ವೆನವರಬಲ್ ಜುಂಗ್ ಚುಪ್ ಚೋಡೆನ್ ಜೀ, ಮಹಾಸಂಘದ ಎಲ್ಲಾ ಗಣ್ಯ ಸದಸ್ಯರೇ, ರಾಯಭಾರಿ ಸಮುದಾಯದ ಸದಸ್ಯರೇ,. ಬೌದ್ಧ ಚಿಂತಕರೇ, ಬೌದ್ಧ ಧರ್ಮದ ಅನುಯಾಯಿಗಳೇ, ಮಹಿಳೆಯರೇ ಮತ್ತು ಮಹನೀಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು

October 17th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು. ಅಭಿಧಮ್ಮ ದಿನವನ್ನು ಅಭಿಧಮ್ಮನಿಗೆ ಕಲಿಸಿದ ನಂತರ ಭಗವಾನ್ ಬುದ್ಧನು ಆಕಾಶಲೋಕದಿಂದ ಇಳಿದದ್ದನ್ನು ಸ್ಮರಿಸಲಾಗುತ್ತದೆ. ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಇತ್ತೀಚೆಗೆ ಗುರುತಿಸಿರುವುದು ಈ ವರ್ಷದ ಅಭಿಧಮ್ಮ ದಿವಸ್ ಆಚರಣೆಯ ಮಹತ್ವವನ್ನು ಹೆಚ್ಚಿಸುತ್ತದೆ, ಏಕೆಂದರೆ ಭಗವಾನ್ ಬುದ್ಧನ ಅಭಿಧಮ್ಮದ ಬೋಧನೆಗಳು ಮೂಲತಃ ಪಾಲಿ ಭಾಷೆಯಲ್ಲಿ ಲಭ್ಯವಿದೆ.

ಖಿರ್ಕಿಯಾದಿಂದ ಜಟಾಹ ಬಜಾರ್‌ವರೆಗೆ 17 ಕಿಲೋಮೀಟರ್ ಉದ್ದದ ರಸ್ತೆ ನಿರ್ಮಾಣವು ಖುಶಿನಗರದ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ನೀಡುತ್ತದೆ: ಪ್ರಧಾನಿ ನರೇಂದ್ರ ಮೋದಿ

February 27th, 01:59 pm

ಉತ್ತರ ಪ್ರದೇಶದ ಕುಶಿನಗರ ಲೋಕಸಭಾ ಕ್ಷೇತ್ರದ ಖಿರ್ಕಿಯಾದಿಂದ ಜಟಾಹ ಬಜಾರ್‌ವರೆಗೆ 17 ಕಿಲೋಮೀಟರ್ ಉದ್ದದ ರಸ್ತೆ ನಿರ್ಮಾಣವು ಖುಶಿನಗರದ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ನೀಡಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಉತ್ತರ ಪ್ರದೇಶದ ಜಲೌನ್ ನಲ್ಲಿ ಬುಂಡೇಲ್ ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಅನುವಾದ

July 16th, 04:17 pm

ಉತ್ತರ ಪ್ರದೇಶದ ಎಲ್ಲ ಜನರಿಗೆ, ಬುಂಡೇಲ್ ಖಂಡದ ಸಹೋದರ ಸಹೋದರಿಯರಿಗೆ ಈ ಆಧುನಿಕ ಬುಂಡೇಲ್ ಖಂಡ ಎಕ್ಸ್ ಪ್ರೆಸ್ ವೇ ಗಾಗಿ ನನ್ನ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಕೋರುತ್ತೇನೆ. ಈ ಎಕ್ಸ್ ಪ್ರೆಸ್ ವೇ ಅನ್ನು ಬುಂಡೇಲ್ ಖಂಡದ ವೈಭವದ ಪರಂಪರೆಗೆ ಅರ್ಪಿಸುತ್ತಿದ್ದೇವೆ. ಉತ್ತರ ಪ್ರದೇಶದ ಸಂಸದನಾಗಿ ಮತ್ತು ಉತ್ತರ ಪ್ರದೇಶದ ಪ್ರತಿನಿಧಿಯಾಗಿ ಈ ಎಕ್ಸ್ ಪ್ರೆಸ್ ವೇಯನ್ನು ಬುಂಡೇಲ್ ಖಂಡಕ್ಕೆ ಕೊಡುಗೆಯಾಗಿ ನೀಡುತ್ತಿರುವುದಕ್ಕೆ ಅತೀವ ಸಂತಸವಾಗುತ್ತಿದೆ. ಈ ಪ್ರದೇಶ ಅಸಂಖ್ಯಾತ ಯೋಧರನ್ನು ಮತ್ತು ದೇಶಕ್ಕಾಗಿ ರಕ್ತ ಹರಿಸಿದವರನ್ನು ಮತ್ತು ಶೌರ್ಯ ಹಾಗೂ ಕಠಿಣ ಪರಿಶ್ರಮದ ಪುರುಷರು ಮತ್ತು ಮಹಿಳೆಯರನ್ನು ಕೊಡುಗೆಯಾಗಿ ನೀಡಿದೆ.

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನ ಮಂತ್ರಿ ಅವರಿಂದ ಬುಂದೇಲ್ ಖಂಡ ಎಕ್ಸ್ ಪ್ರೆಸ್ ವೇ ಉದ್ಘಾಟನೆ.

July 16th, 10:25 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಜಲೌನ್ ನ ಒರೈ ತಹಸಿಲ್ ನ ಕೈತೇರಿ ಗ್ರಾಮದಲ್ಲಿ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯದ ಸಚಿವರು, ಜನ ಪ್ರತಿನಿಧಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ನೇಪಾಳದಲ್ಲಿ 2566 ನೇ ಬುದ್ಧ ಜಯಂತಿ ಮತ್ತು ಲುಂಬಿನಿ ದಿನ 2022 ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಭಾಷಾಂತರ.

May 16th, 09:45 pm

ಈ ಹಿಂದಿನಂತೆ ವೈಶಾಖ ಪೂರ್ಣಿಮೆಯ ದಿನದಂದು ನನಗೆ ಭಗವಾನ್ ಬುದ್ಧ ಅವರಿಗೆ ಸಂಬಂಧಪಟ್ಟ ಸ್ಥಳಗಳಿಗೆ ಭೇಟಿ ನೀಡಲು ಮತ್ತು ಅವರಿಗೆ ಸಂಬಂಧಪಟ್ಟ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶಗಳು ಲಭಿಸುತ್ತಿವೆ. ಮತ್ತು ಇಂದು ನನಗೆ ಭಾರತದ ಮಿತ್ರ ರಾಷ್ಟ್ರವಾದ ನೇಪಾಳದಲ್ಲಿರುವ ಭಗವಾನ್ ಬುದ್ಧನ ಜನ್ಮಸ್ಥಳ ಲುಂಬಿನಿಗೆ ಭೇಟಿ ನೀಡುವ ಸದವಕಾಶ ದೊರಕಿದೆ. ಕೆಲ ಸಮಯದ ಹಿಂದೆ ಮಾಯಾದೇವಿ ದೇವಾಲಯಕ್ಕೆ ಭೇಟಿ ನೀಡುವ ಅವಕಾಶ ದೊರಕಿರುವುದು ನನಗೆ ಮರೆಯಲಾಗದ ಸಂಗತಿ. ಭಗವಾನ್ ಬುದ್ಧ ಹುಟ್ಟಿದ ಸ್ಥಳದಲ್ಲಿರುವ ಶಕ್ತಿ, ಅಲ್ಲಿರುವ ಜಾಗೃತ ಪ್ರಜ್ಞೆ, ಮನಃಶಾಂತಿ ಒಂದು ವಿಭಿನ್ನ ಆನುಭವ. ಈ ಸ್ಥಳದಲ್ಲಿ 2014 ರಲ್ಲಿ ನನಗೆ ನೀಡಲಾದ ಮಹಬೋಧಿ ವೃಕ್ಷದ ಸಸಿ ಈಗ ಮರವಾಗಿ ಬೆಳೆಯುತ್ತಿರುವುದನ್ನು ನೋಡುವುದಕ್ಕೆ ನನಗೆ ಅಪಾರ ಸಂತೋಷವಾಗುತ್ತಿದೆ. .

ಕುಶಿನಗರದ ಮಹಾಪರಿನಿರ್ವಾಣ ಸ್ತೂಪದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ

May 16th, 07:19 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬುದ್ಧ ಪೂರ್ಣಿಮೆಯ ಅಂಗವಾಗಿ, ಉತ್ತರ ಪ್ರದೇಶದ ಕುಶಿನಗರದಲ್ಲಿರುವ ಮಹಾಪರಿನಿರ್ವಾಣ ಸ್ತೂಪದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದಕ್ಕೂ ಮುನ್ನ ಇಂದು ಪ್ರಧಾನಮಂತ್ರಿಯವರು ಭಗವಾನ್ ಬುದ್ಧನ ಜನ್ಮಸ್ಥಳ ನೇಪಾಳದ ಲುಂಬಿನಿಗೆ ಭೇಟಿ ನೀಡಿ ಮಾಯಾದೇವಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ʻಲುಂಬಿನಿ ಮೊನ್ಯಾಸ್ಟಿಕ್‌ ಝೋನ್‌ʼನಲ್ಲಿ ʻಬೌದ್ಧ ಸಂಸ್ಕೃತಿ ಮತ್ತು ಪರಂಪರೆಗಾಗಿ ಭಾರತದ ಅಂತರರಾಷ್ಟ್ರೀಯ ಕೇಂದ್ರʼ ನಿರ್ಮಾಣಕ್ಕೆ ನೇಪಾಳದ ಪ್ರಧಾನಮಂತ್ರಿ ಗೌರವಾನ್ವಿತ ಶೇರ್ ಬಹದ್ದೂರ್ ದೇವುಬಾ ಅವರೊಂದಿಗೆ ಶಿಲಾನ್ಯಾಸ ನೆರವೇರಿಸಿದರು. ಶ್ರೀ ಮೋದಿ ಅವರು ನೇಪಾಳದ ಪ್ರಧಾನಮಂತ್ರಿಯವರೊಂದಿಗೆ ʻಇಂಟರ್‌ನ್ಯಾಷನಲ್‌ ಕನ್ವೆನ್ಷನ್ ಸೆಂಟರ್ʼ ಮತ್ತು ಲುಂಬಿನಿಯ ʻಧ್ಯಾನ ಭವನʼದಲ್ಲಿ ನಡೆದ 2566ನೇ ಬುದ್ಧ ಜಯಂತಿ ಆಚರಣೆಯಲ್ಲಿ ಭಾಗವಹಿಸಿದರು.

ನೇಪಾಳದ ಲುಂಬಿನಿಯಲ್ಲಿ ಬುದ್ಧ ಜಯಂತಿ ಆಚರಣೆ

May 16th, 03:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ಲುಂಬಿನಿಯಲ್ಲಿರುವ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರ ಮತ್ತು ಧ್ಯಾನ ಭವನದಲ್ಲಿ ನಡೆದ 2566ನೇ ಬುದ್ಧ ಜಯಂತಿ ಆಚರಣೆಯಲ್ಲಿ ಭಾಗವಹಿಸಿದರು. ಅವರೊಂದಿಗೆ ನೇಪಾಳದ ಪ್ರಧಾನ ಮಂತ್ರಿ ಗೌರವಾನ್ವಿತ ಶೇರ್ ಬಹದ್ದೂರ್ ದೇವುಬಾ ಮತ್ತು ಅವರ ಪತ್ನಿ ಡಾ. ಅರ್ಜು ರಾಣಾ ದೇವುಬಾ ಕೂಡ ಇದ್ದರು.

Corrupt ‘Pariwarvadis’ are neither concerned about the middle class nor the poor: PM Modi in Maharajganj, UP

February 28th, 01:19 pm

Prime Minister Narendra Modi today addressed a public meeting in Maharajganj, Uttar Pradesh. PM Modi started his address by highlighting the challenges of the people living in the border areas of the country and how the strength of the country dictates the strength of the people living in border areas.

PM Modi addresses public meetings in Maharajganj and Ballia, Uttar Pradesh

February 28th, 01:17 pm

Prime Minister Narendra Modi today addressed public meetings in Maharajganj and Ballia, Uttar Pradesh. In Maharajganj, PM Modi started his address by highlighting the challenges of the people living in the border areas of the country and how the strength of the country dictates the strength of the people living in border areas.

ಗುಜರಾತಿನ ಸೋಮನಾಥದಲ್ಲಿ ಹೊಸ ಪ್ರವಾಸಿ ಬಂಗಲೆ (ಸರ್ಕ್ಯೂಟ್ ಹೌಸ್ ) ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

January 21st, 11:17 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ನ ಸೋಮನಾಥದಲ್ಲಿ ನೂತನ ʻಸರ್ಕ್ಯೂಟ್ ಹೌಸ್ʼ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ರಾಜ್ಯ ಸಚಿವರು, ಸಂಸತ್ ಸದಸ್ಯರು, ದೇವಾಲಯದ ಟ್ರಸ್ಟ್ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಗುಜರಾತ್ನ ಸೋಮನಾಥದಲ್ಲಿ ಹೊಸ ʻಸರ್ಕ್ಯೂಟ್ ಹೌಸ್ʼ ಉದ್ಘಾಟಿಸಿದ ಪ್ರಧಾನಮಂತ್ರಿ

January 21st, 11:14 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ನ ಸೋಮನಾಥದಲ್ಲಿ ನೂತನ ʻಸರ್ಕ್ಯೂಟ್ ಹೌಸ್ʼ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ರಾಜ್ಯ ಸಚಿವರು, ಸಂಸತ್ ಸದಸ್ಯರು, ದೇವಾಲಯದ ಟ್ರಸ್ಟ್ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಧಾನಮಂತ್ರಿ ಅವರಿಂದ ಕೇದಾರನಾಥದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಲೋಕಾರ್ಪಣೆ

November 05th, 10:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇದಾರನಾಥದಲ್ಲಿಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು ಮತ್ತು ಪೂರ್ಣಗೊಂಡಿರುವ ಹಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ಶ್ರೀ ಆದಿ ಶಂಕರಾಚಾರ್ಯರ ಸಮಾಧಿಯನ್ನು ಉದ್ಘಾಟಿಸಿದರು ಮತ್ತು ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಲ್ಲದೆ, ಅವರು ಹಾಲಿ ನಡೆಯುತ್ತಿರುವ ಹಾಗೂ ಪೂರ್ಣಗೊಂಡಿರುವ ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಿದರು.

ಉತ್ತರ ಪ್ರದೇಶದ ಕುಶಿನಗರದಲ್ಲಿ ಬಹು ಅಭಿವೃದ್ಧಿ ಉಪಕ್ರಮಗಳಿಗೆ ಚಾಲನೆ ನೀಡಿ ಪ್ರಧಾನ ಮಂತ್ರಿ ಅವರ ಭಾಷಣ

October 20th, 01:25 pm

ಭಗವಾನ್ ಬುದ್ಧ ಅವರ ಪರಿನಿರ್ವಾಣದ ಸ್ಥಳವಾದ ಕುಶಿನಗರದ ನಿಮಗೆಲ್ಲರಿಗೂ ಶುಭಾಶಯಗಳು!. ಇಂದು ನಾನು ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದೇನೆ ಮತ್ತು ನೀವು ಬಹಳ ದೀರ್ಘ ಕಾಲದಿಂದ ಕಾಯುತ್ತಿದ್ದ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆಯನ್ನು ಮಾಡಿದ್ದೇನೆ. ಈಗ ವಿಮಾನಗಳು ಇಲ್ಲಿಂದ ಹಾರಾಟ ಆರಂಭ ಮಾಡಲಿವೆ ಮತ್ತು ಗಂಭೀರ ಖಾಯಿಲೆಗಳಿಗೆ ಇಲ್ಲಿ ಚಿಕಿತ್ಸಾ ಸೌಲಭ್ಯ ಇರಲಿದೆ. ಇದರೊಂದಿಗೆ ನಿಮ್ಮೆಲ್ಲರ ಬಹಳ ದೊಡ್ಡ ಕನಸು ನನಸಾದಂತಾಗಿದೆ. ನಿಮ್ಮೆಲ್ಲರಿಗೂ ಬಹಳ ಅಭಿನಂದನೆಗಳು.

ಕುಶಿನಗರದ ರಾಜ್ ಕಿಯಾ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

October 20th, 01:24 pm

ಉತ್ತರ ಪ್ರದೇಶದ ರಾಜ್ ಕಿಯಾ ವೈದ್ಯಕೀಯ ಕಾಲೇಜಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಅವರು ಕುಶಿನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು.

Buddha is universal, says PM Modi

October 20th, 12:31 pm

Prime Minister Modi participated in an event marking Abhidhamma Day at the Mahaparinirvana Temple in Kushinagar. The Prime Minister said, Buddha is universal because Buddha said to start from within. Buddha's Buddhatva is a sense of ultimate responsibility.

ಕುಶಿನಗರದ ಮಹಾಪರಿನಿರ್ವಾಣ ದೇವಾಲಯದಲ್ಲಿ ಅಭಿಧಮ್ಮ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಿದ್ದರು

October 20th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕುಶಿನಗರದ ಮಹಾಪರಿನಿರ್ವಾಣ ದೇವಾಲಯದಲ್ಲಿ `ಅಭಿಧಮ್ಮ ದಿನ’ದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಉತ್ತರ ಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ, ಕೇಂದ್ರ ಸಚಿವರಾದ ಶ್ರೀ ಜಿ ಕಿಶನ್ ರೆಡ್ಡಿ, ಶ್ರೀ ಕಿರಣ್‌ ರಿಜಿಜು, ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ, ಶ್ರೀಲಂಕಾ ಸರಕಾರದ ಸಂಪುಟ ಸಚಿವ ಶ್ರೀ ನಮಲ್ ರಾಜಪಕ್ಸೆ, ಶ್ರೀಲಂಕಾದ ಬೌದ್ಧ ನಿಯೋಗ; ಮ್ಯಾನ್ಮಾರ್, ವಿಯೆಟ್ನಾಂ, ಕಾಂಬೋಡಿಯಾ, ಥೈಲ್ಯಾಂಡ್, ಲಾವೊ ಪಿಡಿಆರ್, ಭೂತಾನ್, ದಕ್ಷಿಣ ಕೊರಿಯಾ, ಶ್ರೀಲಂಕಾ, ಮಂಗೋಲಿಯಾ, ಜಪಾನ್, ಸಿಂಗಾಪುರ, ನೇಪಾಳದ ರಾಯಭಾರಿಗಳು ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಉತ್ತರ ಪ್ರದೇಶದ ಕುಶಿನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಷಣ

October 20th, 10:33 am

ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀಮತಿ ಆನಂದಿಬೆನ್ ಜೀ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಶ್ರೀ ಕಿರೆನ್ ರಿಜಿಜು, ಶ್ರೀ ಕೆಶೆನ್ ರೆಡ್ಡಿ, ಜನರಲ್ ವಿ.ಕೆ. ಸಿಂಗ್, ಶ್ರೀ ಅರ್ಜುನ್ ರಾಮ್ ಮೇಘ್ವಾಲ್, ಶ್ರೀಪಾದ್ ನಾಯಿಕ್, ಶ್ರೀಮತಿ ಮೀನಾಕ್ಷಿ ಲೇಖಿ, ಉತ್ತರ ಪ್ರದೇಶ ಸಚಿವರಾದ ಶ್ರೀ ನಂದಗೋಪಾಲ್ ನಂದಿ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ವಿಜಯ್ ಕುಮಾರ್ ದುಬೆ, ಶಾಸಕರಾದ ಶ್ರೀ ರಜನೀಕಾಂತ್ ಮಣಿ ತ್ರಿಪಾಠಿ, ವಿವಿಧ ರಾಷ್ಟ್ರಗಳ ರಾಯಭಾರಿಗಳು ಮತ್ತು ದೂತವಾಸ ಅಧಿಕಾರಿಗಳು ಮತ್ತು ಇಲ್ಲಿ ಉಪಸ್ಥಿತರಿರುವ ಎಲ್ಲ ಜನಪ್ರತಿನಿಧಿಗಳೇ....

ಪ್ರಧಾನ ಮಂತ್ರಿ ಅವರಿಂದ ಕುಶಿನಗರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲೋಕಾರ್ಪಣೆ

October 20th, 10:32 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಉತ್ತರ ಪ್ರದೇಶದ ಕುಶಿನಗರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದರು.

ಕುಶಿನಗರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲೋಕಾರ್ಪಣೆ - ಪ್ರಧಾನ ಮಂತ್ರಿ ಉತ್ತರ ಪ್ರದೇಶಕ್ಕೆ ಭೇಟಿ

October 19th, 10:35 am

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತರಪ್ರದೇಶ ರಾಜ್ಯಕ್ಕೆ ಅ.20ರಂದು ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಕುಶಿನಗರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ 11.30ಗೆ ಅವರು ಮಹಾಪರಿನಿರ್ವಾಣ ದೇವಸ್ಥಾನದಲ್ಲಿ ಅಭಿಧಮ್ಮ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1.15ಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಇತರ ಕಾರ್ಯಕ್ರಮಗಳ ಉದ್ಘಾಟನೆಗೆ ಸಂಬಂಧಿಸಿದ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.