ಕುವೈತ್ ಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧಿಕೃತ ಭೇಟಿ (ಡಿಸೆಂಬರ್ 21-22, 2024): ಜಂಟಿ ಹೇಳಿಕೆ

December 22nd, 07:46 pm

ಕುವೈತ್ ದೇಶದ ದೊರೆ (ಅಮೀರ್) ಘನತೆವೆತ್ತ ಶೇಖ್ ಮೆಶಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 21-22 ಡಿಸೆಂಬರ್ 2024 ರಂದು ಕುವೈಟ್ ಗೆ ಅಧಿಕೃತ ಭೇಟಿ ನೀಡಿದರು. ಕುವೈತ್ ಗೆ ಅವರ ಮೊದಲ ಭೇಟಿಯಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 21 ಡಿಸೆಂಬರ್ 2024 ರಂದು ಅಮೀರ್ ಶೇಖ್ ಮೆಶಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಗೌರವಾನ್ವಿತ ಅತಿಥಿಯಾಗಿ ಕುವೈತ್ ನಲ್ಲಿ ನಡೆದ 26ನೇ ಅರೇಬಿಯನ್ ಗಲ್ಫ್ ಕಪ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು.

ಕುವೈತ್ ನ ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

December 22nd, 06:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕುವೈತ್ ರಾಷ್ಟ್ರದ ಪ್ರಧಾನಮಂತ್ರಿಯವರಾದ ಗೌರವಾನ್ವಿತ ಶೇಖ್ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರೊಂದಿಗೆ ಮಾತುಕತೆ ನಡೆಸಿದರು.

ಪ್ರಧಾನಮಂತ್ರಿಯವರ ಕುವೈತ್‌ ಭೇಟಿಯ ಫಲಿತಾಂಶಗಳ ಪಟ್ಟಿ (ಡಿಸೆಂಬರ್ 21-22, 2024)

December 22nd, 06:03 pm

ಈ ತಿಳುವಳಿಕೆ ಒಪ್ಪಂದವು ರಕ್ಷಣಾ ಕ್ಷೇತ್ರದಲ್ಲಿ ದ್ವಿಪಕ್ಷೀಯ ಸಹಕಾರವನ್ನು ಸಾಂಸ್ಥಿಕಗೊಳಿಸುತ್ತದೆ. ಸಹಕಾರದ ಪ್ರಮುಖ ಕ್ಷೇತ್ರಗಳು ತರಬೇತಿ, ಸಿಬ್ಬಂದಿ ಮತ್ತು ತಜ್ಞರ ವಿನಿಮಯ, ಜಂಟಿ ಅಭ್ಯಾಸಗಳು, ರಕ್ಷಣಾ ಉದ್ಯಮದಲ್ಲಿ ಸಹಕಾರ, ರಕ್ಷಣಾ ಸಾಧನಗಳ ಪೂರೈಕೆ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಸಹಯೋಗವನ್ನು ಒಳಗೊಂಡಿವೆ.

ಕುವೈತ್ ರಾಜಕುಮಾರನನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

December 22nd, 05:32 pm

ಕುವೈತ್ ನೊಂದಿಗಿನ ದ್ವಿಪಕ್ಷೀಯ ಸಂಬಂಧಗಳಿಗೆ ಭಾರತ ಅತ್ಯಂತ ಮಹತ್ವ ನೀಡುವುದಾಗಿ ಪ್ರಧಾನಿಯವರು ತಿಳಿಸಿದರು. ದ್ವಿಪಕ್ಷೀಯ ಸಂಬಂಧಗಳು ಉತ್ತಮವಾಗಿ ಪ್ರಗತಿ ಸಾಧಿಸುತ್ತಿವೆ ಎಂದು ಉಭಯ ನಾಯಕರು ಒಪ್ಪಿಕೊಂಡು, ವ್ಯೂಹಾತ್ಮಕ ಪಾಲುದಾರಿಕೆಗೆ ಉಭಯ ದೇಶಗಳ ಉನ್ನತಿಯನ್ನು ಸ್ವಾಗತಿಸಿದರು. ವಿಶ್ವಸಂಸ್ಥೆ ಮತ್ತು ಇತರ ಬಹುಪಕ್ಷೀಯ ವೇದಿಕೆಗಳಲ್ಲಿ ಎರಡೂ ದೇಶಗಳ ನಡುವೆ ನಿಕಟ ಸಮನ್ವಯಕ್ಕೆ ಅವರು ಒತ್ತು ನೀಡಿದರು. ಕುವೈತ್ ಅಧ್ಯಕ್ಷತೆಯ ಅಡಿಯಲ್ಲಿ ಭಾರತ-ಜಿಸಿಸಿ ಸಂಬಂಧಗಳು ಮತ್ತಷ್ಟು ಬಲಗೊಳ್ಳಲಿವೆ ಎಂಬ ವಿಶ್ವಾಸವನ್ನು ಪ್ರಧಾನಿಯವರು ವ್ಯಕ್ತಪಡಿಸಿದರು.

ಪ್ರಧಾನಮಂತ್ರಿಗಳಿಂದ ಕುವೈತ್‌ನ ಅಮೀರ್ ಅವರ ಭೇಟಿ

December 22nd, 05:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕುವೈತ್‌ನ ಅಮೀರ್ ಆಗಿರುವ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಬೇರ್ ಅಲ್-ಸಬಾಹ್ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ನಡುವಿನ ಮೊದಲ ಭೇಟಿಯಾಗಿತ್ತು. ಬಯಾನ್ ಅರಮನೆಗೆ ಆಗಮಿಸಿದಾಗ, ಪ್ರಧಾನಿ ಮೋದಿ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು ಮತ್ತು ಕುವೈತ್ ಪ್ರಧಾನಿ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರು ಪ್ರಧಾನಮಂತ್ರಿ ಅವರನ್ನು ಬರಮಾಡಿಕೊಂಡರು.

ಪ್ರಧಾನಮಂತ್ರಿ ಅವರಿಗೆ ಕುವೈತ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

December 22nd, 04:37 pm

ಕುವೈತ್‌ನ ಅಮೀರ್ ಆಗಿರುವ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಬೇರ್ ಅಲ್-ಸಬಾಹ್ ಅವರು ಕುವೈತ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಮುಬಾರಕ್ ಅಲ್-ಕಬೀರ್ ಆರ್ಡರ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಪ್ರದಾನ ಮಾಡಿದರು. ಕುವೈತ್‌ ಪ್ರಧಾನಿ ಶೇಖ್ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕುವೈತ್ ನ ಅಮೀರ್ ಅವರ ಗೌರವಾನ್ವಿತ ಅತಿಥಿಯಾಗಿ ಅರೇಬಿಯನ್ ಗಲ್ಫ್ ಕಪ್ ನಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು

December 21st, 10:24 pm

ಕುವೈತ್ ನ ದೊರೆ (ಅಮೀರ್) ಘನತೆವೆತ್ತ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕುವೈತ್ ನಲ್ಲಿ ನಡೆದ 26ನೇ ಅರೇಬಿಯನ್ ಗಲ್ಫ್ ಕಪ್ ನ ಉದ್ಘಾಟನಾ ಸಮಾರಂಭದಲ್ಲಿ ‘ಗೌರವ ಅತಿಥಿ’ಯಾಗಿ ಭಾಗವಹಿಸಿದರು. ಘನತೆವೆತ್ತ ಕುವೈತ್ ದೊರೆ (ಅಮೀರ್), ಘನತೆವೆತ್ತ ಕುವೈತ್ ಯುವರಾಜ, ಮತ್ತು ಘನತೆವೆತ್ತ ಕುವೈತ್ ಪ್ರಧಾನಮಂತ್ರಿಯವರೊಂದಿಗೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರು, ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ಪಾಲ್ಗೊಂಡರು. ಕುವೈತ್ ನ ಉನ್ನತ ನಾಯಕತ್ವದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಅನೌಪಚಾರಿಕ ಸಂವಾದಕ್ಕೆ ಕೂಡಾ ಈ ಕಾರ್ಯಕ್ರಮವು ಅವಕಾಶವನ್ನು ಒದಗಿಸಿಕೊಟ್ಟಿತು.

ರಾಮಾಯಣ ಮತ್ತು ಮಹಾಭಾರತದ ಅರೇಬಿಕ್ ಭಾಷಾಂತರಗಳಿಗಾಗಿ ಅಬ್ದುಲ್ಲಾ ಅಲ್-ಬರೂನ್ ಮತ್ತು ಅಬ್ದುಲ್ ಲತೀಫ್ ಅಲ್-ನಸೀಫ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

December 21st, 07:03 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ರಾಮಾಯಣ ಮತ್ತು ಮಹಾಭಾರತ ಮಹಾಗ್ರಂಥಗಳ ಅರೇಬಿಕ್ ಅನುವಾದ ಭಾಷಾಂತರ ಮತ್ತು ಪ್ರಕಟಿಸುವ ಪ್ರಯತ್ನಕ್ಕಾಗಿ ಅಬ್ದುಲ್ಲಾ ಅಲ್-ಬರೂನ್ ಮತ್ತು ಅಬ್ದುಲ್ ಲತೀಫ್ ಅಲ್-ನಸೀಫ್ ಅವರನ್ನು ಅಭಿನಂದಿಸಿದ್ದಾರೆ.

ಕುವೈತ್ ನ ಕಾರ್ಮಿಕ ಶಿಬಿರಕ್ಕೆ ಪ್ರಧಾನಮಂತ್ರಿಯವರ ಭೇಟಿ

December 21st, 07:00 pm

ಕುವೈತ್ ಭೇಟಿಯ ಮೊದಲ ಕಾರ್ಯಕ್ರಮವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಕುವೈತ್ ನ ಮಿನಾ ಅಬ್ದುಲ್ಲಾ ಪ್ರದೇಶದಲ್ಲಿರುವ ಸುಮಾರು 1500 ಭಾರತೀಯ ಪ್ರಜೆಗಳ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಿದರು. ಪ್ರಧಾನಮಂತ್ರಿಯವರು ಭಾರತದ ವಿವಿಧ ರಾಜ್ಯಗಳ ಅನೇಕ ವರ್ಗದ ಭಾರತೀಯ ಕಾರ್ಮಿಕರೊಂದಿಗೆ ಸಂವಾದ ನಡೆಸಿ, ಅವರ ಯೋಗಕ್ಷೇಮವನ್ನು ವಿಚಾರಿಸಿದರು.

ಕುವೈತ್‌ನಲ್ಲಿ ಭಾರತೀಯ ಸಮುದಾಯ ಆಯೋಜಿಸಿದ್ದ ‘ಹಲಾ ಮೋದಿ’ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 21st, 06:34 pm

ಎರಡೂವರೆ ಗಂಟೆಗಳ ಹಿಂದೆಯಷ್ಟೇ ನಾನು ಕುವೈತ್‌ಗೆ ಬಂದೆ. ನಾನು ಇಲ್ಲಿಗೆ ಕಾಲಿಟ್ಟಾಗಿನಿಂದ, ಹೃದಯಾಂತರಾಳದ ಅನನ್ಯ ಭಾವನೆಯನ್ನು ಅನುಭವಿಸಿದೆ. ನೀವೆಲ್ಲರೂ ಭಾರತದ ವಿವಿಧ ರಾಜ್ಯಗಳಿಂದ ಬಂದಿದ್ದೀರಿ, ಆದರೆ ನಿಮ್ಮೆಲ್ಲರನ್ನು ನೋಡುವಾಗ ನನ್ನ ಮುಂದೆ ಒಂದು ಮಿನಿ ಹಿಂದೂಸ್ಥಾನವೇ ಜೀವಂತವಾಗಿದೆ ಎಂದು ಭಾಸವಾಗುತ್ತಿದೆ. ಇಲ್ಲಿ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮದ ಜನರು ವಿಭಿನ್ನ ಭಾಷೆ ಮತ್ತು ಉಪಭಾಷೆಗಳನ್ನು ಮಾತನಾಡುವುದನ್ನು ನಾನು ನೋಡುತ್ತೇನೆ. ಆದರೂ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಸಾಮಾನ್ಯ ಪ್ರತಿಧ್ವನಿ ಇದೆ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಪ್ರತಿಧ್ವನಿಸುವ ಘೋಷಣೆ - ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ - ಜೈ.

ಕುವೈತ್‌ನಲ್ಲಿ ನಡೆದ ‘ಹಾಲಾ ಮೋದಿ’ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು

December 21st, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕುವೈತ್‌ನಲ್ಲಿರುವ ಶೇಖ್ ಸಾದ್ ಅಲ್-ಅಬ್ದುಲ್ಲಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಲಾಗಿದ್ದ ‘ಹಾಲಾ ಮೋದಿ’ ವಿಶೇಷ ಕಾರ್ಯಕ್ರಮದಲ್ಲಿ ಅಲ್ಲಿನ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕುವೈತ್‌ನ ಸಮುದಾಯದ ಹೆಚ್ಚಿನ ಭಾಗವನ್ನು ಪ್ರತಿನಿಧಿಸುವ ಭಾರತೀಯ ಪ್ರಜೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕುವೈತ್ ನಲ್ಲಿ ಭಾರತೀಯ ಸಮುದಾಯದಿಂದ ಹೃದಯಸ್ಪರ್ಶಿ ಸ್ವಾಗತಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ

December 21st, 06:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಕುವೈತ್ ನಲ್ಲಿ ಭಾರತೀಯ ಸಮುದಾಯದಿಂದ ಹೃದಯಸ್ಪರ್ಶಿ ಸ್ವಾಗತ ದೊರೆತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಭಾರತದೊಂದಿಗಿನ ಅವರ ಶಕ್ತಿ, ಪ್ರೀತಿ ಮತ್ತು ಅಚಲ ಸಂಪರ್ಕ ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಶ್ರೀ ಮೋದಿಯವರು ಹೇಳಿದ್ದಾರೆ.

ಕುವೈತ್‌ಗೆ ಆಗಮಿಸಿದ ಪ್ರಧಾನಿ ಮೋದಿ

December 21st, 03:39 pm

ಕುವೈತ್‌ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು. 43 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರ ಮೊದಲ ಭೇಟಿ ಇದಾಗಿದೆ. ತಮ್ಮ ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ಅಮೀರ್, ಕ್ರೌನ್ ಪ್ರಿನ್ಸ್ ಮತ್ತು ಕುವೈತ್ ಪ್ರಧಾನಿ ಜೊತೆ ಮಾತುಕತೆ ನಡೆಸಲಿದ್ದಾರೆ. ಅವರು ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಅರೇಬಿಯನ್ ಗಲ್ಫ್ ಕಪ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ

ಕುವೈತ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ

December 21st, 09:21 am

ಇಂದು, ಕುವೈತ್ ನ ಅಮೀರ್ ಅವರ ಹೈನೆಸ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ನಾನು ಕುವೈತ್ ಗೆ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸುತ್ತಿದ್ದೇನೆ.

2024 ರ ಡಿಸೆಂಬರ್ 21-22 ರವರೆಗೆ ಪ್ರಧಾನಿ ಮೋದಿ ಕುವೈತ್‌ಗೆ ಭೇಟಿ ನೀಡಲಿದ್ದಾರೆ

December 19th, 11:45 am

ಕುವೈತ್ ರಾಜ ಅಮೀರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 21-22 ಡಿಸೆಂಬರ್ 2024 ರಂದು ಕುವೈತ್‌ಗೆ ಭೇಟಿ ನೀಡಲಿದ್ದಾರೆ . 43 ವರ್ಷಗಳಲ್ಲಿ ಕುವೈತ್‌ಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವುದು ಇದೇ ಮೊದಲು.

ಕುವೈತ್ ವಿದೇಶಾಂಗ ಸಚಿವರನ್ನು ಪ್ರಧಾನಮಂತ್ರಿ ಮೋದಿ ಬರಮಾಡಿಕೊಂಡರು.

December 04th, 08:39 pm

ಕುವೈತ್‌ನ ವಿದೇಶಾಂಗ ಸಚಿವ ಗೌರವಾನ್ವಿತ ಅಬ್ದುಲ್ಲಾ ಅಲಿ ಅಲ್-ಯಹ್ಯಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.

ಪ್ರಧಾನಿ ಮೋದಿ ಕುವೈತ್‌ನ ಯುವರಾಜರನ್ನು ಭೇಟಿಯಾದರು

September 23rd, 06:30 am

ಪ್ರಧಾನಿ ಮೋದಿ ಅವರು ಕುವೈತ್ ರಾಜ್ಯದ ಯುವರಾಜ ಶೇಖ್ ಸಬಾಹ್ ಖಲೀದ್ ಅಲ್-ಹಮದ್ ಅಲ್-ಮುಬಾರಕ್ ಅಲ್-ಸಬಾಹ್ ಅವರನ್ನು ನ್ಯೂಯಾರ್ಕ್‌ನಲ್ಲಿ ಭೇಟಿಯಾದರು. ಕುವೈತ್‌ನೊಂದಿಗಿನ ದ್ವಿಪಕ್ಷೀಯ ಸಂಬಂಧಗಳಿಗೆ ಭಾರತವು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ತಿಳಿಸಿದರು. ಉಭಯ ನಾಯಕರು ಎರಡು ದೇಶಗಳ ನಡುವಿನ ಬಲವಾದ ಐತಿಹಾಸಿಕ ಸಂಬಂಧಗಳು ಮತ್ತು ಜನರ-ಜನರ ಸಂಪರ್ಕವನ್ನು ನೆನಪಿಸಿಕೊಂಡರು.

ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

June 30th, 11:00 am

'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.

ಕುವೈತ್‌ ಅಗ್ನಿ ದುರಂತದ ಪರಾಮರ್ಶೆ ನಡೆಸಿದ ಪ್ರಧಾನಮಂತ್ರಿ

June 12th, 10:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷ ತೆ ವಹಿಸಿದ್ದರು.

ಕುವೈತ್ ನಗರದಲ್ಲಿ ಅಗ್ನಿ ಅವಘಡದಿಂದ ಸಂಭವಿಸಿದ ಪ್ರಾಣಹಾನಿಗೆ ಪ್ರಧಾನಿ ಸಂತಾಪ

June 12th, 07:30 pm

ಕುವೈತ್ ನಗರದಲ್ಲಿ ಅಗ್ನಿ ಅವಘಡದಿಂದ ಸಂಭವಿಸಿದ ಜೀವಗಳ ಹಾನಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ, ಸಂತ್ರಸ್ತರಿಗೆ ಸಹಾಯ ಮಾಡಲು ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಭರವಸೆ ನೀಡಿದರು.