ದೆಹಲಿಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಯುವಕರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಕನ್ನಡ ಅನುವಾದ

October 02nd, 04:45 pm

ಇದರಿಂದ ರೋಗಗಳನ್ನು ತಡೆಗಟ್ಟಲು ಸಹಾಯಕವಾಗುತ್ತದೆ, ಮತ್ತು ನಾವು ಯಾವಾಗಲೂ ಸ್ವಚ್ಛವಾಗಿರುತ್ತೇವೆ. ಇದಲ್ಲದೆ, ನಮ್ಮ ದೇಶವು ಸ್ವಚ್ಛವಾಗಿದ್ದರೆ, ಪರಿಸರವನ್ನು ಅಚ್ಚುಕಟ್ಟಾಗಿಡುವ ಮಹತ್ವವನ್ನು ಜನರು ಅರ್ಥಮಾಡಿಕೊಳ್ಳುತ್ತಾರೆ.

ಸ್ವಚ್ಛ ಭಾರತ ಅಭಿಯಾನದ 10ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುವಜನರೊಂದಿಗೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು

October 02nd, 04:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಲ್ಲಿಯಲ್ಲಿ ಶಾಲಾ ಮಕ್ಕಳೊಂದಿಗೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡು ಸ್ವಚ್ಛ ಭಾರತ ಅಭಿಯಾನದ 10ನೇ ವರ್ಷಾಚರಣೆಯ ಅಂಗವಾಗಿ ಅವರೊಂದಿಗೆ ಸಂವಾದ ನಡೆಸಿದರು.

ಪ್ರಧಾನಮಂತ್ರಿಯವರು ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದರು

October 02nd, 09:08 am

ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ಅವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಗೌರವ ಸಲ್ಲಿಸಿದರು.

ದಿವಂಗತ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದಂದು ವಿಜಯ್ ಘಾಟ್ ನಲ್ಲಿ ಪ್ರಧಾನಮಂತ್ರಿ ಅವರಿಗೆ ನಮನ ಸಲ್ಲಿಸಿದರು

October 02nd, 03:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿವಂಗತ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದ ಅಂಗವಾಗಿ ವಿಜಯ್ ಘಾಟ್ನಲ್ಲಿ ನಮನ ಸಲ್ಲಿಸಿದರು.

ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯಂದು ಪ್ರಧಾನಿ ಸ್ಮರಣೆ

October 02nd, 08:53 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

2023 ಆಗಸ್ಟ್ 10ರಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ(ಗೊತ್ತುವಳಿ)ಕ್ಕೆ ಪ್ರಧಾನ ಮಂತ್ರಿ ಉತ್ತರ

August 10th, 04:30 pm

ಕಳೆದ 3 ದಿನಗಳಿಂದ ಗೌರವಾನ್ವಿತ ಹಲವು ಹಿರಿಯ ಸದಸ್ಯರು ತಮ್ಮ ಆಲೋಚನೆ, ದೃಷ್ಟಿಕೋನಗಳನ್ನು ಹಂಚಿಕೊಂಡಿದ್ದಾರೆ. ಅವರ ಬಹುತೇಕ ಎಲ್ಲಾ ಅಭಿಪ್ರಾಯಗಳು ನನಗೆ ವಿವರವಾಗಿ ಮುಟ್ಟಿವೆ. ಕೆಲವು ಭಾಷಣಗಳನ್ನು ನಾನೇ ಕೇಳಿದ್ದೇನೆ. ಗೌರವಾನ್ವಿತ ಸಭಾಧ್ಯಕ್ಷರೇ, ಇಂದು, ನಮ್ಮ ಸರ್ಕಾರದ ಮೇಲೆ ಪದೇಪದೆ ಅಪಾರ ನಂಬಿಕೆ ತೋರಿಸುತ್ತಿರುವ ಈ ದೇಶದ ಕೋಟ್ಯಂತರ ನಾಗರಿಕರಿಗೆ ನನ್ನ ಕೃತಜ್ಞತೆ ವ್ಯಕ್ತಪಡಿಸಲು ನಾನು ಇಲ್ಲಿದ್ದೇನೆ. ಗೌರವಾನ್ವಿತ ಸ್ಪೀಕರ್, ದೇವರು ತುಂಬಾ ಕರುಣಾಮಯಿ ಎಂದು ಹೇಳಲಾಗುತ್ತದೆ. ಅವನು ತನ್ನ ಆಸೆಗಳನ್ನು ಯಾರಾದರೂ ಅಥವಾ ಇನ್ನೊಬ್ಬರ ಮೂಲಕ ಪೂರೈಸುತ್ತಾನೆ, ಯಾರನ್ನಾದರೂ ಮಾಧ್ಯಮವನ್ನಾಗಿ ಮಾಡುವುದು ದೇವರ ಇಚ್ಛೆಯಾಗಿದೆ. ದೇವರ ಇಚ್ಛೆಯಂತೆ ಪ್ರತಿಪಕ್ಷಗಳು ಅವಿಶ್ವಾಸ ಗೊತ್ತುವಳಿ ಮಂಡಿಸಿರುವುದು ದೇವರ ಆಶೀರ್ವಾದ ಎಂದು ಭಾವಿಸುತ್ತೇನೆ. 2018ರಲ್ಲಿ ವಿರೋಧ ಪಕ್ಷದ ನನ್ನ ಸಹೋದ್ಯೋಗಿಗಳು ನನ್ನ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದಾಗ ದೇವರ ಆಜ್ಞೆಯೂ ಇದೇ ಆಗಿತ್ತು. ಅವಿಶ್ವಾಸ ಗೊತ್ತುವಳಿಯು ನಮ್ಮ ಸರ್ಕಾರಕ್ಕೆ ಸದನದ ಪರೀಕ್ಷೆ ಅಲ್ಲ, ಬದಲಿಗೆ ಅದು ಅವರ ಸ್ವಂತ ಅಂತಸ್ತಿನ ಪರೀಕ್ಷೆ ಎಂದು ನಾನು ಆ ಸಮಯದಲ್ಲಿ ಹೇಳಿದ್ದೆ. ಆ ದಿನವೂ ಹೇಳಿದ್ದೆ. ಮತ್ತು ಅದು ಬದಲಾದಂತೆ, ಪ್ರತಿಪಕ್ಷಗಳು ಮತದಾನ ನಡೆದಾಗ ಅವರು ಹೊಂದಿದ್ದಷ್ಟು ಮತಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಅಷ್ಟೇ ಅಲ್ಲ, ನಾವು ಜನರ ಬಳಿಗೆ (ಮತ ಕೇಳಲು) ಹೋದಾಗ, ಜನರು ಪೂರ್ಣ ಬಲದಿಂದ ಅವರ ಮೇಲೆ ಅವಿಶ್ವಾಸ ಘೋಷಿಸಿದರು. ಎನ್‌ಡಿಎ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿತು. ಚುನಾವಣೆಯಲ್ಲಿ ಬಿಜೆಪಿಯೂ ಸಹ ಹೆಚ್ಚು ಸ್ಥಾನಗಳನ್ನು ಗಳಿಸಿತು. ಒಂದು ರೀತಿಯಲ್ಲಿ ವಿಪಕ್ಷಗಳ ಅವಿಶ್ವಾಸ ಗೊತ್ತುವಳಿ ನಮಗೆ ಮಂಗಳಕರವಾಗಿದ್ದು, 2024ರ ಚುನಾವಣೆಯಲ್ಲಿ ಎನ್‌ಡಿಎ ಮತ್ತು ಬಿಜೆಪಿ ಜನರ ಆಶೀರ್ವಾದದೊಂದಿಗೆ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಅಭೂತಪೂರ್ವ ಗೆಲುವು ಸಾಧಿಸಲು ನೀವೆಲ್ಲಾ ನಿರ್ಧರಿಸಿದ್ದೀರಿ ಎಂದು ನಾನು ಇಂದೇ ನೋಡುತ್ತಿದ್ದೇನೆ.

ಲೋಕಸಭೆಯಲ್ಲಿ ಅವಿಶ್ವಾಸ ನಿಲುವಳಿಗೆ ಪ್ರಧಾನಿಗಳಿಂದ ಉತ್ತರ

August 10th, 04:00 pm

ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸರ್ಕಾರದ ಮೇಲೆ ತಮ್ಮ ನಂಬಿಕೆಯನ್ನು ಪದೇ ಪದೇ ತೋರಿಸಿದ್ದಕ್ಕಾಗಿ ಭಾರತದ ಪ್ರತಿಯೊಬ್ಬ ನಾಗರಿಕರಿಗೆ ಅಪಾರ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಂದಿದ್ದೇನೆ ಎಂದರು. 2018ರಲ್ಲಿ ಪ್ರತಿಪಕ್ಷಗಳು ಅವಿಶ್ವಾಸ ನಿಲುವಳಿ ತಂದಿದ್ದನ್ನು ಸ್ಮರಿಸಿದ ಪ್ರಧಾನಿಯವರು, ಇದು ಸರ್ಕಾರದ ಪಾಲಿಗೆ ವಿಶ್ವಾಸಮತ ನಿರ್ಣಯವಲ್ಲ, ಬದಲಿಗೆ ಸದನದಲ್ಲಿ ಅದನ್ನು ಮಂಡಿಸಿದವರ ಪಾಲಿಗೇ ಅವಿಶ್ವಾಸ ನಿರ್ಣಯ ಎಂದರು. ನಾವು 2019ರಲ್ಲಿ ಚುನಾವಣೆಗೆ ಹೋದಾಗ, ಪ್ರತಿಪಕ್ಷಗಳ ಮೇಲೆ ಜನರು ಅತ್ಯಂತ ಬಲವಾದ ಅವಿಶ್ವಾಸವನ್ನು ಪ್ರದರ್ಶಿಸಿದರು ಎಂದು ಪ್ರಧಾನಿ ಹೇಳಿದರು. ಎನ್‌ಡಿಎ ಮತ್ತು ಬಿಜೆಪಿ ಎರಡೂ ಹೆಚ್ಚಿನ ಸ್ಥಾನಗಳನ್ನು ಗೆದ್ದಿವೆ ಎಂದು ಒತ್ತಿ ಹೇಳಿದರು. ಒಂದು ರೀತಿಯಲ್ಲಿ, ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ಗೊತ್ತುವಳಿ ಸರ್ಕಾರದ ಪಾಲಿಗೆ ಅದೃಷ್ಟ ಎಂದು ಪ್ರಧಾನಿ ಬಣ್ಣಿಸಿದರು. ಜನರ ಆಶೀರ್ವಾದದಿಂದ ಎನ್‌ಡಿಎ ಮತ್ತು ಬಿಜೆಪಿ ಎಲ್ಲಾ ದಾಖಲೆಗಳನ್ನು ಮುರಿಯುತ್ತವೆ ಮತ್ತು 2024ರಲ್ಲಿ ವಿಜಯಶಾಲಿಯಾಗುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮನ್ ಕಿ ಬಾತ್‌ಗಾಗಿ ಜನರು ತೋರಿದ ಪ್ರೀತಿ ಅಭೂತಪೂರ್ವ: ಪ್ರಧಾನಿ ಮೋದಿ

May 28th, 11:30 am

ನನ್ನ ಪ್ರೀತಿಯ ದೇಶಬಾಂಧವರೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಈ ಬಾರಿಯ 'ಮನದ ಮಾತಿನ' ಸಂಚಿಕೆ 2ನೇ ಶತಕದ ಆರಂಭವಾಗಿದೆ. ಕಳೆದ ತಿಂಗಳು ನಾವೆಲ್ಲರೂ ಶತಕದ ಸಂಭ್ರಮವನ್ನು ವಿಶೇಷವಾಗಿ ಆಚರಿಸಿದ್ದೇವೆ. ನಿಮ್ಮ ಭಾಗವಹಿಸುವಿಕೆ ಈ ಕಾರ್ಯಕ್ರಮದ ಬಹು ದೊಡ್ಡ ಶಕ್ತಿಯಾಗಿದೆ. 100ನೇ ಸಂಚಿಕೆ ಪ್ರಸಾರವಾಗುವ ಸಮಯದಲ್ಲಿ ಸಂಪೂರ್ಣ ದೇಶ ಒಂದು ಸೂತ್ರದಲ್ಲಿ ಬಂಧಿಸಿದಂತಾಗಿತ್ತು. ನಮ್ಮ ಸ್ವಚ್ಛತಾ ಕರ್ಮಚಾರಿ ಸಹೋದರ ಮತ್ತು ಸಹೋದರಿಯರು ಅಥವಾ ವಿವಿಧ ಕ್ಷೇತ್ರಗಳ ಅನುಭವಿಗಳಾಗಿರಲಿ, 'ಮನದ ಮಾತು' ಎಲ್ಲರನ್ನೂ ಒಟ್ಟಿಗೆ ಸೇರಿಸುವ ಕೆಲಸ ಮಾಡಿದೆ. 'ಮನದ ಮಾತಿಗೆ' ನೀವೆಲ್ಲರೂ ತೋರಿದ ಆತ್ಮೀಯತೆ ಮತ್ತು ಪ್ರೀತಿ ಅಭೂತಪೂರ್ವವಾಗಿದೆ, ಅದು ಭಾವುಕರನ್ನಾಗಿಸುವಂತಿದೆ. 'ಮನದ ಮಾತು' ಪ್ರಸಾರವಾದಾಗ, ಪ್ರಪಂಚದ ವಿವಿಧ ದೇಶಗಳಲ್ಲಿ, ಬೇರೆ ಬೇರೆ ಸಮಯಕ್ಕೆ ಅಂದರೆ, ಎಲ್ಲೋ ಸಂಜೆ ಮತ್ತು ಎಲ್ಲೋ ತಡರಾತ್ರಿಯಾಗಿತ್ತು, ಇದನ್ನು ಲೆಕ್ಕಿಸದೆ, 100 ನೇ ಸಂಚಿಕೆಯನ್ನು ಹೆಚ್ಚಿನ ಸಂಖ್ಯೆಯ ಜನರು ಆಲಿಸಲು ಸಮಯ ಮೀಸಲಿಟ್ಟರು. ನಾನು ಸಾವಿರಾರು ಮೈಲುಗಳಷ್ಟು ದೂರದಲ್ಲಿರುವ ನ್ಯೂಜಿಲೆಂಡ್‌ನ ಆ ವೀಡಿಯೊವನ್ನು ಕೂಡ ನೋಡಿದೆ, ಅದರಲ್ಲಿ 100 ವರ್ಷದ ತಾಯಿಯೊಬ್ಬರು ಆಶೀರ್ವಾದ ನೀಡುತ್ತಿದ್ದರು. ದೇಶ ವಿದೇಶದ ಜನರು 'ಮನದ ಮಾತಿನ' ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಅನೇಕ ಜನರು ರಚನಾತ್ಮಕ ವಿಶ್ಲೇಷಣೆಯನ್ನು ಸಹ ಮಾಡಿದ್ದಾರೆ. ‘ಮನದ ಮಾತಿನಲ್ಲಿ’ ದೇಶ ಮತ್ತು ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತ್ರ ಚರ್ಚೆಯಾಗಿರುವುದನ್ನು ಜನ ಮೆಚ್ಚಿಕೊಂಡಿದ್ದಾರೆ. ಈ ಆಶೀರ್ವಾದಕ್ಕಾಗಿ ನಾನು ಮತ್ತೊಮ್ಮೆ ನಿಮ್ಮೆಲ್ಲರಿಗೂ ಗೌರವಪೂರ್ವಕವಾಗಿ ಧನ್ಯವಾದ ಸಲ್ಲಿಸುತ್ತೇನೆ.

ಸಂಸತ್ತಿನಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಜೀ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

October 02nd, 05:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ಜಯಂತಿಯ ಸಂದರ್ಭದಲ್ಲಿ ಇಂದು ಸಂಸತ್ ಭವನದಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ವಿಜಯ್ ಘಾಟ್‌ನಲ್ಲಿ ಲಾಲ್ ಬಹಾದುರ್ ಶಾಸ್ತ್ರಿ ಅವರ ಜಯಂತಿಯಂದು ಅವರಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ

October 02nd, 10:07 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಜಯ್ ಘಾಟ್‌ನಲ್ಲಿ ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಅವರ ಜಯಂತಿಯಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ಲಾಲ್ ಬಹಾದುರ್ ಶಾಸ್ತ್ರಿ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

October 02nd, 09:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ‘ಪ್ರಧಾನಮಂತ್ರಿಯವರು ಲಾಲ್ ಬಹಾದುರ್ ಶಾಸ್ತ್ರಿ ಅವರ ಕುರಿತು ತಮ್ಮ ಅನಿಸಿಕೆಗಳ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ. ದೆಹಲಿಯ ಪ್ರಧಾನಮಂತ್ರಿ ಸಂಗ್ರಹಾಲಯದಲ್ಲಿರುವ ಲಾಲ್ ಬಹಾದುರ್ ಶಾಸ್ತ್ರಿ ಗ್ಯಾಲರಿಯಿಂದ ಪ್ರಧಾನಮಂತ್ರಿಯಾಗಿ ಅವರ ಜೀವನ ಪಯಣ ಮತ್ತು ಸಾಧನೆಗಳನ್ನು ಪ್ರದರ್ಶಿಸುವ ಕೆಲವು ಇಣುಕುನೋಟಗಳನ್ನು ಶ್ರೀ ಮೋದಿ ಅವರು ಹಂಚಿಕೊಂಡಿದ್ದಾರೆ.

ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾಗಿಯಾದ ಭಾರತೀಯ ಆಟಗಾರರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ

August 13th, 11:31 am

ಎಲ್ಲರೊಂದಿಗೂ ಮಾತನಾಡುವುದು ನನಗೆ ತುಂಬಾ ಆಸಕ್ತಿದಾಯಕವಾದರೂ, ಪ್ರತಿಯೊಬ್ಬರ ಜೊತೆ ಮಾತನಾಡಲು ಸಾಧ್ಯವಾಗದು. ಆದರೆ ನಿಮ್ಮಲ್ಲಿ ಅನೇಕರೊಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕದಲ್ಲಿರಲು ನನಗೆ ಅವಕಾಶ ದೊರೆಕಿತ್ತು ಮತ್ತು ಬೇರೆ ಬೇರೆ ಸಂದರ್ಭಗಳಲ್ಲಿ ನಿಮ್ಮೊಂದಿಗೆ ಸಂವಾದ ನಡೆಸುವ ಅವಕಾಶವೂ ನನಗೆ ದೊರೆತಿದೆ. ಆದರೆ ಕುಟುಂಬದ ಸದಸ್ಯನಾಗಿ ನನ್ನ ನಿವಾಸಕ್ಕೆ ಬರಲು ನೀವು ಸಮಯ ಮಾಡಿಕೊಂಡುದಕ್ಕಾಗಿ ನನಗೆ ಬಹಳ ಸಂತೋಷವಾಗಿದೆ. ನಿಮ್ಮ ಸಾಧನೆಗಳ ಯಶಸ್ಸಿನ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವುದರಿಂದ, ನಾನು ಸಹ ನಿಮ್ಮೊಂದಿಗೆ ಸಂಬಂಧ ಹೊಂದಲು ಹೆಮ್ಮೆಪಡುತ್ತೇನೆ. ನಿಮಗೆಲ್ಲರಿಗೂ ಇಲ್ಲಿ ಸ್ವಾಗತ.

2022ರ ಕಾಮನ್ ವೆಲ್ತ್ ಗೇಮ್ಸ್ ನ ಭಾರತೀಯ ತಂಡವನ್ನು ಸನ್ಮಾನಿಸಿದ ಪ್ರಧಾನಮಂತ್ರಿ

August 13th, 11:30 am

2022ರ ಕಾಮನ್ ವೆಲ್ತ್ ಗೇಮ್ಸ್ (ಸಿಡಬ್ಲ್ಯೂಜಿ) ನಲ್ಲಿ ಪಾಲ್ಗೊಂಡ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯಲ್ಲಿ ಸನ್ಮಾನಿಸಿದರು. ಈ ಸನ್ಮಾನ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಭಾಗವಹಿಸಿದ್ದರು. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಮತ್ತು ಮಾಹಿತಿ ಹಾಗು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ಸಹಾಯಕ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಉಪಸ್ಥಿತರಿದ್ದರು.

ಸಣ್ಣ ಆನ್‌ಲೈನ್ ಪಾವತಿಗಳು ದೊಡ್ಡ ಡಿಜಿಟಲ್ ಆರ್ಥಿಕತೆಯನ್ನು ನಿರ್ಮಿಸುತ್ತವೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

April 24th, 11:30 am

ಹೊಸ ವಿಷಯಗಳೊಂದಿಗೆ, ಹೊಸದಾದ ಪ್ರೇರಣಾದಾಯಕ ಉದಾಹರಣೆಗಳೊಂದಿಗೆ, ಹೊಸ ಹೊಸ ಸಂದೇಶಗಳನ್ನು ಹೊತ್ತು ಮತ್ತೊಮ್ಮೆ ನಾನು ತಮ್ಮೊಂದಿಗೆ 'ಮನದ ಮಾತು' ಆಡಲು ಬಂದಿರುವೆ. ನಿಮಗೆ ಗೊತ್ತಾ ಈ ಸಲ ನನಗೆ ಅತಿ ಹೆಚ್ಚು ಪತ್ರಗಳು ಸಂದೇಶಗಳು ಯಾವ ವಿಷಯದ ಬಗ್ಗೆ ಬಂದಿವೆ? ಅಂತ ಆ ವಿಷಯ ಹೇಗಿದೆಯೆಂದರೆ ಇತಿಹಾಸ, ವರ್ತಮಾನ ಮತ್ತು ಭವಿಷ್ಯ ಮೂರಕ್ಕೂ ಅನ್ವಯವಾಗುತ್ತದೆ. ನಾನಿಂದು ಮಾತನಾಡುತ್ತಿರುವುದು ರಾಷ್ಟ್ರಕ್ಕೆ ದೊರಕಿದ ದೇಶದ ಪ್ರಧಾನ ಮಂತ್ರಿಗಳ ಸಂಗ್ರಹಾಲಯದ ಬಗ್ಗೆ. ಇದೇ ಏಪ್ರಿಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನದಂದು ಪ್ರಧಾನಮಂತ್ರಿ ಸಂಗ್ರಹಾಲಯ ಲೋಕಾರ್ಪಣೆಗೊಂಡಿದೆ. ಇದನ್ನು ದೇಶದ ನಾಗರಿಕರಿಗಾಗಿ ತೆರೆದಿಡಲಾಗಿದೆ. ನಮ್ಮ ಕೇಳುಗರೊಬ್ಬರು ಅವರ ಹೆಸರು ಸಾರ್ಥಕ್, ಸಾರ್ಥಕ್ ಅವರು ಗುರು ಗ್ರಾಮದಲ್ಲಿ ವಾಸಿಸುತ್ತಾರೆ. ಮೊದಲ ಅವಕಾಶ ಸಿಗುತ್ತಲೇ ಅವರು ಪ್ರಧಾನಮಂತ್ರಿ ಸಂಗ್ರಹಾಲಯವನ್ನು ನೋಡಿ ಬಂದರು. ಸಾರ್ಥಕ್ ಅವರು ನಮೋ ಆಪ್ ನಲ್ಲಿ ಏನು ಬರೆದುಕೊಂಡಿದ್ದಾರೆ, ಅದನ್ನು ನೋಡಿ, ನನಗೆ ಬಹಳ ಕುತೂಹಲ ಮೂಡಿಸಿತು.

ಇದು ಭಾರತದ ಬೆಳವಣಿಗೆಯ ಕಥೆಯ ತಿರುವು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

November 28th, 11:30 am

ಇಂದು ಮತ್ತೊಮ್ಮೆ ನಾವು ಮನದ ಮಾತಿನಲ್ಲಿ ಒಗ್ಗೂಡುತ್ತಿದ್ದೇವೆ. 2 ದಿನಗಳ ನಂತರ ಡಿಸೆಂಬರ್ ತಿಂಗಳು ಆರಂಭವಾಗುತ್ತಿದೆ. ಡಿಸೆಂಬರ್ ಬರುತ್ತಿದ್ದಂತೆ ಮಾನಸಿಕವಾಗಿ ನಮಗೆ ಅಂತೂ ವರ್ಷ ಮುಗಿಯಿತು ಎಂದೆನ್ನಿಸುತ್ತದೆ. ಇದು ವರ್ಷದ ಕೊನೆಯ ಮಾಸವಾಗಿದೆ. ನವ ವರ್ಷಕ್ಕೆ ಹೊಸ ಯೋಜನೆಗಳನ್ನು ಹೆಣೆಯಲಾರಂಭಿಸುತ್ತೇವೆ. ಇದೇ ತಿಂಗಳು ನೌಕಾಪಡೆ ದಿನ ಮತ್ತು ಸಶಸ್ತ್ರ ಪಡೆಗಳ ಧ್ವಜ ದಿನವನ್ನೂ ದೇಶ ಆಚರಿಸುತ್ತದೆ. ಡಿಸೆಂಬರ್ 16 ರಂದು 1971 ನೇ ವರ್ಷದಲ್ಲಿ ನಡೆದ ಯುದ್ಧದ ಸ್ವರ್ಣ ಜಯಂತಿಯನ್ನು ದೇಶ ಆಚರಿಸುತ್ತಿದೆ ಎಂದು ನಮಗೆಲ್ಲ ತಿಳಿದಿದೆ. ನಾನು ಈ ಎಲ್ಲ ಸಂದರ್ಭಗಳಲ್ಲಿ ದೇಶದ ಸುರಕ್ಷತಾ ಬಲವನ್ನು ಸ್ಮರಿಸುತ್ತೇನೆ. ನಮ್ಮ ಯೋಧರನ್ನು ಸ್ಮರಿಸುತ್ತೇನೆ ಹಾಗೂ ವಿಶೇಷವಾಗಿ ಇಂಥ ಯೋಧರಿಗೆ ಜನ್ಮ ನೀಡಿದ ವೀರ ಮಾತೆಯರನ್ನು ಸ್ಮರಿಸುತ್ತೇನೆ. ಎಂದಿನಂತೆ ಈ ಬಾರಿಯೂ ನನಗೆ ನಮೋ ಆಪ್ ನಲ್ಲಿ ಮತ್ತು ಮೈ ಗೌ ನಲ್ಲಿ ನಿಮ್ಮ ಹಲವಾರು ಸಲಹೆ ಸೂಚನೆಗಳು ದೊರೆತಿವೆ. ನೀವು ನನ್ನನ್ನು ನಿಮ್ಮ ಕುಟುಂಬ ಸದಸ್ಯನಂತೆ ಪರಿಗಣಿಸಿ ಸುಖ ದುಖಃಗಳನ್ನು ಹಂಚಿಕೊಂಡಿದ್ದೀರಿ. ಇದರಲ್ಲಿ ಬಹಳಷ್ಟು ಯುವಜನತೆ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರೂ ಇದ್ದಾರೆ. ಮನದ ಮಾತಿನ ನಮ್ಮ ಈ ಕುಟುಂಬ ನಿರಂತರವಾಗಿ ವೃದ್ಧಿಸುತ್ತಿದೆ ಮತ್ತು ಮನಸ್ಸುಗಳು ಬೆರೆಯುತ್ತಿವೆ ಗುರಿಯೊಂದಿಗೂ ಬೆಸೆಯುತ್ತಿವೆ ಎಂದು ನನಗೆ ಬಹಳ ಸಂತೋಷವೆನಿಸುತ್ತದೆ. ಗಾಢವಾಗಿ ಬೇರೂರುತ್ತಿರುವ ನಮ್ಮ ಸಂಬಂಧಗಳು ನಮ್ಮ ನಡುವೆ ನಿರಂತರವಾಗಿ ಸಕಾರಾತ್ಮಕತೆಯನ್ನು ಪ್ರವಹಿಸುತ್ತಿವೆ.

ಲಾಲ್ ಬಹಾದ್ದೂರ್ ಶಾಸ್ತ್ರೀ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

October 02nd, 10:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಸಣ್ಣ ಪ್ರಯತ್ನಗಳು ದೊಡ್ಡ ಬದಲಾವಣೆಗಳಿಗೆ ಕಾರಣವಾಗುತ್ತವೆ: ಪ್ರಧಾನಿ ಮೋದಿ

September 26th, 11:30 am

ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ ವಿಶಾಲ ವ್ಯಾಪ್ತಿಯ ವಿಷಯಗಳ ಕುರಿತು ಮಾತನಾಡಿದರು. ಅವರು ನಮ್ಮ ಸಂಸ್ಕೃತಿಯಲ್ಲಿ ನದಿಗಳ ಮಹತ್ವದ ಬಗ್ಗೆ ಮಾತನಾಡಿದರು. ಮಹಾತ್ಮ ಗಾಂಧಿಯವರನ್ನು ಸ್ಮರಿಸುತ್ತಾ, ಪ್ರಧಾನಿ ಮೋದಿ ಸ್ವಚ್ಛತಾ ಕುರಿತು ಆಲೋಚನೆಗಳನ್ನು ಹಂಚಿಕೊಂಡರು, ಸಿಯಾಚಿನ್ ಹಿಮನದಿಯಲ್ಲಿ ದಿವ್ಯಾಂಗಜನ್ ಸೃಷ್ಟಿಸಿದ ವಿಶ್ವ ದಾಖಲೆಯ ಬಗ್ಗೆ ಮಾತನಾಡಿದರು ಮತ್ತು ದೇಶದ ಉದ್ದಗಲಕ್ಕೂ ಹಲವಾರು ಸ್ಫೂರ್ತಿದಾಯಕ ಕಥೆಗಳನ್ನು ಎತ್ತಿ ತೋರಿಸಿದರು. ಪಂ. ಗೆ ಶ್ರೀಮಂತ ಗೌರವ ಸಲ್ಲಿಸುವುದು. ದೀನದಯಾಳ್ ಉಪಾಧ್ಯಾಯ, ಪ್ರಧಾನಿ ಮೋದಿ ಅವರು ಇಂದಿಗೂ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದರು.

ವೈಭವ್ 2020 ಶೃಂಗಸಭೆಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 02nd, 06:21 pm

“ಯುವಜನರು ವಿಜ್ಞಾನದಲ್ಲಿ ಹೆಚ್ಚಿನ ಆಸಕ್ತಿಯನ್ನು ಬಳೆಸಿಕೊಳ್ಳುವಂತೆ ಮಾಡಲು ಇದು ಸಕಾಲ. ಅದಕ್ಕಾಗಿ ನಾವು ವಿಜ್ಞಾನದ ಇತಿಹಾಸದ ಬಗ್ಗೆ ಮತ್ತು ಐತಿಹ್ಯದ ಬಗ್ಗೆ ತುಂಬಾ ಚೆನ್ನಾಗಿ ತಿಳಿದುಕೊಳ್ಳುವ ಅವಶ್ಯಕತೆ ಇದೆ’’ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಇಂದು ಸಾಗರೋತ್ತರ ಮತ್ತು ಭಾರತೀಯ ವಿಜ್ಞಾನಿಗಳು ಹಾಗೂ ಶೈಕ್ಷಣಿಕ ತಜ್ಞರ ಜಾಗತಿಕ ವರ್ಚ್ಯವಲ್ ಶೃಂಗಸಭೆ- ವೈಶ್ವಿಕ್ ಭಾರತೀಯ ವೈಜ್ಞಾನಿಕ (ವೈಭವ) ಉದ್ಘಾಟಿಸಿ ಮಾತನಾಡಿದರು.

PM remembers Lal Bahadur Shastri on his Jayanti

October 02nd, 09:37 am

The Prime Minister, Shri Narendra Modi has remembered former Prime Minister Lal Bahadur Shastri on his Jayanti.

ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನೋತ್ಸವಕ್ಕೆ ಪ್ರಧಾನಿ ಅವರಿಂದ ಗೌರವ ನಮನ ಸಲ್ಲಿಕೆ

October 02nd, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಬ್ಬರ ಜನ್ಮ ದಿನೋತ್ಸವದ ಸಂದರ್ಭದಲ್ಲಿ ಗೌರವ ನಮನ ಸಲ್ಲಿಸಿದರು.