ಜಿ20 ರಾಷ್ಟ್ರಗಳ ನಾಯಕರು ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದರು

September 10th, 12:26 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಿ20 ಸದಸ್ಯ ರಾಷ್ಟ್ರಗಳ ನಾಯಕರೊಂದಿಗೆ ಇಂದು ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದರು. ಗಾಂಧೀಜಿಯವರ ಕಾಲಾತೀತ ಆದರ್ಶಗಳು ಸಾಮರಸ್ಯ, ಅಂತರ್ಗತ ಮತ್ತು ಸಮೃದ್ಧ ಜಾಗತಿಕ ಭವಿಷ್ಯಕ್ಕಾಗಿ ಸಾಮೂಹಿಕ ದೃಷ್ಟಿಕೋನಕ್ಕೆ ಮಾರ್ಗದರ್ಶನ ನೀಡುತ್ತವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.

13 ನೇ ಬ್ರಿಕ್ಸ್ ಶೃಂಗಸಭೆಗೆ ಪ್ರಧಾನ ಮಂತ್ರಿ ಅಧ್ಯಕ್ಷತೆ ವಹಿಸಿದರು

September 09th, 09:21 pm

ಬ್ರಿಕ್ಸ್ ಶೃಂಗಸಭೆಯಲ್ಲಿ, ಮುಂದಿನ 15 ವರ್ಷಗಳಲ್ಲಿ ಬ್ರಿಕ್ಸ್ ಇನ್ನೂ ಹೆಚ್ಚಿನ ಫಲಿತಾಂಶ ಆಧಾರಿತವಾಗಿದೆಯೆ ಎಂದು ನಾವು ಖಚಿತಪಡಿಸಿಕೊಳ್ಳಬೇಕು. ಭಾರತವು ತನ್ನ ಅಧ್ಯಕ್ಷತೆಯ ಅವಧಿಗೆ ಆಯ್ಕೆ ಮಾಡಿದ ವಿಷಯವು ನಿಖರವಾಗಿ ಈ ಆದ್ಯತೆಯನ್ನು ತೋರಿಸುತ್ತದೆ - 'ಬ್ರಿಕ್ಸ್@15: ಇಂಟ್ರಾ ಬ್ರಿಕ್ಸ್ ಸಹಕಾರ ನಿರಂತರತೆ, ಬಲವರ್ಧನೆ ಮತ್ತು ಒಮ್ಮತಕ್ಕಾಗಿ. ಈ ನಾಲ್ಕು ಸಿಗಳು ಒಂದು ರೀತಿಯಲ್ಲಿ ನಮ್ಮ ಬ್ರಿಕ್ಸ್ ಪಾಲುದಾರಿಕೆಯ ಮೂಲಭೂತ ತತ್ವಗಳಾಗಿವೆ.

13 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಆರಂಭಿಕ ಭಾಷಣ

September 09th, 05:43 pm

ನಾನು ನಿಮ್ಮೆಲ್ಲರನ್ನೂ ಬ್ರಿಕ್ಸ್ ಸಮಾವೇಶಕ್ಕೆ ಸ್ವಾಗತಿಸುತ್ತಿದ್ದೇನೆ. 15 ನೇ ಬ್ರಿಕ್ಸ್ ವಾರ್ಷಿಕೋತ್ಸವದ ಸಂದರ್ಭದಲ್ಲಿ ಈ ಶೃಂಗ ಸಭೆಯ ಅಧ್ಯಕ್ಷತೆ ವಹಿಸಿರುವುದು ನಮಗೆ ಮತ್ತು ಭಾರತಕ್ಕೆ ತುಂಬಾ ಸಂತೋಷದ ವಿಷಯವಾಗಿದೆ. ಇಂದಿನ ಶೃಂಗಸಭೆಗೆ ನಮ್ಮಲ್ಲಿ ವಿಸ್ತಾರವಾದ ಕಾರ್ಯಸೂಚಿಯಿದೆ. ನೀವು ಒಪ್ಪಿದರೆ ಈ ಕಾರ್ಯಸೂಚಿಯನ್ನು ನಾವು ಅಳವಡಿಸಿಕೊಳ್ಳಬಹುದು. ಧನ್ಯವಾದಗಳು, ಈಗ ನಾವು ಕಾರ್ಯಸೂಚಿಯನ್ನು ಅಳವಡಿಸಿಕೊಂಡಿದ್ದೇವೆ.

13ನೇ ಬ್ರಿಕ್ಸ್ ಶೃಂಗಸಭೆ

September 07th, 09:11 am

ಭಾರತವು 2021ರ ಬ್ರಿಕ್ಸ್ ದೇಶಗಳ ಸಮಾವೇಶದ ಅಧ್ಯಕ್ಷತೆ ವಹಿಸಿರುವ ಭಾಗವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಸೆಪ್ಟೆಂಬರ್ 9ರಂದು 13ನೇ ಬ್ರಿಕ್ಸ್ ದೇಶಗಳ ವರ್ಚುವಲ್ ಶೃಂಗಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಶ್ರೀ ಕಲ್ಯಾಣ್ ಸಿಂಗ್ ನಿಧನದ ಕುರಿತು ಪ್ರಧಾನಮಂತ್ರಿ ಮಾಧ್ಯಮಗಳಿಗೆ ಹೇಳಿಕೆ

August 22nd, 11:42 am

ಈ ಕ್ಷಣ ನಮ್ಮೆಲ್ಲರಿಗೂ ದುಃಖದ ಕ್ಷಣ. ಕಲ್ಯಾಣ್ ಸಿಂಗ್ ಜಿ ಅವರ ಪೋಷಕರು ಅವರಿಗೆ ಕಲ್ಯಾಣ ಸಿಂಗ್ ಎಂದು ಹೆಸರಿಟ್ಟಿದ್ದರು. ಅವರು ತಮ್ಮ ಪೋಷಕರು ಇಟ್ಟ ಹೆಸರಿನಂತೆ ಜೀವನವನ್ನು ನಡೆಸಿದರು. ಅವರು ತಮ್ಮ ಇಡೀ ಜೀವನವನ್ನು ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದರು ಮತ್ತು ಅದನ್ನೇ ತಮ್ಮ ಜೀವನಮಂತ್ರವನ್ನಾಗಿ ಮಾಡಿಕೊಂಡಿದ್ದರು. ಅವರು ಭಾರತೀಯ ಜನತಾ ಪಾರ್ಟ, ಭಾರತೀಯ ಜನಸಂಘ ಮತ್ತು ದೇಶದ ಉಜ್ವಲ ಭವಿಷ್ಯಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದರು.

IPS Probationers interact with PM Modi

July 31st, 11:02 am

PM Narendra Modi had a lively interaction with the Probationers of Indian Police Service. The interaction with the Officer Trainees had a spontaneous air and the Prime Minister went beyond the official aspects of the Service to discuss the aspirations and dreams of the new generation of police officers.

ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಐ.ಪಿ.ಎಸ್. ಪ್ರೊಬೆಶನರಿಗಳನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ

July 31st, 11:01 am

ನಿಮ್ಮೆಲ್ಲರೊಂದಿಗೆ ಮಾತನಾಡುವುದು ನನಗೆ ಆನಂದದ ಸಂಗತಿ. ಪ್ರತೀ ವರ್ಷ ನಿಮ್ಮಂತಹ ಯುವ ಮಿತ್ರರ ಜೊತೆ ಸಂವಾದ ನಡೆಸಬೇಕು ಎನ್ನುವುದು ನನ್ನ ಆಶಯ. ಇದರಿಂದ ನಿಮ್ಮ ಚಿಂತನೆಗಳನ್ನು ತಿಳಿದುಕೊಳ್ಳಲು ಸಹಾಯವಾಗುತ್ತದೆ. ನಿಮ್ಮ ಮಾತುಗಳು, ಪ್ರಶ್ನೆಗಳು, ಮತ್ತು ವಿಚಾರ ಮಾಡುವ ಗುಣ ಭವಿಷ್ಯದ ಸವಾಲುಗಳನ್ನು ನಿಭಾಯಿಸಲು ನನಗೂ ಸಹಾಯ ಮಾಡುತ್ತದೆ.

ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

July 31st, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರಶಿಕ್ಷಣಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಅವರು ತರಬೇತಿಯಲ್ಲಿರುವ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಷಾ ಮತ್ತು ಗೃಹ ಖಾತೆ ರಾಜ್ಯ ಸಚಿವ ಶ್ರೀ ನಿತ್ಯಾನಂದ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವ ದಲ್ಲಿ ನಡೆದ ಜಮ್ಮು-ಕಾಶ್ಮೀರ ರಾಜಕೀಯ ಪಕ್ಷಗಳ ನಾಯಕರ ಸಭೆ; ಸಭೆಯ ನಂತರ ಸಹಾಯಕ ಸಚಿವ ಡಾ. ಜಿತೇಂದ್ರ ಸಿಂಗ್ ಅವರ ಹೇಳಿಕೆ

June 24th, 11:53 pm

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ವಿವಿಧ ರಾಜಕೀಯ ಪಕ್ಷಗಳ ನಾಯಕರ ಜತೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಮಹತ್ವದ ಸಭೆ ಸಕಾರಾತ್ಮಕವಾಗಿ ಅಂತ್ಯವಾಗಿದೆ. ಕಣಿವೆಯಲ್ಲಿ ಪ್ರಜಾಪ್ರಭುತ್ವ ಬಲಗೊಳಿಸಲು ಮತ್ತು ಅಭಿವೃದ್ಧಿಪಡಿಸಲು ಇದೊಂದು ಬಹಳ ಸಕಾರಾತ್ಮಕ ಬೆಳವಣಿಗೆಯಾಗಿದೆ. ನಾಯಕರ ಜತೆಗಿನ ಸಭೆಯು ಅತ್ಯಂತ ಸೌಹಾರ್ದಯುತವಾಗಿತ್ತು. ಸಭೆಯಲ್ಲಿ ಪಾಲ್ಗೊಂಡಿದ್ದ ಕಣಿವೆಯ ಎಲ್ಲ ನಾಯಕರು ಭಾರತದ ಪ್ರಜಾಸತ್ತೆ ವ್ಯವಸ್ಥೆ ಮತ್ತು ದೇಶದ ಸಂವಿಧಾನಕ್ಕೆ ಸಂಪೂರ್ಣ ನಿಷ್ಠೆ ವ್ಯಕ್ತಪಡಿಸಿದರು. ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ತಿಳಿಯಾಗಿ, ಶಾಂತಿ ಮರಳುತ್ತಿರುವುದಕ್ಕೆ, ಪರಿಸ್ಥಿತಿ ಸುಧಾರಿಸುತ್ತಿರುವುದನ್ನು ಗೃಹ ಸಚಿವರು ಶ್ಲಾಘಿಸಿದರು.

ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಮತ್ತು ಪ್ರಗತಿ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಇಂದಿನ ಜಮ್ಮು ಮತ್ತು ಕಾಶ್ಮೀರ ಕುರಿತಾದ ಸಭೆ ಪ್ರಮುಖ ಹೆಜ್ಜೆ: ಪ್ರಧಾನಮಂತ್ರಿ

June 24th, 08:52 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಮತ್ತು ಪ್ರಗತಿ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಇಂದಿನ ಜಮ್ಮು ಮತ್ತು ಕಾಶ್ಮೀರದ ರಾಜಕೀಯ ನಾಯಕರ ಸಭೆ ಅತ್ಯಂತ ಪ್ರಮುಖ ಹೆಜ್ಜೆಯಾಗಿದೆ. ಇದರಿಂದ ಅಲ್ಲಿನ ಸರ್ವತೋಮುಖ ಅಭಿವೃದ್ಧಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.

ದೆಹಲಿಯ ಕಾರ್ಯಪ್ಪ ಮೈದಾನದಲ್ಲಿ ನಡೆದ ಎನ್ ಸಿಸಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

January 28th, 12:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಕಾರ್ಯಪ್ಪ ಮೈದಾನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್(ಎನ್ ಸಿಸಿ) ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ಕೇಂದ್ರ ರಕ್ಷಣಾ ಸಚಿವರು, ರಕ್ಷಣಾ ಪಡೆಗಳ ಮುಖ್ಯಸ್ಥರು ಮತ್ತು ಸೇನೆಯ ಮೂರು ವಿಭಾಗಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪ್ರಧಾನಮಂತ್ರಿ ಅವರು ಎನ್ ಸಿಸಿ ಕೆಡೆಟ್ ಗಳ ಪಥಸಂಚಲನ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಾಕ್ಷಿಯಾದರು.

ಕಾರ್ಯಪ್ಪ ಮೈದಾನದಲ್ಲಿ ಎನ್ ಸಿಸಿ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

January 28th, 12:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಕಾರ್ಯಪ್ಪ ಮೈದಾನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್(ಎನ್ ಸಿಸಿ) ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ಕೇಂದ್ರ ರಕ್ಷಣಾ ಸಚಿವರು, ರಕ್ಷಣಾ ಪಡೆಗಳ ಮುಖ್ಯಸ್ಥರು ಮತ್ತು ಸೇನೆಯ ಮೂರು ವಿಭಾಗಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪ್ರಧಾನಮಂತ್ರಿ ಅವರು ಎನ್ ಸಿಸಿ ಕೆಡೆಟ್ ಗಳ ಪಥಸಂಚಲನ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಾಕ್ಷಿಯಾದರು.

ಪರಾಕ್ರಮ ದಿವಸ: ನೇತಾಜಿ ಅವರ 125ನೇ ಜಯಂತಿ ಅಂಗವಾಗಿ ಕೋಲ್ಕತ್ತಾದಲ್ಲಿ ನಡೆದ ಆಚರಣೆ ವೇಳೆ ಪ್ರಧಾನಮಂತ್ರಿ ಭಾಷಣ

January 23rd, 08:18 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊಲ್ಕತ್ತಾದಲ್ಲಿ ನಡೆದ ನೇತಾಜಿ ಸುಭಾಷ್ ಚಂದ್ರ ಬೋಸ್ 125ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೋಲ್ಕತ್ತಾದ ವಿಕ್ಟೋರಿಯಾ ಸ್ಮಾರಕದಲ್ಲಿ ನಡೆದ ‘ಪರಾಕ್ರಮ ದಿನ’ದ ಆಚರಣೆಯನ್ನು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ನೇತಾಜಿ ಕುರಿತ ಕಾಯಂ ಪ್ರದರ್ಶನ ಮತ್ತು ಪ್ರೊಜಕ್ಷನ್ ಮ್ಯಾಪಿಂಗ್ ಶೋ ಅನ್ನು ಇದೇ ವೇಳೆ ಉದ್ಘಾಟಿಸಲಾಯಿತು. ಪ್ರಧಾನಮಂತ್ರಿ ಅವರು ನೇತಾಜಿ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಸ್ಟಾಂಪ್ ಅನ್ನು ಬಿಡುಗಡೆ ಮಾಡಿದರು. ನೇತಾಜಿ ಆಧರಿಸಿದ ‘ಅಮ್ರಾ ನೂತನ್ ಜೌಬನೇರಿ ದೂತ್ ‘ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ನೇತಾಜಿ ಸುಭಾಷ್ ಚಂದ್ರ ಬೋಸ್ 125ನೇ ಜಯಂತಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗಿ

January 23rd, 05:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊಲ್ಕತ್ತಾದಲ್ಲಿ ನಡೆದ ನೇತಾಜಿ ಸುಭಾಷ್ ಚಂದ್ರ ಬೋಸ್ 125ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೋಲ್ಕತ್ತಾದ ವಿಕ್ಟೋರಿಯಾ ಸ್ಮಾರಕದಲ್ಲಿ ನಡೆದ ‘ಪರಾಕ್ರಮ ದಿನ’ದ ಆಚರಣೆಯನ್ನು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ನೇತಾಜಿ ಕುರಿತ ಕಾಯಂ ಪ್ರದರ್ಶನ ಮತ್ತು ಪ್ರೊಜಕ್ಷನ್ ಮ್ಯಾಪಿಂಗ್ ಶೋ ಅನ್ನು ಇದೇ ವೇಳೆ ಉದ್ಘಾಟಿಸಲಾಯಿತು. ಪ್ರಧಾನಮಂತ್ರಿ ಅವರು ನೇತಾಜಿ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಸ್ಟಾಂಪ್ ಅನ್ನು ಬಿಡುಗಡೆ ಮಾಡಿದರು. ನೇತಾಜಿ ಆಧರಿಸಿದ ‘ಅಮ್ರಾ ನೂತನ್ ಜೌಬನೇರಿ ದೂತ್ ‘ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಎರಡನೇ ರಾಷ್ಟ್ರೀಯ ಯುವ ಸಂಸತ್ ಉತ್ಸವ ಸಮಾರೋಪ ಸಮಾರಂಭ: ಪ್ರಧಾನಮಂತ್ರಿ ಭಾಷಣ

January 12th, 10:36 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಎರಡನೇ ರಾಷ್ಟ್ರೀಯ ಯುವ ಸಂಸತ್ತು ಉತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮೂವರು ರಾಷ್ಟ್ರಮಟ್ಟದ ಸ್ಪರ್ಧೆಯ ವಿಜೇತರ ಅಭಿಪ್ರಾಯಗಳನ್ನು ಆಲಿಸಿದರು. ಲೋಕಸಭಾಧ್ಯಕ್ಷರು, ಕೇಂದ್ರ ಶಿಕ್ಷಣ ಸಚಿವರು ಮತ್ತು ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

2ನೇ ರಾಷ್ಟ್ರೀಯ ಯುವ ಸಂಸತ್ತು ಉತ್ಸವ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

January 12th, 10:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಎರಡನೇ ರಾಷ್ಟ್ರೀಯ ಯುವ ಸಂಸತ್ತು ಉತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮೂವರು ರಾಷ್ಟ್ರಮಟ್ಟದ ಸ್ಪರ್ಧೆಯ ವಿಜೇತರ ಅಭಿಪ್ರಾಯಗಳನ್ನು ಆಲಿಸಿದರು. ಲೋಕಸಭಾಧ್ಯಕ್ಷರು, ಕೇಂದ್ರ ಶಿಕ್ಷಣ ಸಚಿವರು ಮತ್ತು ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕಿ ಬಾತ್ 2.0’ – 17 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ

October 25th, 11:00 am

ಸ್ನೇಹಿತರೇ, ನಾವು ಹಬ್ಬಗಳ ಕುರಿತು ಮಾತನಾಡುವಾಗ, ಸಿದ್ಧತೆ ಮಾಡಿಕೊಳ್ಳುವಾಗ ಎಲ್ಲಕ್ಕಿಂತ ಮೊದಲು ಮಾರುಕಟ್ಟೆಗೆ ಯಾವಾಗ ಹೋಗುವುದು, ಏನೇನು ಖರೀದಿಸಬೇಕು ಎಂಬುದೇ ಆಲೋಚನೆಯಾಗಿರುತ್ತದೆ ಅದರಲ್ಲೂ ವಿಶೇಷವಾಗಿ ಮಕ್ಕಳಲ್ಲಿ ಈ ಬಾರಿ ಹಬ್ಬದಂದು ಹೊಸತೇನು ಸಿಗತ್ತೆ? ಎಂಬ ವಿಶಿಷ್ಟ ಉತ್ಸಾಹವಿರುತ್ತದೆ. ಹಬ್ಬಗಳ ಈ ಉತ್ಸಾಹ ಮತ್ತು ಮಾರುಕಟ್ಟೆಯ ಈ ಆಕರ್ಷಣೆ ಒಂದಕ್ಕೊಂದು ಮಿಳಿತವಾಗಿವೆ. ಆದರೆ ಈ ಬಾರಿ ನೀವು ಖರೀದಿಗೆ ಹೋದಾಗ, ‘ವೋಕಲ್ ಫಾರ್ ಲೋಕಲ್’ ಎಂಬ ಸಂಕಲ್ಪ ಖಂಡಿತ ನೆನಪಿರಲಿ. ಮಾರುಕಟ್ಟೆಯಿಂದ ವಸ್ತುಗಳನ್ನು ಖರೀದಿಸುವಾಗ ನಮ್ಮ ಸ್ಥಳೀಯ ಉತ್ಪನ್ನಗಳಿಗೆ ಪ್ರಾಮುಖ್ಯತೆಯನ್ನು ನೀಡಬೇಕು.

For Rajmata Scindia, public service was above everything else: PM Modi

October 12th, 11:01 am

PM Modi recalled the legacy of Rajmata Vijaya Raje Scindia on her birth centenary while releasing a commemorative coin of Rs 100 in her honour. Rajmata Scindia dedicated her life to the poor. She proved that for people's representatives not 'Raj Satta' but 'Jan Seva' is important, said PM Modi.

ರಾಜಮಾತೆ ವಿಜಯರಾಜೇ ಸಿಂಧಿಯಾ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ 100 ರೂ. ವಿಶೇಷ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

October 12th, 11:00 am

ರಾಜಮಾತೆ ವಿಜಯರಾಜೇ ಸಿಂಧಿಯಾ ಅವರ ಜನ್ಮ ಶತಮಾನೋತ್ಸವವದ ಸ್ಮರಣಾರ್ಥ 100 ರೂ. ನಾಣ್ಯವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿ, ರಾಜಮಾತೆಯವರಿಗೆ ಗೌರವ ಸಲ್ಲಿಸಿದರು.

ಲೋಕಸಭಾ ಸದಸ್ಯ ಶ್ರೀ ಬಲ್ಲಿ ದುರ್ಗಾ ಪ್ರಸಾದ್ ರಾವ್ ಗಾರು ಅವರ ನಿಧನಕ್ಕೆ ಪ್ರಧಾನಿ ಸಂತಾಪ

September 16th, 11:16 am

ಲೋಕಸಭಾ ಸಂಸದ ಶ್ರೀ ಬಲ್ಲಿ ದುರ್ಗಾ ಪ್ರಸಾದ್ ರಾವ್ ಗಾರು ಅವರ ಅಕಾಲಿಕ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.