ಕುವೈತ್ ವಿದೇಶಾಂಗ ಸಚಿವರನ್ನು ಪ್ರಧಾನಮಂತ್ರಿ ಮೋದಿ ಬರಮಾಡಿಕೊಂಡರು.

December 04th, 08:39 pm

ಕುವೈತ್‌ನ ವಿದೇಶಾಂಗ ಸಚಿವ ಗೌರವಾನ್ವಿತ ಅಬ್ದುಲ್ಲಾ ಅಲಿ ಅಲ್-ಯಹ್ಯಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.

ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಸರ್ವರಿಗೂ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ

August 09th, 08:58 am

ಮಹಾತ್ಮಾ ಗಾಂಧಿಯವರ ನಾಯಕತ್ವದಲ್ಲಿ ನಡೆದ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಭಾರತ ಬಿಟ್ಟು ತೊಲಗಿ ಚಳವಳಿಯ ಕುರಿತ ದೃಶ್ಯದ ತುಣುಕನ್ನು ಕೂಡಾ ಶ್ರೀ ಮೋದಿ ಅವರು ಹಂಚಿಕೊಂಡಿದ್ದಾರೆ.

ತಿರು ಕೆ. ಕಾಮರಾಜ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ ಸಲ್ಲಿಸಿದರು

July 15th, 04:57 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತಿರು ಕೆ. ಕಾಮರಾಜ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಶ್ರೀಲ ಪ್ರಭುಪಾದ ಜೀ ಅವರ 150ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 08th, 01:00 pm

ಈ ಪವಿತ್ರ ಸಂದರ್ಭದಲ್ಲಿ ನೆರೆದಿದ್ದ ಎಲ್ಲ ಪೂಜ್ಯ ಸಾಧುಗಳು, ಆಚಾರ್ಯ ಗೌಡಿಯಾ ಮಿಷನ್ ನ ಪೂಜ್ಯ ಭಕ್ತಿ ಸುಂದರ್ ಸನ್ಯಾಸಿ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಅರ್ಜುನ್ ರಾಮ್ ಮೇಘವಾಲ್ ಜೀ, ಮೀನಾಕ್ಷಿ ಲೇಖಿ ಜೀ, ರಾಷ್ಟ್ರ ಮತ್ತು ಪ್ರಪಂಚದಾದ್ಯಂತದ ಶ್ರೀಕೃಷ್ಣನ ಭಕ್ತರು, ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ!

ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು

February 08th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಆಚಾರ್ಯ ಶ್ರೀಲ ಪ್ರಭುಪಾದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು ಮತ್ತು ಅವರ ಗೌರವಾರ್ಥವಾಗಿ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಗೌಡಿಯ ಮಿಷನ್‌ ಸಂಸ್ಥಾಪಕರಾದ ಆಚಾರ್ಯ ಶ್ರೀಲ ಪ್ರಭುಪಾದರು ವೈಷ್ಣವ ಪಂಥದ ಮೂಲಭೂತ ತತ್ವಗಳನ್ನು ಸಂರಕ್ಷಿಸುವಲ್ಲಿ ಮತ್ತು ಪಸರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು.

ಎಲ್.ಬಿ.ಎಸ್. ಎನ್.ಎ.ಎ.ಯಲ್ಲಿ 96ನೇ ಸಾಮಾನ್ಯ ಬುನಾದಿ ಪಠ್ಯಕ್ರಮ ತರಗತಿಗಳ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ.

March 17th, 12:07 pm

ಬುನಾದಿ ಪಠ್ಯಕ್ರಮ ತರಗತಿಯನ್ನು ಪೂರ್ಣಗೊಳಿಸಿದ ಎಲ್ಲಾ ಯುವ ಮಿತ್ರರಿಗೆ ಬಹಳ ಅಭಿನಂದನೆಗಳು!. ಇಂದು ಹೋಳಿ ಹಬ್ಬ. ಈ ಸಂದರ್ಭದಲ್ಲಿ ನಾನು ಎಲ್ಲಾ ದೇಶವಾಸಿಗಳಿಗೆ, ನಿಮಗೆ, ಅಕಾಡೆಮಿಯ ಜನರಿಗೆ ಮತ್ತು ನಿಮ್ಮ ಕುಟುಂಬಗಳಿಗೆ ಹೋಳಿಯ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಸರ್ದಾರ್ ವಲ್ಲಭ ಭಾಯಿ ಪಟೇಲ್ ಜೀ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಗೌರವಾರ್ಥ ಪೋಸ್ಟಲ್ ಪ್ರಮಾಣ ಪತ್ರಗಳನ್ನೂ ನಿಮ್ಮ ಅಕಾಡೆಮಿ ವಿತರಿಸಿರುವುದು ನನಗೆ ಸಂತೋಷದ ಸಂಗತಿಯಾಗಿದೆ. ಇಂದು ಹೊಸ ಕ್ರೀಡಾ ಸಂಕೀರ್ಣ ಮತ್ತು ಹ್ಯಾಪಿ ವ್ಯಾಲಿ ಸಂಕೀರ್ಣಗಳನ್ನು ಉದ್ಘಾಟಿಸಲಾಗಿದೆ. ಈ ಸೌಲಭ್ಯಗಳು ತಂಡ ಸ್ಫೂರ್ತಿ, ಆರೋಗ್ಯ ಮತ್ತು ದೈಹಿಕ ಕ್ಷಮತೆಯನ್ನು ಬಲಪಡಿಸಲಿವೆ ಮತ್ತು ನಾಗರಿಕ ಸೇವೆಗಳನ್ನು ಇನ್ನಷ್ಟು ಸ್ಮಾರ್ಟ್ ಹಾಗು ದಕ್ಷಗೊಳಿಸಲಿವೆ.

ಲಾಲ್‌ ಬಹದ್ದೂರ್‌ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿ (ಎಲ್‌ಬಿಎಸ್‌ಎನ್‌ಎಎ) 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್‌ನ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಿ

March 17th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿʼಯಲ್ಲಿ(ಎಲ್‌ಬಿಎಸ್‌ಎನ್‌ಎಎ) ನಡೆದ 96ನೇ ಸಾಮಾನ್ಯ ಫೌಂಡೇಶನ್ ಕೋರ್ಸ್‌ನ ಸಮಾರೋಪ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಹೊಸ ಕ್ರೀಡಾ ಸಂಕೀರ್ಣವನ್ನು ಉದ್ಘಾಟಿಸಿದ ಅವರು ನವೀಕರಿಸಿದ ʻಹ್ಯಾಪಿ ವ್ಯಾಲಿʼ ಸಂಕೀರ್ಣವನ್ನೂ ಲೋಕಾರ್ಪಣೆ ಮಾಡಿದರು.

ಇಟಲಿ ಪ್ರಧಾನ ಮಂತ್ರಿ ಮಾರಿಯೊ ಡ್ರಾಘಿ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

August 27th, 10:45 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಟಲಿ ಪ್ರಧಾನ ಮಂತ್ರಿ ಮಾರಿಯೊ ಡ್ರಾಘಿ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದರು.

ಪಶ್ಚಿಮ ಬಂಗಾಳದ ಖರಗ್ ಪುರ ಐ.ಐ.ಟಿ.ಯ 66 ನೇ ಘಟಿಕೋತ್ಸವದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಇಂಗ್ಲೀಷ್ ಅವತರಣಿಕೆ.

February 23rd, 12:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಐಐಟಿ ಖರಗ್ ಪುರ್ 66ನೇ ಘಟಿಕೋತ್ಸವ ಉದ್ದೇಶಿಸಿ ಭಾಷಣ ಮಾಡಿದರು. ಕೇಂದ್ರ ಶಿಕ್ಷಣ ಸಚಿವ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಶಿಕ್ಷಣ ಖಾತೆ ರಾಜ್ಯ ಸಚಿವ ಶ್ರೀ ಸಂಜಯ್ ಧೋತ್ರೆ ಅವರು ಉಪಸ್ಥಿತರಿದ್ದರು.

ಐಐಟಿ ಖರಗ್‌ಪುರ್ 66ನೇ ಘಟಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

February 23rd, 12:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಐಐಟಿ ಖರಗ್ ಪುರ್ 66ನೇ ಘಟಿಕೋತ್ಸವ ಉದ್ದೇಶಿಸಿ ಭಾಷಣ ಮಾಡಿದರು. ಕೇಂದ್ರ ಶಿಕ್ಷಣ ಸಚಿವ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಶಿಕ್ಷಣ ಖಾತೆ ರಾಜ್ಯ ಸಚಿವ ಶ್ರೀ ಸಂಜಯ್ ಧೋತ್ರೆ ಅವರು ಉಪಸ್ಥಿತರಿದ್ದರು.

ನಾಸ್ಕಾಂ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

February 17th, 12:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಸ್ ಕಾಮ್ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ( ಎನ್ ಟ ಎಲ್ ಎಫ್ ) ಉದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಅವರು ಕೊರೊನಾದ ಸಂಕಷ್ಟದ ಸಮಯದಲ್ಲಿ ಸ್ಥಿತಿಸ್ಥಾಪಕತ್ವ ತೋರಿದ ಐ.ಟಿ. ಉದ್ಯಮವನ್ನು ಶ್ಲಾಘಿಸಿದರು. “ಚಿಪ್ ಗಳು ಕಾರ್ಯನಿರ್ವಹಿಸುವುದು ಕುಸಿದಾಗ, ನಿಮ್ಮ ಸಂಕೇತ(ಕೋಡ್) ಕೆಲಸ ಮಾಡುತ್ತದೆ’’ಎಂದು ಪ್ರಧಾನಮಂತ್ರಿ ಹೇಳಿದರು. ಈ ವಲಯದಲ್ಲಿ ಶೇ.2ರಷ್ಟು ಬೆಳವಣಿಗೆಯಾಗಿದೆ ಎಂಬುದನ್ನು ಉಲ್ಲೇಖಿಸಿದ ಅವರು, ಅಭಿವೃದ್ಧಿ ಕುಂಠಿತವಾಗುತ್ತದೆ ಎನ್ನುವ ಭಯದ ನಡುವೆಯೇ ಹೆಚ್ಚವರಿಯಾಗಿ 4 ಬಿಲಿಯನ್ ಡಾಲರ್ ಆದಾಯವನ್ನು ಗಳಿಸಿದೆ ಎಂದು ಹೇಳಿದರು.

ನ್ಯಾಸ್ ಕಾಮ್ ನ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ ಉದ್ದೇಶಿಸಿ ಪ್ರಧಾನಿ ಭಾಷಣ

February 17th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಸ್ ಕಾಮ್ ತಂತ್ರಜ್ಞಾನ ಮತ್ತು ನಾಯಕತ್ವ ವೇದಿಕೆ( ಎನ್ ಟ ಎಲ್ ಎಫ್ ) ಉದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಅವರು ಕೊರೊನಾದ ಸಂಕಷ್ಟದ ಸಮಯದಲ್ಲಿ ಸ್ಥಿತಿಸ್ಥಾಪಕತ್ವ ತೋರಿದ ಐ.ಟಿ. ಉದ್ಯಮವನ್ನು ಶ್ಲಾಘಿಸಿದರು. “ಚಿಪ್ ಗಳು ಕಾರ್ಯನಿರ್ವಹಿಸುವುದು ಕುಸಿದಾಗ, ನಿಮ್ಮ ಸಂಕೇತ(ಕೋಡ್) ಕೆಲಸ ಮಾಡುತ್ತದೆ’’ಎಂದು ಪ್ರಧಾನಮಂತ್ರಿ ಹೇಳಿದರು. ಈ ವಲಯದಲ್ಲಿ ಶೇ.2ರಷ್ಟು ಬೆಳವಣಿಗೆಯಾಗಿದೆ ಎಂಬುದನ್ನು ಉಲ್ಲೇಖಿಸಿದ ಅವರು, ಅಭಿವೃದ್ಧಿ ಕುಂಠಿತವಾಗುತ್ತದೆ ಎನ್ನುವ ಭಯದ ನಡುವೆಯೇ ಹೆಚ್ಚವರಿಯಾಗಿ 4 ಬಿಲಿಯನ್ ಡಾಲರ್ ಆದಾಯವನ್ನು ಗಳಿಸಿದೆ ಎಂದು ಹೇಳಿದರು.

ಎರಡನೇ ರಾಷ್ಟ್ರೀಯ ಯುವ ಸಂಸತ್ ಉತ್ಸವ ಸಮಾರೋಪ ಸಮಾರಂಭ: ಪ್ರಧಾನಮಂತ್ರಿ ಭಾಷಣ

January 12th, 10:36 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಎರಡನೇ ರಾಷ್ಟ್ರೀಯ ಯುವ ಸಂಸತ್ತು ಉತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮೂವರು ರಾಷ್ಟ್ರಮಟ್ಟದ ಸ್ಪರ್ಧೆಯ ವಿಜೇತರ ಅಭಿಪ್ರಾಯಗಳನ್ನು ಆಲಿಸಿದರು. ಲೋಕಸಭಾಧ್ಯಕ್ಷರು, ಕೇಂದ್ರ ಶಿಕ್ಷಣ ಸಚಿವರು ಮತ್ತು ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

2ನೇ ರಾಷ್ಟ್ರೀಯ ಯುವ ಸಂಸತ್ತು ಉತ್ಸವ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

January 12th, 10:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಎರಡನೇ ರಾಷ್ಟ್ರೀಯ ಯುವ ಸಂಸತ್ತು ಉತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮೂವರು ರಾಷ್ಟ್ರಮಟ್ಟದ ಸ್ಪರ್ಧೆಯ ವಿಜೇತರ ಅಭಿಪ್ರಾಯಗಳನ್ನು ಆಲಿಸಿದರು. ಲೋಕಸಭಾಧ್ಯಕ್ಷರು, ಕೇಂದ್ರ ಶಿಕ್ಷಣ ಸಚಿವರು ಮತ್ತು ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕಿ ಬಾತ್ 2.0’ – 17 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ

October 25th, 11:00 am

ಸ್ನೇಹಿತರೇ, ನಾವು ಹಬ್ಬಗಳ ಕುರಿತು ಮಾತನಾಡುವಾಗ, ಸಿದ್ಧತೆ ಮಾಡಿಕೊಳ್ಳುವಾಗ ಎಲ್ಲಕ್ಕಿಂತ ಮೊದಲು ಮಾರುಕಟ್ಟೆಗೆ ಯಾವಾಗ ಹೋಗುವುದು, ಏನೇನು ಖರೀದಿಸಬೇಕು ಎಂಬುದೇ ಆಲೋಚನೆಯಾಗಿರುತ್ತದೆ ಅದರಲ್ಲೂ ವಿಶೇಷವಾಗಿ ಮಕ್ಕಳಲ್ಲಿ ಈ ಬಾರಿ ಹಬ್ಬದಂದು ಹೊಸತೇನು ಸಿಗತ್ತೆ? ಎಂಬ ವಿಶಿಷ್ಟ ಉತ್ಸಾಹವಿರುತ್ತದೆ. ಹಬ್ಬಗಳ ಈ ಉತ್ಸಾಹ ಮತ್ತು ಮಾರುಕಟ್ಟೆಯ ಈ ಆಕರ್ಷಣೆ ಒಂದಕ್ಕೊಂದು ಮಿಳಿತವಾಗಿವೆ. ಆದರೆ ಈ ಬಾರಿ ನೀವು ಖರೀದಿಗೆ ಹೋದಾಗ, ‘ವೋಕಲ್ ಫಾರ್ ಲೋಕಲ್’ ಎಂಬ ಸಂಕಲ್ಪ ಖಂಡಿತ ನೆನಪಿರಲಿ. ಮಾರುಕಟ್ಟೆಯಿಂದ ವಸ್ತುಗಳನ್ನು ಖರೀದಿಸುವಾಗ ನಮ್ಮ ಸ್ಥಳೀಯ ಉತ್ಪನ್ನಗಳಿಗೆ ಪ್ರಾಮುಖ್ಯತೆಯನ್ನು ನೀಡಬೇಕು.

`ಸಾಮಾಜಿಕ ಸಬಲೀಕರಣಕ್ಕಾಗಿ ಜವಾಬ್ದಾರಿಯುತ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಕೆ’ ಸಮಾವೇಶ – 2020 ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

October 05th, 07:01 pm

ಪ್ರತಿ ಹಂತದ ಇತಿಹಾಸದ ಪುಟಗಳನ್ನು ತಿರುವಿ ಹಾಕಿದರೆ, ಜ್ಞಾನ ಮತ್ತು ಕಲಿಕೆ ವಿಷಯದಲ್ಲಿ ಭಾರತವು ವಿಶ್ವವನ್ನು ಮುನ್ನಡೆಸಿದೆ. ಈ ಹೊತ್ತಿನ ಮಾಹಿತಿ ತಂತ್ರಜ್ಞಾನ ಯುಗದ ಕಾಲಘಟ್ಟದಲ್ಲಿ, ಭಾರತವು ಮಹೋನ್ನತ ಕೊಡುಗೆ ನೀಡುತ್ತಾ ಬಂದಿದೆ. ಅತ್ಯಂತ ಪ್ರತಿಭಾವಂತ ತಂತ್ರಜ್ಞಾನ ನಾಯಕರು ಮತ್ತು ತಜ್ಞರು ಭಾರತೀಯರಾಗಿದ್ದಾರೆ ಎಂಬುದು ಹೆಮ್ಮೆಯ ವಿಷಯ. ಜಾಗತಿಕ ಮಾಹಿತಿ ತಂತ್ರಜ್ಞಾನ ಸೇವಾ ಉದ್ಯಮದಲ್ಲಿ ಭಾರತ `ಶಕ್ತಿ ಮನೆ ಅಥವಾ ಪವರ್ ಹೌಸ್’ ಎಂಬುದನ್ನು ಸಾಧಿಸಿ ತೋರಿಸಿದೆ. ನಾವು ಡಿಜಿಟಲ್ ಕ್ಷೇತ್ರದಲ್ಲೂ ಶ್ರೇಷ್ಠತೆಯನ್ನು ಮುಂದುವರಿಸುವ ಮೂಲಕ ಇಡೀ ಜಗತ್ತಿಗೆ ಆನಂದ ಉಂಟುಮಾಡಬೇಕಿದೆ.

ಕೃತಕ ಬುದ್ಧಿಮತ್ತೆಯ ಬೃಹತ್ ವರ್ಚುವಲ್ ಶೃಂಗಸಭೆ – RAISE 2020 ಉದ್ಘಾಟಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ

October 05th, 07:00 pm

ಕೃತಕ ಬುದ್ಧಿಮತ್ತೆಯ (ಎಐ) ಬೃಹತ್ ವರ್ಚುವಲ್ ಶೃಂಗಸಭೆ RAISE 2020ನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. RAISE 2020 ಆರೋಗ್ಯ, ಕೃಷಿ, ಶಿಕ್ಷಣ ಮತ್ತು ಸ್ಮಾರ್ಟ್ ಮೊಬಿಲಿಟಿ ಮುಂತಾದ ಕ್ಷೇತ್ರಗಳಲ್ಲಿ ಸಾಮಾಜಿಕ ಪರಿವರ್ತನೆ, ಸೇರ್ಪಡೆ ಮತ್ತು ಸಬಲೀಕರಣಕ್ಕಾಗಿ ಕೃತಕ ಬುದ್ಧಿಮತ್ತೆಯನ್ನು ಬಳಸಲು ವಿಚಾರ ವಿನಿಮಯ ಮಾಡಿಕೊಳ್ಳುವ ಮತ್ತು ಈ ಕುರಿತು ರೂಪುರೇಷೆ ಸಿದ್ಧಪಡಿಸುವ ಜಾಗತಿಕ ಸಭೆಯಾಗಿದೆ.

For Better Tomorrow, our government is working on to solve the current challenges: PM Modi

December 06th, 10:14 am

Prime Minister Modi addressed The Hindustan Times Leadership Summit. PM Modi said the decision to abrogate Article 370 may seem politically difficult, but it has given a new ray of hope for development in of Jammu, Kashmir and Ladakh. The Prime Minister said for ‘Better Tomorrow’, the government is working to solve the current challenges and the problems.

ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿಯವರ ಭಾಷಣ

December 06th, 10:00 am

ಯಾವುದೇ ಸಮಾಜ ಅಥವಾ ದೇಶ ಪ್ರಗತಿ ಕಾಣಲು ಪರಸ್ಪರ ಮಾತುಕತೆ ಮುಖ್ಯ ಎಂದ ಪ್ರಧಾನಿಯವರು, ಮಾತುಕತೆಗಳು ಉತ್ತಮ ಭವಿಷ್ಯಕ್ಕಾಗಿ ಅಡಿಪಾಯವನ್ನು ಹಾಕುತ್ತವೆ ಎಂದು ಹೇಳಿದರು. “ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್” ಎಂಬ ಮಂತ್ರದೊಂದಿಗೆ ಪ್ರಸ್ತುತ ಸವಾಲುಗಳು ಮತ್ತು ಸಮಸ್ಯೆಗಳ ಬಗ್ಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.

ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣಾರ್ಥ ಪ್ರಾರ್ಥನಾ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 20th, 05:10 pm

ಇತ್ತೀಚೆಗೆ ನಿಧನ ಹೊಂದಿದ ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥ ದೆಹಲಿಯಲ್ಲಿಂದು ಏರ್ಪಡಿಸಿದ್ದ ಪ್ರಾರ್ಥನಾ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು.