ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ

February 29th, 09:35 pm

ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಚಿರತೆಗಳ ಸಂಖ್ಯೆಯಲ್ಲಿನ ಈ ಗಮನಾರ್ಹ ಹೆಚ್ಚಳವು ಜೀವವೈವಿಧ್ಯತೆಯ ಬಗ್ಗೆ ಭಾರತದ ಅಚಲವಾದ ಸಮರ್ಪಣೆಗೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

​​​​​​​ಮೈಸೂರಿನಲ್ಲಿ ನಡೆದ ʻಹುಲಿ ಯೋಜನೆಯ 50ನೇ ವರ್ಷಾಚರಣೆʼ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

April 09th, 01:00 pm

ಮೊದಲಿಗೆ, ನಾನು ಒಂದು ಗಂಟೆ ತಡವಾಗಿ ಬಂದಿದ್ದಕ್ಕಾಗಿ ನಿಮ್ಮೆಲ್ಲರ ಬಳಿ ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ಬೆಳಗ್ಗೆ ಆರು ಗಂಟೆಗೆ ಹೊರಟೆ; ಕಾಡಿಗೆ ಭೇಟಿ ನೀಡಿದ ನಂತರ ಸಮಯಕ್ಕೆ ಸರಿಯಾಗಿ ಹಿಂತಿರುಗುತ್ತೇನೆ ಎಂದು ನಾನು ಭಾವಿಸಿದ್ದೆ. ನಿಮ್ಮೆಲ್ಲರನ್ನೂ ಕಾಯುವಂತೆ ಮಾಡಿದ್ದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಹುಲಿಗಳ ಸಂಖ್ಯೆ ಏರಿಕೆ ದೃಷ್ಟಿಯಿಂದ ಇದು ಹೆಮ್ಮೆಯ ಕ್ಷಣವಾಗಿದೆ; ಈ ಕುಟುಂಬವು ವಿಸ್ತರಿಸುತ್ತಿದೆ. ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಹುಲಿಗೆ ಗೌರವ ತೋರುವಂತೆ ನಾನು ನಿಮ್ಮೆಲ್ಲರನ್ನೂ ವಿನಂತಿಸುತ್ತೇನೆ. ಧನ್ಯವಾದಗಳು!

ಕರ್ನಾಟಕದ ಮೈಸೂರಿನಲ್ಲಿ 'ಹುಲಿ ಯೋಜನೆಯ 50ನೇ ವರ್ಷಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಧಾನಿ

April 09th, 12:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ 'ಹುಲಿ ಯೋಜನೆಯ 50ನೇ ವರ್ಷಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಅಂತಾರಾಷ್ಟ್ರೀಯ ಬಿಗ್ ಕ್ಯಾಟ್ಸ್ ಮೈತ್ರಿಕೂಟಕ್ಕೆ(ಐಬಿಸಿಎ) ಚಾಲನೆ ನೀಡಿದರು. ʻಹುಲಿ ಸಂರಕ್ಷಣೆಗೆ ಅಮೃತ ಕಾಲದ ದೃಷ್ಟಿಕೋನʼ ಶೀರ್ಷಿಕೆಯ ಹುಲಿ ಮೀಸಲು ಪ್ರದೇಶಗಳ ನಿರ್ವಹಣಾ ಪರಿಣಾಮಕಾರಿತ್ವ ಮೌಲ್ಯಮಾಪನದ 5ನೇ ಸುತ್ತಿನ ಸಾರಾಂಶ ವರದಿಯನ್ನು ಅವರು ಬಿಡುಗಡೆ ಮಾಡಿದರು. ದೇಶದಲ್ಲಿ ಹುಲಿಗಳ ಸಂಖ್ಯೆಯನ್ನು ಘೋಷಿಸಿದರು. ಜೊತೆಗೆ ʻಅಖಿಲ ಭಾರತ ಹುಲಿ ಅಂದಾಜುʼ(5 ನೇ ಸುತ್ತು) ಸಾರಾಂಶ ವರದಿಯನ್ನು ಬಿಡುಗಡೆ ಮಾಡಿದರು. ಹುಲಿ ಯೋಜನೆ 50 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಸ್ಮರಣಾರ್ಥ ನಾಣ್ಯವನ್ನೂ ಅವರು ಬಿಡುಗಡೆ ಮಾಡಿದರು.

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್ 2.0’ – 19 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ

December 27th, 11:30 am

ಸ್ನೇಹಿತರೆ, ದೇಶದ ಸಾಮಾನ್ಯ ಜನರು ಕೂಡ ಈ ಬದಲಾವಣೆಯನ್ನು ಅನುಭವಿಸಿದ್ದಾರೆ. ನಾನು ದೇಶದಲ್ಲಿ ಒಂದು ಸದಾಶಯದ ಪ್ರವಾಹವನ್ನೂ ಕಂಡಿದ್ದೇನೆ. ಹಲವಾರು ಸವಾಲುಗಳು ಎದುರಾದವು. ಹಲವಾರು ಸಂಕಷ್ಟಗಳು ಎದುರಾದವು. ಅನೇಕ ತೊಂದರೆಗಳು ಎದುರಾದವು. ಕೊರೊನದಿಂದಾಗಿ ವಿಶ್ವದಲ್ಲಿ ಸರಬರಾಜು ಸರಪಳಿಯಲ್ಲಿ ಅನೇಕ ತೊಂದರೆಗಳು ಎದುರಾದವು. ಆದರೆ ನಾವು ಪ್ರತಿಯೊಂದು ಸಂಕಷ್ಟದಿಂದಲೂ ಹೊಸತೊಂದು ಪಾಠವನ್ನು ಕಲಿತೆವು. ದೇಶದಲ್ಲಿ ಹೊಸ ಸಾಮರ್ಥ್ಯವೂ ಸೃಷ್ಟಿಯಾಯಿತು. ಶಬ್ದಗಳಲ್ಲಿ ಹೇಳಬೇಕೆಂದರೆ ಈ ಸಾಮರ್ಥ್ಯದ ಹೆಸರು ಸ್ವಾವಲಂಬನೆ.

ಚಿರತೆಗಳ ಸಂಖ್ಯೆ ಹೆಚ್ಚಳಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ

December 22nd, 11:53 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚಳಕ್ಕೆ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಾಣಿಗಳ ಸಂರಕ್ಷಣೆ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.