ಜಪಾನ್-ಭಾರತ ವ್ಯಾಪಾರ ಸಹಕಾರ ಸಮಿತಿಯ ನಿಯೋಗದ ಸದಸ್ಯರು ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು

ಜಪಾನ್-ಭಾರತ ವ್ಯಾಪಾರ ಸಹಕಾರ ಸಮಿತಿಯ ನಿಯೋಗದ ಸದಸ್ಯರು ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು

March 05th, 07:52 pm

17 ಸದಸ್ಯರನ್ನು ಒಳಗೊಂಡ ಜಪಾನ್-ಭಾರತ ವ್ಯಾಪಾರ ಸಹಕಾರ ಸಮಿತಿಯ (JIBCC) ನಿಯೋಗವು ಅಧ್ಯಕ್ಷ ಶ್ರೀ ಟ್ಯಾಟ್ಸುವೊ ಯಸುನಾಗಾ ಅವರ ನೇತೃತ್ವದಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು.

ಭಾರತದ ಈ ವಾರದ  ಬಗ್ಗೆ  ವಿಶ್ವ

ಭಾರತದ ಈ ವಾರದ ಬಗ್ಗೆ ವಿಶ್ವ

March 05th, 11:37 am

ಭಾರತವು ಜಾಗತಿಕ ಪಾಲುದಾರರೊಂದಿಗೆ ತೀವ್ರವಾದ ಸಂಬಂಧವನ್ನು ಹೊಂದಿರುವ ವಾರವನ್ನು ಕಾಣುತ್ತಿದೆ ಮತ್ತು ಪ್ರಮುಖ ದೇಶೀಯ ವಲಯಗಳಲ್ಲಿ ಪ್ರಗತಿ ಸಾಧಿಸುತ್ತಿದೆ. ಯುರೋಪಿಯನ್ ಆಯೋಗದ ನಾಯಕತ್ವವು ಭಾರತಕ್ಕೆ ಭೇಟಿ ನೀಡಿತು, ಲ್ಯಾಟಿನ್ ಅಮೆರಿಕದೊಂದಿಗೆ ವ್ಯಾಪಾರ ಚರ್ಚೆಗಳು ಮುಂದುವರೆದವು ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ದೇಶದಲ್ಲಿ ತಮ್ಮ ಅಸ್ತಿತ್ವವನ್ನು ವಿಸ್ತರಿಸಿದವು. ಏತನ್ಮಧ್ಯೆ, ಭಾರತದ ಲಾಜಿಸ್ಟಿಕ್ಸ್, ಆರೋಗ್ಯ ರಕ್ಷಣೆ ಮತ್ತು ವಾಯುಯಾನ ವಲಯಗಳು ಶಾಶ್ವತ ಆರ್ಥಿಕ ಪರಿಣಾಮಗಳನ್ನು ಬೀರುವ ಬದಲಾವಣೆಗಳಿಗೆ ಒಳಗಾಗುತ್ತಿವೆ.

ಗುವಾಹಟಿಯಲ್ಲಿ ನಡೆದ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ

ಗುವಾಹಟಿಯಲ್ಲಿ ನಡೆದ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ

February 25th, 11:10 am

ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜೀ, ಕ್ರಿಯಾಶೀಲ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಜೀ, ಉದ್ಯಮ ನಾಯಕರೇ, ಗಣ್ಯ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ!

ಅಡ್ವಾಂಟೇಜ್ ಅಸ್ಸಾಂ 2.0 ಬಂಡವಾಳ ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

February 25th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು, “ಪೂರ್ವ ಭಾರತ ಮತ್ತು ಈಶಾನ್ಯ ಭಾರತ ಇಂದು ಭವಿಷ್ಯದ ಹೊಸ ಪಯಣವನ್ನು ಆರಂಭಿಸುತ್ತಿವೆ ಮತ್ತು ಅಡ್ವಾಂಟೇಜ್ ಅಸ್ಸಾಂ, ಅಸ್ಸಾಂನ ಅದ್ಭುತ ಸಾಮರ್ಥ್ಯ ಮತ್ತು ಪ್ರಗತಿಯನ್ನು ಪ್ರಪಂಚದೊಂದಿಗೆ ಬೆಸೆದುಕೊಳ್ಳುವ ಒಂದು ಬೃಹತ್ ಉಪಕ್ರಮವಾಗಿದೆ’’ ಎಂದು ಹೇಳಿದರು.

ಫೆಬ್ರವರಿ 23 ರಿಂದ 25 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

February 22nd, 02:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 23 ರಿಂದ 25, 2025 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 23, 2025 ರಂದು, ಅವರು ಮಧ್ಯಪ್ರದೇಶದ ಛತ್ತರ್‌ ಪುರ ಜಿಲ್ಲೆಯಲ್ಲಿ ಪ್ರಯಾಣಿಸಲಿದ್ದಾರೆ ಮತ್ತು ಅಂದು ಮಧ್ಯಾಹ್ನ 2 ಗಂಟೆಗೆ, ಪ್ರಧಾನಮಂತ್ರಿಯವರು ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಫೆಬ್ರವರಿ 24 ,2025 ರಂದು, ಸುಮಾರು 10 ಗಂಟೆಗೆ, ಪ್ರಧಾನಮಂತ್ರಿಯವರು ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಲಿದ್ದಾರೆ. ನಂತರ, ಅವರು ಬಿಹಾರದ ಭಾಗಲ್ಪುರಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 2:15 ರ ಸುಮಾರಿಗೆ, ಪ್ರಧಾನಮಂತ್ರಿಯವರು ಪಿಎಂ ಕಿಸಾನ್ ಯೋಜನೆಯ 19 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ ಮತ್ತು ಬಿಹಾರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಹಾಗೂ ಆನಂತರ ಅವರು ಅಸ್ಸಾಂನ ಗುವಾಹಟಿಗೆ ಪ್ರಯಾಣಿಸಲಿದ್ದಾರೆ ಮತ್ತು ಸಂಜೆ 6 ಗಂಟೆಗೆ ಅವರು ಜುಮೋಯಿರ್ ಬಿನಂದಿನಿ (ಮೆಗಾ ಜುಮೋಯಿರ್) 2025 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ 25 ರಂದು, ಬೆಳಗ್ಗೆ ಸುಮಾರು 10:45 ಗಂಟೆಗೆ, ಪ್ರಧಾನಮಂತ್ರಿಯವರು ಗುವಾಹಟಿಯಲ್ಲಿ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025 ಅನ್ನು ಉದ್ಘಾಟಿಸಲಿದ್ದಾರೆ.

Today, be it major nations or global platforms, the confidence in India is stronger than ever: PM at ET Summit

February 15th, 08:30 pm

PM Modi, while addressing the ET Now Global Business Summit 2025, highlighted India’s rapid economic growth and reforms. He emphasized India’s rise as a global economic leader, crediting transformative policies like the SVAMITVA Yojana and banking reforms. He stressed the importance of a positive mindset, swift justice, and ease of doing business, reaffirming India's commitment to Viksit Bharat.

ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ-2025ನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಭಾಷಣ

February 15th, 08:00 pm

ನವದೆಹಲಿಯಲ್ಲಿ ಇಂದು ನಡೆದ ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2025ರಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಇಟಿ ನೌ ಶೃಂಗಸಭೆಯ ಕಳೆದ ಆವೃತ್ತಿಯಲ್ಲಿ, ಭಾರತವು ತಮ್ಮ ಮೂರನೇ ಅವಧಿಯಲ್ಲಿ ಹೊಸ ವೇಗದಲ್ಲಿ ಕೆಲಸ ಮಾಡುತ್ತದೆ ಎಂದು ವಿನಮ್ರವಾಗಿ ಹೇಳಿದ್ದನ್ನು ನೆನಪಿಸಿಕೊಂಡರು. ಈ ವೇಗವು ಈಗ ತೀವ್ರವಾಗಿದ್ದು ದೇಶದಿಂದ ಬೆಂಬಲವನ್ನು ಪಡೆಯುತ್ತಿರುವುದಾಗಿ ಅವರು ತೃಪ್ತಿ ವ್ಯಕ್ತಪಡಿಸಿದರು. ವಿಕಸಿತ ಭಾರತದ ಬದ್ಧತೆಗೆ ಅಪಾರ ಬೆಂಬಲ ನೀಡಿದ ಒಡಿಶಾ, ಮಹಾರಾಷ್ಟ್ರ, ಹರಿಯಾಣ ಮತ್ತು ನವದೆಹಲಿಯ ಜನರಿಗೆ ಅವರು ಧನ್ಯವಾದ ಅರ್ಪಿಸಿದರು. ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಮುಟ್ಟುವಲ್ಲಿ ದೇಶದ ನಾಗರಿಕರು ಹೇಗೆ ಹೆಗಲಿಗೆ ಹೆಗಲು ಕೊಟ್ಟು ಸಹಕರಿಸಿ ಕೆಲಸ ಮಾಡುತ್ತಿದ್ದಾರೆ ಎಂಬುದಕ್ಕೆ ದೊರೆತ ಮನ್ನಣೆ ಇದು ಎಂದು ಅವರು ಹೇಳಿದರು.

ಭಾರತ - ಅಮೆರಿಕ ಜಂಟಿ ಪತ್ರಿಕಾಗೋಷ್ಠಿಯ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆ

February 14th, 04:57 am

ನಮಸ್ಕಾರ! ಮೊದಲಿಗೆ, ನನ್ನ ಆತ್ಮೀಯ ಸ್ನೇಹಿತ, ಅಧ್ಯಕ್ಷ ಟ್ರಂಪ್ ಅವರು ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಹೃದಯಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ತಮ್ಮ ನಾಯಕತ್ವದ ಮೂಲಕ, ಅಧ್ಯಕ್ಷ ಟ್ರಂಪ್ ಅವರು ಭಾರತ-ಯುಎಸ್ ಸಂಬಂಧವನ್ನು ಪೋಷಿಸಿದ್ದಾರೆ ಮತ್ತು ಪುನರುಜ್ಜೀವನಗೊಳಿಸಿದ್ದಾರೆ.

ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್ ಕಾರ್ಯಾರಂಭ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣ

January 15th, 11:08 am

ಮಹಾರಾಷ್ಟ್ರದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಸಿಪಿ ರಾಧಾಕೃಷ್ಣನ್ ಅವರು, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ, ಶ್ರೀ ದೇವೇಂದ್ರ ಫಡ್ನವೀಸ್ ಅವರು, ಮಂತ್ರಿ ಪರಿಷತ್ತಿನಲ್ಲಿ ನನ್ನ ಹಿರಿಯ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ಅವರು, ಸಂಜಯ್ ಸೇಠ್ ಜಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಅವರೊಂದಿಗೆ ಇಂದು ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳಾದ. ಉಪಮುಖ್ಯಮಂತ್ರಿ ಶ್ರೀ.ಏಕನಾಥ ಶಿಂಧೆಯವರು, ಶ್ರೀ ಅಜಿತ್ ಪವಾರ್ ಅವರು, CDS, CNS, ಎಲ್ಲ ನೌಕಾ ಸಿಬ್ಬಂದಿ, ಮಡಗಾಂವ್ ನೌಕಾನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಹೋದ್ಯೋಗಿಗಳೇ, ಇತರ ಆಹ್ವಾನಿತರೆ, ಮಹಿಳೆಯರೇ ಮತ್ತು ಮಹನೀಯರೇ,

ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 15th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು.