ಸರ್ದಾರ್ ಧಾಮ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ ಹಂತ ll ರ ಭೂಮಿ ಪೂಜನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

September 11th, 11:01 am

ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಹಾಜರಿರುವ ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ಭಾಯಿ ರೂಪಾನಿ ಜೀ, ಉಪಮುಖ್ಯಮಂತ್ರಿ ಶ್ರೀ ನಿತಿನ್ ಭಾಯಿ, ಸಂಪುಟದ ನನ್ನ ಸಹೋದ್ಯೋಗಿಗಳಾದ, ಸಚಿವರಾದ ಶ್ರೀ ಪರಶೋತ್ತಮ ರೂಪಾಲ ಜೀ, ಶ್ರೀ ಮನ್ಸುಖ್ ಭಾಯಿ ಮಾಂಡವೀಯ ಜೀ, ಅನುಪ್ರಿಯ ಪಟೇಲ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮತ್ತು ಗುಜರಾತ್ ಪ್ರದೇಶ ಬಿ.ಜೆ.ಪಿ. ಅಧ್ಯಕ್ಷರಾದ ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರಕಾರದ ಎಲ್ಲಾ ಸಚಿವರೇ, ಇಲ್ಲಿ ಹಾಜರಿರುವ ಎಲ್ಲಾ ಸಂಸತ್ ಸದಸ್ಯರೇ, ಗುಜರಾತಿನ ಶಾಸಕರೇ, ಸರ್ದಾರ್ ಧಾಮದ ಎಲ್ಲಾ ಟ್ರಸ್ಟೀಗಳೇ, ನನ್ನ ಸ್ನೇಹಿತರಾದ ಶ್ರೀ ಗಾಗಿಭಾಯಿ, ಟ್ರಸ್ಟಿನ ಎಲ್ಲಾ ಗೌರವಾನ್ವಿತ ಸದಸ್ಯರೇ, ಈ ಶ್ರೇಷ್ಠ ಕೆಲಸವನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವ ಎಲ್ಲಾ ಸ್ನೇಹಿತರೇ, ಮತ್ತು ಸಹೋದರರೇ ಹಾಗು ಸಹೋದರಿಯರೇ!.

ಸರ್ದಾರ್ ಧಾಮ್ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ್ ಎರಡನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆ ನೆರವೇರಿಸಿದ ಪ್ರಧಾನಮಂತ್ರಿ

September 11th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ದಾರ್ ಧಾಮ್ ಭವನ ಲೋಕಾರ್ಪಣೆ ಮತ್ತು ಸರ್ದಾರ್ ಧಾಮ್ ಎರಡನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಉಪಸ್ಥಿತರಿದ್ದರು.

ಎಲ್ಲರೂ Covid ೧೯ ಲಸಿಕೆ ಪಡೆಯಬೇಕು ಹಾಗೂ ಆರೋಗ್ಯ ಕಾಪಾಡಿಕೊಳ್ಳಬೇಕು : ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ.

April 25th, 11:30 am

ಸ್ನೇಹಿತರೆ, ಕಳೆದ ದಿನಗಳಲ್ಲಿ ಈ ಸಂಕಷ್ಟದಿಂದ ಹೊರಬರಲು ಬೇರೆ ಬೇರೆ ವಿಭಾಗದ ಪರಿಣಿತರೊಂದಿಗೆ, ತಜ್ಞರೊಂದಿಗೆ ನಾನು ಸುದೀರ್ಘ ಚರ್ಚೆ ನಡೆಸಿದ್ದೇನೆ. ನಮ್ಮ ಔಷಧೀಯ ಕ್ಷೇತ್ರದವರಾಗಲಿ, ಲಸಿಕೆ ತಯಾರಕರಾಗಲಿ, ಆಮ್ಲಜನಕ ಉತ್ಪಾದನಾ ಸಂಬಂಧಿ ಜನರಾಗಲಿ ಅಥವಾ ವೈದ್ಯಕೀಯ ಕ್ಷೇತ್ರದ ಪರಿಣಿತರಾಗಲಿ ಎಲ್ಲರೂ ಮಹತ್ವಪೂರ್ಣ ಸಲಹೆಗಳನ್ನು ಸರ್ಕಾರಕ್ಕೆ ನೀಡಿದ್ದಾರೆ. ಪ್ರಸ್ತುತ ನಾವು ಈ ಹೋರಾಟದಲ್ಲಿ ಜಯಗಳಿಸಲು ತಜ್ಞರ ಮತ್ತು ವಿಜ್ಞಾನಿಗಳ ಸಲಹೆಗಳಿಗೆ ಆದ್ಯತೆ ನೀಡಬೇಕಿದೆ. ರಾಜ್ಯ ಸರ್ಕಾರದ ಪ್ರಯತ್ನಗಳನ್ನು ಮುಂದುವರಿಸಲು ಭಾರತ ಸರ್ಕಾರ ಸಂಪೂರ್ಣ ಶಕ್ತಿಯೊಂದಿಗೆ ಸಿದ್ಧವಾಗಿದೆ. ರಾಜ್ಯ ಸರ್ಕಾರಗಳೂ ತಮ್ಮ ಕರ್ತವ್ಯ ನಿಭಾಯಿಸುವ ಸಂಪೂರ್ಣ ಪ್ರಯತ್ನ ಮಾಡುತ್ತಿವೆ.

ಜೈನಾಚಾರ್ಯ ಶ್ರೀ ವಿಜಯ ವಲ್ಲಭ ಸುರೀಶ್ವರ್ ಜಿ ಮಹಾರಾಜ್ ಅವರ 151 ನೇ ಜಯಂತಿಯ ಅಂಗವಾಗಿ ನವೆಂಬರ್ 16 ರಂದು ಪ್ರಧಾನಿ ಮೋದಿಯವರಿಂದ ‘ಶಾಂತಿ ಪ್ರತಿಮೆ’ ಅನಾವರಣ

November 14th, 06:06 pm

ಜೈನಾಚಾರ್ಯ ಶ್ರೀ ವಿಜಯ ವಲ್ಲಭ ಸುರೀಶ್ವರ್ ಜಿ ಮಹಾರಾಜ್ ಅವರ 151 ನೇ ಜಯಂತಿಯ ಅಂಗವಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 16, 2020 ರಂದು ಮಧ್ಯಾಹ್ನ 12.30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ‘ಶಾಂತಿ ಪ್ರತಿಮೆ’ ಅನಾವರಣಗೊಳಿಸಲಿದ್ದಾರೆ.