ಪೋರ್ಚುಗಲ್‌ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

November 19th, 06:08 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ G20 ಶೃಂಗಸಭೆಯ ನೇಪಥ್ಯದಲ್ಲಿ ಪೋರ್ಚುಗೀಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲೂಯಿಸ್ ಮಾಂಟೆನೆಗ್ರೊ ಅವರನ್ನು ಭೇಟಿ ಮಾಡಿದ್ದರು. ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ. 2024ರ ಏಪ್ರಿಲ್‌ ನಲ್ಲಿ ಪ್ರಧಾನಮಂತ್ರಿಯಾಗಿ ಮಾಂಟೆನೆಗ್ರೊ ಅಧಿಕಾರ ಸ್ವೀಕರಿಸಿದ್ದಾಗ ಪ್ರಧಾನಿ ನರೇಂದ್ರ ಮೋದಿ, ಅವರನ್ನು ಅಭಿನಂದಿಸಿದ್ದರು ಮತ್ತು ಭಾರತ ಮತ್ತು ಪೋರ್ಚುಗಲ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಒಗ್ಗೂಡಿ ಕೆಲಸ ಮಾಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಗೆ ಪ್ರಧಾನಿ ಮೊಂಟೆನೆಗ್ರೊ ಅವರು ಅಭಿನಂದನೆ ಸಲ್ಲಿಸಿದ್ದರು.