​​​​​​​ಅಯೋಧ್ಯೆ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಪರಿವರ್ತಿಸಲು ಸಂಪುಟ ಅನುಮೋದನೆ

January 05th, 08:28 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಅಯೋಧ್ಯೆ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಘೋಷಿಸಲು ಹಾಗೂ ಅದಕ್ಕೆ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಯೋಧ್ಯಧಾಮ ಎಂದು ಹೆಸರಿಡುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.

ಅಯೋಧ್ಯಾ ಧಾಮದಲ್ಲಿ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

December 30th, 04:50 pm

ನಂತರ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, “ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಹೆಸರಿಡಲು ಸಂತಸದ ವಿಷಯವಾಗಿದೆ. ಮಹರ್ಷಿ ವಾಲ್ಮೀಕಿಯವರ ರಾಮಾಯಣವು ಶ್ರೀರಾಮನಿಗೆ ನಮ್ಮನ್ನು ಸಂಪರ್ಕಿಸುವ ಜ್ಞಾನದ ಮಾರ್ಗವಾಗಿದೆ” ಎಂದು ಹೇಳಿದರು. ಆಧುನಿಕ ಭಾರತದಲ್ಲಿ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ನಮ್ಮನ್ನು ಅಯೋಧ್ಯಾ ಧಾಮ ಮತ್ತು ದೈವಿಕ-ಹೊಸ-ಹೊಸ ರಾಮಮಂದಿರಕ್ಕೆ ಸಂಪರ್ಕಿಸುತ್ತದೆ. ಮೊದಲ ಹಂತದಲ್ಲಿ ವಿಮಾನ ನಿಲ್ದಾಣವು ವಾರ್ಷಿಕವಾಗಿ 10 ಲಕ್ಷ ಪ್ರಯಾಣಿಕರನ್ನು ನಿಭಾಯಿಸಲಿದೆ ಮತ್ತು ಎರಡನೇ ಹಂತದ ನಂತರ, ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ವಾರ್ಷಿಕವಾಗಿ 60 ಲಕ್ಷ ಪ್ರಯಾಣಿಕರನ್ನು ಪೂರೈಸಲಿದೆ.