ಮುಂಬೈನಲ್ಲಿ ನಡೆದ ಅಭಿಜತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 05th, 07:05 pm

ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಜೀ, ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜೀ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜೀ ಮತ್ತು ಅಜಿತ್ ಪವಾರ್ ಜೀ, ಕೇಂದ್ರ ಸರ್ಕಾರದ ನನ್ನ ಎಲ್ಲಾ ಸಹೋದ್ಯೋಗಿಗಳು, ತಮ್ಮ ಗಾಯನದಿಂದ ಅನೇಕ ತಲೆಮಾರುಗಳ ಮೇಲೆ ಛಾಪು ಮೂಡಿಸಿರುವ ಆಶಾ ತಾಯಿ ಜೀ, ಪ್ರಸಿದ್ಧ ನಟರಾದ ಭಾಯಿ ಸಚಿನ್ ಜೀ, ನಾಮದೇವ್ ಕಾಂಬ್ಳೆ ಜೀ ಮತ್ತು ಸದಾನಂದ ಮೋರೆ ಜೀ, ಮಹಾರಾಷ್ಟ್ರ ಸರ್ಕಾರದ ಸಚಿವರಾದ ಭಾಯಿ ದೀಪಕ್ ಜೀ ಮತ್ತು ಮಂಗಲ್ ಪ್ರಭಾತ್ ಲೋಧಾ ಜೀ, ಬಿಜೆಪಿಯ ಮುಂಬೈ ಅಧ್ಯಕ್ಷ ಭಾಯ್ ಆಶಿಶ್ ಜೀ, ಇತರ ಗಣ್ಯರು, ಸಹೋದರ ಸಹೋದರಿಯರೇ!

ಮಹಾರಾಷ್ಟ್ರದ ಮುಂಬೈಯಲ್ಲಿ ನಡೆದ ಅಭಿಜಿತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

October 05th, 07:00 pm

ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮರಾಠಿ ಭಾಷೆಗೆ ಕೇಂದ್ರ ಸರ್ಕಾರವು ಅಧಿಕೃತವಾಗಿ ಶಾಸ್ತ್ರೀಯ (ಅಭಿಜಾತ) ಭಾಷೆಯ ಸ್ಥಾನಮಾನವನ್ನು ನೀಡಿದೆ ಎಂದರು. ಶ್ರೀ ಮೋದಿ ಅವರು ಈ ಕ್ಷಣದ ಮಹತ್ವವನ್ನು ಒತ್ತಿ ಹೇಳಿದರು, ಇದು ಮರಾಠಿ ಭಾಷೆಯ ಇತಿಹಾಸದಲ್ಲಿ ಸುವರ್ಣ ಮೈಲಿಗಲ್ಲು ಎಂದು ಬಣ್ಣಿಸಿದರು, ಏಕೆಂದರೆ ಮರಾಠಿ ಮಾತನಾಡುವ ಜನರ ದೀರ್ಘಕಾಲದ ಆಕಾಂಕ್ಷೆಗಳನ್ನು ಅವರು ಉಲ್ಲೇಖಿಸಿದರು ಮತ್ತು ಮಹಾರಾಷ್ಟ್ರದ ಕನಸನ್ನು ಈಡೇರಿಸಲು ಕೊಡುಗೆ ನೀಡುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಪ್ರಧಾನಮಂತ್ರಿಯವರು ಮಹಾರಾಷ್ಟ್ರದ ಜನರನ್ನು ಅಭಿನಂದಿಸಿದರು ಮತ್ತು ಈ ಐತಿಹಾಸಿಕ ಸಾಧನೆಯ ಭಾಗವಾಗಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು. ಇದಲ್ಲದೆ, ಬಂಗಾಳಿ, ಪಾಲಿ, ಪ್ರಾಕೃತ ಮತ್ತು ಅಸ್ಸಾಮಿ ಭಾಷೆಗಳಿಗೂ ಶಾಸ್ತ್ರೀಯ ಭಾಷೆಗಳ ಸ್ಥಾನಮಾನವನ್ನು ನೀಡಲಾಗಿದೆ ಎಂದು ಪ್ರಧಾನಿ ಘೋಷಿಸಿದರು ಮತ್ತು ಈ ಭಾಷೆಗಳಿಗೆ ಸಂಬಂಧಿಸಿದ ಜನತೆಗೆ ಅಭಿನಂದನೆ ಸಲ್ಲಿಸಿದರು.

ಮಹಾತ್ಮ ಜ್ಯೋತಿಬಾ ಫುಲೆ ಅವರ ಜನ್ಮದಿನಕ್ಕೆ ಪ್ರಧಾನ ಮಂತ್ರಿಗಳಿಂದ ಗೌರವ ಸಲ್ಲಿಕೆ

April 11th, 09:28 am

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಹಾನ್ ಸಮಾಜ ಸುಧಾರಕ ಮಹಾತ್ಮ ಜ್ಯೋತಿಬಾ ಫುಲೆ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ದೀನದಲಿತರ ಸಬಲೀಕರಣಕ್ಕೆ ಜ್ಯೋತಿಬಾ ಫುಲೆ ಅವರ ಅತ್ಯುನ್ನತ ಕೊಡುಗೆಯನ್ನು ಪ್ರಧಾನಿಗಳು ಸ್ಮರಿಸಿದ್ದಾರೆ. ಅಲ್ಲದೆ ಮಹಾತ್ಮ ಜ್ಯೋತಿಬಾ ಫುಲೆ ಅವರ ಬಗ್ಗೆ ತಮ್ಮ ಆಲೋಚನೆಗಳನ್ನು ವೀಡಿಯೊ ಕ್ಲಿಪ್ ಮೂಲಕ ಹಂಚಿಕೊಂಡಿದ್ದಾರೆ.

'ಏಕ್ ಭಾರತ್, ಶ್ರೇಷ್ಠ ಭಾರತ'ದ ಮನೋಭಾವವು ನಮ್ಮ ರಾಷ್ಟ್ರವನ್ನು ಬಲಪಡಿಸುತ್ತದೆ: 'ಮನ್ ಕಿ ಬಾತ್' ಸಂದರ್ಭದಲ್ಲಿ ಪ್ರಧಾನಿ ಮೋದಿ

March 26th, 11:00 am

ನನ್ನ ಪ್ರಿಯ ದೇಶಬಾಂಧವರೆ. ಮನದ ಮಾತಿನಲ್ಲಿ ಬೇರೆಯವರ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಂಥ ಸಾವಿರಾರು ಜನರ ಬಗ್ಗೆ ಚರ್ಚಿಸಿದ್ದೇವೆ. ತಮ್ಮ ಮಗಳ ವಿದ್ಯಾಭ್ಯಾಸಕ್ಕಾಗಿ ತಮ್ಮ ಸಂಪೂರ್ಣ ಪಿಂಚಣಿಯನ್ನೇ ಮುಡಿಪಾಗಿಟ್ಟವರು ಹಲವರಿದ್ದರೆ, ಇನ್ನೂ ಎಷ್ಟೋ ಜನರು ತಮ್ಮ ಜೀವನವದ ಸಂಪೂರ್ಣ ಗಳಿಕೆಯನ್ನು ಪರಿಸರ ಮತ್ತು ಪ್ರಾಣಿ ಪಕ್ಷಿಗಳ ಸೇವೆಗೆ ಸಮರ್ಪಿಸಿಬಿಡುತ್ತಾರೆ. ನಮ್ಮ ದೇಶದಲ್ಲಿ ಪರಮಾರ್ಥವನ್ನು ಎಷ್ಟು ಉತ್ತುಂಗದಲ್ಲಿರಿಸಿದ್ದಾರೆಂದರೆ ಬೇರೆಯವರ ಸುಖಕ್ಕಾಗಿ ತಮ್ಮ ಸರ್ವಸ್ವವನ್ನೂ ದಾನ ಮಾಡಲು ಹಿಂಜರಿಯುವುದಿಲ್ಲ. ಹಾಗಾಗಿ ಬಾಲ್ಯದಿಂದಲೂ ನಮಗೆ ಶಿಬಿ ಮತ್ತು ದಧೀಚಿಯಂತಹ ದೇಹ ದಾನ ಮಾಡಿದವರ ಕಥೆಗಳನ್ನು ಹೇಳುತ್ತಾರೆ.

ಜ್ಯೋತಿಬಾ ಫುಲೆ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

April 11th, 10:16 am

ಪ್ರಧಾನಮಂತ್ರಿ ಅವರು ಶ್ರೇಷ್ಠ ಸಾಮಾಜಿಕ ಸುಧಾರಕ, ತತ್ವಜ್ಞಾನಿ ಮತ್ತು ಬರಹಗಾರರಾದ ಮಹಾತ್ಮ ಜ್ಯೋತಿಬಾ ಫುಲೆ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು. ಮಹಾತ್ಮ ಫುಲೆ ಅವರು ಸಾಮಾಜಿಕ ನ್ಯಾಯದ ಹರಿಕಾರ (ಚಾಂಪಿಯನ್ ) ಹಾಗೂ ಅಸಂಖ್ಯಾತ ಜನರ ಭರವಸೆಯ ಮೂಲ ಎಂದೇ ವ್ಯಾಪಕವಾಗಿ ಗೌರವಿಸಲ್ಪಟ್ಟಿದ್ದಾರೆ ಎಂದ ಶ್ರೀ ನರೇಂದ್ರ ಮೋದಿ, ಸಾಮಾಜಿಕ ಸಮಾನತೆ, ಮಹಿಳಾ ಸಬಲೀಕರಣ ಮತ್ತು ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅವರು ಅವಿರತವಾಗಿ ದುಡಿದರು ಎಂದು ಹೇಳಿದ್ದಾರೆ.

“ಟಿಕಾ ಉತ್ಸವ”ದಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಂದೇಶ

April 11th, 09:22 am

ಇಂದು ನಾವು “ಟಿಕಾ ಉತ್ಸವವನ್ನು” ಏಪ್ರಿಲ್ 11 ರಿಂದ ಆರಂಭಿಸುತ್ತಿದ್ದೇವೆ. ಇದು ಜ್ಯೊತಿಭಾ ಫುಲೆ ಅವರ ಜನ್ಮ ವರ್ಷಾಚರಣೆ. ಟಿಕಾ ಉತ್ಸವವು ಏಪ್ರಿಲ್ 14 ರವರೆಗೆ, ಅಂದರೆ ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ವರ್ಷಾಚರಣೆವರೆಗೆ ಮುಂದುವರೆಯುತ್ತದೆ.

‘ಲಸಿಕಾ ಉತ್ಸವ’ ವು ಕೊರೊನಾ ವಿರುದ್ಧ ಎರಡನೇ ಸಮರದ ಆರಂಭ: ಪ್ರಧಾನಿ

April 11th, 09:21 am

‘ಲಸಿಕಾ ಉತ್ಸವ’ ವು ಕೊರೊನಾ ವಿರುದ್ಧದ ಎರಡನೇ ದೊಡ್ಡ ಸಮರದ ಆರಂಭ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ವೈಯಕ್ತಿಕ ನೈರ್ಮಲ್ಯದ ಜೊತೆಗೆ ಸಾಮಾಜಿಕ ನೈರ್ಮಲ್ಯದ ಬಗ್ಗೆಯೂ ವಿಶೇಷ ಗಮನ ಹರಿಸುವಂತೆ ಅವರು ಕರೆಕೊಟ್ಟಿದ್ದಾರೆ. ಉತ್ಸವವು ಮಹಾತ್ಮ ಜ್ಯೋತಿಬಾ ಫುಲೆ ಅವರ ಜಯಂತಿಯಾದ ಇಂದು ಪ್ರಾರಂಭವಾಗಿದೆ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿಯಯಾದ ಏಪ್ರಿಲ್ 14 ರವರೆಗೆ ಮುಂದುವರಿಯುತ್ತದೆ.