ಫೆಬ್ರವರಿ 22 ಮತ್ತು 23 ರಂದು ಗುಜರಾತ್ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

February 21st, 11:41 am

ಫೆಬ್ರವರಿ 22 ರ ಬೆಳಿಗ್ಗೆ 10:45ಕ್ಕೆ ಪ್ರಧಾನಮಂತ್ರಿಯವರು ಅಹ್ಮದಾಬಾದ್ ನಲ್ಲಿ ಗುಜರಾತ್ ಸಹಕಾರ ಹಾಲು ಮಾರುಕಟ್ಟೆ ಒಕ್ಕೂಟದ (ಜಿ.ಸಿ.ಎಂ.ಎಂ.ಎಫ್). ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ನಂತರ 12:45 ಕ್ಕೆ ಪ್ರಧಾನಮಂತ್ರಿಯವರು ಮಹೆಸನಾಗೆ ತಲುಪಲಿದ್ದು, ವಲಿನಾಥ್ ಮಹದೇವ್ ದೇವಾಲಯದಲ್ಲಿ ದರ್ಶನ ಪಡೆಯಲಿದ್ದಾರೆ ಮತ್ತು ಪೂಜೆ ಸಲ್ಲಿಸಲಿದ್ದಾರೆ. 1 ಗಂಟೆ ಸುಮಾರಿಗೆ ಮಹಸೆನಾದ ತರಭ್ ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ 13,500 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಸಂಜೆ 4:15 ಕ್ಕೆ ಪ್ರಧಾನಮಂತ್ರಿಯವರು ನವಸಾರಿಗೆ ತೆರಳಲಿದ್ದು, ಅಲ್ಲಿ 47,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಶಿಲಾನ್ಯಾಸ ನೆರವೇರಿಸುವರು ಮತ್ತು ದೇಶಕ್ಕೆ ಸಮರ್ಪಿಸುವರು. ಸಂಜೆ 6:15 ಕ್ಕೆ ಪ್ರಧಾನಮಂತ್ರಿಯವರು ಕಕ್ರಾಪರ್ ಪರಮಾಣು ವಿದ್ಯುತ್ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.

ಅಹಮದಾಬಾದ್-ಮಾಹೇಸಾನಾ (64.27 ಕಿಮೀ) ಗೇಜ್ ಪರಿವರ್ತನೆ ಯೋಜನೆ ಪೂರ್ಣಗೊಂಡ ಕುರಿತು ಹರ್ಷ ವ್ಯಕ್ತಪಡಿಸಿದ ಪ್ರಧಾನಮಂತ್ರಿ

March 06th, 09:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್- ಮಾಹೇಸಾನಾ (64.27 ಕಿಮೀ) ಗೇಜ್ ಪರಿವರ್ತನೆ ಯೋಜನೆ ಪೂರ್ಣಗೊಂಡ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.

Gujarat is progressing rapidly: PM Modi in Dahod

November 23rd, 12:41 pm

Campaigning his second rally in Dahod, PM Modi took a swipe at Congress for being oblivious to tribals for a long time. He said, “A very large tribal society lives in the country.

Congress model means casteism and vote bank politics which creates rift among people: PM Modi in Mehsana

November 23rd, 12:40 pm

The campaigning in Gujarat has gained momentum as Prime Minister Narendra Modi has addressed a public meeting in Gujarat’s Mehsana. Slamming the Congress party, PM Modi said, “In our country, Congress is the party which has run the governments at the centre and in the states for the longest period of time. But the Congress has created a different model for its governments. The hallmark of the Congress model is corruption worth billions, nepotism, dynasty, casteism and many more.”

ಗುಜರಾತ್‌ನ ಮೆಹ್ಸಾನಾ, ದಾಹೋದ್, ವಡೋದರಾ ಮತ್ತು ಭಾವನಗರದಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು

November 23rd, 12:38 pm

ಗುಜರಾತ್‌ನ ಮೆಹ್ಸಾನಾ, ದಾಹೋದ್, ವಡೋದರಾ ಮತ್ತು ಭಾವನಗರದಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಂತೆ ಗುಜರಾತ್‌ನಲ್ಲಿ ಪ್ರಚಾರವು ವೇಗವನ್ನು ಪಡೆದುಕೊಂಡಿದೆ. ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ, “ಕಾಂಗ್ರೆಸ್ ಮಾದರಿ ಎಂದರೆ ಭ್ರಷ್ಟಾಚಾರ, ಸ್ವಜನಪಕ್ಷಪಾತ, ರಾಜವಂಶದ ರಾಜಕಾರಣ, ಮತೀಯತೆ ಮತ್ತು ಜಾತೀಯತೆ. ಅವರು ವೋಟ್ ಬ್ಯಾಂಕ್ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಮತ್ತು ಅಧಿಕಾರದಲ್ಲಿರಲು ಜನರ ನಡುವೆ ಬಿರುಕುಗಳನ್ನು ಸೃಷ್ಟಿಸಲು ಹೆಸರುವಾಸಿಯಾಗಿದ್ದಾರೆ. ಈ ಮಾದರಿಯು ಗುಜರಾತ್ ಅನ್ನು ಮಾತ್ರವಲ್ಲದೆ ಭಾರತವನ್ನೂ ನಾಶಪಡಿಸಿದೆ.

"ನಾವು ರೈಲ್ವೆಗಳನ್ನು ಕೇವಲ ಸೇವೆಯಾಗಿ ಮಾತ್ರವಲ್ಲದೆ ಆಸ್ತಿಯಾಗಿಯೂ ಅಭಿವೃದ್ಧಿಪಡಿಸಿದ್ದೇವೆ: ಪ್ರಧಾನಿ ಮೋದಿ "

July 16th, 04:05 pm

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ರೈಲ್ವೆಯ ಹಲವಾರು ಪ್ರಮುಖ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ಅಕ್ವಾಟಿಕ್ಸ್ ಮತ್ತು ರೊಬೊಟಿಕ್ಸ್ ಗ್ಯಾಲರಿ ಮತ್ತು ಗುಜರಾತ್ ಸೈನ್ಸ್ ಸಿಟಿಯಲ್ಲಿನ ನೇಚರ್ ಪಾರ್ಕ್ ಅನ್ನು ಉದ್ಘಾಟಿಸಿದರು.

ಗುಜರಾತ್‌ನಲ್ಲಿ ವಿವಿಧ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ

July 16th, 04:04 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನಲ್ಲಿನ ರೈಲ್ವೆಯ ಹಲವಾರು ಪ್ರಮುಖ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ಅಕ್ವಾಟಿಕ್ಸ್ ಮತ್ತು ರೊಬೊಟಿಕ್ಸ್ ಗ್ಯಾಲರಿ ಮತ್ತು ಗುಜರಾತ್ ಸೈನ್ಸ್ ಸಿಟಿಯಲ್ಲಿನ ನೇಚರ್ ಪಾರ್ಕ್ ಅನ್ನು ಉದ್ಘಾಟಿಸಿದರು. ಅವರು ಗಾಂಧಿನಗರ ಕ್ಯಾಪಿಟಲ್ - ವಾರಾಣಸಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಗಾಂಧಿನಗರ ಕ್ಯಾಪಿಟಲ್ ಮತ್ತು ವಾರೆಥಾ ನಡುವಿನ ಮೆಮು ರೈಲುಗಳಿಗೆ ಹಸಿರು ನಿಶಾನೆ ತೋರಿದರು.

ಪ್ರಧಾನಮಂತ್ರಿ ಅವರಿಂದ ಗುಜರಾತ್ ನಲ್ಲಿ ನಾಳೆ ನಾನಾ ರೈಲ್ವೆ ಯೋಜನೆಗಳ ಉದ್ಘಾಟನೆ ಮತ್ತು ಲೋಕಾರ್ಪಣೆ

July 14th, 06:45 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಗುಜರಾತ್ ನ ನಾನಾ ರೈಲ್ವೆ ಯೋಜನೆಗಳನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ, ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲದೆ, ಗುಜರಾತ್ ನ ವಿಜ್ಞಾನ ನಗರಿಯಲ್ಲಿ ಸ್ಥಾಪನೆಯಾಗಿರುವ ‘ಅಕ್ವಾಟಿಕ್ಸ್ ಮತ್ತು ರೊಬೊಟಿಕ್ಸ್ ಗ್ಯಾಲರಿ’ ಹಾಗೂ ‘ನಿಸರ್ಗ ಉದ್ಯಾನ’ವನ್ನು ಅವರು ಇದೇ ಸಂದರ್ಭದಲ್ಲಿ ದೇಶಕ್ಕೆ ಸಮರ್ಪಿಸಲಿದ್ದಾರೆ.