ಉತ್ತರ ಪ್ರದೇಶದ ಮೀರತ್ತಿನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾನಿಲಯಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

January 02nd, 01:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಕ್ರೀಡಾ ವಿಶ್ವವಿದ್ಯಾನಿಲಯವನ್ನು ಸುಮಾರು 700 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಸಿಂಥೆಟಿಕ್ ಹಾಕಿ ಮೈದಾನ, ಫುಟ್‌ಬಾಲ್ ಮೈದಾನ, ಬಾಸ್ಕೆಟ್‌ಬಾಲ್ / ವಾಲಿಬಾಲ್ / ಹ್ಯಾಂಡ್‌ಬಾಲ್/ ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜು ಕೊಳ, ಬಹುಉದ್ದೇಶಿತ ಸಭಾಂಗಣ ಮತ್ತು ಸೈಕ್ಲಿಂಗ್ ವೆಲೊಡ್ರೋಮ್ ಸೇರಿದಂತೆ ಆಧುನಿಕ ಮತ್ತು ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಹೊಂದಿದೆ.

ಉತ್ತರ ಪ್ರದೇಶದ ಮೀರತ್‌ನಲ್ಲಿ ಪ್ರಧಾನಮಂತ್ರಿ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು

January 02nd, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಕ್ರೀಡಾ ವಿಶ್ವವಿದ್ಯಾನಿಲಯವನ್ನು ಸುಮಾರು 700 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಸಿಂಥೆಟಿಕ್ ಹಾಕಿ ಮೈದಾನ, ಫುಟ್‌ಬಾಲ್ ಮೈದಾನ, ಬಾಸ್ಕೆಟ್‌ಬಾಲ್ / ವಾಲಿಬಾಲ್ / ಹ್ಯಾಂಡ್‌ಬಾಲ್/ ಕಬಡ್ಡಿ ಮೈದಾನ, ಲಾನ್ ಟೆನ್ನಿಸ್ ಕೋರ್ಟ್, ಜಿಮ್ನಾಷಿಯಂ ಹಾಲ್, ಸಿಂಥೆಟಿಕ್ ರನ್ನಿಂಗ್ ಸ್ಟೇಡಿಯಂ, ಈಜು ಕೊಳ, ಬಹುಉದ್ದೇಶಿತ ಸಭಾಂಗಣ ಮತ್ತು ಸೈಕ್ಲಿಂಗ್ ವೆಲೊಡ್ರೋಮ್ ಸೇರಿದಂತೆ ಆಧುನಿಕ ಮತ್ತು ಅತ್ಯಾಧುನಿಕ ಕ್ರೀಡಾ ಮೂಲಸೌಕರ್ಯಗಳನ್ನು ಹೊಂದಿದೆ.

ಪ್ರಧಾನಿ ಜನವರಿ 2 ರಂದು ಮೀರತ್‌ಗೆ ಭೇಟಿ ನೀಡಲಿದ್ದಾರೆ

December 31st, 11:11 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2022ರ ಜನವರಿ 2 ರಂದು ಮೀರತ್‌ಗೆ ಭೇಟಿ ನೀಡಲಿದ್ದಾರೆ ಮತ್ತು ಮಧ್ಯಾಹ್ನ 1 ಗಂಟೆಗೆ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯದ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ “ರಾಷ್ಟ್ರ ರಕ್ಷಾ ಸಮರ್ಪಣ ಪರ್ವ”ದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

November 19th, 05:39 pm

ಸ್ವಾತಂತ್ರ್ಯಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ರಾಣಿ ಲಕ್ಷ್ಮೀಬಾಯಿ ಅವರ ನೆಲದ ಜನರಿಗೆ ನಾನು ಕೈಮುಗಿದು ನಮಸ್ಕರಿಸುತ್ತೇನೆ. ಝಾನ್ಸಿಯು ಸ್ವಾತಂತ್ರ್ಯದ ಜ್ವಾಲೆಯನ್ನು, ಕಿಡಿಯನ್ನು ಹಚ್ಚಿತು. ಈ ನೆಲದ ಪ್ರತಿಯೊಂದು ಕಣವೂ ವೀರತ್ವ ಮತ್ತು ದೇಶಪ್ರೇಮದಲ್ಲಿ ಮಿಂದೆದ್ದಿದೆ. ಝಾನ್ಸಿಯ ವೀರ ರಾಣಿ, ರಾಣಿ ಲಕ್ಷ್ಮೀಬಾಯಿ ಅವರಿಗೆ ನಾನು ವಂದಿಸುತ್ತೇನೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಯೋಜಿಸಿದ ರಾಷ್ಟ್ರ ರಕ್ಷಾ ಸಮರ್ಪಣ್‌ ಪರ್ವ್‌ದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ

November 19th, 05:38 pm

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ರಕ್ಷಾ ಸಂಪರ್ಪಣ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮವನ್ನು ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಯೋಜಿಸಲಾಗಿತ್ತು. ದೇಶದ ಭದ್ರತಾಪಡೆಗಳಿಗೆ ಹೊಸ ಯೋಜನೆಗಳನ್ನು ಘೋಷಿಸುತ್ತ, ಝಾನ್ಸಿಯ ಕೋಟೆ ಆವರಣದಲ್ಲಿ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಹೊಸ ಹೆಜ್ಜೆಗಳ ಕುರಿತು ಮಾತನಾಡಿದರು. ಎನ್‌ಸಿಸಿಯ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಆರಂಭಿಸುವುದೂ ಇವುಗಳಲ್ಲಿ ಒಂದಾಗಿತ್ತು. ಪ್ರಧಾನಿ ನರೇಂದ್ರಮೋದಿ ಅವರು ಈ ಸಂಘಕ್ಕೆ ತಾವೇ ಮೊದಲ ಸದಸ್ಯರಾಗಿ ಹೆಸರು ನೊಂದಾಯಿಸಿದರು. ಎನ್‌ಸಿಸಿ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಸಿಮ್ಯುಲೆಷನ್‌ ತರಬೇತಿ ಕಾರ್ಯಕ್ರಮದ ಆರಂಭವನ್ನು ಘೋಷಿಸಲಾಯಿತು. ಸಮರ ವೀರರಿಗೆ ಹುತಾತ್ಮರಾದವರಿಗೆ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ನಮನ ಸಲ್ಲಿಸಲು ಕಿಯಾಸ್ಕ್‌ ಅನ್ನು ಸಮರ್ಪಿಸಲಾಯಿತು. ರಾಷ್ಟ್ರೀಯ ಸಮರ ಸ್ಮರಣೆಯ ಮೊಬೈಲ್‌ ಆ್ಯಪ್‌ ಅನ್ನು ಆರಂಭಿಸಲಾಯಿತು. ಡಿಆರ್‌ಡಿಒ ವಿನ್ಯಾಸಗೊಳಿಸಿರುವ, ಅಭಿವೃದ್ಧಿ ಪಡಿಸಿರುವ ವಿದ್ಯುನ್ಮಾನ ಸಮರ ಸ್ಯೂಟ್‌ ಶಕ್ತಿ ಅನ್ನು ಭಾರತೀಯ ನೌಕೆಗಳಿಗೆ ನೀಡಲಾಯಿತು. ಹಗುರ ಸಮರ ಹೆಲಿಕಾಪ್ಟರ್‌, ಡ್ರೋನ್‌ಗಳನ್ನು ಸಮರ್ಪಿಸಲಾಯಿತು. ಉತ್ತರ ಪ್ರದೇಶದ ಕೈಗಾರಿಕಾ ಕಾರಿಡಾರ್‌ನಲ್ಲಿರುವ ಭಾರತ್‌ ಡೈನಾಮಿಕ್ಸ್‌ ಲಿಮಿಟೆಡ್‌ಗೆ 400 ಕೋಟಿ ಮೌಲ್ಯದ ನೂತನ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದರು.

ಭಾರತದ ಯುವಜನತೆ ಈಗ ಏನಾದರೂ ದೊಡ್ಡಪ್ರಮಾಣದಲ್ಲಿ ಹೊಸ ಪ್ರಯತ್ನವನ್ನು ಮಾಡಲು ಬಯಸುತ್ತಾರೆ: ಪ್ರಧಾನಿ ನರೇಂದ್ರ ಮೋದಿಯವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೇಳಿದರು.

August 29th, 11:30 am

ಮನ್ ಕಿ ಬಾತ್ ಸಮಯದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೇಜರ್ ಧ್ಯಾನಚಂದ್ ಅವರಿಗೆ ಗೌರವ ಸಲ್ಲಿಸಿದರು ಮತ್ತು ವಿಶ್ವ ವೇದಿಕೆಯಲ್ಲಿ ದೇಶವನ್ನು ಹೆಮ್ಮೆಪಡುವಂತೆ ಮಾಡಿದ ನಮ್ಮ ಒಲಿಂಪಿಯನ್ ಗಳ ಬಗ್ಗೆ ಮಾತನಾಡಿದರು. ದೇಶದ ಯುವಕರು ಅಪಾಯಗಳನ್ನು ತೆಗೆದುಕೊಂಡು ಮುಂದೆ ಸಾಗುವ ಸಾಮರ್ಥ್ಯಕ್ಕಾಗಿ ಅವರು ಶ್ಲಾಘಿಸಿದರು. ಪ್ರಧಾನಮಂತ್ರಿಯವರು ನಮ್ಮ ನುರಿತ ಮಾನವಶಕ್ತಿಯ ಪ್ರಯತ್ನಗಳನ್ನು ಎತ್ತಿ ತೋರಿಸಿದರು ಮತ್ತು ಭಗವಾನ್ ವಿಶ್ವಕರ್ಮರಿಗೆ ಗೌರವ ಸಲ್ಲಿಸಿದರು.

ವಸತಿ, ವಿದ್ಯುತ್, ಶೌಚಾಲಯ, ಅಡುಗೆ ಅನಿಲ, ರಸ್ತೆ, ಆಸ್ಪತ್ರೆ ಮತ್ತು ಶಾಲೆಯಂತಹ ಮೂಲಸೌಕರ್ಯಗಳ ಕೊರತೆಯಿಂದ ಮಹಿಳೆಯರು, ವಿಶೇಷವಾಗಿ ಬಡ ಮಹಿಳೆಯರ ಮೇಲೆ ವ್ಯತಿರಿಕ್ತ ಪರಿಣಾಮ: ಪ್ರಧಾನಮಂತ್ರಿ

August 10th, 10:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಿಳಾ ಸಬಲೀಕರಣ ಕುರಿತು ಸರ್ಕಾರ ಹೊಂದಿರುವ ಸಮಗ್ರ ದೃಷ್ಟಿಕೋನ ಕುರಿತು ವಿಸ್ತೃತ ವಿವರಣೆ ನೀಡಿದರು. ವಸತಿ, ವಿದ್ಯುತ್, ಶೌಚಾಲಯ, ಅಡುಗೆ ಅನಿಲ, ರಸ್ತೆ, ಆಸ್ಪತ್ರೆ ಮತ್ತು ಶಾಲೆಯಂತಹ ಮೂಲಸೌಕರ್ಯಗಳ ಕೊರತೆಯಿಂದ ಮಹಿಳೆಯರು, ವಿಶೇಷವಾಗಿ ಬಡ ಮಹಿಳೆಯರ ಬದುಕಿನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡಿದೆ. ನಾವೀಗ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಗೆ ಕಾಲಿಡುತ್ತಿರುವ ಸುಸಂದರ್ಭದಲ್ಲಿ ಕಳೆದ 7 ದಶಕಗಳಲ್ಲಿ ಆಗಿರುವ ದೇಶದ ಪ್ರಗತಿಯನ್ನು ಒಮ್ಮೆ ನೋಡಬೇಕಿದೆ. ಈ ಮೇಲಿನ ಎಲ್ಲಾ ಸಮಸ್ಯೆಗಳನ್ನು ದಶಕಗಳ ಹಿಂದೆಯೇ ಬಗಹರಿಸಬಹುದಿತ್ತು ಎಂಬ ಭಾವನೆ ನಮ್ಮೆಲ್ಲರನ್ನು ಕಾಡುವುದು ಸಹಜ ಎಂದು ಪ್ರಧಾನ ಮಂತ್ರಿ ತಿಳಿಸಿದರು.

ಉಜ್ವಲ ಯೋಜನೆಯಿಂದ ಜೀವನ ಬೆಳಗಿದ ಜನರ ಸಂಖ್ಯೆ, ವಿಶೇಷವಾಗಿ ಮಹಿಳೆಯರ ಸಂಖ್ಯೆ ಅಭೂತಪೂರ್ವ: ಪ್ರಧಾನಿ ಮೋದಿ

August 10th, 12:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉಜ್ವಲಾ 2.0 (ಪ್ರಧಾನಮಂತ್ರಿ ಉಜ್ವಲಾ ಯೋಜನೆ – ಪಿಎಂಯುವೈ)ಗೆ ಉತ್ತರಪ್ರದೇಶದ ಮಹೊಬಾದಲ್ಲಿ ಅಡುಗೆ ಅನಿಲ (ಎಲ್ ಪಿಜಿ) ಸಂಪರ್ಕಗಳನ್ನು ನೀಡುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು ಉಜ್ವಲಾ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಉತ್ತರ ಪ್ರದೇಶದ ಮಹೊಬಾದಲ್ಲಿ ಉಜ್ವಲಾ 2.0 ಗೆ ಚಾಲನೆ ನೀಡಿದ ಪ್ರಧಾನಮಂತ್ರಿ

August 10th, 12:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉಜ್ವಲಾ 2.0 (ಪ್ರಧಾನಮಂತ್ರಿ ಉಜ್ವಲಾ ಯೋಜನೆ – ಪಿಎಂಯುವೈ)ಗೆ ಉತ್ತರಪ್ರದೇಶದ ಮಹೊಬಾದಲ್ಲಿ ಅಡುಗೆ ಅನಿಲ (ಎಲ್ ಪಿಜಿ) ಸಂಪರ್ಕಗಳನ್ನು ನೀಡುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು ಉಜ್ವಲಾ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುವುದು: ಪ್ರಧಾನಮಂತ್ರಿ

August 06th, 02:15 pm

ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಹೆಸರಿನಲ್ಲಿ ನೀಡಬೇಕೆಂದು ನನಗೆ ಭಾರತದಾದ್ಯಂತ ಹಲವು ಮನವಿಗಳು ಬರುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಜನರ ಭಾವನೆಗಳನ್ನು ಗೌರವಿಸುತ್ತಾ, ಇನ್ನು ಮುಂದೆ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುವುದೆಂದು ಅವರು ತಿಳಿಸಿದ್ದಾರೆ.