ಸೌರ ಮತ್ತು ಬಾಹ್ಯಾಕಾಶ ಕ್ಷೇತ್ರಗಳಲ್ಲಿ ಭಾರತದ ಅದ್ಭುತಗಳಿಂದ ಜಗತ್ತು ಬೆರಗುಗೊಂಡಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

October 30th, 11:30 am

ನನ್ನ ಪ್ರೀತಿಯ ದೇಶವಾಸಿಗಳೇ, ಈಗ ನಾವು ಪವಿತ್ರ ಛಠ್ ಪೂಜೆಯ ಬಗ್ಗೆ ಮಾತನಾಡಿದೆವು, ಭಗವಾನ್ ಸೂರ್ಯನ ಆರಾಧನೆ ಬಗ್ಗೆ ಮಾತನಾಡಿದೆವು. ಹಾಗಾದರೆ ಇಂದು ಸೂರ್ಯನನ್ನು ಪೂಜಿಸುವ ಜೊತೆಗೆ ಅವನು ನೀಡಿದ ವರದ ಬಗ್ಗೆಯೂ ಚರ್ಚಿಸೋಣ. 'ಸೌರಶಕ್ತಿ' ಸೂರ್ಯದೇವನ ವರದಾನ. ಸೌರಶಕ್ತಿ ಇಡೀ ಜಗತ್ತು ತನ್ನ ಭವಿಷ್ಯವನ್ನು ಅದರಲ್ಲಿ ಕಾಣುವಂತಹ ಒಂದು ವಿಷಯವಾಗಿದೆ ಮತ್ತು ಭಾರತಕ್ಕಾಗಿ, ಸೂರ್ಯ ದೇವ ಶತಮಾನಗಳಿಂದ ಕೇವಲ ಪೂಜಿತನಲ್ಲ, ಜೀವನ ವಿಧಾನದ ಕೇಂದ್ರವಾಗಿ ಮಿಳಿತವಾಗಿದ್ದಾನೆ. ಭಾರತವು ಇಂದು ತನ್ನ ಸಾಂಪ್ರದಾಯಿಕ ಅನುಭವಗಳನ್ನು ಆಧುನಿಕ ವಿಜ್ಞಾನದೊಂದಿಗೆ ಸಂಯೋಜಿಸುತ್ತಿದೆ, ಅದಕ್ಕಾಗಿಯೇ, ಇಂದು ನಾವು ಸೌರಶಕ್ತಿಯಿಂದ ವಿದ್ಯುತ್ ಉತ್ಪಾದಿಸುವ ಅತಿದೊಡ್ಡ ದೇಶಗಳಲ್ಲಿ ಒಂದೆನಿಸಿದ್ದೇವೆ. ಸೌರಶಕ್ತಿಯು ನಮ್ಮ ದೇಶದ ಬಡ ಮತ್ತು ಮಧ್ಯಮ ವರ್ಗದವರ ಜೀವನವನ್ನು ಹೇಗೆ ಬದಲಾಯಿಸುತ್ತಿದೆ ಎಂಬುದೂ ಅಧ್ಯಯನದ ವಿಷಯವಾಗಿದೆ.

36 ನೇ ರಾಷ್ಟ್ರೀಯ ಕ್ರೀಡಾಕೂಟ 2022 ರಲ್ಲಿ 10 ವರ್ಷದ ಮಲ್ಲಕಂಭ ಆಟಗಾರ ಶೌರ್ಯಜಿತ್ ಅವರ ಪ್ರದರ್ಶನವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

October 08th, 10:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 36 ನೇ ರಾಷ್ಟ್ರೀಯ ಕ್ರೀಡಾಕೂಟ 2022 ರಲ್ಲಿ ಕಿರಿಯ ಮಲ್ಲಕಂಭ ಆಟಗಾರ ಶೌರ್ಯಜಿತ್ ಅವರ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ.