ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 15th, 11:20 am

ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್‌ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.

ಜನಜಾತಿಯ ಗೌರವ್ ದಿವಸ್ ಸಂದರ್ಭದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ

November 15th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜಮುಯಿಯಲ್ಲಿಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಸುಮಾರು 6,640 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.

ಮುಂದಿನ 5 ವರ್ಷಗಳು ದೇಶಕ್ಕೆ ನಿರ್ಣಾಯಕ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ

July 03rd, 12:45 pm

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ನೀಡಿದ ಉತ್ತರದಲ್ಲಿ ಭಾರತದ ಪ್ರಜಾಸತ್ತಾತ್ಮಕ ಪಯಣವನ್ನು ಎತ್ತಿ ತೋರಿಸಿದರು. 60 ವರ್ಷಗಳ ನಂತರ, ಮತದಾರರು ಸತತ ಮೂರನೇ ಅವಧಿಗೆ ಸರ್ಕಾರವನ್ನು ಮರಳಿ ತಂದಿದ್ದಾರೆ, ಇದನ್ನು ಐತಿಹಾಸಿಕ ಎಂದು ಕರೆದರು. ಈ ನಿರ್ಧಾರವನ್ನು ದುರ್ಬಲಗೊಳಿಸುವ ಪ್ರತಿಪಕ್ಷಗಳ ಪ್ರಯತ್ನವನ್ನು ಖಂಡಿಸಿದ ಅವರು, ಅವರು ತಮ್ಮ ಸೋಲನ್ನು ಇಷ್ಟವಿಲ್ಲದೆ ಒಪ್ಪಿಕೊಂಡಿದ್ದಾರೆ ಎಂದು ಗಮನಿಸಿದರು.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿಯವರ ಉತ್ತರ

July 03rd, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು.

ರಾಜ್ಯ ಸ್ಥಾಪನಾ ದಿನದಂದು ಮಣಿಪುರದ ಜನತೆಗೆ ಪ್ರಧಾನಮಂತ್ರಿ ಅಭಿನಂದನೆ

January 21st, 09:24 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಣಿಪುರದ ಜನತೆಗೆ ರಾಜ್ಯ ಸ್ಥಾಪನಾ ದಿನದ ಅಭಿನಂದನೆ ಸಲ್ಲಿಸಿದ್ದಾರೆ.

ବାରଣାସୀରେ ଅନ୍ତର୍ଜାତୀୟ କ୍ରିକେଟ ଷ୍ଟାଡିୟମର ଶିଳାନ୍ୟାସ ସମାରୋହରେ ପ୍ରଧାନମନ୍ତ୍ରୀଙ୍କ ଅଭିଭାଷଣ

September 23rd, 02:11 pm

ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಉತ್ತರ ಪ್ರದೇಶ ಸರ್ಕಾರದ ಎಲ್ಲಾ ಸಚಿವರುಗಳೇ, ಪ್ರತಿನಿಧಿಗಳೇ, ಕ್ರೀಡಾ ಜಗತ್ತಿನ ಗಣ್ಯ ಅತಿಥಿಗಳೇ ಮತ್ತು ಕಾಶಿಯ ನನ್ನ ಪ್ರೀತಿಯ ಕುಟುಂಬ ಸದಸ್ಯರೇ!

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ

September 23rd, 02:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಾಣಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಸುಮಾರು 30 ಎಕರೆಗೂ ಹೆಚ್ಚು ಪ್ರದೇಶದಲ್ಲಿ ವ್ಯಾಪಿಸಿರುವ ಆಧುನಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ವಾರಣಾಸಿಯ ಗಂಜಾರಿ, ರಜತಲಾಬ್ ನಲ್ಲಿ ಸುಮಾರು 450 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಭಾರತವು ಮಣಿಪುರದ ಜನರೊಂದಿಗೆ ನಿಲ್ಲುತ್ತದೆ: ಪ್ರಧಾನಮಂತ್ರಿ

August 15th, 05:09 pm

ಇಂದು 77 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಯಿಂದ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತವು ಮಣಿಪುರದ ಜನರೊಂದಿಗೆ ನಿಲ್ಲುತ್ತದೆ ಮತ್ತು ಅಲ್ಲಿನ ಸಮಸ್ಯೆಗಳಿಗೆ ಶಾಂತಿಯುತ ಪರಿಹಾರ ಸಿಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

Despite hostilities of TMC in Panchayat polls, BJP West Bengal Karyakartas doing exceptional work: PM Modi

August 12th, 11:00 am

Addressing the Kshetriya Panchayati Raj Parishad in West Bengal via video conference, Prime Minister Narendra Modi remarked that the no-confidence motion tabled by the Opposition against the NDA government was defeated in the Lok Sabha. “The situation was such that the people of the opposition left the house in the middle of the discussion and ran away. The truth is that they were scared of voting on the no-confidence motion,” he said.

PM Modi addresses at Kshetriya Panchayati Raj Parishad in West Bengal via VC

August 12th, 10:32 am

Addressing the Kshetriya Panchayati Raj Parishad in West Bengal via video conference, Prime Minister Narendra Modi remarked that the no-confidence motion tabled by the Opposition against the NDA government was defeated in the Lok Sabha. “The situation was such that the people of the opposition left the house in the middle of the discussion and ran away. The truth is that they were scared of voting on the no-confidence motion,” he said.

2023 ಆಗಸ್ಟ್ 10ರಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ(ಗೊತ್ತುವಳಿ)ಕ್ಕೆ ಪ್ರಧಾನ ಮಂತ್ರಿ ಉತ್ತರ

August 10th, 04:30 pm

ಕಳೆದ 3 ದಿನಗಳಿಂದ ಗೌರವಾನ್ವಿತ ಹಲವು ಹಿರಿಯ ಸದಸ್ಯರು ತಮ್ಮ ಆಲೋಚನೆ, ದೃಷ್ಟಿಕೋನಗಳನ್ನು ಹಂಚಿಕೊಂಡಿದ್ದಾರೆ. ಅವರ ಬಹುತೇಕ ಎಲ್ಲಾ ಅಭಿಪ್ರಾಯಗಳು ನನಗೆ ವಿವರವಾಗಿ ಮುಟ್ಟಿವೆ. ಕೆಲವು ಭಾಷಣಗಳನ್ನು ನಾನೇ ಕೇಳಿದ್ದೇನೆ. ಗೌರವಾನ್ವಿತ ಸಭಾಧ್ಯಕ್ಷರೇ, ಇಂದು, ನಮ್ಮ ಸರ್ಕಾರದ ಮೇಲೆ ಪದೇಪದೆ ಅಪಾರ ನಂಬಿಕೆ ತೋರಿಸುತ್ತಿರುವ ಈ ದೇಶದ ಕೋಟ್ಯಂತರ ನಾಗರಿಕರಿಗೆ ನನ್ನ ಕೃತಜ್ಞತೆ ವ್ಯಕ್ತಪಡಿಸಲು ನಾನು ಇಲ್ಲಿದ್ದೇನೆ. ಗೌರವಾನ್ವಿತ ಸ್ಪೀಕರ್, ದೇವರು ತುಂಬಾ ಕರುಣಾಮಯಿ ಎಂದು ಹೇಳಲಾಗುತ್ತದೆ. ಅವನು ತನ್ನ ಆಸೆಗಳನ್ನು ಯಾರಾದರೂ ಅಥವಾ ಇನ್ನೊಬ್ಬರ ಮೂಲಕ ಪೂರೈಸುತ್ತಾನೆ, ಯಾರನ್ನಾದರೂ ಮಾಧ್ಯಮವನ್ನಾಗಿ ಮಾಡುವುದು ದೇವರ ಇಚ್ಛೆಯಾಗಿದೆ. ದೇವರ ಇಚ್ಛೆಯಂತೆ ಪ್ರತಿಪಕ್ಷಗಳು ಅವಿಶ್ವಾಸ ಗೊತ್ತುವಳಿ ಮಂಡಿಸಿರುವುದು ದೇವರ ಆಶೀರ್ವಾದ ಎಂದು ಭಾವಿಸುತ್ತೇನೆ. 2018ರಲ್ಲಿ ವಿರೋಧ ಪಕ್ಷದ ನನ್ನ ಸಹೋದ್ಯೋಗಿಗಳು ನನ್ನ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದಾಗ ದೇವರ ಆಜ್ಞೆಯೂ ಇದೇ ಆಗಿತ್ತು. ಅವಿಶ್ವಾಸ ಗೊತ್ತುವಳಿಯು ನಮ್ಮ ಸರ್ಕಾರಕ್ಕೆ ಸದನದ ಪರೀಕ್ಷೆ ಅಲ್ಲ, ಬದಲಿಗೆ ಅದು ಅವರ ಸ್ವಂತ ಅಂತಸ್ತಿನ ಪರೀಕ್ಷೆ ಎಂದು ನಾನು ಆ ಸಮಯದಲ್ಲಿ ಹೇಳಿದ್ದೆ. ಆ ದಿನವೂ ಹೇಳಿದ್ದೆ. ಮತ್ತು ಅದು ಬದಲಾದಂತೆ, ಪ್ರತಿಪಕ್ಷಗಳು ಮತದಾನ ನಡೆದಾಗ ಅವರು ಹೊಂದಿದ್ದಷ್ಟು ಮತಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಅಷ್ಟೇ ಅಲ್ಲ, ನಾವು ಜನರ ಬಳಿಗೆ (ಮತ ಕೇಳಲು) ಹೋದಾಗ, ಜನರು ಪೂರ್ಣ ಬಲದಿಂದ ಅವರ ಮೇಲೆ ಅವಿಶ್ವಾಸ ಘೋಷಿಸಿದರು. ಎನ್‌ಡಿಎ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿತು. ಚುನಾವಣೆಯಲ್ಲಿ ಬಿಜೆಪಿಯೂ ಸಹ ಹೆಚ್ಚು ಸ್ಥಾನಗಳನ್ನು ಗಳಿಸಿತು. ಒಂದು ರೀತಿಯಲ್ಲಿ ವಿಪಕ್ಷಗಳ ಅವಿಶ್ವಾಸ ಗೊತ್ತುವಳಿ ನಮಗೆ ಮಂಗಳಕರವಾಗಿದ್ದು, 2024ರ ಚುನಾವಣೆಯಲ್ಲಿ ಎನ್‌ಡಿಎ ಮತ್ತು ಬಿಜೆಪಿ ಜನರ ಆಶೀರ್ವಾದದೊಂದಿಗೆ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಅಭೂತಪೂರ್ವ ಗೆಲುವು ಸಾಧಿಸಲು ನೀವೆಲ್ಲಾ ನಿರ್ಧರಿಸಿದ್ದೀರಿ ಎಂದು ನಾನು ಇಂದೇ ನೋಡುತ್ತಿದ್ದೇನೆ.

ಲೋಕಸಭೆಯಲ್ಲಿ ಅವಿಶ್ವಾಸ ನಿಲುವಳಿಗೆ ಪ್ರಧಾನಿಗಳಿಂದ ಉತ್ತರ

August 10th, 04:00 pm

ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸರ್ಕಾರದ ಮೇಲೆ ತಮ್ಮ ನಂಬಿಕೆಯನ್ನು ಪದೇ ಪದೇ ತೋರಿಸಿದ್ದಕ್ಕಾಗಿ ಭಾರತದ ಪ್ರತಿಯೊಬ್ಬ ನಾಗರಿಕರಿಗೆ ಅಪಾರ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಂದಿದ್ದೇನೆ ಎಂದರು. 2018ರಲ್ಲಿ ಪ್ರತಿಪಕ್ಷಗಳು ಅವಿಶ್ವಾಸ ನಿಲುವಳಿ ತಂದಿದ್ದನ್ನು ಸ್ಮರಿಸಿದ ಪ್ರಧಾನಿಯವರು, ಇದು ಸರ್ಕಾರದ ಪಾಲಿಗೆ ವಿಶ್ವಾಸಮತ ನಿರ್ಣಯವಲ್ಲ, ಬದಲಿಗೆ ಸದನದಲ್ಲಿ ಅದನ್ನು ಮಂಡಿಸಿದವರ ಪಾಲಿಗೇ ಅವಿಶ್ವಾಸ ನಿರ್ಣಯ ಎಂದರು. ನಾವು 2019ರಲ್ಲಿ ಚುನಾವಣೆಗೆ ಹೋದಾಗ, ಪ್ರತಿಪಕ್ಷಗಳ ಮೇಲೆ ಜನರು ಅತ್ಯಂತ ಬಲವಾದ ಅವಿಶ್ವಾಸವನ್ನು ಪ್ರದರ್ಶಿಸಿದರು ಎಂದು ಪ್ರಧಾನಿ ಹೇಳಿದರು. ಎನ್‌ಡಿಎ ಮತ್ತು ಬಿಜೆಪಿ ಎರಡೂ ಹೆಚ್ಚಿನ ಸ್ಥಾನಗಳನ್ನು ಗೆದ್ದಿವೆ ಎಂದು ಒತ್ತಿ ಹೇಳಿದರು. ಒಂದು ರೀತಿಯಲ್ಲಿ, ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ಗೊತ್ತುವಳಿ ಸರ್ಕಾರದ ಪಾಲಿಗೆ ಅದೃಷ್ಟ ಎಂದು ಪ್ರಧಾನಿ ಬಣ್ಣಿಸಿದರು. ಜನರ ಆಶೀರ್ವಾದದಿಂದ ಎನ್‌ಡಿಎ ಮತ್ತು ಬಿಜೆಪಿ ಎಲ್ಲಾ ದಾಖಲೆಗಳನ್ನು ಮುರಿಯುತ್ತವೆ ಮತ್ತು 2024ರಲ್ಲಿ ವಿಜಯಶಾಲಿಯಾಗುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮಣಿಪುರದ ಇಂಫಾಲ್‌ನಲ್ಲಿ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವರ 'ಚಿಂತನ ಶಿಬಿರ' ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

April 24th, 10:10 am

ಕಾರ್ಯಕ್ರಮದಲ್ಲಿ ಭಾಗವಹಿಸಿರುವ ನನ್ನ ಸಚಿವ ಸಂಪುಟ ಸಹೋದ್ಯೋಗಿ ಅನುರಾಗ್ ಠಾಕೂರ್ ಜಿ, ಎಲ್ಲಾ ರಾಜ್ಯಗಳ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವರೆ, ಇಲ್ಲಿ ನೆರೆದಿರುವ ಎಲ್ಲಾ ಗಣ್ಯರು, ಮಹಿಳೆಯರು ಮತ್ತು ಸಜ್ಜನರೆ,

ಮಣಿಪುರದ ಇಂಫಾಲ್ ನಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರ 'ಚಿಂತನ್ ಶಿವಿರ್' ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 24th, 10:05 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಣಿಪುರದ ಇಂಫಾಲ್ ನಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರ 'ಚಿಂತನ್ ಶಿವೀರ್' ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಭಾಷಣ ಮಾಡಿದರು.

ಒಮ್ಮೆ ತಡೆಗೆ (ಬ್ಲಾಕೇಡ್ ) ಮತ್ತು ಹಿಂಸಾಚಾರಕ್ಕೆ ಹೆಸರುವಾಸಿಯಾಗಿದ್ದ ಈಶಾನ್ಯ ಪ್ರದೇಶವು ಈಗ ಅಭಿವೃದ್ಧಿಯ ದಾಪುಗಾಲಿಗೆ ಹೆಸರುವಾಸಿ: ಪ್ರಧಾನಮಂತ್ರಿ

March 26th, 10:47 am

ಮೊದಲು ಈಶಾನ್ಯ ಪ್ರದೇಶವು ಅಡೆತಡೆಗಳು (ಬ್ಲಾಕೇಡ್) ಮತ್ತು ಹಿಂಸಾಚಾರಕ್ಕೆ ಹೆಸರುವಾಸಿಯಾಗಿತ್ತು,ಇದೀಗ ಅದರ ಅಭಿವೃದ್ಧಿಯ ದಾಪುಗಾಲಿಗೆ ಮತ್ತು ಸಮಗ್ರ ಅಭಿವೃದ್ಧಿಗೆ ಹೆಸರುವಾಸಿಯಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

​​​​​​​ಮಣಿಪುರದ ಜನತೆಗೆ ರಾಜ್ಯೋದಯದ ಶುಭಾಶಯ ತಿಳಿಸಿದ ಪ್ರಧಾನ ಮಂತ್ರಿಗಳು

January 21st, 10:42 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಣಿಪುರ ರಾಜ್ಯದ ಜನತೆಗೆ ರಾಜ್ಯೋದಯದ ಶುಭಾಶಯ ತಿಳಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಉತ್ತರ ಪ್ರದೇಶದ ಬಸ್ತಿಯಲ್ಲಿ 2 ನೇ ಸಂಸದ್ ಖೇಲ್ ಮಹಾಕುಂಭ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 18th, 04:39 pm

ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮತ್ತು ನಮ್ಮ ಯುವ ಸ್ನೇಹಿತ ಹರೀಶ್ ದ್ವಿವೇದಿ ಜೀ, ವಿವಿಧ ಕ್ರೀಡಾಪಟುಗಳು, ರಾಜ್ಯ ಸರ್ಕಾರದ ಸಚಿವರು, ಶಾಸಕರು, ಜನಪ್ರತಿನಿಧಿಗಳು, ಹಿರಿಯ ಗಣ್ಯರು ಮತ್ತು ಹೆಚ್ಚಿನ ಸಂಖ್ಯೆಯ ಯುವಕರನ್ನು ನಾನು ಎಲ್ಲೆಡೆ ನೋಡಬಹುದು. ನನ್ನ ಪ್ರೀತಿಯ ಸಹೋದರ ಸಹೋದರಿಯರೇ!

​​​​​​​ಬಸ್ತಿ ಜಿಲ್ಲೆಯಲ್ಲಿ 2022-23ನೇ ಸಾಲಿನ ಸಾನ್ಸದ್ ಖೇಲ್ ಮಹಾಕುಂಭದ ಎರಡನೇ ಹಂತವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದ ಪ್ರಧಾನಿಮಂತ್ರಿಗಳು

January 18th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಾನ್ಸದ್ ಖೇಲ್ ಮಹಾಕುಂಭ 2022-23ರ ಎರಡನೇ ಹಂತವನ್ನು ಉದ್ಘಾಟಿಸಿದರು. ಸಾನ್ಸದ್ ಖೇಲ್ ಮಹಾಕುಂಭವನ್ನು 2021ರಿಂದ ಬಸ್ತಿ ಜಿಲ್ಲೆಯ ಸಂಸದ ಶ್ರೀ ಹರೀಶ್ ದ್ವಿವೇದಿಯವರು ಬಸ್ತಿ ಜಿಲ್ಲೆಯಲ್ಲಿ ಆಯೋಜಿಸುತ್ತಿದ್ದಾರೆ. ಖೇಲ್ ಮಹಾಕುಂಭವು ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳಾದ ಕುಸ್ತಿ, ಕಬಡ್ಡಿ, ಖೋ ಖೋ, ಬ್ಯಾಸ್ಕೆಟ್ ಬಾಲ್, ಫುಟ್ಬಾಲ್, ಹಾಕಿ, ವಾಲಿಬಾಲ್, ಹ್ಯಾಂಡ್ ಬಾಲ್, ಚೆಸ್, ಕೇರಂ, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್ ಮುಂತಾದ ವಿವಿಧ ಸ್ಪರ್ಧೆಗಳನ್ನು ಆಯೋಜಿಸುತ್ತದೆ. ಇದಲ್ಲದೆ, ಖೇಲ್ ಮಹಾಕುಂಭದಲ್ಲಿ ಪ್ರಬಂಧ ಬರೆಯುವುದು, ಚಿತ್ರಕಲೆ, ರಂಗೋಲಿ ಬಿಡಿಸುವುದು ಮುಂತಾದ ಸ್ಪರ್ಧೆಗಳನ್ನು ಸಹ ಆಯೋಜಿಸಲಾಗಿತ್ತು.

ಕಾಂಗ್ಲಾ ನೊಂಗ್ ಪೋಕ್ ಥಾಂಗ್ ಸೇತುವೆ ಲೋಕಾರ್ಪಣೆ ಹಿನ್ನೆಲೆಯಲ್ಲಿ ಮಣಿಪುರದ ಜನತೆಗೆ ಪ್ರಧಾನಮಂತ್ರಿ ಅಭಿನಂದನೆ

January 07th, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಣಿಪುರದಲ್ಲಿ ಕಾಂಗ್ಲಾ ನೊಂಗ್ ಪೋಕ್ ಥಾಂಗ್ ಸೇತುವೆ ಲೋಕಾರ್ಪಣೆ ಹಿನ್ನೆಲೆಯಲ್ಲಿ ಮಣಿಪುರದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಮಣಿಪುರದ ನೋನಿ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ಸಂತಾಪ

December 21st, 08:56 pm

ಮಣಿಪುರದ ನೋನಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಬಸ್ ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ 2 ಲಕ್ಷರೂ. ಮತ್ತು ಗಾಯಗೊಂಡವರಿಗೆ 50,000 ರೂ.ಪರಿಹಾರವನ್ನು ಅವರು ಘೋಷಿಸಿದ್ದಾರೆ.