ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ

December 05th, 11:54 am

ಪ್ರಧಾನಿ ನರೇಂದ್ರ ಮೋದಿ ಭಾನುವಾರ, ಡಿಸೆಂಬರ್ 29 ರಂದು ತನ್ನ 'ಮನ್ ಕಿ ಬಾತ್' ಅನ್ನು ಹಂಚಿಕೊಳ್ಳಲಿದ್ದಾರೆ. ನೀವು ನವೀನ ಸಲಹೆಗಳನ್ನು ಮತ್ತು ಒಳನೋಟಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಳ್ಳಲು ಅವಕಾಶವಿದೆ. ಕೆಲವು ಸಲಹೆಗಳನ್ನು ಅವರ ಭಾಷಣದಲ್ಲಿ ಪ್ರಧಾನಿ ಉಲ್ಲೇಖಿಸುತ್ತಾರೆ.

ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡಿ ಉಪಕ್ರಮವನ್ನು ಬೆಂಬಲಿಸಿದ ಗಯಾನದಾ ಅಧ್ಯಕ್ಷರಿಗೆ ಧನ್ಯವಾದ ಸಲ್ಲಿಸಿದ ಪ್ರಧಾನಮಂತ್ರಿ

November 25th, 10:39 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ತಮ್ಮ ಉಪಕ್ರಮವನ್ನು ಬೆಂಬಲಿಸಿದ ಗಯಾನ ಅಧ್ಯಕ್ಷರಾದ ಡಾ.ಇರ್ಫಾನ್ ಆಲಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ನಿನ್ನೆಯ ಮನ್ ಕಿ ಬಾತ್ ಆವೃತ್ತಿಯಲ್ಲಿ ಗಯಾನದಲ್ಲಿನ ಭಾರತೀಯ ಸಮುದಾಯದ ಶ್ಲಾಘನೆಯನ್ನು ಪುನರುಚ್ಚರಿಸಿದ್ದಾರೆ.

ಭಾರತೀಯ ವಲಸಿಗರು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

November 24th, 11:30 am

ಮನ್ ಕಿ ಬಾತ್‌ನ 116 ನೇ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಎನ್‌ಸಿಸಿ ದಿನದ ಮಹತ್ವವನ್ನು ಚರ್ಚಿಸಿದರು, ಎನ್‌ಸಿಸಿ ಕೆಡೆಟ್‌ಗಳ ಬೆಳವಣಿಗೆ ಮತ್ತು ವಿಪತ್ತು ಪರಿಹಾರದಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸಿದರು. ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಯುವ ಸಬಲೀಕರಣಕ್ಕೆ ಒತ್ತು ನೀಡಿದರು ಮತ್ತು ವಿಕಸಿತ್ ಭಾರತ್ ಯುವ ನಾಯಕರ ಸಂವಾದದ ಕುರಿತು ಮಾತನಾಡಿದರು. ಅವರು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನ್ಯಾವಿಗೇಟ್ ಮಾಡಲು ಹಿರಿಯ ನಾಗರಿಕರಿಗೆ ಸಹಾಯ ಮಾಡುವ ಯುವಕರ ಸ್ಪೂರ್ತಿದಾಯಕ ಕಥೆಗಳು ಮತ್ತು ಏಕ್ ಪೆಡ್ ಮಾ ಕೆ ನಾಮ್ ಅಭಿಯಾನದ ಯಶಸ್ಸನ್ನು ಹಂಚಿಕೊಂಡರು.

24ನೇ ನವೆಂಬರ್ 2024 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ

November 23rd, 09:00 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಭಾನುವಾರ 11 ಗಂಟೆಗೆ 'ಮನ್ ಕಿ ಬಾತ್' ನಲ್ಲಿ ಹಲವಾರು ವಿಷಯಗಳು ಮತ್ತು ವಿಚಾರಗಳ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳುತ್ತಾರೆ. 'ಮನ್ ಕಿ ಬಾತ್' ಅನ್ನು ನರೇಂದ್ರ ಮೋದಿ ಅಪ್ಲಿಕೇಶನ್ ನಲ್ಲಿ ಲೈವ್ ಆಲಿಸಲು ಟ್ಯೂನ್ ಮಾಡಿ.

ಪ್ರಧಾನಮಂತ್ರಿಯವರಿಂದ ಜೋನಾಸ್ ಮಾಸೆಟ್ಟಿ ಮತ್ತು ಅವರ ತಂಡದ ಭೇಟಿ; ವೇದಾಂತ ಮತ್ತು ಗೀತೆಯ ಮೇಲಿನ ಅವರ ಒಲವಿಗೆ ಮೆಚ್ಚುಗೆ

November 20th, 07:54 am

ಜೋನಾಸ್ ಮಾಸೆಟ್ಟಿ ಅವರು ವೇದಾಂತ ಮತ್ತು ಗೀತೆಯ ಬಗ್ಗೆ ಹೊಂದಿರುವ ಅಪಾರ ಆಸಕ್ತಿಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತೀಯ ಸಂಸ್ಕೃತಿಯು ಪ್ರಪಂಚದಾದ್ಯಂತ ಹೇಗೆ ಪ್ರಭಾವ ಬೀರುತ್ತಿದೆ ಎಂಬುದು ಶ್ಲಾಘನೀಯ ಎಂದು ಹೇಳಿದ್ದಾರೆ. ಸಂಸ್ಕೃತದಲ್ಲಿ ರಾಮಾಯಣದ ಪ್ರದರ್ಶನವನ್ನು ವೀಕ್ಷಿಸಿದ ನಂತರ ಜೋನಾಸ್ ಮಾಸೆಟ್ಟಿ ಮತ್ತು ತಂಡವನ್ನು ಪ್ರಧಾನಮಂತ್ರಿಯವರು ಭೇಟಿಯಾದರು.

ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ

November 05th, 01:28 pm

ಪ್ರಧಾನಿ ನರೇಂದ್ರ ಮೋದಿ ಭಾನುವಾರ, ನವೆಂಬರ್ 24ರಂದು ತನ್ನ 'ಮನ್ ಕಿ ಬಾತ್' ಅನ್ನು ಹಂಚಿಕೊಳ್ಳಲಿದ್ದಾರೆ. ನೀವು ನವೀನ ಸಲಹೆಗಳನ್ನು ಮತ್ತು ಒಳನೋಟಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಳ್ಳಲು ಅವಕಾಶವಿದೆ. ಕೆಲವು ಸಲಹೆಗಳನ್ನು ಅವರ ಭಾಷಣದಲ್ಲಿ ಪ್ರಧಾನಿ ಉಲ್ಲೇಖಿಸುತ್ತಾರೆ.

ಇಂದು, ಪ್ರಪಂಚದಾದ್ಯಂತದ ಜನರು ಭಾರತದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತಾರೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

October 27th, 11:30 am

ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ' ಮನದ ಮಾತಿಗೆ' ಎಲ್ಲರಿಗೂ ಸ್ವಾಗತ. ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳು ಯಾವುವು ಎಂದು ನನ್ನನ್ನು ನೀವು ಕೇಳಿದರೆ, ಬಹಳಷ್ಟು ಘಟನೆಗಳು ನೆನಪಿಗೆ ಬರುತ್ತವೆ, ಅದರಲ್ಲೂ ಒಂದು ವಿಶೇಷವಾದ ಕ್ಷಣವಿದೆ, ಅದೇ ಕಳೆದ ವರ್ಷ ನವೆಂಬರ್ 15 ರಂದು ನಾನು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಂದು ಜಾರ್ಖಂಡ್‌ನ ಅವರ ಜನ್ಮಸ್ಥಳ ಉಲಿಹಾತು ಗ್ರಾಮಕ್ಕೆ ಹೋಗಿದ್ದು. ನನ್ನ ಮೇಲೆ ಈ ಪ್ರವಾಸದ ಪ್ರಭಾವ ಆಗಾಧವಾಗಿತ್ತು. ಈ ಪುಣ್ಯಭೂಮಿಯ ಮಣ್ಣಿನ ಆಶೀರ್ವಾದ ಪಡೆಯುವ ಭಾಗ್ಯವನ್ನು ಪಡೆದ ದೇಶದ ಮೊದಲ ಪ್ರಧಾನಿ ನಾನಾಗಿದ್ದೇನೆ. ಆ ಕ್ಷಣದಲ್ಲಿ ನನಗೆ ಸ್ವಾತಂತ್ರ್ಯ ಹೋರಾಟದ ಶಕ್ತಿಯ ಅನುಭವವಾದುದಲ್ಲದೆ, ಈ ಭೂಮಿಯ ಶಕ್ತಿಯೊಂದಿಗೆ ಬೆರೆಯುವ ಅವಕಾಶವೂ ಲಭಿಸಿತು. ಒಂದು ನಿರ್ಧಾರವನ್ನು ಪೂರೈಸುವ ಧೈರ್ಯ ಹೇಗೆ ದೇಶದ ಕೋಟ್ಯಾಂತರ ಜನರ ಭವಿಷ್ಯವನ್ನು ಬದಲಾಯಿಸುತ್ತದೆ ಎಂಬುದರ ಅನುಭವವೂ ನನಗಾಯಿತು.

ಅಕ್ಟೋಬರ್ 27 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ

October 26th, 09:30 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಭಾನುವಾರ 11 ಗಂಟೆಗೆ 'ಮನ್ ಕಿ ಬಾತ್' ನಲ್ಲಿ ಹಲವಾರು ವಿಷಯಗಳು ಮತ್ತು ವಿಚಾರಗಳ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳುತ್ತಾರೆ. 'ಮನ್ ಕಿ ಬಾತ್' ಅನ್ನು ನರೇಂದ್ರ ಮೋದಿ ಅಪ್ಲಿಕೇಶನ್ ನಲ್ಲಿ ಲೈವ್ ಆಲಿಸಲು ಟ್ಯೂನ್ ಮಾಡಿ.

ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ

October 05th, 04:49 pm

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅಕ್ಟೋಬರ್ 27ರಂದು 'ಮನ್ ಕಿ ಬಾತ್' ಹಂಚಿಕೊಳ್ಳಲಿದ್ದಾರೆ. ನೀವು ನವೀನ ಆಲೋಚನೆಗಳು ಮತ್ತು ಸಲಹೆಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನ ಮಂತ್ರಿಯೊಂದಿಗೆ ಹಂಚಿಕೊಳ್ಳಲು ಇಲ್ಲಿ ಅವಕಾಶವಿದೆ. ಕೆಲವು ಸಲಹೆಗಳನ್ನು ಪ್ರಧಾನಿಯವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.

ಮನ್ ಕಿ ಬಾತ್ ನಲ್ಲಿ ಸ್ವಚ್ಛತೆಯನ್ನು ಹೆಚ್ಚು ಚರ್ಚಿಸಲಾಗಿದೆ: ಪ್ರಧಾನಮಂತ್ರಿ

October 02nd, 05:56 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಮನ್ ಕಿ ಬಾತ್ ನಲ್ಲಿ ಸ್ವಚ್ಚತೆಯು ಹೆಚ್ಚು ಚರ್ಚಿಸಲ್ಪಟ್ಟ ವಿಷಯಗಳಲ್ಲಿ ಒಂದಾಗಿದೆ ಎಂದು ಒತ್ತಿಹೇಳಿದ್ದಾರೆ.

ಸ್ವಚ್ಛತಾ ಹಿ ಸೇವಾ​​​​​​​ 2024 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅನುವಾದ

October 02nd, 10:15 am

ಇಂದು ಪೂಜ್ಯ ಬಾಪೂ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜೀ ಅವರ ಜನ್ಮ ದಿನ. ಬಾಪು ಭಾರತೀಯ ಶ್ರೇಷ್ಠ ಪುತ್ರರಾಗಿದ್ದು, ಅವರಿಗಾಗಿ ಶಿರಬಾಗಿ ನಮಿಸುತ್ತೇನೆ. ಗಾಂಧೀಜಿ ಅವರ ಕನಸುಗಳನ್ನು ಸಾಕಾರಗೊಳಿಸಲು ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಲು ಇದು ಸ್ಫೂರ್ತಿಯ ದಿನ. ದೇಶದ ಈ ಮಹಾನ್ ವ್ಯಕ್ತಿಗಳು ಭಾರತದ ಭವಿಷ್ಯವನ್ನು ಆಗಲೇ ಕಲ್ಪನೆ ಮಾಡಿಕೊಂಡಿದ್ದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ದಿವಸ್ 2024 ರಲ್ಲಿ ಭಾಗವಹಿಸಿದರು

October 02nd, 10:10 am

ಸ್ವಚ್ಛತೆಗಾಗಿ ಅತ್ಯಂತ ಮಹತ್ವದ ಜನಾಂದೋಲನಗಳಲ್ಲಿ ಒಂದಾದ ಸ್ವಚ್ಛ ಭಾರತ ಅಭಿಯಾನ ಪ್ರಾರಂಭವಾಗಿ 10 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಕ್ಟೋಬರ್ 2 ರಂದು 155 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಸ್ವಚ್ಛ ಭಾರತ ದಿವಸ್ 2024 ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ. ಅಮೃತ್ ಮತ್ತು ಅಮೃತ್ 2.0, ಸ್ವಚ್ಛ ಗಂಗಾ ರಾಷ್ಟ್ರೀಯ ಮಿಷನ್ ಮತ್ತು ಗೋಬರ್ಧನ್ ಯೋಜನೆ ಸೇರಿದಂತೆ 9600 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹಲವಾರು ನೈರ್ಮಲ್ಯ ಮತ್ತು ಸ್ವಚ್ಛತೆ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಅಡಿಪಾಯ ಹಾಕಿದರು. ಸ್ವಚ್ಛತಾ ಹಿ ಸೇವಾ 2024 ರ ಧ್ಯೇಯ 'ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ' ಆಗಿದೆ.

'ಮನ್ ಕಿ ಬಾತ್' ಕೇಳುಗರು ಈ ಕಾರ್ಯಕ್ರಮದ ನಿಜವಾದ ನಿರೂಪಕರು: ಪ್ರಧಾನಿ ಮೋದಿ

September 29th, 11:30 am

ನನ್ನ ಪ್ರೀತಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ ನಾವೆಲ್ಲರೂ 'ಮನದ ಮಾತಿನ' ಮೂಲಕ ಒಗ್ಗೂಡುವ ಅವಕಾಶ ಲಭಿಸಿದೆ. ಇಂದಿನ ಈ ಕಂತು ನನ್ನನ್ನು ಬಹಳ ಭಾವುಕನನ್ನಾಗಿಸಲಿದೆ, ಅನೇಕ ಹಳೆಯ ನೆನಪುಗಳು ನನ್ನನ್ನು ಮುತ್ತಿವೆ - ಕಾರಣ ಏನೆಂದರೆ 'ಮನದ ಮಾತಿನ' ನಮ್ಮ ಈ ಪಯಣಕ್ಕೆ 10 ವರ್ಷಗಳು ತುಂಬುತ್ತಿದೆ. 10 ವರ್ಷಗಳ ಹಿಂದೆ ಅಕ್ಟೋಬರ್ 3 ರಂದು ವಿಜಯದಶಮಿಯ ದಿನದಂದು 'ಮನದ ಮಾತು’ ಪ್ರಾರಂಭವಾಗಿತ್ತು ಮತ್ತು ಈ ವರ್ಷ ಅಕ್ಟೋಬರ್ 3 ರಂದು 'ಮನದ ಮಾತಿಗೆ ' 10 ವರ್ಷತುಂಬುವ ಸಂದರ್ಭ ನವರಾತ್ರಿಯ ಮೊದಲ ದಿನವಾಗಿದೆ. 'ಮನದ ಮಾತಿನ’ ಈ ಸುದೀರ್ಘ ಪಯಣದಲ್ಲಿ ನಾನು ಎಂದೂ ಮರೆಯಲಾಗದ ಇಂತಹ ಹಲವಾರು ಮೈಲಿಗಲ್ಲುಗಳಿವೆ, ನಮ್ಮ ಈ ಪಯಣದಲ್ಲಿ ನಿರಂತರ ಸಹಯೋಗವನ್ನು ನೀಡಿದಂತಹ ' ಮನದ ಮಾತಿನ' ಕೋಟ್ಯಂತರ ಶ್ರೋತೃ ಬಾಂಧವರಿದ್ದಾರೆ. ದೇಶದ ಮೂಲೆ ಮೂಲೆಗಳಿಂದ ಅವರು ಮಾಹಿತಿಯನ್ನು ಒದಗಿಸಿದರು. ಮನದ ಮಾತಿನ ಶ್ರೋತೃಗಳೇ ಈ ಕಾರ್ಯಕ್ರಮದ ನಿಜವಾದ ರೂವಾರಿಗಳು. ಸಾಮಾನ್ಯವಾಗಿ ಎಲ್ಲಿಯವರೆಗೆ ರೋಚಕ ವಿಷಯಗಳನ್ನು ಮಾತನಾಡುವುದಿಲ್ಲವೋ, ನಕಾರಾತ್ಮಕ ವಿಷಯಗಳನ್ನು ಮಾತನಾಡುವುದಿಲ್ಲವೋ ಅಲ್ಲಿವರೆಗೆ ಅದು ಹೆಚ್ಚಿನ ಗಮನ ಸೆಳೆಯುವುದಿಲ್ಲ ಎನ್ನಲಾಗುತ್ತದೆ. ಆದರೆ ಮನದ ಮಾತು ದೇಶದ ಜನರು ಸಕಾರಾತ್ಮಕ ಮಾಹಿತಿಗಾಗಿ , ಎಷ್ಟು ಉತ್ಸುಕರಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಿದೆ. ಸಕಾರಾತ್ಮಕ ಮಾತು, ಪ್ರೇರಣಾತ್ಮಕ ಉದಾಹರಣೆಗಳು, ಸ್ಫೂರ್ತಿದಾಯಕ ಕಥೆಗಳು ಜನರಿಗೆ ಬಹಳ ಇಷ್ಟವಾಗುತ್ತವೆ. ಕೇವಲ ಮಳೆಹನಿಗಳನ್ನು ಮಾತ್ರ ಕುಡಿಯುವಂತಹ ಚಾತಕ ಪಕ್ಷಿಯಂತೆ ಜನರು ದೇಶದ ಸೌಲಭ್ಯಗಳ ಬಗ್ಗೆ, ಜನರ ಸಾಮೂಹಿಕ ಸಾಧನೆಗಳ ಬಗ್ಗೆ ಮನದ ಮಾತಿನ ಮೂಲಕ ಎಷ್ಟು ಹೆಮ್ಮೆಯಿಂದ ಕೇಳುತ್ತಾರೆ. ಮನದ ಮಾತಿನ 10 ವರ್ಷಗಳ ಪಯಣ ಎಷ್ಟು ಅದ್ಭುತವಾದ ಹಾರವನ್ನು ಸಿದ್ಧಗೊಳಿಸಿದೆ ಎಂದರೆ ಪ್ರತಿ ಸಂಚಿಕೆಯೊಂದಿಗೆ ಹೊಸ ಯಶೋಗಾಥೆಗಳು, ಹೊಸ ಕೀರ್ತಿವಂತರು ಮತ್ತು ಹೊಸ ವ್ಯಕ್ತಿತ್ವಗಳನ್ನು ಸೇರಿಸುತ್ತಾ ಸಾಗಿದೆ. ನಮ್ಮ ಸಮಾಜದಲ್ಲಿ ಸಾಮಾಜಿಕ ಹಿತದೃಷ್ಟಿಯ ಭಾವನೆಯಿಂದ ಯಾವುದೇ ಕೆಲಸ ಮಾಡಿದರೂ ಅವರಿಗೆ 'ಮನದ ಮಾತಿನ' ಮೂಲಕ ಗೌರವ ಲಭಿಸುತ್ತದೆ. 'ಮನದ ಮಾತಿ'ಗೆ ಬಂದ ಪತ್ರಗಳನ್ನು ನಾನು ಓದಿದಾಗ ನನ್ನ ಮನವೂ ಹೆಮ್ಮೆಯಿಂದ ಬೀಗುತ್ತದೆ. ನಮ್ಮ ದೇಶದಲ್ಲಿ ಅದೆಷ್ಟೋ ಪ್ರತಿಭಾವಂತರಿದ್ದಾರೆ, ಅವರು ತಮ್ಮ ಇಡೀ ಜೀವನವನ್ನು ಜನರ ನಿಸ್ವಾರ್ಥ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಅವರ ಬಗ್ಗೆ ತಿಳಿಯುವುದು ನನ್ನಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ. 'ಮನದ ಮಾತಿನ' ಈ ಸಂಪೂರ್ಣ ಪ್ರಕ್ರಿಯೆಯು ನನಗೆ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆಯುವಂತಿದೆ. ಮನದ ಮಾತಿನ ಪ್ರತಿ ವಿಷಯ, ಪ್ರತಿ ಘಟನೆ, ಪ್ರತಿ ಪತ್ರವನ್ನು ನೆನಪಿಸಿಕೊಂಡಾಗ, ನನಗೆ ಭಗವಂತನ ರೂಪದಲ್ಲಿರುವ ಜನತಾ ಜನಾರ್ದನನ ದರ್ಶನ ಪಡೆದಂತೆ ಭಾಸವಾಗುತ್ತದೆ.

29ನೇ ಸೆಪ್ಟೆಂಬರ್ 2024 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ

September 28th, 09:30 am

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿವಿಧ ವಿಷಯಗಳ ಬಗ್ಗೆ ತಮ್ಮ ಅನಿಸಿಕೆ ಹಾಗು ಅಭಿಪ್ರಾಯಗಳನ್ನು ಬಾನುವಾರ ೧೧ ಗಂಟೆಗೆ ಮನ್ ಕೀ ಬಾತ್ ನಲ್ಲಿ ಹಂಚಿಕೊಳ್ಳಲಿದ್ದಾರೆ. ನರೇಂದ್ರ ಮೋದಿ ಆಪ್ ನಲ್ಲಿ ಕಾರ್ಯಕ್ರಮವನ್ನು ಕೇಳಬಹುದು.

ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ

September 05th, 04:06 pm

ಪ್ರಧಾನಿ ನರೇಂದ್ರ ಮೋದಿ ಭಾನುವಾರ, ಸೆಪ್ಟೆಂಬರ್ 29ರಂದು ತನ್ನ 'ಮನ್ ಕಿ ಬಾತ್' ಅನ್ನು ಹಂಚಿಕೊಳ್ಳಲಿದ್ದಾರೆ. ನೀವು ನವೀನ ಸಲಹೆಗಳನ್ನು ಮತ್ತು ಒಳನೋಟಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಳ್ಳಲು ಅವಕಾಶವಿದೆ. ಕೆಲವು ಸಲಹೆಗಳನ್ನು ಅವರ ಭಾಷಣದಲ್ಲಿ ಪ್ರಧಾನಿ ಉಲ್ಲೇಖಿಸುತ್ತಾರೆ.

ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಳಿಂದ ದೇಶದ ಯುವಕರು ಪ್ರಯೋಜನ ಪಡೆದಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

August 25th, 11:30 am

ನನ್ನ ಪ್ರಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನನ್ನ ಕುಟುಂಬದ ಎಲ್ಲಾ ಸದಸ್ಯರಿಗೆ ಸ್ವಾಗತ. ಇಂದು ಮತ್ತೊಮ್ಮೆ ನಾವು ದೇಶದ ಸಾಧನೆಗಳು ಮತ್ತು ದೇಶದ ಜನತೆಯ ಸಾಮೂಹಿಕ ಪ್ರಯತ್ನಗಳ ಬಗ್ಗೆ ಮಾತನಾಡಲಿದ್ದೇವೆ. 21 ನೇ ಶತಮಾನದ ಭಾರತದಲ್ಲಿ ವಿಕಸಿತ ಭಾರತದ ಅಡಿಪಾಯವನ್ನು ಬಲಪಡಿಸುವ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಉದಾಹರಣೆಗೆ, ಇದೇ ಆಗಸ್ಟ್ 23 ರಂದು, ನಾವೆಲ್ಲರೂ ಪ್ರಥಮ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿದೆವು. ನೀವೆಲ್ಲರೂ ಈ ದಿನವನ್ನು ಆಚರಿಸಿರಬಹುದು ಎಂದು ನಾನು ಭಾವಿಸುತ್ತೇನೆ, ಮತ್ತೊಮ್ಮೆ ಚಂದ್ರಯಾನ-3 ರ ಯಶಸ್ಸನ್ನು ಆಚರಿಸಿರಬಹುದು. ಕಳೆದ ವರ್ಷ, ಇದೇ ದಿನದಂದು, ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿರುವ ಶಿವ-ಶಕ್ತಿ ಪಾಯಿಂಟ್‌ನಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿತ್ತು. ಭಾರತ ಈ ಅಮೋಘ ಸಾಧನೆ ಮಾಡಿದ ವಿಶ್ವದ ಮೊದಲ ದೇಶವಾಯಿತು.

25ನೇ ಆಗಸ್ಟ್ 2024 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ

August 24th, 10:00 am

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿವಿಧ ವಿಷಯಗಳ ಬಗ್ಗೆ ತಮ್ಮ ಅನಿಸಿಕೆ ಹಾಗು ಅಭಿಪ್ರಾಯಗಳನ್ನು ಬಾನುವಾರ ೧೧ ಗಂಟೆಗೆ ಮನ್ ಕೀ ಬಾತ್ ನಲ್ಲಿ ಹಂಚಿಕೊಳ್ಳಲಿದ್ದಾರೆ. ನರೇಂದ್ರ ಮೋದಿ ಆಪ್ ನಲ್ಲಿ ಕಾರ್ಯಕ್ರಮವನ್ನು ಕೇಳಬಹುದು.

ತ್ರಿವರ್ಣ ಧ್ವಜದ ವೈಭವವನ್ನು ಎತ್ತಿ ಹಿಡಿಯುವಲ್ಲಿ 'ಹರ್ ಘರ್ ತಿರಂಗ ಅಭಿಯಾನ' ಒಂದು ವಿಶಿಷ್ಟ ಹಬ್ಬವಾಗಿದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

July 28th, 11:30 am

ನನ್ನ ಪ್ರೀತಿಯ ದೇಶವಾಸಿಗಳೆ, 'ಮನ್ ಕಿ ಬಾತ್' ಕಾರ್ಯಕ್ರಮಕ್ಕೆ ನಿಮಗೆಲ್ಲರಿಗೂ ಸ್ವಾಗತ, ಆತ್ಮೀಯ ಶುಭಾಶಯಗಳು. ಈ ಕ್ಷಣದಲ್ಲಿ ಜರುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಇಡೀ ವಿಶ್ವದ ಗಮನ ಸೆಳೆದಿದೆ, ಈ ಋತುವಿನ ಫ್ಲೇವರ್ ಆಗಿದೆ. ಒಲಿಂಪಿಕ್ಸ್ ನಮ್ಮ ಆಟಗಾರರಿಗೆ ವಿಶ್ವ ವೇದಿಕೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅವಕಾಶ ಮಾಡಿಕೊಟ್ಟಿದೆ. ದೇಶಕ್ಕಾಗಿ ಏನನ್ನಾದರೂ ಮಾಡಲು ಅವರಿಗೆ ಅವಕಾಶ ನೀಡಿದೆ. ನಮ್ಮ ಆಟಗಾರರನ್ನು ಪ್ರೋತ್ಸಾಹಿಸೋಣ... ಭಾರತ ತಂಡಕ್ಕೆ ಚಿಯರ್!!

28ನೇ ಜುಲೈ 2024 ರಂದು ಮನ್ ಕಿ ಬಾತ್ ಕೇಳಲು ಟ್ಯೂನ್ ಮಾಡಿ

July 27th, 09:30 am

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿವಿಧ ವಿಷಯಗಳ ಬಗ್ಗೆ ತಮ್ಮ ಅನಿಸಿಕೆ ಹಾಗು ಅಭಿಪ್ರಾಯಗಳನ್ನು ಬಾನುವಾರ ೧೧ ಗಂಟೆಗೆ ಮನ್ ಕೀ ಬಾತ್ ನಲ್ಲಿ ಹಂಚಿಕೊಳ್ಳಲಿದ್ದಾರೆ. ನರೇಂದ್ರ ಮೋದಿ ಆಪ್ ನಲ್ಲಿ ಕಾರ್ಯಕ್ರಮವನ್ನು ಕೇಳಬಹುದು.

ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

June 30th, 11:00 am

'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.