ಸಂಸತ್ತಿನ ಬಜೆಟ್ ಅಧಿವೇಶನ ಆರಂಭದಲ್ಲಿ ಪ್ರಧಾನ ಮಂತ್ರಿ ಭಾಷಣ
July 22nd, 10:30 am
ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಇಡೀ ರಾಷ್ಟ್ರವೇ ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ಅಧಿವೇಶನವು ಸಕಾರಾತ್ಮಕ, ರಚನಾತ್ಮಕ ಮತ್ತು ಜನರ ಕನಸುಗಳನ್ನು ನನಸಾಗಿಸಲು ಭದ್ರ ನಾದಿ ಹಾಕುತ್ತದೆ ಎಂದು ಆಶಿಸುತ್ತಿದೆ.ಸಂಸತ್ ಅಧಿವೇಶನಕ್ಕೂ ಮುನ್ನ ಪ್ರಧಾನಮಂತ್ರಿಯವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು
July 22nd, 10:15 am
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, 60 ವರ್ಷಗಳ ನಂತರ ಸತತ ಮೂರನೇ ಅವಧಿಗೆ ಸರ್ಕಾರ ಬಂದಿರುವುದಕ್ಕೆ ಹೆಮ್ಮೆಯನ್ನು ವ್ಯಕ್ತಪಡಿಸಿದರು. ಮೂರನೇ ಅವಧಿಯ ಸರ್ಕಾರವು ಬಜೆಟ್ ಮಂಡಿಸುವುದನ್ನು ರಾಷ್ಟ್ರವು ಒಂದು ಅದ್ಭುತ ಘಟನೆಯಾಗಿ ನೋಡುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಬಜೆಟ್ ಅಮೃತ ಕಾಲದ ಮೈಲಿಗಲ್ಲು ಬಜೆಟ್ ಆಗಿದೆ ಮತ್ತು ತಾನು ನೀಡಿರುವ ಭರವಸೆಗಳನ್ನು ಕಾರ್ಯಗತಗೊಳಿಸಲು ಸರ್ಕಾರವು ಶ್ರಮಿಸುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಬಜೆಟ್ ಪ್ರಸ್ತುತ ಸರ್ಕಾರದ ಮುಂದಿನ ಐದು ವರ್ಷಗಳ ಹಾದಿಯನ್ನು ನಿಗದಿಪಡಿಸುತ್ತದೆ ಮತ್ತು 2047 ರ ವೇಳೆಗೆ ವಿಕಸಿತ ಭಾರತ ನಿರ್ಮಿಸುವ ಕನಸಿಗೆ ಭದ್ರ ಬುನಾದಿಯನ್ನು ಹಾಕುತ್ತದೆ ಎಂದು ಅವರು ಹೇಳಿದರು.ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.