​​​​​​​1.5 ಲಕ್ಷ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆಯ ಗುರಿ ಸಾಧನೆಗೆ ಪ್ರಧಾನಮಂತ್ರಿ ಶ್ಲಾಘನೆ

December 29th, 09:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 1.5 ಲಕ್ಷ ಆಯುಷ್ಮಾನ್ ಭಾರತ್ - ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆಯ ಗುರಿ ಸಾಧನೆಯು ನವ ಭಾರತದಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ ಎಂದು ಹೇಳಿದ್ದಾರೆ. ಭಾರತದ ಸಮೃದ್ಧಿ ಆರೋಗ್ಯವಂತ ನಾಗರಿಕರಲ್ಲಿ ಅಡಗಿದೆ ಎಂದರು.

200 ಕೋಟಿ ಲಸಿಕೆ ಡೋಸ್ ಗುರಿ ದಾಟಿದ್ದಕ್ಕಾಗಿ ನಾಗರಿಕರಿಗೆ ಪ್ರಧಾನಮಂತ್ರಿ ಅಭಿನಂದನೆ

July 17th, 01:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಜ್ಞಾನದ ಮೇಲೆ ಅಸಾಧಾರಣ ನಂಬಿಕೆಯನ್ನು ತೋರಿಸಿದ್ದಕ್ಕಾಗಿ ಮತ್ತು 200 ಕೋಟಿ ಕೋವಿಡ್-19 ಲಸಿಕೆ ಡೋಸ್ ಗಳ ಗುರಿ ಸಂಖ್ಯೆಯನ್ನು ದಾಟಿದ್ದಕ್ಕಾಗಿ ಭಾರತದ ಜನತೆಯನ್ನು ಶ್ಲಾಘಿಸಿದ್ದಾರೆ. ಈ ಅಭಿಯಾನದಲ್ಲಿ ವೈದ್ಯರು, ದಾದಿಯರು, ಮುಂಚೂಣಿ ಕಾರ್ಯಕರ್ತರು, ವಿಜ್ಞಾನಿಗಳು, ಅನ್ವೇಷಕರು ಮತ್ತು ಉದ್ಯಮಿಗಳು ತೋರಿದ ಉತ್ಸಾಹ ಮತ್ತು ದೃಢ ನಿಶ್ಚಯವನ್ನು ಅವರು ಶ್ಲಾಘಿಸಿದರು.

ಇಂದಿನ ಸಂಪುಟ ನಿರ್ಧಾರವು ಭಾರತದ ಲಸಿಕಾಕರಣದ ವ್ಯಾಪ್ತಿಯನ್ನು ಹೆಚ್ಚಿಸುತ್ತದೆ ಮತ್ತು ಆರೋಗ್ಯಕರ ರಾಷ್ಟ್ರವನ್ನು ಸೃಷ್ಟಿಸುತ್ತದೆ: ಪ್ರಧಾನಮಂತ್ರಿ

July 13th, 10:52 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2022 ರ ಜುಲೈ 15 ರಿಂದ ಮುಂದಿನ 75 ದಿನಗಳವರೆಗೆ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತ ಕೋವಿಡ್ -19 ಮುನ್ನೆಚ್ಚರಿಕೆ ಡೋಸ್ ನೀಡುವ ನಿರ್ಧಾರವು ಭಾರತದ ಲಸಿಕಾಕರಣ ವ್ಯಾಪ್ತಿಯನ್ನು ಹೆಚ್ಚಿಸುತ್ತದೆ ಮತ್ತು ಆರೋಗ್ಯಕರ ರಾಷ್ಟ್ರವನ್ನು ಸೃಷ್ಟಿಸುತ್ತದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

15 ರಿಂದ 18 ವರ್ಷ ವಯಸ್ಸಿನ 50% ಕ್ಕಿಂತ ಹೆಚ್ಚು ಯುವಕರಿಗೆ ಮೊದಲ ಡೋಸ್ ಲಸಿಕೆಯನ್ನು ನೀಡಿರುವುದಕ್ಕೆ ಪ್ರಧಾನಿ ಶ್ಲಾಘಿಸಿದರು

January 19th, 10:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 15-18 ವರ್ಷದೊಳಗಿನ 50% ಕ್ಕಿಂತ ಹೆಚ್ಚು ಯುವಕರಿಗೆ ಮೊದಲ ಡೋಸ್ ಲಸಿಕೆ ನೀಡಿರುವುದನ್ನು ಶ್ಲಾಘಿಸಿದ್ದಾರೆ.