ಇಂದೋರ್ ನಲ್ಲಿ ನಡೆದ 'ಮಜ್ದೂರೂನ್ ಕಾ ಹಿಟ್ ಮಜ್ದೂರೂನ್ ಕೋ ಸಮರ್ಥ್' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡದ ಅನುವಾದ

December 25th, 12:30 pm

ಮೋಹನ್ ಯಾದವ್, ಮಧ್ಯಪ್ರದೇಶದ ಉತ್ಸಾಹಿ ಮುಖ್ಯಮಂತ್ರಿ; ಇಂದೋರ್ ನಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ತಾಯ್; ನನ್ನ ಸಂಸದೀಯ ಸಹೋದ್ಯೋಗಿಗಳು; ಹೊಸ ವಿಧಾನಸಭೆಯಲ್ಲಿ ಆಯ್ಕೆಯಾದ ಶಾಸಕರು; ಇತರ ಗಣ್ಯರೇ, ಮತ್ತು ನನ್ನ ಪ್ರೀತಿಯ ಕಾರ್ಮಿಕ ಸಹೋದರ ಸಹೋದರಿಯರೇ!

​​​​​​​'ಕಾರ್ಮಿಕರ ಹಿತ, ಕಾರ್ಮಿಕರಿಗೆ ಸಮರ್ಪಿತ' ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ

December 25th, 12:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 'ಕಾರ್ಮಿಕರ ಹಿತ, ಕಾರ್ಮಿಕರಿಗೆ ಸಮರ್ಪಿತʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ʻಹುಕುಮ್‌ಚಂದ್ ಮಿಲ್ʼನ ಕಾರ್ಮಿಕರ ಬಾಕಿಗೆ ಸಂಬಂಧಿಸಿದ ಸುಮಾರು 224 ಕೋಟಿ ರೂ.ಗಳ ಚೆಕ್ ಅನ್ನು ಇಂದೋರ್‌ನ ʻಹುಕುಚ್‌ಚಂದ್ ಮಿಲ್‌ʼನ ಅಧಿಕೃತ ಲಿಕ್ವಿಡೇಟರ್ ಮತ್ತು ಕಾರ್ಮಿಕ ಒಕ್ಕೂಟದ ಮುಖ್ಯಸ್ಥರಿಗೆ ಹಸ್ತಾಂತರಿಸಿದರು. ʻಹುಕುಮ್‌ಚಂದ್ ಮಿಲ್‌ʼ ಕಾರ್ಮಿಕರ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳ ಇತ್ಯರ್ಥಕ್ಕೆ ಈ ಕಾರ್ಯಕ್ರಮವು ಸಾಕ್ಷಿಯಾಯಿತು. ಶ್ರೀ ಮೋದಿ ಅವರು ಖಾರ್ಗೋನ್ ಜಿಲ್ಲೆಯಲ್ಲಿ 60 ಮೆಗಾವ್ಯಾಟ್ ಸೌರ ವಿದ್ಯುತ್ ಸ್ಥಾವರಕ್ಕೂ ಶಂಕುಸ್ಥಾಪನೆ ನೆರವೇರಿಸಿದರು.

ಡಿಸೆಂಬರ್ 25ರಂದು 'ಮಜ್ದೂರೋನ್ ಕಾ ಹಿತ್ ಮಜ್ದೂರೋನ್ ಕೋ ಸಮರ್ಪಿತ್' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಲಿದ್ದಾರೆ ಮತ್ತು ಹುಕುಮ್ ಚಂದ್ ಗಿರಣಿ ಕಾರ್ಮಿಕರ ಬಾಕಿಗೆ ಸಂಬಂಧಿಸಿದ ಚೆಕ್ ಹಸ್ತಾಂತರಿಸಲಿದ್ದಾರೆ

December 24th, 07:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಮಜ್ದೂರೋನ್ ಕಾ ಹಿತ್ ಮಜ್ದೂರೋನ್ ಕೋ ಸಮರ್ಪಿತ್ ' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಮತ್ತು ಹುಕುಮ್ ಚಂದ್ ಮಿಲ್ ಕಾರ್ಮಿಕರ ಬಾಕಿಗೆ ಸಂಬಂಧಿಸಿದ ಸುಮಾರು 224 ಕೋಟಿ ರೂ.ಗಳ ಚೆಕ್ ಅನ್ನು ಇಂದೋರ್ ನ ಹುಕುಮ್ ಚಂದ್ ಮಿಲ್ ನ ಅಧಿಕೃತ ಲಿಕ್ವಿಡೇಟರ್ ಮತ್ತು ಕಾರ್ಮಿಕ ಒಕ್ಕೂಟದ ಮುಖ್ಯಸ್ಥರಿಗೆ 2023ರ ಡಿಸೆಂಬರ್ 25ರಂದು ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಸ್ತಾಂತರಿಸಲಿದ್ದಾರೆ. ಈ ಕಾರ್ಯಕ್ರಮವು ಹುಕುಂ ಚಂದ್ ಗಿರಣಿ ಕಾರ್ಮಿಕರ ದೀರ್ಘಕಾಲದ ಬೇಡಿಕೆಗಳ ಇತ್ಯರ್ಥವನ್ನು ಸೂಚಿಸುತ್ತದೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.