ಪ್ರಧಾನಿ ಮೋದಿಯವರ ನಾಯಕತ್ವವು ಮಲೇರಿಯಾ ವಿರುದ್ಧ ಅದ್ಭುತ ವಿಜಯವನ್ನು ನೀಡುತ್ತದೆ, ಆರೋಗ್ಯವನ್ನು ಕ್ರಾಂತಿಗೊಳಿಸುತ್ತದೆ: ಜೆಪಿ ನಡ್ಡಾ
December 16th, 10:06 am
ಭಾರತವು ಮಲೇರಿಯಾ ಪ್ರಕರಣಗಳಲ್ಲಿ ಗಮನಾರ್ಹವಾದ 69% ಕಡಿತವನ್ನು ಸಾಧಿಸಿದೆ, 2017 ರಲ್ಲಿ 6.4 ಮಿಲಿಯನ್‌ನಿಂದ 2023 ರಲ್ಲಿ ಕೇವಲ 2 ಮಿಲಿಯನ್‌ಗೆ ಇಳಿದಿದೆ - ಇದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೇಂದ್ರೀಕೃತ ನೀತಿಗಳು ಮತ್ತು ನಾಯಕತ್ವಕ್ಕೆ ಕಾರಣವಾದ ಸ್ಮಾರಕವಾಗಿದೆ. ಈ ಮೈಲಿಗಲ್ಲು 2015 ರ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಮಾಡಿದ ಬದ್ಧತೆಯನ್ನು 2030 ರ ವೇಳೆಗೆ ಮಲೇರಿಯಾವನ್ನು ತೊಡೆದುಹಾಕಲು ಪ್ರಧಾನಿ ಮೋದಿಯವರ ದೊಡ್ಡ ಗುರಿಯ ಭಾಗವಾಗಿದೆ.ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 15th, 11:20 am
ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್‌ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.ಜನಜಾತಿಯ ಗೌರವ್ ದಿವಸ್ ಸಂದರ್ಭದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
November 15th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜಮುಯಿಯಲ್ಲಿಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಸುಮಾರು 6,640 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.ಬಿಹಾರದ ದರ್ಭಾಂಗದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸಮರ್ಪಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
November 13th, 11:00 am
ನಾನು ರಾಜ ಜನಕ ಮತ್ತು ಮಾತೆ ಸೀತಾ ಅವರ ಪವಿತ್ರ ಭೂಮಿಗೆ ಮತ್ತು ಮಹಾನ್ ಕವಿ ವಿದ್ಯಾಪತಿಯ ಜನ್ಮಸ್ಥಳಕ್ಕೆ ನಮಸ್ಕರಿಸುತ್ತೇನೆ. ಈ ಶ್ರೀಮಂತ ಮತ್ತು ಭವ್ಯವಾದ ಭೂಮಿಯ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದಲ್ಲಿ 12,100 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು ರಾಷ್ಟ್ರಕ್ಕೆ ಸಮರ್ಪಿಸಿದರು
November 13th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ದರ್ಭಾಂಗದಲ್ಲಿ ಸುಮಾರು 12,100 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಈ ಅಭಿವೃದ್ಧಿ ಯೋಜನೆಗಳು ಆರೋಗ್ಯ, ರೈಲು, ರಸ್ತೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕ್ಷೇತ್ರಗಳನ್ನು ಒಳಗೊಂಡಿವೆ.ಭಾರತ ಮತ್ತು ಮಾಲ್ಡೀವ್ಸ್: ಸಮಗ್ರ ಆರ್ಥಿಕ ಮತ್ತು ಕಡಲ ತೀರದ ಸುರಕ್ಷತೆಯಲ್ಲಿ ಪಾಲುದಾರಿಕೆಗಾಗಿ ಒಂದು ದೂರದರ್ಶಿತ್ವ
October 07th, 02:39 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ಡೀವ್ಸ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮದ್ ಮುಯಿಝು ಅವರು 7ನೇ ಅಕ್ಟೋಬರ್ 2024ರಂದು ಭೇಟಿಯಾಗಿದ್ದರು. ದ್ವಿಪಕ್ಷೀಯ ಸಂಬಂಧಗಳ ವಿಚಾರವಾಗಿ ವಿಸ್ತೃತವಾಗಿ ಸಮಗ್ರವಾಗಿ ಪರಿಶೀಲಿಸಿದ ಉಭಯ ನಾಯಕರು ಎರಡೂ ದೇಶಗಳ ಜನರ ಒಳಿತಿಗಾಗಿ ಐತಿಹಾಸಿಕವೆನಿಸುವ ಇನ್ನಷ್ಟು ನಿಕಟ ಮತ್ತು ವಿಶೇಷ ಸಂಬಂಧವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಈವರೆಗೆ ಸಾಧಿಸಿದ ಪ್ರಗತಿಯ ಪರಿಶೀಲನೆ ನಡೆಸಿದರು.'ಮನ್ ಕಿ ಬಾತ್' ಕೇಳುಗರು ಈ ಕಾರ್ಯಕ್ರಮದ ನಿಜವಾದ ನಿರೂಪಕರು: ಪ್ರಧಾನಿ ಮೋದಿ
September 29th, 11:30 am
ನನ್ನ ಪ್ರೀತಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ ನಾವೆಲ್ಲರೂ 'ಮನದ ಮಾತಿನ' ಮೂಲಕ ಒಗ್ಗೂಡುವ ಅವಕಾಶ ಲಭಿಸಿದೆ. ಇಂದಿನ ಈ ಕಂತು ನನ್ನನ್ನು ಬಹಳ ಭಾವುಕನನ್ನಾಗಿಸಲಿದೆ, ಅನೇಕ ಹಳೆಯ ನೆನಪುಗಳು ನನ್ನನ್ನು ಮುತ್ತಿವೆ - ಕಾರಣ ಏನೆಂದರೆ 'ಮನದ ಮಾತಿನ' ನಮ್ಮ ಈ ಪಯಣಕ್ಕೆ 10 ವರ್ಷಗಳು ತುಂಬುತ್ತಿದೆ. 10 ವರ್ಷಗಳ ಹಿಂದೆ ಅಕ್ಟೋಬರ್ 3 ರಂದು ವಿಜಯದಶಮಿಯ ದಿನದಂದು 'ಮನದ ಮಾತು’ ಪ್ರಾರಂಭವಾಗಿತ್ತು ಮತ್ತು ಈ ವರ್ಷ ಅಕ್ಟೋಬರ್ 3 ರಂದು 'ಮನದ ಮಾತಿಗೆ ' 10 ವರ್ಷತುಂಬುವ ಸಂದರ್ಭ ನವರಾತ್ರಿಯ ಮೊದಲ ದಿನವಾಗಿದೆ. 'ಮನದ ಮಾತಿನ’ ಈ ಸುದೀರ್ಘ ಪಯಣದಲ್ಲಿ ನಾನು ಎಂದೂ ಮರೆಯಲಾಗದ ಇಂತಹ ಹಲವಾರು ಮೈಲಿಗಲ್ಲುಗಳಿವೆ, ನಮ್ಮ ಈ ಪಯಣದಲ್ಲಿ ನಿರಂತರ ಸಹಯೋಗವನ್ನು ನೀಡಿದಂತಹ ' ಮನದ ಮಾತಿನ' ಕೋಟ್ಯಂತರ ಶ್ರೋತೃ ಬಾಂಧವರಿದ್ದಾರೆ. ದೇಶದ ಮೂಲೆ ಮೂಲೆಗಳಿಂದ ಅವರು ಮಾಹಿತಿಯನ್ನು ಒದಗಿಸಿದರು. ಮನದ ಮಾತಿನ ಶ್ರೋತೃಗಳೇ ಈ ಕಾರ್ಯಕ್ರಮದ ನಿಜವಾದ ರೂವಾರಿಗಳು. ಸಾಮಾನ್ಯವಾಗಿ ಎಲ್ಲಿಯವರೆಗೆ ರೋಚಕ ವಿಷಯಗಳನ್ನು ಮಾತನಾಡುವುದಿಲ್ಲವೋ, ನಕಾರಾತ್ಮಕ ವಿಷಯಗಳನ್ನು ಮಾತನಾಡುವುದಿಲ್ಲವೋ ಅಲ್ಲಿವರೆಗೆ ಅದು ಹೆಚ್ಚಿನ ಗಮನ ಸೆಳೆಯುವುದಿಲ್ಲ ಎನ್ನಲಾಗುತ್ತದೆ. ಆದರೆ ಮನದ ಮಾತು ದೇಶದ ಜನರು ಸಕಾರಾತ್ಮಕ ಮಾಹಿತಿಗಾಗಿ , ಎಷ್ಟು ಉತ್ಸುಕರಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಿದೆ. ಸಕಾರಾತ್ಮಕ ಮಾತು, ಪ್ರೇರಣಾತ್ಮಕ ಉದಾಹರಣೆಗಳು, ಸ್ಫೂರ್ತಿದಾಯಕ ಕಥೆಗಳು ಜನರಿಗೆ ಬಹಳ ಇಷ್ಟವಾಗುತ್ತವೆ. ಕೇವಲ ಮಳೆಹನಿಗಳನ್ನು ಮಾತ್ರ ಕುಡಿಯುವಂತಹ ಚಾತಕ ಪಕ್ಷಿಯಂತೆ ಜನರು ದೇಶದ ಸೌಲಭ್ಯಗಳ ಬಗ್ಗೆ, ಜನರ ಸಾಮೂಹಿಕ ಸಾಧನೆಗಳ ಬಗ್ಗೆ ಮನದ ಮಾತಿನ ಮೂಲಕ ಎಷ್ಟು ಹೆಮ್ಮೆಯಿಂದ ಕೇಳುತ್ತಾರೆ. ಮನದ ಮಾತಿನ 10 ವರ್ಷಗಳ ಪಯಣ ಎಷ್ಟು ಅದ್ಭುತವಾದ ಹಾರವನ್ನು ಸಿದ್ಧಗೊಳಿಸಿದೆ ಎಂದರೆ ಪ್ರತಿ ಸಂಚಿಕೆಯೊಂದಿಗೆ ಹೊಸ ಯಶೋಗಾಥೆಗಳು, ಹೊಸ ಕೀರ್ತಿವಂತರು ಮತ್ತು ಹೊಸ ವ್ಯಕ್ತಿತ್ವಗಳನ್ನು ಸೇರಿಸುತ್ತಾ ಸಾಗಿದೆ. ನಮ್ಮ ಸಮಾಜದಲ್ಲಿ ಸಾಮಾಜಿಕ ಹಿತದೃಷ್ಟಿಯ ಭಾವನೆಯಿಂದ ಯಾವುದೇ ಕೆಲಸ ಮಾಡಿದರೂ ಅವರಿಗೆ 'ಮನದ ಮಾತಿನ' ಮೂಲಕ ಗೌರವ ಲಭಿಸುತ್ತದೆ. 'ಮನದ ಮಾತಿ'ಗೆ ಬಂದ ಪತ್ರಗಳನ್ನು ನಾನು ಓದಿದಾಗ ನನ್ನ ಮನವೂ ಹೆಮ್ಮೆಯಿಂದ ಬೀಗುತ್ತದೆ. ನಮ್ಮ ದೇಶದಲ್ಲಿ ಅದೆಷ್ಟೋ ಪ್ರತಿಭಾವಂತರಿದ್ದಾರೆ, ಅವರು ತಮ್ಮ ಇಡೀ ಜೀವನವನ್ನು ಜನರ ನಿಸ್ವಾರ್ಥ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಅವರ ಬಗ್ಗೆ ತಿಳಿಯುವುದು ನನ್ನಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ. 'ಮನದ ಮಾತಿನ' ಈ ಸಂಪೂರ್ಣ ಪ್ರಕ್ರಿಯೆಯು ನನಗೆ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆಯುವಂತಿದೆ. ಮನದ ಮಾತಿನ ಪ್ರತಿ ವಿಷಯ, ಪ್ರತಿ ಘಟನೆ, ಪ್ರತಿ ಪತ್ರವನ್ನು ನೆನಪಿಸಿಕೊಂಡಾಗ, ನನಗೆ ಭಗವಂತನ ರೂಪದಲ್ಲಿರುವ ಜನತಾ ಜನಾರ್ದನನ ದರ್ಶನ ಪಡೆದಂತೆ ಭಾಸವಾಗುತ್ತದೆ.“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣ
August 31st, 10:39 pm
“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ನ ಈ ನೂತನ ಆವೃತ್ತಿಯಲ್ಲಿ ಭಾಗವಹಿಸುತ್ತಿರುವಾಗ, ಹಲವಾರು ಪರಿಚಿತ ಮುಖಗಳನ್ನು ನೋಡಲು ನನಗೆ ಸಂತೋಷವಾಗುತ್ತಿದೆ. ಭಾರತದ ಉಜ್ವಲ ಭವಿಷ್ಯದ ಬಗ್ಗೆ ಇಲ್ಲಿ ಅತ್ಯುತ್ತಮ ಚರ್ಚೆಗಳು ನಡೆದಿವೆ ಎಂದು ನನಗೆ ವಿಶ್ವಾಸವಿದೆ, ಅದರಲ್ಲೂ ವಿಶೇಷವಾಗಿ ಇಡೀ ಜಗತ್ತು ಭಾರತದ ಬಗ್ಗೆ ವಿಶ್ವಾಸ ಹೊಂದಿರುವ ಈ ಸಮಯದಲ್ಲಿ ಚರ್ಚೆಗಳು ನಡೆದಿವೆ ಎಂಬುದು ವಿಶೇಷ.ನವದೆಹಲಿಯಲ್ಲಿ ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 31st, 10:13 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ(ವರ್ಲ್ಡ್ ಲೀಡರ್ಸ್ ಫೋರಂ) ಉದ್ದೇಶಿಸಿ ಭಾಷಣ ಮಾಡಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 78 ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಭಾರತದ ಭವಿಷ್ಯಕ್ಕಾಗಿ ಮಹತ್ವಾಕಾಂಕ್ಷೆಯ ದೃಷ್ಟಿಕೋನವನ್ನು ಹೊಂದಿದ್ದಾರೆ
August 15th, 10:16 am
ತಮ್ಮ 78ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಅಭಿವೃದ್ಧಿಯನ್ನು ರೂಪಿಸುವ, ಹೊಸ ಆವಿಷ್ಕಾರಗಳಿಗೆ ಚಾಲನೆ ನೀಡುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಭಾರತವನ್ನು ಜಾಗತಿಕ ನಾಯಕನನ್ನಾಗಿಸುವ ತಮ್ಮ ಸರ್ಕಾರದ ಭವಿಷ್ಯದ ಸರಣಿ ಕಾರ್ಯಕ್ರಮಗಳ ಕುರಿತು ವಿವರಿಸಿದರು.ನ್ಯೂಜಿಲೆಂಡ್ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ
July 20th, 02:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನ್ಯೂಜಿಲೆಂಡ್ ಪ್ರಧಾನಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಡಾ. ಎಂ.ಎಸ್. ವಲಿಯಥಾನ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
July 19th, 10:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನಾ ಕ್ಷೇತ್ರದ ಪ್ರವರ್ತಕ ಡಾ. ಎಂ.ಎಸ್. ವಲಿಯಥಾನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.ವಂಚಿತರಿಗೆ ಆದ್ಯತೆ ನೀಡುವುದೇ ಎನ್‌ಡಿಎ ಸರ್ಕಾರದ ಅಭಿವೃದ್ಧಿ ಮಾದರಿ: ಪ್ರಧಾನಿ ಮೋದಿ
July 13th, 06:00 pm
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ 29,400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರಸ್ತೆ, ರೈಲ್ವೆ ಮತ್ತು ಬಂದರು ವಲಯಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮುಂಬೈ ಮತ್ತು ಹತ್ತಿರದ ಪ್ರದೇಶಗಳ ನಡುವೆ ರಸ್ತೆ ಮತ್ತು ರೈಲು ಸಂಪರ್ಕವನ್ನು ಸುಧಾರಿಸಲು 29,400 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹುವಿಧದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಸಮರ್ಪಿಸುವ ಅವಕಾಶ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.ಮಹಾರಾಷ್ಟ್ರದ ಮುಂಬೈಯಲ್ಲಿ 29,400 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
July 13th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈಯಲ್ಲಿ 29,400 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ರಸ್ತೆ, ರೈಲ್ವೆ ಮತ್ತು ಬಂದರು ವಲಯಕ್ಕೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು.ಬಾಂಗ್ಲಾದೇಶದ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಇಂಗ್ಲಿಷ್ ಪತ್ರಿಕಾ ಹೇಳಿಕೆಯ ಅನುವಾದ
June 22nd, 01:00 pm
ಪ್ರಧಾನ ಮಂತ್ರಿ ಶೇಖ್ ಹಸೀನಾ ಮತ್ತು ಅವರ ನಿಯೋಗಕ್ಕೆ ನಾನು ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ. ಕಳೆದ ಒಂದು ವರ್ಷದಲ್ಲಿ ನಾವು ಸುಮಾರು ಹತ್ತು ಬಾರಿ ಭೇಟಿಯಾಗಿದ್ದರೂ, ಇಂದಿನ ಭೇಟಿ ಬಹು ವಿಶೇಷವಾಗಿದೆ. ಏಕೆಂದರೆ ಪ್ರಧಾನಿ ಶೇಖ್ ಹಸೀನಾ ಅವರು ನಮ್ಮ ಸರ್ಕಾರದ ಮೂರನೇ ಅವಧಿಯ ಮೊದಲ ರಾಜ್ಯ ಅತಿಥಿಯಾಗಿದ್ದಾರೆ.ಇಂದು ರಾಮಲಾಲಾ ಭವ್ಯ ಮಂದಿರದಲ್ಲಿ ಕುಳಿತಿದ್ದಾರೆ, ಯಾವುದೇ ಅಶಾಂತಿ ಇಲ್ಲ: ಬಿಹಾರದ ಕರಕಟ್‌ನಲ್ಲಿ ಪ್ರಧಾನಿ ಮೋದಿ
May 25th, 11:45 am
ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಕರಕಟ್‌ನ ಐತಿಹಾಸಿಕ ಭೂಮಿಯನ್ನು ಅಲಂಕರಿಸಿದರು, ರಾಷ್ಟ್ರದ ಬೆಳವಣಿಗೆಯನ್ನು ದಣಿವರಿಯಿಲ್ಲದೆ ಓಡಿಸುವುದಾಗಿ ಮತ್ತು ಅಸಮಾನತೆಯ ಆಧಾರದ ಮೇಲೆ ದೇಶವನ್ನು ವಿಭಜಿಸುವ ವಿರೋಧವನ್ನು ತಡೆಯುವುದಾಗಿ ಪ್ರತಿಜ್ಞೆ ಮಾಡಿದರು.ಬಿಹಾರದ ಪಾಟಲಿಪುತ್ರ, ಕರಕತ್ ಮತ್ತು ಬಕ್ಸರ್‌ನಲ್ಲಿ ಉತ್ಸಾಹಭರಿತ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
May 25th, 11:30 am
ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಪಾಟಲಿಪುತ್ರ, ಕರಕತ್ ಮತ್ತು ಬಕ್ಸಾರ್‌ನ ಐತಿಹಾಸಿಕ ಭೂಮಿಯನ್ನು ಅಲಂಕರಿಸಿದರು, ರಾಷ್ಟ್ರದ ಬೆಳವಣಿಗೆಯನ್ನು ದಣಿವರಿಯಿಲ್ಲದೆ ಚಾಲನೆ ಮಾಡಲು ಮತ್ತು ಅಸಮಾನತೆಯ ಆಧಾರದ ಮೇಲೆ ದೇಶವನ್ನು ವಿಭಜಿಸುವ ವಿರೋಧವನ್ನು ತಡೆಯಲು ಪ್ರತಿಜ್ಞೆ ಮಾಡಿದರು.ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ದೇಶದ 60 ವರ್ಷಗಳನ್ನು ವ್ಯರ್ಥ ಮಾಡಿದವು: ಬಿಹಾರದ ಚಂಪಾರಣ್‌ನಲ್ಲಿ ಪ್ರಧಾನಿ ಮೋದಿ
May 21st, 11:30 am
ಬಿಹಾರದ ಚಂಪಾರಣ್‌ನಲ್ಲಿ ನಡೆದ ಉತ್ಸಾಹಭರಿತ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ತಮ್ಮ ನಾಯಕತ್ವದಲ್ಲಿ ಭಾರತ ಕೈಗೊಂಡಿರುವ ಪರಿವರ್ತಕ ಪ್ರಯಾಣ ಮತ್ತು ಈ ವೇಗವನ್ನು ಮುಂದುವರೆಸುವ ತುರ್ತು ಅಗತ್ಯವನ್ನು ಒತ್ತಿ ಹೇಳಿದರು. ಪಿಎಂ ಮೋದಿ ಅವರು ತಮ್ಮ ಸರ್ಕಾರದ ಮಹತ್ವದ ಸಾಧನೆಗಳನ್ನು ಎತ್ತಿ ತೋರಿಸುತ್ತಾ ಪ್ರತಿಪಕ್ಷಗಳ ವೈಫಲ್ಯಗಳನ್ನು ವಿಶೇಷವಾಗಿ ಇಂಡಿ ಮೈತ್ರಿಕೂಟವನ್ನು ಬಹಿರಂಗಪಡಿಸಿದರು.ಭಾರತದ ಮೈತ್ರಿ ದೇಶವನ್ನು ವಿಭಜಿಸಬಹುದು ಆದರೆ ದೇಶವನ್ನು ಮುಂದೆ ಕೊಂಡೊಯ್ಯಲು ಸಾಧ್ಯವಿಲ್ಲ: ಬಿಹಾರದ ಮಹಾರಾಜ್‌ಗಂಜ್‌ನಲ್ಲಿ ಪ್ರಧಾನಿ ಮೋದಿ
May 21st, 11:20 am
ಬಿಹಾರದ ಮಹಾರಾಜ್‌ಗಂಜ್‌ನಲ್ಲಿ ತಮ್ಮ ಎರಡನೇ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು ಮತ್ತು ಅಭಿವೃದ್ಧಿ ಹೊಂದಿದ ಬಿಹಾರ ಮತ್ತು ಸಮೃದ್ಧ ಭಾರತಕ್ಕಾಗಿ ತಮ್ಮ ದೃಷ್ಟಿಕೋನವನ್ನು ವಿವರಿಸಿದರು. ಜೂನ್ 4 ಸಮೀಪಿಸುತ್ತಿದ್ದಂತೆ ಪ್ರತಿಪಕ್ಷಗಳಿಂದ ಹೆಚ್ಚುತ್ತಿರುವ ಟೀಕೆಗಳನ್ನು ಎತ್ತಿ ತೋರಿಸಿರುವ ಪ್ರಧಾನಿ ಮೋದಿ, ಈ ದೇಶದ ಜನರು ಮುಂದಿನ ಐದು ವರ್ಷಗಳ ಕಾಲ ಮೋದಿಯನ್ನು ಮತ್ತೆ ಆಯ್ಕೆ ಮಾಡಲಿದ್ದಾರೆ ಎಂಬುದನ್ನು ಭಾರತ ಮೈತ್ರಿ ಸಹಿಸುವುದಿಲ್ಲ ಎಂದು ಹೇಳಿದರು.ಬಿಹಾರದ ಚಂಪಾರಣ್ ಮತ್ತು ಮಹಾರಾಜ್‌ಗಂಜ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ
May 21st, 11:00 am
ಪ್ರಧಾನಿ ಮೋದಿಯವರು ಬಿಹಾರದ ಚಂಪಾರಣ್ ಮತ್ತು ಮಹಾರಾಜ್‌ಗಂಜ್‌ನಲ್ಲಿ ಉತ್ಸಾಹಭರಿತ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಾ, ತಮ್ಮ ನಾಯಕತ್ವದಲ್ಲಿ ಭಾರತ ಕೈಗೊಂಡಿರುವ ಪರಿವರ್ತಕ ಪ್ರಯಾಣ ಮತ್ತು ಈ ವೇಗವನ್ನು ಮುಂದುವರೆಸುವ ತುರ್ತು ಅಗತ್ಯವನ್ನು ಒತ್ತಿ ಹೇಳಿದರು. ಪಿಎಂ ಮೋದಿ ಅವರು ತಮ್ಮ ಸರ್ಕಾರದ ಮಹತ್ವದ ಸಾಧನೆಗಳನ್ನು ಎತ್ತಿ ತೋರಿಸುತ್ತಾ ಪ್ರತಿಪಕ್ಷಗಳ ವೈಫಲ್ಯಗಳನ್ನು ವಿಶೇಷವಾಗಿ ಇಂಡಿ ಮೈತ್ರಿಕೂಟವನ್ನು ಬಹಿರಂಗಪಡಿಸಿದರು.