ಕೊರೊನಾ ವಿರುದ್ಧದ ಹೋರಾಟದಲ್ಲಿ 130 ಕೋಟಿ ದೇಶವಾಸಿಗಳು ತೋರಿದ ಸಂಕಲ್ಪ ನವ ಭಾರತದ ಶಕ್ತಿಯ ಸಂಕೇತವಾಗಿದೆ: ಪ್ರಧಾನಮಂತ್ರಿ
April 12th, 01:23 pm
ವಿಶ್ವದ ಅತಿದೊಡ್ಡ ಉಚಿತ ಲಸಿಕೆ ಅಥವಾ ವೈದ್ಯಕೀಯ ಮೂಲಸೌಕರ್ಯಗಳ ಅಭಿವೃದ್ಧಿಯಾಗಿರಲಿ ಆರೋಗ್ಯ ಕ್ಷೇತ್ರದಲ್ಲಿ ಭಾರತವು ಜಾಗತಿಕವಾಗಿ ಹೊಸ ಮಾನದಂಡವನ್ನು ಸ್ಥಾಪಿಸುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಮಹಾಮಾರಿ ಕೊರೊನಾ ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ 130 ಕೋಟಿ ದೇಶವಾಸಿಗಳು ತೋರಿದ ಸಂಕಲ್ಪ ನವ ಭಾರತದ ಶಕ್ತಿಯ ಸೂಚನೆಯಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.Today our focus is not only on health, but equally on wellness: PM Modi
February 26th, 02:08 pm
PM Narendra Modi inaugurated the post Union Budget webinar of Ministry of Health and Family Welfare. The Prime Minister said, The Budget builds upon the efforts to reform and transform the healthcare sector that have been undertaken during the last seven years. We have adopted a holistic approach in our healthcare system. Today our focus is not only on health, but equally on wellness.”ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಬಜೆಟ್ ನಂತರದ ವೆಬಿನಾರ್ ಉದ್ಘಾಟಿಸಿದ ಪ್ರಧಾನಿ
February 26th, 09:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕೇಂದ್ರ ಬಜೆಟ್ ನಂತರದ ವೆಬಿನಾರ್ ಅನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಉದ್ದೇಶಿಸಿ ಮಾತನಾಡಿದ ಬಜೆಟ್ ನಂತರದ ವೆಬಿನಾರ್ಗಳ ಸರಣಿಯಲ್ಲಿ ಇದು ಐದನೇ ವೆಬಿನಾರ್ ಆಗಿದೆ. ಕೇಂದ್ರ ಸಚಿವರು, ಸಾರ್ವಜನಿಕ ಮತ್ತು ಖಾಸಗಿ ವಲಯಗಳ ಆರೋಗ್ಯ ವೃತ್ತಿಪರರು ಮತ್ತು ಅರೆ ವೈದ್ಯಕೀಯ, ನರ್ಸಿಂಗ್, ಆರೋಗ್ಯ ನಿರ್ವಹಣೆ, ತಂತ್ರಜ್ಞಾನ ಮತ್ತು ಸಂಶೋಧನೆಯ ವೃತ್ತಿಪರರು ಈ ಸಂದರ್ಭದಲ್ಲಿ ಹಾಜರಿದ್ದರು.ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆ (ಸಿಎನ್ ಸಿಐ)ನ ಎರಡನೇ ಕ್ಯಾಂಪಸ್ ಉದ್ಘಾಟಿಸಿ ಪ್ರಧಾನಮಂತ್ರಿ ಅವರ ಭಾಷಣ
January 07th, 01:01 pm
ನಮಸ್ಕಾರ, ಪಶ್ಚಿಮ ಬಂಗಾಳದ ಗೌರವಾನ್ವಿತ ಮುಖ್ಯಮಂತ್ರಿ ಕುಮಾರಿ ಮಮತಾ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾಗಿರುವ ಮನ್ಸುಖ್ ಮಾಂಡವಿಯಾ ಜಿ, ಸುಭಾಸ್ ಸರ್ಕಾರ್ ಜಿ. ಶಾಂತನು ಠಾಕೂರ್ ಜಿ, ಜಾನ್ ಬಾರ್ಲಾ ಜಿ ಮತ್ತು ನಿಸಿತ್ ಪ್ರಮಾಣಿಕ್ ಜಿ, ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಜಿ. ಸಿ.ಎನ್.ಐ.ಸಿ ಕೋಲ್ಕತ್ತಾದ ಆಡಳಿತ ಮಂಡಳಿ, ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲಾ ಪರಿಶ್ರಮಪಡುವ ಮಿತ್ರರೇ, ಇತರ ಗಣ್ಯರು, ಮಹಿಳೆಯರು ಮತ್ತು ಮಹನೀಯರೇ….!ಕೋಲ್ಕತ್ತಾದ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
January 07th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕೋಲ್ಕತ್ತಾದ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಎರಡನೇ ಕ್ಯಾಂಪಸ್ ಅನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕುಮಾರಿ ಮಮತಾ ಬ್ಯಾನರ್ಜಿ ಮತ್ತು ಕೇಂದ್ರ ಸಚಿವರಾದ ಡಾ. ಮನ್ಸುಖ್ ಮಾಂಡವಿಯಾ, ಡಾ. ಸುಭಾಷ್ ಸರ್ಕಾರ್, ಶ್ರೀ ಶಂತನು ಠಾಕೂರ್, ಶ್ರೀ ಜಾನ್ ಬಾರ್ಲಾ ಮತ್ತು ಶ್ರೀ ನಿಸಿತ್ ಪ್ರಮಾಣಿಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ದೇಶದಾದ್ಯಂತ ಕೋವಿಡ್-19, ಓಮೈಕ್ರಾನ್ ಸ್ಥಿತಿ ಮತ್ತು ಆರೋಗ್ಯ ವ್ಯವಸ್ಥೆಗಳ ಸನ್ನದ್ಧತೆಯನ್ನು ಪರಾಮರ್ಶಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
December 23rd, 10:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋವಿಡ್-19 ಮತ್ತು ಒಮೈಕ್ರಾನ್ ಸ್ಥಿತಿ ಗತಿ, ಹೊಸ ರೂಪಾಂತರಿ (ವಿ.ಓ.ಸಿ.)ಮತ್ತು ಅದರ ಸಮಸ್ಯೆ, ಕೋವಿಡ್ -19 ನಿಯಂತ್ರಣ ಮತ್ತು ನಿರ್ವಹಣೆಗಾಗಿ ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆ ಕ್ರಮಗಳು, ಔಷಧಗಳ ಲಭ್ಯತೆ ಸೇರಿದಂತೆ ಆರೋಗ್ಯ ಮೂಲಸೌಕರ್ಯಗಳ ಬಲವರ್ಧನೆ, ಆಮ್ಲಜನಕ ಸಿಲಿಂಡರ್ ಗಳು ಮತ್ತು ಸಾಂದ್ರಕಗಳು, ವೆಂಟಿಲೇಟರ್ ಗಳು, ಪಿ.ಎಸ್.ಎ. ಘಟಕಗಳು, ಐ.ಸಿ.ಯು/ಆಮ್ಲಜನಕ ಸೌಲಭ್ಯದ ಹಾಸಿಗೆಗಳು, ಮಾನವ ಸಂಪನ್ಮೂಲಗಳು, ಐಟಿ ಮಧ್ಯಸ್ಥಿಕೆಗಳು ಮತ್ತು ಲಸಿಕೆ ಸ್ಥಿತಿಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.Double Engine Government of Uttar Pradesh is the result of decades of hard work of many Karma Yogis: PM
October 25th, 01:33 pm
Prime Minister Narendra Modi launched PM Ayushman Bharat Health Infrastructure Mission. Addressing a gathering he said, Those whose governments remained in the country for a long time, instead of the all-around development of the country's healthcare system, kept it deprived of facilities.ಪಿಎಂ ಆಯುಷ್ಮಾನ್ ಭಾರತ ಆರೋಗ್ಯ ಮೂಲಸೌಕರ್ಯ ಮಿಷನ್ ಗೆ ಪ್ರಧಾನಮಂತ್ರಿ ಚಾಲನೆ
October 25th, 01:30 pm
ಪಿಎಂ ಆಯುಷ್ಮಾನ್ ಭಾರತ್ ಮೂಲಸೌಕರ್ಯ ಯೋಜನೆಯ ಗುರಿ ಈ ಕೊರತೆಗಳನ್ನು ನೀಗಿಸುವುದಾಗಿದೆ ಎಂದು ಪ್ರಧಾನ ಮಂತ್ರಿ ಹೇಳಿದರು. ಮುಂದಿನ ನಾಲ್ಕೈದು ವರ್ಷಗಳಲ್ಲಿ ಗ್ರಾಮದಿಂದ ಬ್ಲಾಕ್ ಮಟ್ಟದವರೆಗೆ, ಬ್ಲಾಕ್ ಮಟ್ಟದಿಂದ ಜಿಲ್ಲಾಮಟ್ಟ ಹಾಗೂ ಪ್ರಾದೇಶಿಕ ಮಟ್ಟದಿಂದ ರಾಷ್ಟ್ರಮಟ್ಟದವರೆಗೆ ನಿರ್ಣಾಯಕ ಆರೋಗ್ಯ ರಕ್ಷಣಾ ಜಾಲವನ್ನು ಬಲವರ್ಧನೆಗೊಳಿಸುವ ಗುರಿ ಇದೆ. ಹೊಸ ಮಿಷನ್ ಅಡಿ ಸರ್ಕಾರ ಕೈಗೊಂಡಿರುವ ಉಪಕ್ರಮಗಳನ್ನು ವಿವರಿಸಿದ ಪ್ರಧಾನ ಮಂತ್ರಿ ಅವರು ದೇಶದ ಆರೋಗ್ಯ ವಲಯದಲ್ಲಿನ ನಾನಾ ಅಂತರಗಳನ್ನು ತುಂಬಲು ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಅಡಿ ಮೂರು ಪ್ರಮುಖ ಅಂಶಗಳಿಗೆ ಗಮನ ನೀಡಲಾಗಿದೆ ಎಂದರು. ಮೊದಲನೆಯದಾಗಿ ರೋಗ ಪತ್ತೆ (ಡಯಾಗ್ನೋಸ್ಟಿಕ್) ಮತ್ತು ಚಿಕಿತ್ಸೆಗೆ ವ್ಯಾಪಕ ಸೌಕರ್ಯಗಳನ್ನು ಸೃಷ್ಟಿಸುವುದಾಗಿದೆ. ಇದರಡಿ ನಗರ ಮತ್ತು ಗ್ರಾಮಗಳಲ್ಲಿ ಆರೋಗ್ಯ ಮತ್ತು ಯೋಗಕ್ಷೇಮ ಕೇಂದ್ರಗಳನ್ನು ಆರಂಭಿಸಲಾಗುವುದು. ಅದರಲ್ಲಿ ರೋಗಗಳನ್ನು ಮುಂಚಿತವಾಗಿಯೇ ಪತ್ತೆ ಹಚ್ಚುವಂತಹ ಸೌಕರ್ಯಗಳನ್ನು ಒದಗಿಸಲಾಗುವುದು. ಅಲ್ಲದೆ ಉಚಿತ ವೈದ್ಯಕೀಯ ಸಮಾಲೋಚನೆ, ಉಚಿತ ಪರೀಕ್ಷೆ, ಉಚಿತ ಔಷಧಗಳು ಈ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ಗಂಭೀರ ಕಾಯಿಲೆಗಳಿಗೆ 35 ಸಾವಿರ ಹೊಸ ಗಂಭೀರ ಆರೈಕೆ ಸಂಬಂಧಿ ಹಾಸಿಗೆಗಳನ್ನು 125 ಜಿಲ್ಲೆಗಳಲ್ಲಿನ 600 ಜಿಲ್ಲಾ ಮತ್ತು ರೆಫರೆಲ್ ಆಸ್ಪತ್ರೆಗಳಲ್ಲಿ ಸೃಷ್ಟಿಸಲಾಗುವುದು.ಎಚ್ಸಿಡಬ್ಲ್ಯೂಎಸ್ ಮತ್ತು ಗೋವಾದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳ ಜೊತೆಗಿನ ಸಂವಾದದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
September 18th, 10:31 am
ಗೋವಾದ ಶಕ್ತಿಯುತ ಮತ್ತು ಜನಪ್ರಿಯ ಮುಖ್ಯಮಂತ್ರಿಯವರಾಧ ಶ್ರೀ ಪ್ರಮೋದ್ ಸಾವಂತ್ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ಗೋವಾದ ಪುತ್ರ ಶ್ರೀಪಾದ್ ನಾಯಕ್ ಜೀ, ಕೇಂದ್ರ ಸರ್ಕಾರದ ಮಂತ್ರಿಗಳ ಮಂಡಳಿಯಲ್ಲಿ ನನ್ನ ಸಹೋದ್ಯೋಗಿಯಾದ ಡಾ. ಭಾರತಿ ಪ್ರವೀಣ್ ಪವಾರ್ ಜೀ, ಗೋವಾದ ಎಲ್ಲಾ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಇತರ ಸಾರ್ವಜನಿಕ ಪ್ರತಿನಿಧಿಗಳು, ಎಲ್ಲಾ ಕೊರೊನಾ ಯೋಧರು ಮತ್ತು ಸಹೋದರ ಸಹೋದರಿಯರೆ !ಗೋವಾದಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ
September 18th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ರಾಜ್ಯದ ಎಲ್ಲಾ ಅರ್ಹ ವಯಸ್ಕ ಜನತೆಗೆ ಮೊದಲ ಡೋಸ್ ಲಸಿಕೆ ನೀಡಿಕೆಯನ್ನು ಶೇ.100ರಷ್ಟು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಸಂವಾದ ಏರ್ಪಡಿಸಲಾಗಿತ್ತು.ಹೊರರಾಷ್ಟ್ರಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳ ಮುಖ್ಯಸ್ಥರು, ವ್ಯಾಪಾರ ಮತ್ತು ವಾಣಿಜ್ಯ ವಲಯದ ಪಾಲುದಾರರ ಜತೆಗಿನ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 06th, 06:31 pm
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉದ್ಯಮ ಜಗತ್ತಿನ ಇಂದಿನ ಅಗತ್ಯಗಳನ್ನು ಅರ್ಥ ಮಾಡಿಕೊಂಡು, ದೇಶದ ಉದ್ಯಮಗಳಿಗೆ ನೆರವಾಗುತ್ತಾ ಬಂದಿವೆ. ಉತ್ಪನ್ನಗಳ ಮಾರಾಟಕ್ಕೆ ಸಹಕರಿಸುತ್ತಿವೆ. ಆತ್ಮ ನಿರ್ಭರ್ ಭಾರತ ಆಂದೋಲನದ ಅಡಿ, ದೇಶದ ಆರ್ಥಿಕ ಚಟುವಟಿಕೆಗಳು ಸುಗಮವಾಗಿ ನಡೆಯುವಂತೆ ಮಾಡಲು ಹಲವು ವಿನಾಯಿತಿಗಳನ್ನು ನೀಡಿವೆ, ಅನುಸರಣಾ ವಿಧಿವಿಧಾನಗಳನ್ನು ಸರಳೀಕರಿಸಿವೆ. ದೇಶದ ಎಂಎಸ್ಎಂಇ ಮತ್ತು ಇತರೆ ಅಸ್ವಸ್ಥ ಕೈಗಾರಿಕಾ ವಲಯಗಳಿಗೆ 3 ಲಕ್ಷ ಕೋಟಿ ರೂಪಾಯಿ ಮೊತ್ತದ ತುರ್ತು ಸಾಲ ಖಾತ್ರಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಉದ್ಯಮಗಳ ಚೇತರಿಕೆ ಮತ್ತು ಬೆಳವಣಿಗೆ ಉತ್ತೇಜಿಸಲು ಇತ್ತೀಚೆಗೆ ಹೆಚ್ಚುವರಿಯಾಗಿ 1.5 ಲಕ್ಷ ಕೋಟಿ ರೂಪಾಯಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ.ವಿದೇಶದಲ್ಲಿರುವ ಭಾರತೀಯ ರಾಯಭಾರಿ ಕಚೇರಿಗಳ ಮುಖ್ಯಸ್ಥರು ಮತ್ತು ವ್ಯಾಪಾರ ಹಾಗೂ ವಾಣಿಜ್ಯ ವಲಯದ ಪಾಲುದಾರರೊಂದಿಗೆ ಪ್ರಧಾನಮಂತ್ರಿ ಸಂವಾದ
August 06th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿ ವಿದೇಶಗಳಲ್ಲಿನ ಭಾರತೀಯ ರಾಯಭಾರ ಕಚೇರಿಯ ಮುಖ್ಯಸ್ಥರು ಮತ್ತು ವ್ಯಾಪಾರ ಹಾಗೂ ವಾಣಿಜ್ಯ ವಲಯದ ಪಾಲುದಾರರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಕೇಂದ್ರ ವಾಣಿಜ್ಯ ಸಚಿವರು ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರು ಸಂವಾದದ ವೇಳೆ ಭಾಗವಹಿಸಿದ್ದರು. ಅಲ್ಲದೆ 22ಕ್ಕೂ ಅಧಿಕ ಇಲಾಖೆಗಳ ಕಾರ್ಯದರ್ಶಿಗಳು, ರಾಜ್ಯ ಸರ್ಕಾರಗಳ ಅಧಿಕಾರಿಗಳು, ರಫ್ತು ಉತ್ತೇಜನಾ ಮಂಡಳಿ ಮತ್ತು ವಾಣಿಜ್ಯ ಒಕ್ಕೂಟಗಳ ಸದಸ್ಯರು ಸಂವಾದಕ್ಕೆ ಸಾಕ್ಷಿಯಾದರು.ಬಡವರ ಸಬಲೀಕರಣಕ್ಕೆ ಇಂದು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ: ಪ್ರಧಾನಿ ಮೋದಿ
August 03rd, 12:31 pm
ಗುಜರಾತ್‌ನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಈ ಯೋಜನೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ರಾಜ್ಯದಲ್ಲಿ ಸಾರ್ವಜನಿಕ ಭಾಗವಹಿಸುವಿಕೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಗುಜರಾತಿನಲ್ಲಿ ಲಕ್ಷಾಂತರ ಕುಟುಂಬಗಳು ಉಚಿತ ಪಡಿತರ ಪಡೆಯುತ್ತಿವೆ ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಧಾನಿ ಹೇಳಿದರು. ಈ ಉಚಿತ ಪಡಿತರವು ಬಡವರಿಗೆ ಸಂಕಷ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಅವರಿಗೆ ಆತ್ಮವಿಶ್ವಾಸವನ್ನು ನೀಡುತ್ತದೆ.ಗುಜರಾತ್‌ನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
August 03rd, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಯೋಜನೆಯ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸುವ ರಾಜ್ಯದ ಸಾರ್ವಜನಿಕರ ಭಾಗಿ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಯಿತು.ಕೊರೋನ ಅವಧಿಯು ಕೌಶಲ್ಯ, ಮರು ಕೌಶಲ್ಯ ಮತ್ತು ಕೌಶಲ್ಯದ ಮಹತ್ವವನ್ನು ಸಾಬೀತುಪಡಿಸಿದೆ: ಪ್ರಧಾನಿ
June 18th, 09:45 am
ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಕೋವಿಡ್ 19 ಮುಂಚೂಣಿ ಕಾರ್ಯಕರ್ತರ ಸಮಗ್ರ ತರಬೇತಿ ಕಾರ್ಯಕ್ರಮವನ್ನು’ ಇಂದು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ, ನಾವು ದೇಶದಲ್ಲಿ 1 ಲಕ್ಷ ಮುಂಚೂಣಿ ಕಾರ್ಮಿಕರನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಪ್ರಾರಂಭದೊಂದಿಗೆ, ಇದು 26 ರಾಜ್ಯಗಳಲ್ಲಿ ವ್ಯಾಪಿಸಿರುವ 111 ತರಬೇತಿ ಕೇಂದ್ರಗಳಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ.ಕೋವಿಡ್-19 ಮುಂಚೂಣಿ ಕಾರ್ಯಕರ್ತರಿಗಾಗಿ “ವೈಯಕ್ತೀಕರಿಸಿದ ಕ್ರಾಶ್ ಕೋರ್ಸ್ʼʼ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಧಾನಿ
June 18th, 09:43 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಕೋವಿಡ್-19 ಮುಂಚೂಣಿ ಕಾರ್ಮಿಕರಿಗಾಗಿ `ವೈಯಕ್ತೀಕರಿಸಿದ ಕ್ರ್ಯಾಶ್ ಕೋರ್ಸ್’ ಕಾರ್ಯಕ್ರಮಕ್ಕೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಈ ತರಬೇತಿ ಕಾರ್ಯಕ್ರಮವನ್ನು 26 ರಾಜ್ಯಗಳಲ್ಲಿರುವ 111 ತರಬೇತಿ ಕೇಂದ್ರಗಳಲ್ಲಿ ನಡೆಸಲಾಗುವುದು. ಈ ಉಪಕ್ರಮದಲ್ಲಿ ಸುಮಾರು ಒಂದು ಲಕ್ಷ ಮುಂಚೂಣಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗುವುದು. ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ. ಮಹೇಂದ್ರ ನಾಥ್ ಪಾಂಡೆ ಸೇರಿದಂತೆ ಅನೇಕ ಕೇಂದ್ರ ಸಚಿವರು, ರಾಜ್ಯಗಳ ಸಚಿವರು, ತಜ್ಞರು ಮತ್ತು ಇತರ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.ಜೂನ್ 18ರಂದು ಕೋವಿಡ್-19 ಮುಂಚೂಣಿ ಕಾರ್ಯಕರ್ತರ ಸಮಗ್ರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ
June 16th, 02:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಜೂನ್ 18ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ‘ಕೋವಿಡ್-19 ಮುಂಚೂಣಿ ಕಾರ್ಯಕರ್ತರಿಗೆ ಸಮಗ್ರ ತರಬೇತಿ ಕಾರ್ಯಕ್ರಮ’ಕ್ಕೆ ಚಾಲನೆ ನೀಡಲಿದ್ದಾರೆ. 26 ರಾಜ್ಯಗಳಲ್ಲಿನ 111 ತರಬೇತಿ ಕೇಂದ್ರಗಳಲ್ಲಿ ಈ ತರಬೇತಿ ಕಾರ್ಯಕ್ರಮ ಆರಂಭವಾಗಲಿದೆ. ತರಬೇತಿಗೆ ಚಾಲನೆ ನೀಡಿದ ನಂತರ ಪ್ರಧಾನಮಂತ್ರಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲ ಖಾತೆ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.