PM Modi meets with the Prime Minister of Barbados
November 21st, 09:13 am
PM Modi met Barbados PM Mia Amor Mottley during the India-CARICOM Summit, discussing cooperation in health, pharma, climate action, and cultural ties. They reviewed bilateral relations, global institutional reforms, and India’s leadership in the Global South.ಪ್ರಧಾನಮಂತ್ರಿ ಅವರಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
November 21st, 05:39 am
ಡೊಮಿನಿಕಾಗೆ ಕೋವಿಡ್ 19 ಸಾಂಕ್ರಾಮಿಕ ಸಮಯದಲ್ಲಿ ನೀಡಿದ ಬೆಂಬಲ ಹಾಗೂ ಭಾರತ ಮತ್ತು ಡೊಮಿನಿಕಾ ಬಾಂಧವ್ಯವನ್ನು ಬಲಪಡಿಸುವ ಬದ್ಧತೆಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕಾಮನ್ವೆಲ್ತ್ ಆಫ್ ಡೊಮಿನಿಕಾದ ಅಧ್ಯಕ್ಷರಾದ ಗೌರವಾನ್ವಿತ ಸಿಲ್ವಾನಿ ಬರ್ಟನ್ ಅವರು ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಡೊಮಿನಿಕಾ ಅವಾರ್ಡ್ ಆಫ್ ಆನರ್ (ಗೌರವ ಪ್ರಶಸ್ತಿ) ಯನ್ನು ನೀಡಿ ಗೌರವಿಸಿದರು. ಡೊಮಿನಿಕಾದ ಪ್ರಧಾನಿ ಶ್ರೀ.ರೂಸ್ವೆಲ್ಟ್ ಸ್ಕೆರಿಟ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗಯಾನಾ ಅಧ್ಯಕ್ಷ ಡಾ. ಇರ್ಫಾನ್ ಅಲಿ, ಬಾರ್ಬಡೋಸ್ ಪ್ರಧಾನಿ ಮಿಯಾ ಅಮೋರ್ ಮೊಟ್ಲಿ, ಗ್ರೆನಡಾದ ಪ್ರಧಾನಿ ಶ್ರೀ ಡಿಕಾನ್ ಮಿಚೆಲ್, ಸೇಂಟ್ ಲೂಸಿಯಾ ಪ್ರಧಾನಿ ಫಿಲಿಪ್ ಜೆ. ಪೈರ್ರೆ ಹಾಗೂ ಆಂಟಿಗುವಾ ಮತ್ತು ಬಾರ್ಬುಡಾದ ಪ್ರಧಾನಿ ಶ್ರೀ ಗ್ಯಾಸ್ಟನ್ ಬ್ರೌನೆ ಅವರು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಾಕ್ಷಿಯಾದರು.Be it COVID, disasters, or development, India has stood by you as a reliable partner: PM in Guyana
November 21st, 02:15 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ
November 21st, 02:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್‌ಟೌನ್ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.