ಅಮೆರಿಕದ ನ್ಯೂಯಾರ್ಕ್‌ನಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
September 22nd, 10:00 pm
ನಮಸ್ತೆ ಯು.ಎಸ್.! ಈಗ ನಮ್ಮ ನಮಸ್ತೆ” ಕೂಡ ಬಹುರಾಷ್ಟ್ರೀಯವಾಗಿ ಮಾರ್ಪಟ್ಟಿದ್ದು, ಸ್ಥಳೀಯತೆಯಿಂದ ಜಾಗತಿಕವಾಗಿ ಪರಿವರ್ತನೆಯಾಗಿದೆ ಹಾಗೂ ಇದಕ್ಕೆಲ್ಲ ನೀವೇ ಕಾರಣೀಭೂತರು. ಭಾರತವನ್ನು ತಮ್ಮ ಹೃದಯಕ್ಕೆ ಸಮೀಪವಾಗಿಟ್ಟುಕೊಂಡಿರುವ ಪ್ರತಿಯೊಬ್ಬ ಭಾರತೀಯರೂ ಇದನ್ನು ಸಾಧ್ಯವಾಗಿಸಿದ್ದಾರೆ.ನ್ಯೂಯಾರ್ಕ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 22nd, 09:30 pm
ಪ್ರಧಾನಮಂತ್ರಿ ಅವರನ್ನು ಭಾರತೀಯ ಸಮುದಾಯವು ಅತ್ಯಂತ ಪ್ರೀತಿ, ಗೌರವ, ಆದರ, ಉತ್ಸಾಹದಿಂದ ಬರಮಾಡಿಕೊಂಡಿತು. ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಗಳು, ಜಗತ್ತಿನ ಎರಡು ಮಹಾನ್ ಪ್ರಜಾಪ್ರಭುತ್ವಗಳ ರಾಷ್ಟ್ರಗಳ ನಡುವೆ ಬಾಂಧವ್ಯವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುವ ಭಾರತೀಯ ಅಮೆರಿಕನ್ ಸಮುದಾಯದಿಂದ ಭಾರತ-ಯುಎಸ್ ಸಂಬಂಧವು ಇನ್ನಷ್ಟು ಸದೃಢವಾಗಿರುವುದು ಕಾಣುತ್ತಿದೆ. ಹಿಂದಿನ ದಿನ ಡೆಲವೇರ್‌ನಲ್ಲಿರುವ ನಿವಾಸದಲ್ಲಿ ಅಮೆರಿಕ ಅಧ್ಯಕ್ಷ ಬಿಡೆನ್ ಅವರೊಂದಿಗಿನ ಭೇಟಿ ಬಗ್ಗೆಯೂ ಪ್ರಧಾನ ಮಂತ್ರಿಗಳು ಪ್ರಸ್ತಾಪಿಸಿದರು. ಈ ವಿಶೇಷ ಸಂದರ್ಭವು ಭಾರತೀಯ ಸಮುದಾಯವು ಸಂಯುಕ್ತ ರಾಷ್ಟ್ರಗಳೊಂದಿಗಿನ ನಂಬಿಕೆ- ವಿಶ್ವಾಸಾರ್ಹತೆಯನ್ನು ಪ್ರತಿಬಿಂಬಿಸುತ್ತಿದೆ ಎಂದು ಶ್ಲಾಘಿಸಿದರು.ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಮೈಕ್ರಾನ್ ಟೆಕ್ನಾಲಜಿಯ ಅಧ್ಯಕ್ಷ ಮತ್ತು ಸಿಇಒ ಸಂಜಯ್ ಮೆಹ್ರೋತ್ರಾ
July 28th, 06:07 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್‌ನ ಗಾಂಧಿನಗರದಲ್ಲಿ ಮೈಕ್ರಾನ್ ಟೆಕ್ನಾಲಜಿಯ ಅಧ್ಯಕ್ಷ ಮತ್ತು ಸಿಇಒ ಸಂಜಯ್ ಮೆಹ್ರೋತ್ರಾ ಅವರನ್ನು ಭೇಟಿ ಮಾಡಿದರು. ಭಾರತದಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಪರಿಸರ ವ್ಯವಸ್ಥೆಯನ್ನು ಹೆಚ್ಚಿಸಲು ಮೈಕ್ರಾನ್ ಟೆಕ್ನಾಲಜಿಯ ಯೋಜನೆಗಳ ಕುರಿತು ಚರ್ಚಿಸಿದರು.ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವ ಸಂಭ್ರಮಾಚರಣೆಯ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
June 30th, 11:20 am
ದೆಹಲಿ ವಿಶ್ವವಿದ್ಯಾಲಯದ ಈ ಸುವರ್ಣ ಸಮಾರಂಭದಲ್ಲಿ ಉಪಸ್ಥಿತರಿರುವ ನನ್ನ ಸಂಪುಟ ಸಹೋದ್ಯೋಗಿ, ಶಿಕ್ಷಣ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಜಿ, ದೆಹಲಿ ವಿಶ್ವವಿದ್ಯಾಲಯದ ಕುಲಪತಿ ಶ್ರೀ ಯೋಗೇಶ್ ಸಿಂಗ್ ಜಿ, ಎಲ್ಲಾ ಪ್ರಾಧ್ಯಾಪಕರು, ಶಿಕ್ಷಕರು ಮತ್ತು ನನ್ನ ಎಲ್ಲಾ ಯುವ ಸ್ನೇಹಿತರೆ... ನೀವು ನನಗೆ ಈ ಆಹ್ವಾನ ನೀಡಿದಾಗ, ನಾನು ಇಲ್ಲಿಗೆ ಬರಬೇಕು ಎಂದು ಅದಕ್ಕೂ ಮೊದಲೇ ನಿರ್ಧರಿಸಿದ್ದೆ. ಇಲ್ಲಿಗೆ ಬರುವುದೆಂದರೆ ಪ್ರೀತಿ-ಪಾತ್ರರನ್ನು ಭೇಟಿಯಾಗಲು ಬಂದಂತೆ ಭಾಸವಾಗುತ್ತದೆ.ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 30th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ದೆಹಲಿ ವಿಶ್ವವಿದ್ಯಾಲಯದ ಕ್ರೀಡಾ ಸಂಕೀರ್ಣದ ವಿವಿಧೋದ್ದೇಶ ಸಭಾಂಗಣದಲ್ಲಿ ನಡೆದ ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭ ಉದ್ದೇಶಿಸಿ ಭಾಷಣ ಮಾಡಿದರು. ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್‌ನಲ್ಲಿ ನಿರ್ಮಾಣವಾಗಲಿರುವ ತಂತ್ರಜ್ಞಾನ ವಿಭಾಗ, ಕಂಪ್ಯೂಟರ್ ಕೇಂದ್ರ ಮತ್ತು ಅಕಾಡೆಮಿಕ್ ಬ್ಲಾಕ್ ಕಟ್ಟಡಕ್ಕೂ ಅವರು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಶತಮಾನೋತ್ಸವ ಆಚರಣೆಗಳ ಸಂಕಲನವಾದ ಶತಮಾನೋತ್ಸವ ಸಂಪುಟವನ್ನು ಬಿಡುಗಡೆ ಮಾಡಿದರು. ಜೊತೆಗೆ, ʻದೆಹಲಿ ವಿಶ್ವವಿದ್ಯಾಲಯ ಮತ್ತು ಅದರ ಕಾಲೇಜುಗಳ ಲೋಗೋ ಪುಸ್ತಕ; ಹಾಗೂ ಹೌರಾ - ದೆಹಲಿ ವಿಶ್ವವಿದ್ಯಾಲಯದ 100 ವರ್ಷಗಳುʼ ಪುಸ್ತಕವನ್ನೂ ಲೋಕಾರ್ಪಣೆ ಮಾಡಿದರು.