
ಬಿಮ್‌ಸ್ಟೆಕ್ ಶೃಂಗಸಭೆಯ ನೇಪಥ್ಯದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಸೀನಿಯರ್ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರೊಂದಿಗೆ ಪ್ರಧಾನಮಂತ್ರಿ ಸಭೆ
April 04th, 09:43 am
ಬ್ಯಾಂಕಾಕ್‌ನಲ್ಲಿ ನಡೆದ ಬಿಮ್‌ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಮ್ಯಾನ್ಮಾರ್ ಪ್ರಧಾನಿ ಸೀನಿಯರ್ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಮ್ಯಾನ್ಮಾರ್ ಭೂಕಂಪದ ಹಿನ್ನೆಲೆಯಲ್ಲಿ ಹಿರಿಯ ಸೇನಾ ಮುಖ್ಯಸ್ಥರಾದ ಮಿನ್ ಆಂಗ್ ಹ್ಲೈಂಗ್ ಅವರೊಂದಿಗೆ ಪ್ರಧಾನಮಂತ್ರಿ ಮಾತುಕತೆ
March 29th, 01:41 pm
ಮ್ಯಾನ್ಮಾರ್‌ನಲ್ಲಿ ಭೂಕಂಪದ ದುರಂತ ಸನ್ನಿವೇಶದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೇನಾ ಮುಖ್ಯಸ್ಥರಾದ ಮಿನ್ ಆಂಗ್ ಹ್ಲೈಂಗ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸವಾಲಿನ ಸಮಯದಲ್ಲಿ ಮ್ಯಾನ್ಮಾರ್‌ನೊಂದಿಗೆ ಒಗ್ಗಟ್ಟಿನಿಂದ ನಿಲ್ಲಲು ಆಪ್ತ ಸ್ನೇಹಿತ ಮತ್ತು ನೆರೆಹೊರೆಯ ದೇಶವಾದ ಭಾರತದ ದೃಢವಾದ ಬದ್ಧತೆಯನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು. ಈ ವಿಪತ್ತಿಗೆ ಪ್ರತಿಕ್ರಿಯೆಯಾಗಿ, ಭಾರತ ಸರ್ಕಾರವು ಆಪರೇಷನ್ ಬ್ರಹ್ಮ ಪ್ರಾರಂಭಿಸಿದೆ, ಇದು ವಿಕೋಪದಿಂದ ಬಾಧಿತವಾಗಿರುವ ಪ್ರದೇಶಗಳಿಗೆ ತಕ್ಷಣದ ಪರಿಹಾರ ಮತ್ತು ಸಹಾಯವನ್ನು ಒದಗಿಸುವ ಉಪಕ್ರಮವಾಗಿದೆ.