ಎರಡು ವರ್ಷಗಳ ಅವಧಿಯಲ್ಲಿ 10,900 ಕೋಟಿ ರೂಪಾಯಿ ವೆಚ್ಚದ ವಿನೂತನ ವಾಹನ ವರ್ಧನೆ (ಪಿಎಂ ಇ-ಡ್ರೈವ್) ಯೋಜನೆಯಲ್ಲಿ ಪ್ರಧಾನ ಮಂತ್ರಿ ಎಲೆಕ್ಟ್ರಿಕ್ ಡ್ರೈವ್ ಕ್ರಾಂತಿ ಕಾರ್ಯಕ್ರಮವನ್ನು ಕೇಂದ್ರ ಸಂಪುಟ ಅನುಮೋದಿಸಿದೆ

September 11th, 08:59 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, ದೇಶದಲ್ಲಿ ವಿದ್ಯುಚ್ಚಾಲಿತ ವಾಹನಗಳ ಉತ್ತೇಜನಕ್ಕಾಗಿ 'ಇನ್ನೋವೇಟಿವ್ ವೆಹಿಕಲ್ ಎನ್ಹಾನ್ಸ್ಮೆಂಟ್ (ಪಿಎಂ ಇ-ಡ್ರೈವ್) ಯೋಜನೆಯಲ್ಲಿ ʼಪ್ರಧಾನಮಂತ್ರಿ ಎಲೆಕ್ಟ್ರಿಕ್ ಡ್ರೈವ್ ಕ್ರಾಂತಿ' ಎಂಬ ಯೋಜನೆಯ ಅನುಷ್ಠಾನಕ್ಕಾಗಿ ಭಾರೀ ಕೈಗಾರಿಕೆಗಳ ಸಚಿವಾಲಯದ (ಎಂ ಹೆಚ್ ಐ) ಪ್ರಸ್ತಾವನೆಯನ್ನು ಅನುಮೋದಿಸಿದೆ.