ರೋಜ್ ಗಾರ್ ಮೇಳದ ಅಡಿಯಲ್ಲಿ 51,000+ ನೇಮಕಾತಿ ಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
October 29th, 11:00 am
ದೇಶದ ವಿವಿಧ ಭಾಗಗಳಿಂದ ನಮ್ಮ ಜೊತೆಗೆ ಸೇರಿರುವ ನನ್ನ ಸಂಪುಟ ಸಹೋದ್ಯೋಗಿಗಳು, ಸಂಸತ್ ಸದಸ್ಯರು, ವಿಧಾನಸಭೆಗಳ ಸದಸ್ಯರು, ರಾಷ್ಟ್ರದ ಯುವ ಸ್ನೇಹಿತರು, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
October 29th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಉದ್ಯೋಗ ಮೇಳ ಬಿಂಬಿಸುತ್ತದೆ. ಇದು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ಮೂಲಕ ಯುವಕರನ್ನು ಸಬಲಗೊಳಿಸುತ್ತದೆ.'ಕರ್ಮಯೋಗಿ ಸಪ್ತಾಹ' - ರಾಷ್ಟ್ರೀಯ ಕಲಿಕಾ ಸಪ್ತಾಹಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿ
October 19th, 06:57 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಡಾ.ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ 'ಕರ್ಮಯೋಗಿ ಸಪ್ತಾಹ' – ರಾಷ್ಟ್ರೀಯ ಕಲಿಕಾ ಸಪ್ತಾಹಕ್ಕೆ ಚಾಲನೆ ನೀಡಿದರು.ಅಕ್ಟೋಬರ್ 19ರಂದು ರಾಷ್ಟ್ರೀಯ ಕಲಿಕಾ ವಾರ- “ಕರ್ಮಯೋಗಿ ಸಪ್ತಾಹ’ಕ್ಕೆ ಪ್ರಧಾನಮಂತ್ರಿ ಚಾಲನೆ
October 18th, 11:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 19ರಂದು ಬೆಳಿಗ್ಗೆ 10.30ಕ್ಕೆ ನವದೆಹಲಿಯ ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ರಾಷ್ಟ್ರೀಯ ಕಲಿಕಾ ವಾರ “ಕರ್ಮಯೋಗಿ ಸಪ್ತಾಹ’ ವನ್ನು ಉದ್ಘಾಟಿಸಲಿದ್ದಾರೆ.ರೋಜ್‌ಗಾರ್ ಮೇಳದ ಅಡಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆ ವೇಳೆ ಪ್ರಧಾನಮಂತ್ರಿಯವರ ಭಾಷಣ
February 12th, 11:00 am
ಇಂದು, 1 ಲಕ್ಷಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ವಲಯದಲ್ಲಿ ಉದ್ಯೋಗಾವಕಾಶಗಳನ್ನು ನೀಡಲಾಗಿದೆ. ನಿಮ್ಮ ಶ್ರದ್ಧೆ ಮತ್ತು ಕಠಿಣ ಪರಿಶ್ರಮ ಈ ಸಾಧನೆಗೆ ಕಾರಣವಾಗಿದೆ. ನಿಮಗೆ ಮತ್ತು ನಿಮ್ಮ ಕುಟುಂಬದವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕೇಂದ್ರ ಸರ್ಕಾರದಲ್ಲಿ ಯುವಕರಿಗೆ ಉದ್ಯೋಗ ಒದಗಿಸುವ ಉಪಕ್ರಮವು ವೇಗವಾಗಿ ಪ್ರಗತಿಯಲ್ಲಿದೆ. ಈ ಹಿಂದಿನ ಸರ್ಕಾರಗಳ ಆಡಳಿತದಲ್ಲಿ ಉದ್ಯೋಗ ಜಾಹೀರಾತು, ನೇಮಕಾತಿ ಪತ್ರಗಳನ್ನು ನೀಡುವ ವೇಳೆ ಲಂಚ ನೀಡಲೇಬೇಕಾಗಿತ್ತು. ನಾವು ಈಗ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿದ್ದೇವೆ, ದಕ್ಷತೆ ಮತ್ತು ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳುತ್ತೇವೆ. ನೇಮಕಾತಿ ಪ್ರಕ್ರಿಯೆಯು ನಿಗದಿತ ಸಮಯಾವಧಿಗೆ ಬದ್ಧವಾಗಿದೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ಸರ್ಕಾರವು ಬದ್ದವಾಗಿದೆ. ಪ್ರತಿಯೊಬ್ಬ ಯುವಕರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಸಮಾನ ಅವಕಾಶವನ್ನು ನೀಡುತ್ತದೆ. ಈಗ ಯುವಕರು ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆಯಿಂದ ತಮಗಾಗಿ ಒಂದು ಪುಟ್ಟ ಗೂಡು ಕಟ್ಟಬಹುದು ಎಂಬ ವಿಶ್ವಾಸ ಹೊಂದಿದ್ದಾರೆ. 2014 ರಿಂದ, ಯುವಕರನ್ನು ಕೇಂದ್ರ ಸರ್ಕಾರದೊಂದಿಗೆ ಮತ್ತು ರಾಷ್ಟ್ರ ನಿರ್ಮಾಣದ ಪ್ರಯತ್ನಗಳಲ್ಲಿ ಅವರನ್ನು ತೊಡಗಿಸಿಕೊಳ್ಳುವುದು ನಮ್ಮ ಗುರಿಯಾಗಿದೆ. ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ಬಿಜೆಪಿ ಸರ್ಕಾರ ತನ್ನ ಹತ್ತು ವರ್ಷಗಳಲ್ಲಿ ಸುಮಾರು ಒಂದೂವರೆ ಪಟ್ಟು ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ಒದಗಿಸಿದೆ. ಇಂದು, ನಾವು ದೆಹಲಿಯಲ್ಲಿ ಸಮಗ್ರ ತರಬೇತಿ ಸಂಕೀರ್ಣಕ್ಕೆ ಅಡಿಪಾಯ ಹಾಕಿದ್ದೇವೆ, ಇದು ನಮ್ಮ ಸಾಮರ್ಥ್ಯ-ವರ್ಧನೆಯ ಪ್ರಯತ್ನಗಳನ್ನು ಹೆಚ್ಚಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ರೋಜ್‌ಗಾರ್ ಮೇಳದ ಅಡಿ, ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡ ಉದ್ಯೋಗಾಕಾಂಕ್ಷಿಗಳಿಗೆ 1 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ
February 12th, 10:30 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ 1 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಅವರು ನವದೆಹಲಿಯಲ್ಲಿ ಇಂಟಿಗ್ರೇಟೆಡ್ ಕಾಂಪ್ಲೆಕ್ಸ್ ಕರ್ಮಯೋಗಿ ಭವನದ ಒಂದನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂಕೀರ್ಣವು ಮಿಷನ್ ಕರ್ಮಯೋಗಿಯ ವಿವಿಧ ಆಧಾರಸ್ತಂಭಗಳ ನಡುವೆ ಸಹಭಾಗಿತ್ವ ಮತ್ತು ಸಂಯೋಜಿತ ಕ್ರಿಯೆ ಅಥವಾ ಕಾರ್ಯಾಚರಣೆಯನ್ನು ಉತ್ತೇಜಿಸುತ್ತದೆ.ರೋಜ್‌ಗಾರ್ ಮೇಳದ ಅಡಿಯಲ್ಲಿ, ಫೆಬ್ರವರಿ 12 ರಂದು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ 1 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಪ್ರಧಾನಮಂತ್ರಿ ವಿತರಿಸಲಿದ್ದಾರೆ.
February 11th, 03:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 12 ಫೆಬ್ರವರಿ 2024 ರಂದು 10:30 AM ಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ 1 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.ರಾಷ್ಟ್ರೀಯ ಕಸ್ಟಮ್ಸ್, ಪರೋಕ್ಷ ತೆರಿಗೆಗಳು ಮತ್ತು ಮಾದಕವಸ್ತುಗಳ - ಎನ್ಎಸಿಐಎನ್ ಅಕಾಡೆಮಿಯನ್ನು ಉದ್ಘಾಟಿಸುವ ವೇಳೆ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 16th, 04:00 pm
ಆಂಧ್ರಪ್ರದೇಶದ ರಾಜ್ಯಪಾಲರಾದ ಶ್ರೀ ಎಸ್. ಅಬ್ದುಲ್ ನಜೀರ್ ಜೀ, ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳು, ನಿರ್ಮಲಾ ಸೀತಾರಾಮನ್ ಜೀ, ಪಂಕಜ್ ಚೌಧರಿ ಜೀ ಮತ್ತು ಭಗವತ್ ಕಿಶನ್ ರಾವ್ ಕರದ್ ಜೀ, ಇತರ ಪ್ರತಿನಿಧಿಗಳು, ಮಹಿಳೆಯರು ಮತ್ತು ಮಹನೀಯರೇ.ಆಂಧ್ರಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಪಾಲಸಮುದ್ರಂನಲ್ಲಿ ರಾಷ್ಟ್ರೀಯ ಕಸ್ಟಮ್ಸ್, ಪರೋಕ್ಷ ತೆರಿಗೆ ಮತ್ತು ಮಾದಕವಸ್ತುಗಳ ಅಕಾಡೆಮಿಯ ಹೊಸ ಕ್ಯಾಂಪಸ್ಸನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
January 16th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಪಾಲಸಮುದ್ರಂನಲ್ಲಿ ರಾಷ್ಟ್ರೀಯ ಕಸ್ಟಮ್ಸ್, ಪರೋಕ್ಷ ತೆರಿಗೆ ಮತ್ತು ಮಾದಕವಸ್ತುಗಳ ಅಕಾಡೆಮಿಯ ಹೊಸ ಕ್ಯಾಂಪಸ್ಸನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನೂ ಅವರು ವೀಕ್ಷಿಸಿದರು. ಪ್ರಧಾನಮಂತ್ರಿಯವರು ಭಾರತೀಯ ಕಂದಾಯ ಸೇವೆಯ (ಕಸ್ಟಮ್ ಮತ್ತು ಪರೋಕ್ಷ ತೆರಿಗೆ) 74 ಮತ್ತು 75ನೇ ಬ್ಯಾಚ್ ಗಳ ತರಬೇತಿ ನಿರತ ಅಧಿಕಾರಿಗಳು ಮತ್ತು ಭೂತಾನ್ ನ ರಾಯಲ್ ಸಿವಿಲ್ ಸರ್ವಿಸ್ ನ ತರಬೇತಿ ನಿರತ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.ರೋಜ್‌ಗಾರ್ ಮೇಳದ ಅಡಿ 51,000+ ನೇಮಕ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
November 30th, 04:30 pm
ದೇಶದ ಲಕ್ಷಗಟ್ಟಲೆ ಯುವಕರಿಗೆ ಸರ್ಕಾರಿ ಉದ್ಯೋಗ ನೀಡುವ ಅಭಿಯಾನ ಮುಂದುವರಿದಿದೆ. ಇಂದು 50 ಸಾವಿರಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗದ ನೇಮಕ ಪತ್ರ ನೀಡಲಾಗಿದೆ. ಈ ನೇಮಕ ಪತ್ರಗಳನ್ನು ಸ್ವೀಕರಿಸುವುದು ನಿಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆಯ ಫಲಿತಾಂಶವಾಗಿದೆ. ನಾನು ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ನನ್ನ ಹೃದಯಾಂತರಾಳದಿಂದ ಅಭಿನಂದಿಸುತ್ತೇನೆ.ʻಉದ್ಯೋಗ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 30th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಉದ್ಯೋಗ ಮೇಳʼವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ವಿಡಿಯೋ ಕಾನ್ಫರೆನ್ಸ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ ಸುಮಾರು 51,000 ನೇಮಕಾತಿ ಪತ್ರಗಳನ್ನು ವಿತರಿಸಿದರು. ದೇಶಾದ್ಯಂತ ಆಯ್ಕೆಯಾದ ಅಭ್ಯರ್ಥಿಗಳು ಕಂದಾಯ ಇಲಾಖೆ, ಗೃಹ ವ್ಯವಹಾರಗಳ ಸಚಿವಾಲಯ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಹಣಕಾಸು ಸೇವೆಗಳ ಇಲಾಖೆ, ರಕ್ಷಣಾ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸೇರಿದಂತೆ ವಿವಿಧ ಸಚಿವಾಲಯಗಳು / ಇಲಾಖೆಗಳಲ್ಲಿ ಸರ್ಕಾರಿ ಸೇವೆಗೆ ಸೇರ್ಪಡೆಗೊಳ್ಳಲಿದ್ದಾರೆ.ʻಉದ್ಯೋಗ ಮೇಳʼದಡಿ ಪ್ರಧಾನಮಂತ್ರಿಯವರು ನವೆಂಬರ್ 30ರಂದು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ 51,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ
November 28th, 05:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ನವೆಂಬರ್ 30ರಂದು ಸಂಜೆ 4ಗಂಟೆಗೆ ಹೊಸದಾಗಿ ಸೇರ್ಪಡೆಗೊಂಡ 51,000ಕ್ಕೂ ಉದ್ಯೋಗಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಹೊಸದಾಗಿ ನೇಮಕಗೊಂಡವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ʻಜಿ-20 ಯೂನಿವರ್ಸಿಟಿ ಕನೆಕ್ಟ್ʼ ಫಿನಾಲೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
September 26th, 04:12 pm
ದೇಶದ ವಿವಿಧ ವಿಶ್ವವಿದ್ಯಾಲಯಗಳೇ, ಉಪಕುಲಪತಿಗಳೇ, ಪ್ರಾಧ್ಯಾಪಕರೇ, ವಿವಿಧ ಸಂಸ್ಥೆಗಳ ಪ್ರತಿನಿಧಿಗಳೇ ಮತ್ತು ನನ್ನ ಯುವ ಸ್ನೇಹಿತರೇ! ʻಭಾರತ್ ಮಂಟಪಂʼನಲ್ಲಿ ಇದ್ದುದ್ದಕ್ಕಿಂತ ಹೆಚ್ಚಿನ ಜನರು ಇಂದು ಆನ್‌ಲೈನ್ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ನಾನು 'ಜಿ -20 ಯೂನಿವರ್ಸಿಟಿ ಕನೆಕ್ಟ್' ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸುತ್ತೇನೆ ಮತ್ತು ಎಲ್ಲಾ ಯುವಕರನ್ನು ಅಭಿನಂದಿಸುತ್ತೇನೆ.ಜಿ-20 ವಿಶ್ವವಿದ್ಯಾಲಯ ಸಂಪರ್ಕ ಅಂತಿಮ(ಯೂನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 26th, 04:11 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ್ ಮಂಟಪದಲ್ಲಿಂದು ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಲ್ಪಿಸುವ ಅಂತಿಮ(ಯುನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದರು. ಜಿ-20 ವಿಶ್ವವಿದ್ಯಾಲಯ ಸಂಪರ್ಕ ಉಪಕ್ರಮವನ್ನು ಭಾರತದ ಯುವಜನರಲ್ಲಿ ಭಾರತದ ಅಧ್ಯಕ್ಷತೆಯ ಜಿ-20 ಶೃಂಗಸಭೆಯ ಬಗ್ಗೆ ತಿಳುವಳಿಕೆ ಮೂಡಿಸಲು ಮತ್ತು ವಿವಿಧ ಜಿ-20 ಕಾರ್ಯಕ್ರಮಗಳಲ್ಲಿ ಅವರ ಭಾಗವಹಿಸುವಿಕೆ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾಗಿದೆ. ಪ್ರಧಾನ ಮಂತ್ರಿ ಅವರು ಈ ಸಂದರ್ಭದಲ್ಲಿ 4 ಪ್ರಕಟಣೆಗಳನ್ನು ಬಿಡುಗಡೆ ಮಾಡಿದರು. ಅವುಗಳೆಂದರೆ ದಿ ಗ್ರ್ಯಾಂಡ್ ಸಕ್ಸಸ್ ಆಫ್ ಜಿ-20 ಭಾರತ್ ಪ್ರೆಸಿಡೆನ್ಸಿ: ದೂರದೃಷ್ಟಿಯ ನಾಯಕತ್ವ, ಅಂತರ್ಗತ ಕಾರ್ಯವಿಧಾನ; ಭಾರತದ ಜಿ-20 ಪ್ರೆಸಿಡೆನ್ಸಿ: ವಸುಧೈವ ಕುಟುಂಬಕಂ; ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಾರ್ಯಕ್ರಮದ ಸಂಕಲನ; ಮತ್ತು ಜಿ-20ರಲ್ಲಿ ಭಾರತೀಯ ಸಂಸ್ಕೃತಿಯ ಪ್ರದರ್ಶನ.ವಿಡಿಯೋ ಕಾನ್ಫರೆನ್ಸ್ ಮೂಲಕ ರೋಜ್ಗಾರ್ ಮೇಳದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
September 26th, 11:04 am
ಇಂದಿನ ರೋಜ್ಗಾರ್ ಮೇಳದಲ್ಲಿ ಸರ್ಕಾರಿ ಸೇವೆಗಳಿಗೆ ನೇಮಕಾತಿ ಪತ್ರಗಳನ್ನು ಪಡೆದ ಎಲ್ಲಾ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ನೀವೆಲ್ಲರೂ ಅಪಾರ ಪರಿಶ್ರಮದ ನಂತರ ಈ ಯಶಸ್ಸನ್ನು ಸಾಧಿಸಿದ್ದೀರಿ. ಲಕ್ಷಾಂತರ ಅಭ್ಯರ್ಥಿಗಳಿಂದ ನಿಮ್ಮನ್ನು ಆಯ್ಕೆ ಮಾಡಲಾಗಿದೆ; ಆದ್ದರಿಂದ, ಈ ಯಶಸ್ಸು ನಿಮ್ಮ ಜೀವನದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ.ರೋಜ್ ಗಾರ್ ಮೇಳ ಉದ್ದೇಶಿಸಿ ಪ್ರಧಾನಿ ಭಾಷಣ
September 26th, 10:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳ ಉದ್ದೇಶಿಸಿ ಭಾಷಣ ಮಾಡಿದರು ಮತ್ತು ಹೊಸದಾಗಿ ನೇಮಕಗೊಂಡ 51,000 ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಹೊಸದಾಗಿ ನೇಮಕಗೊಂಡರು ದೇಶಾದ್ಯಂತ ಅಂಚೆ ಇಲಾಖೆ, ಭಾರತೀಯ ಆಡಿಟ್ ಮತ್ತು ಅಕೌಂಟ್ಸ್ ಇಲಾಖೆ, ಅಣು ಇಂಧನ ಇಲಾಖೆ, ಕಂದಾಯ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಕ್ಷಣಾ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿ ಸರ್ಕಾರದ ಹಲವು ಇಲಾಖೆಗಳು/ಸಚಿವಾಲಯಗಳಿಗೆ ಸೇರ್ಪಡೆಯಾಗಲಿದ್ದಾರೆ. ಈ ರೋಜ್ ಗಾರ್ ಮೇಳ ದೇಶಾದ್ಯಂತ 46 ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆಯಿತು.ರೋಜ್ಗಾರ್ ಮೇಳದ ಅಡಿಯಲ್ಲಿ, ಪ್ರಧಾನ ಮಂತ್ರಿಯವರು ಸೆಪ್ಟೆಂಬರ್ 26 ರಂದು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ 51,000 ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.
September 25th, 02:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26 ಸೆಪ್ಟೆಂಬರ್, 2023 ರಂದು 10:30 AM ಕ್ಕೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ 51,000 ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಪ್ರಧಾನಿಯವರು ಈ ಸಂದರ್ಭದಲ್ಲಿ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ರಾಷ್ಟ್ರಕ್ಕೆ ಯಶೋಭೂಮಿ ಸಮರ್ಪಣೆ ಮತ್ತು ವಿಶ್ವಕರ್ಮ ಯೋಜನೆಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 17th, 06:08 pm
ಕೇಂದ್ರ ಸಚಿವ ಸಂಪುಟದ ನನ್ನ ಎಲ್ಲಾ ಸಹೋದ್ಯೋಗಿಗಳೆ, ದೇಶದ ಮೂಲೆ ಮೂಲೆಗಳಿಂದ ಆಗಮಿಸಿ, ಈ ಭವ್ಯ ಕಟ್ಟಡದಲ್ಲಿ ಸೇರಿರುವ ಆತ್ಮೀಯ ಸಹೋದರ ಸಹೋದರಿಯರೆ, 70ಕ್ಕಿಂತ ಹೆಚ್ಚಿನ ನಗರಗಳಿಂದ ಈ ಕಾರ್ಯಕ್ರಮಕ್ಕೆ ಸೇರಿರುವ ನನ್ನ ಸಹನಾಗರಿಕರೆ, ಇತರೆ ಗಣ್ಯ ಅತಿಥಿಗಳೆ ಮತ್ತು ನನ್ನ ಕುಟುಂಬ ಸದಸ್ಯರೆ!ನವದೆಹಲಿಯಲ್ಲಿ ಭಾರತ ಅಂತಾರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ ಕೇಂದ್ರ - ‘ಯಶೋಭೂಮಿ’ ಮೊದಲನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ
September 17th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ದ್ವಾರಕಾದಲ್ಲಿ ಭಾರತ ಅಂತಾರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ ಕೇಂದ್ರ (ಇಂಡಿಯಾ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಮತ್ತು ಎಕ್ಸ್‌ಪೋ ಸೆಂಟರ್) - ‘ಯಶೋಭೂಮಿ’ಯ ಮೊದಲನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. 'ಯಶೋಭೂಮಿ' ಭವ್ಯವಾದ ಸಮಾವೇಶ ಕೇಂದ್ರ, ಬಹು ಪ್ರದರ್ಶನ ಸಭಾಂಗಣಗಳು ಮತ್ತು ಇತರ ಸೌಲಭ್ಯಗಳನ್ನು ಹೊಂದಿದೆ. ಪ್ರಧಾನಿಯವರು ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲಿಗಳಿಗಾಗಿ ‘ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ’ಗೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ಪಿಎಂ ವಿಶ್ವಕರ್ಮ ಲೋಗೋ, ಘೋಷವಾಕ್ಯ ಮತ್ತು ಪೋರ್ಟಲ್ ಅನ್ನು ಸಹ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ನಿರ್ದಿಷ್ಟವಾಗಿ ರೂಪಿಸಿದ ಸ್ಟಾಂಪ್ ಶೀಟ್, ಟೂಲ್ ಕಿಟ್ ಇ-ಪುಸ್ತಕ ಮತ್ತು ವಿಡಿಯೋವನ್ನು ಬಿಡುಗಡೆ ಮಾಡಿದರು. ಪ್ರಧಾನಮಂತ್ರಿಯವರು 18 ಫಲಾನುಭವಿಗಳಿಗೆ ವಿಶ್ವಕರ್ಮ ಪ್ರಮಾಣಪತ್ರಗಳನ್ನು ವಿತರಿಸಿದರು.ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ಉದ್ಯೋಗ ಪಡೆದ 51000+ ನೇಮಕಾತಿ ಪತ್ರಗಳ ವಿತರಣಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 28th, 11:20 am
ಈ 'ಆಜಾದಿ ಕಾ ಅಮೃತಕಾಲ್'ನಲ್ಲಿ ದೇಶದ ಸ್ವಾತಂತ್ರ್ಯದ ರಕ್ಷಕರಾಗಿರುವ ಮತ್ತು ಕೋಟ್ಯಂತರ ದೇಶವಾಸಿಗಳ ರಕ್ಷಕರಾಗಿರುವ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇಂದು ನೇಮಕಾತಿ ಪತ್ರ ಪಡೆಯುತ್ತಿರುವ ಯುವಕರು ದೇಶ ಸೇವೆ ಮಾಡುವುದಲ್ಲದೆ, ದೇಶದ ನಾಗರಿಕರ ರಕ್ಷಣೆ ಮಾಡುತ್ತಾರೆ ಎಂಬ ಕಾರಣಕ್ಕೆ ನಾನು ನಿಮ್ಮನ್ನು ಅಮೃತ ರಕ್ಷಕರು ಎಂದು ಕರೆಯುತ್ತಿದ್ದೇನೆ. ಅದಕ್ಕಾಗಿಯೇ ನೀವು ಒಂದು ರೀತಿಯಲ್ಲಿ ಜನರ ರಕ್ಷಕರು ಮತ್ತು 'ಅಮೃತಕಾಲ'ದ 'ಅಮೃತ ರಕ್ಷಕರು'.