ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಸಂದರ್ಭದಲ್ಲಿ ಭಾರತ-ಸ್ಪೇನ್ ಜಂಟಿ ಹೇಳಿಕೆ (ಅಕ್ಟೋಬರ್ 28-29, 2024)
October 28th, 06:32 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸ್ಪೇನ್ ಸರ್ಕಾರದ ಅಧ್ಯಕ್ಷರಾದ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು 28-29 ಅಕ್ಟೋಬರ್ 2024 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಇದು ಅಧ್ಯಕ್ಷ ಸ್ಯಾಂಚೆಜ್ ಅವರ ಭಾರತಕ್ಕೆ ಮೊದಲ ಭೇಟಿ ಮತ್ತು ಮೊದಲನೆಯದು ಮತ್ತು 18 ವರ್ಷಗಳ ನಂತರ ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಇದಾಗಿದೆ. ಸ್ಪೇನ್ ಸರ್ಕಾರದ ಸಾರಿಗೆ ಮತ್ತು ಸುಸ್ಥಿರ ಚಲನಶೀಲತೆ ಸಚಿವರು, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿ ಮತ್ತು ಉದ್ಯಮ ರಂಗದ ನಿಯೋಗದೊಂದಿಗೆ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ.ಗ್ರೀಸ್ ನ ಪ್ರಧಾನಮಂತ್ರಿಯವರ ಭಾರತ ಭೇಟಿಯ (ಫೆಬ್ರವರಿ 21, 2024) ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
February 21st, 01:30 pm
ಪ್ರಧಾನಮಂತ್ರಿ ಶ್ರೀ ಮಿತ್ಸೋಟಾಕಿಸ್ ಮತ್ತು ಅವರ ಪ್ರತಿನಿಧಿ ನಿಯೋಗವನ್ನು ಭಾರತಕ್ಕೆ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ಕಳೆದ ವರ್ಷ ನಾನು ಗ್ರೀಸ್ ದೇಶಕ್ಕೆ ಭೇಟಿ ನೀಡಿದ ನಂತರ, ಅವರ ಭಾರತ ಭೇಟಿಯು ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಸಂಕೇತವಾಗಿದೆ, ಮತ್ತು ಹದಿನಾರು ವರ್ಷಗಳ ಸುದೀರ್ಘ ಅಂತರದ ನಂತರ ಗ್ರೀಸ್ ಪ್ರಧಾನಮಂತ್ರಿಯೊಬ್ಬರು ಭಾರತಕ್ಕೆ ಬರುತ್ತಿರುವುದು, ಒಂದು ಐತಿಹಾಸಿಕ ಸಂದರ್ಭವಾಗಿದೆ.