ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದ ಸೆಮಿಕಾನ್ ಇಂಡಿಯಾ-2024 ಸಮ್ಮೇಳನದಲ್ಲಿ ಭಾರತ ಮತ್ತು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಉನ್ನತ ಸೆಮಿಕಂಡಕ್ಟರ್ ಕಂಪನಿಗಳ ಸಿಇಒಗಳು

September 11th, 04:28 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿಂದು ಇಂಡಿಯಾ ಎಕ್ಸ್‌ಪೋ ಮಾರ್ಟ್‌ನಲ್ಲಿ ಆಯೋಜಿಸಿದ್ದ ಸೆಮಿಕಾನ್ ಇಂಡಿಯಾ-2024 ಸಮ್ಮೇಳನ ಉದ್ಘಾಟಿಸಿದರು. ಸೆಮಿಕಾನ್ ಇಂಡಿಯಾ-2024 ಸೆಪ್ಟೆಂಬರ್ 11ರಿಂದ 13ರ ವರೆಗೆ 'ಸೆಮಿಕಂಡಕ್ಟರ್ ಭವಿಷ್ಯವನ್ನು ರೂಪಿಸುವುದು' ಎಂಬ ವಸ್ತು ವಿಷಯದೊಂದಿಗೆ ಆಯೋಜಿಸಲಾಗಿದೆ. 3 ದಿನಗಳ ಈ ಸಮ್ಮೇಳನವು ಭಾರತದ ಸೆಮಿಕಂಡಕ್ಟರ್ ಕಾರ್ಯತಂತ್ರ ಮತ್ತು ನೀತಿಗಳನ್ನು ಪ್ರದರ್ಶಿಸುತ್ತದೆ, ಇದು ಭಾರತವನ್ನು ಸೆಮಿಕಂಡಕ್ಟರ್‌ ವಲಯದ ಜಾಗತಿಕ ತಾಣವಾಗಿ ರೂಪಿಸುತ್ತದೆ. ಜಾಗತಿಕ ಸೆಮಿಕಂಡಕ್ಟರ್ ವಲಯದ ಉನ್ನತ ನಾಯಕತ್ವವು ಸಮ್ಮೇಳನದಲ್ಲಿ ಭಾಗವಹಿಸುತ್ತಿದೆ. ಇದು ಜಾಗತಿಕ ನಾಯಕರು, ಕಂಪನಿಗಳು ಮತ್ತು ಸೆಮಿಕಂಡಕ್ಟರ್ ಉದ್ಯಮದ ತಜ್ಞರನ್ನು ಒಟ್ಟುಗೂಡಿಸುತ್ತದೆ. ಸಮ್ಮೇಳನದಲ್ಲಿ 250ಕ್ಕೂ ಹೆಚ್ಚು ಪ್ರದರ್ಶಕರು ಮತ್ತು 150 ಭಾಷಣಕಾರರು ಭಾಗವಹಿಸುತ್ತಿದ್ದಾರೆ.

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ದುಂಡುಮೇಜಿನ ಸಭೆಯಲ್ಲಿ ಭೇಟಿಯಾದ ನಂತರ ಉನ್ನತ ಸೆಮಿಕಂಡಕ್ಟರ್ ಕಂಪನಿಗಳ ಸಿಇಒಗಳಿಂದ ಮೆಚ್ಚುಗೆ

September 10th, 11:44 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಲೋಕ್ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ಅಧಿಕೃತ ನಿವಾಸ 7ರಲ್ಲಿ ಸೆಮಿಕಂಡಕ್ಟರ್ ಕಾರ್ಯ ನಿರ್ವಾಹಕ ಅಧಿಕಾರಿಗಳ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಪ್ರಧಾನ ಮಂತ್ರಿ ಅವರು ಸೆಮಿಕಂಡಕ್ಟರ್ ವಲಯಕ್ಕೆ ಸಂಬಂಧಿಸಿದಂತೆ ವ್ಯಾಪಕ ವಿಷಯಗಳ ಕುರಿತು ಚರ್ಚಿಸಿದರು. ಈ ವಲಯವು ಅಭಿವೃದ್ಧಿ ಪಥವನ್ನು ಹೇಗೆ ಮುಂದುವರಿಸಬಹುದು ಎಂಬುದರ ಕುರಿತು ಶ್ರೀ ಮೋದಿ ಮಾತನಾಡಿದರು. ಭಾರತವನ್ನು ಜಾಗತಿಕ ಮಟ್ಟದಲ್ಲಿ ಉತ್ತಮ ಹೂಡಿಕೆಯ ತಾಣವನ್ನಾಗಿ ಮಾಡುವ ನಿಟ್ಟಿನಲ್ಲಿ ದೇಶದಲ್ಲಿ ನಡೆಯುತ್ತಿರುವ ಹಲವಾರು ಸುಧಾರಣೆಗಳನ್ನು ಅವರು ಪ್ರಸ್ತಾಪಿಸಿದರು.

​​​​​​​ಪ್ರಧಾನ ನರೇಂದ್ರ ಮೋದಿ ಮಂತ್ರಿ ಅವರನ್ನು ಭೇಟಿಯಾದ ಎನ್ಎಕ್ಸ್ ಪಿ ಸೆಮಿಕಂಡಕ್ಟರ್ ಗಳ ಸಿಇಒ

March 30th, 10:16 am

ಎನ್ಎಕ್ಸ್ ಪಿ ಟ್ವೀಟ್ ಗೆ ಪ್ರತ್ಯುತ್ತರವಾಗಿ ಪ್ರಧಾನಮಂತ್ರಿ ಅವರು ಹೀಗೆ ಟ್ವೀಟ್ ಮಾಡಿದ್ದಾರೆ: