ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ದುಂಡುಮೇಜಿನ ಸಭೆಯಲ್ಲಿ ಭೇಟಿಯಾದ ನಂತರ ಉನ್ನತ ಸೆಮಿಕಂಡಕ್ಟರ್ ಕಂಪನಿಗಳ ಸಿಇಒಗಳಿಂದ ಮೆಚ್ಚುಗೆ
September 10th, 11:44 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಲೋಕ್ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ಅಧಿಕೃತ ನಿವಾಸ 7ರಲ್ಲಿ ಸೆಮಿಕಂಡಕ್ಟರ್ ಕಾರ್ಯ ನಿರ್ವಾಹಕ ಅಧಿಕಾರಿಗಳ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಪ್ರಧಾನ ಮಂತ್ರಿ ಅವರು ಸೆಮಿಕಂಡಕ್ಟರ್ ವಲಯಕ್ಕೆ ಸಂಬಂಧಿಸಿದಂತೆ ವ್ಯಾಪಕ ವಿಷಯಗಳ ಕುರಿತು ಚರ್ಚಿಸಿದರು. ಈ ವಲಯವು ಅಭಿವೃದ್ಧಿ ಪಥವನ್ನು ಹೇಗೆ ಮುಂದುವರಿಸಬಹುದು ಎಂಬುದರ ಕುರಿತು ಶ್ರೀ ಮೋದಿ ಮಾತನಾಡಿದರು. ಭಾರತವನ್ನು ಜಾಗತಿಕ ಮಟ್ಟದಲ್ಲಿ ಉತ್ತಮ ಹೂಡಿಕೆಯ ತಾಣವನ್ನಾಗಿ ಮಾಡುವ ನಿಟ್ಟಿನಲ್ಲಿ ದೇಶದಲ್ಲಿ ನಡೆಯುತ್ತಿರುವ ಹಲವಾರು ಸುಧಾರಣೆಗಳನ್ನು ಅವರು ಪ್ರಸ್ತಾಪಿಸಿದರು.ʻವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆʼಯ 10 ನೇ ಆವೃತ್ತಿಯಲ್ಲಿ ಪ್ರಧಾನಮಂತ್ರಿಯವರ ದೂರದೃಷ್ಟಿಯನ್ನು ಶ್ಲಾಘಿಸಿದ ಜಾಗತಿಕ ಉದ್ಯಮ ಮುಖಂಡರು
January 10th, 12:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಾಂಧಿನಗರದ ʻಮಹಾತ್ಮಾ ಮಂದಿರʼದಲ್ಲಿ ಗುಜರಾತ್ ಜಾಗತಿಕ ಹೂಡಿಕೆದಾರರ ಸಮಾವೇಶದ 10ನೇ ಆವೃತ್ತಿಯಾದ ʻವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ-2024ʼಕ್ಕೆ ಚಾಲನೆ ನೀಡಿದರು. ಈ ವರ್ಷದ ಶೃಂಗಸಭೆಯು 'ಭವಿಷ್ಯದ ಹೆಬ್ಬಾಗಿಲು' ವಿಷಯಾಧಾರಿತವಾಗಿ ಆಯೋಜನೆಗೊಂಡಿದ್ದು, 34 ಪಾಲುದಾರ ರಾಷ್ಟ್ರಗಳು ಮತ್ತು 16 ಪಾಲುದಾರ ಸಂಸ್ಥೆಗಳು ಭಾಗವಹಿಸಿವೆ. ಈಶಾನ್ಯ ಪ್ರದೇಶಗಳಲ್ಲಿ ಹೂಡಿಕೆಯ ಅವಕಾಶಗಳನ್ನು ಪ್ರದರ್ಶಿಸಲು ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವಾಲಯವು ಈ ಶೃಂಗಸಭೆಯನ್ನು ವೇದಿಕೆಯಾಗಿ ಬಳಸುತ್ತಿದೆ.PM Modi meets CEOs of global firms in Gandhinagar, Gujarat
January 09th, 04:30 pm
Prime Minister Narendra Modi met CEOs of various global organisations and institutes in Gandhinagar, Gujarat. These included Sultan Ahmed Bin Sulayem of DP World, Mr. Sanjay Mehrotra of Micron Technology, Professor Iain Martin of Deakin University, Mr. Keith Svendsen of A.P. Moller – Maersk and Mr. Toshihiro Suzuki of Suzuki Motor Corp.ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಮೈಕ್ರಾನ್ ಟೆಕ್ನಾಲಜಿಯ ಅಧ್ಯಕ್ಷ ಮತ್ತು ಸಿಇಒ ಸಂಜಯ್ ಮೆಹ್ರೋತ್ರಾ
July 28th, 06:07 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್ನ ಗಾಂಧಿನಗರದಲ್ಲಿ ಮೈಕ್ರಾನ್ ಟೆಕ್ನಾಲಜಿಯ ಅಧ್ಯಕ್ಷ ಮತ್ತು ಸಿಇಒ ಸಂಜಯ್ ಮೆಹ್ರೋತ್ರಾ ಅವರನ್ನು ಭೇಟಿ ಮಾಡಿದರು. ಭಾರತದಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಪರಿಸರ ವ್ಯವಸ್ಥೆಯನ್ನು ಹೆಚ್ಚಿಸಲು ಮೈಕ್ರಾನ್ ಟೆಕ್ನಾಲಜಿಯ ಯೋಜನೆಗಳ ಕುರಿತು ಚರ್ಚಿಸಿದರು.