Our Yuva Shakti can do wonders: Prime Minister

November 28th, 07:41 pm

Expressing confidence that India’s Yuva Shakti can do wonders, the Prime Minister Shri Narendra Modi reiterated the Government’s commitment to give them all the opportunities to make them shine and excel.

Prime Minister hails Make In India success story for global economic boost

July 16th, 10:28 pm

The Prime Minister, Shri Narendra Modi has hailed Make In India success story for global economic boost. Shri Modi has shared a glimpse of how Make In India is propelling India's economy onto the global stage.

ಒಂಭತ್ತು ವರ್ಷಗಳ ಡಿಜಿಟಲ್ ಇಂಡಿಯಾ ಉಪಕ್ರಮಕ್ಕೆ ಪ್ರಧಾನಮಂತ್ರಿ ಶ್ಲಾಘನೆ

July 01st, 01:49 pm

ಡಿಜಿಟಲ್ ಇಂಡಿಯಾ ಉಪಕ್ರಮ ಯಶಸ್ವಿಯಾಗಿ ಒಂಭತ್ತು ವರ್ಷ ಪೂರ್ಣಗೊಳಿಸಿರುವುದಕ್ಕೆ‌ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಸುಲಲಿತ ಜೀವನ' ಮತ್ತು ಪಾರದರ್ಶಕತೆಗೆ ಉತ್ತೇಜನ ನೀಡುವ ಸಬಲೀಕೃತ ಭಾರತದ ಸಂಕೇತವೇ ಡಿಜಿಟಲ್ ಇಂಡಿಯಾ ಎಂದು ಪ್ರಧಾನಿ ಹೇಳಿದ್ದಾರೆ.

ಬ್ಯಾಂಕಿಂಗ್ ವಲಯವನ್ನು ಪರಿವರ್ತಿಸುವಲ್ಲಿ ಪಿಎಸ್‌ಯು ಬ್ಯಾಂಕ್‌ಗಳ ಕೊಡುಗೆಗಳನ್ನು ಪ್ರಧಾನಮಂತ್ರಿ ಶ್ಲಾಘಿಸಿದರು

June 19th, 08:03 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು MyGovIndia ಮೂಲಕ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ X ನಲ್ಲಿ ಥ್ರೆಡ್ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ ಮತ್ತು ಬ್ಯಾಂಕಿಂಗ್ ವಲಯವನ್ನು ಪರಿವರ್ತಿಸುವಲ್ಲಿ PSU ಬ್ಯಾಂಕ್‌ಗಳ ಕೊಡುಗೆಗಳನ್ನು ಎತ್ತಿ ತೋರಿಸಿದ್ದಾರೆ.

​​​​​​​'ರಾಷ್ಟ್ರೀಯ ರಚನೆಕಾರರ ಪ್ರಶಸ್ತಿ' ಸ್ಪರ್ಧೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಮನವಿ

February 11th, 08:28 pm

ಕೇಂದ್ರ ಸರ್ಕಾರದ 'MyGov' ವೆಬ್‌ಸೈಟ್‌ನಲ್ಲಿ ರಾಷ್ಟ್ರೀಯ ರಚನೆಕಾರರ ಪ್ರಶಸ್ತಿ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನತೆಯನ್ನು ಕೋರಿದ್ದಾರೆ.

ಡಿಸೆಂಬರ್ 26 ರಂದು ‘ವೀರ್ ಬಾಲ್ ದಿವಸ್ʼಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ

December 25th, 04:17 pm

ನವದೆಹಲಿಯ ಭಾರತ್ ಮಂಟಪದಲ್ಲಿ 2023 ರ ಡಿಸೆಂಬರ್ 26 ರಂದು ಬೆಳಿಗ್ಗೆ 10:30 ಕ್ಕೆ ನಡೆಯಲಿರುವ ‘ವೀರ್ ಬಾಲ್ ದಿವಸ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ, ದೆಹಲಿಯಲ್ಲಿ ಯುವಕರಿಂದ ಪಥಸಂಚಲನಕ್ಕೆ ಪ್ರಧಾನಮಂತ್ರಿಯವರು ಚಾಲನೆ ನೀಡಲಿದ್ದಾರೆ.

ದೀಪಾವಳಿಯ ಶುಭ ಸಂದರ್ಭದಲ್ಲಿ ಸರ್ಕಾರದ ಯೋಜನೆಗಳು ಪ್ರತಿ ಮನೆಯಲ್ಲೂ ಸಂತೋಷವನ್ನು ತರುತ್ತಿವೆ: ಪ್ರಧಾನಮಂತ್ರಿ

November 10th, 03:03 pm

ಹಲವಾರು ಸರ್ಕಾರಿ ಯೋಜನೆಗಳು ದೀಪಾವಳಿ ಶುಭ ಸಂದರ್ಭದಲ್ಲಿ ಪ್ರತಿ ಮನೆಯಲ್ಲೂ ಸಂತೋಷವನ್ನು ತರುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದರು.

24.09.2023 ರಂದು 'ಮನ್ ಕಿ ಬಾತ್' ನ 105 ನೇ ಸಂಚಿಕೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಕನ್ನಡ ಅನುವಾದ

September 24th, 11:30 am

ನನ್ನ ಪ್ರೀತಿಯ ಪರಿವಾರ ಸದಸ್ಯರಿಗೆ ನಮಸ್ಕಾರ. ‘ಮನದ ಮಾತಿನ’ ಮತ್ತೊಂದು ಸಂಚಿಕೆಯಲ್ಲಿ, ದೇಶದ ಯಶಸ್ಸು, ದೇಶದ ಜನತೆಯ ಯಶಸ್ಸು, ಅವರ ಸ್ಪೂರ್ತಿದಾಯಕ ಜೀವನ ಪಯಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನನಗೆ ಅವಕಾಶ ದೊರೆತಿದೆ. ಇತ್ತೀಚೆಗೆ, ನನಗೆ ಲಭಿಸಿದ ಹೆಚ್ಚಿನ ಪತ್ರಗಳು ಮತ್ತು ಸಂದೇಶಗಳು ಎರಡು ವಿಷಯಗಳ ಮೇಲೆ ಕೇಂದ್ರೀಕೃತವಾಗಿವೆ. ಮೊದಲನೆಯದ್ದು ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಮತ್ತು ಎರಡನೇ ವಿಷಯವೆಂದರೆ ದೆಹಲಿಯಲ್ಲಿ ಜಿ-20 ರ ಯಶಸ್ವಿ ಆಯೋಜನೆ. ದೇಶದ ಪ್ರತಿಯೊಂದು ಭಾಗದಿಂದ, ಸಮಾಜದ ಪ್ರತಿಯೊಂದು ವರ್ಗದಿಂದ, ಎಲ್ಲಾ ವಯೋಮಾನದ ಜನರಿಂದ ನನಗೆ ಅಸಂಖ್ಯ ಪತ್ರಗಳು ಬಂದಿವೆ. ಚಂದ್ರಯಾನ-3 ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯುತ್ತಿದ್ದಾಗ, ವಿವಿಧ ಮಾಧ್ಯಮಗಳ ಮೂಲಕ ಕೋಟ್ಯಾಂತರ ಜನರು ಏಕಕಾಲದಲ್ಲಿ ಈ ಘಟನೆಯ ಪ್ರತಿ ಕ್ಷಣವನ್ನು ಸಾಕ್ಷೀಕರಿಸಿದ್ದಾರೆ. ಇಸ್ರೋದ ಯೂಟ್ಯೂಬ್ ಲೈವ್ ಚಾನೆಲ್‌ನಲ್ಲಿ 80 ಲಕ್ಷಕ್ಕೂ ಹೆಚ್ಚು ಜನರು ಘಟನೆಯನ್ನು ವೀಕ್ಷಿಸಿದ್ದು ಸ್ವತಃ ಒಂದು ದಾಖಲೆಯಾಗಿದೆ. ಇದರಿಂದ ಚಂದ್ರಯಾನ-3 ರ ಕುರಿತು ಕೋಟ್ಯಾಂತರ ಭಾರತೀಯರ ಬಾಂಧವ್ಯ ಎಷ್ಟು ಗಾಢವಾಗಿದೆ ಎಂಬುದರ ಅರಿವಾಗುತ್ತದೆ. ಇತ್ತೀಚೆಗೆ ದೇಶದಲ್ಲಿ ಚಂದ್ರಯಾನದ ಈ ಯಶಸ್ಸಿನ ಕುರಿತು, ಅದ್ಭುತವಾದ ಒಂದು ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಮತ್ತು ಅದನ್ನು 'ಚಂದ್ರಯಾನ-3 ಮಹಾಕ್ವಿಜ್' ಎಂದು ಹೆಸರಿಸಲಾಗಿದೆ. MyGov ಪೋರ್ಟಲ್‌ನಲ್ಲಿ ನಡೆಯುತ್ತಿರುವ ಈ ಸ್ಪರ್ಧೆಯಲ್ಲಿ ಇದುವರೆಗೆ 15 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. MyGov ವೇದಿಕೆ ಆರಂಭಿಸಿದಂದಿನಿಂದ ಒಂದು ರಸಪ್ರಶ್ನೆಯಲ್ಲಿ ಜನರ ಅತಿ ದೊಡ್ಡ ಭಾಗವಹಿಸುವಿಕೆ ಇದಾಗಿದೆ. ನೀವು ಇನ್ನೂ ಇದರಲ್ಲಿ ಭಾಗವಹಿಸಿಲ್ಲವೆಂದಾದರೆ, ತಡ ಮಾಡಬೇಡಿ, ಇನ್ನೂ ಆರು ದಿನಗಳು ಬಾಕಿ ಇವೆ ಎಂದು ನಿಮಗೆ ಹೇಳಬಯಸುತ್ತೇನೆ. ಈ ರಸಪ್ರಶ್ನೆಯಲ್ಲಿ ಖಂಡಿತ ಭಾಗವಹಿಸಿ.

‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.04.2023 ರಂದು ಮಾಡಿದ ‘ಮನ್ ಕಿ ಬಾತ್’ – 100 ನೇ ಸಂಚಿಕೆಯ ಕನ್ನಡ ಅವತರಣಿಕೆ

April 30th, 11:31 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು 'ಮನದ ಮಾತಿನ' ನೂರನೇ ಸಂಚಿಕೆ. ನಿಮ್ಮೆಲ್ಲರಿಂದ ನನಗೆ ಸಾವಿರಾರು ಪತ್ರಗಳು, ಲಕ್ಷಗಟ್ಟಲೆ ಸಂದೇಶಗಳು ಬಂದಿವೆ ಮತ್ತು ನಾನು ಸಾಧ್ಯವಾದಷ್ಟು ಪತ್ರಗಳನ್ನು ಓದಲು, ಅವುಗಳನ್ನು ನೋಡಲು ಮತ್ತು ಸಂದೇಶಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ್ದೇನೆ. ನಿಮ್ಮ ಪತ್ರಗಳನ್ನು ಓದುವಾಗ ಹಲವು ಬಾರಿ ನಾನು ಭಾವುಕನಾದೆ, ಭಾವೋದ್ವೇಗಕ್ಕೆ ಒಳಗಾದೆ, ಭಾವೋದ್ವೇಗದ ಹೊಳೆಯಲ್ಲಿ ತೇಲಿ ಹೋದೆ ಜೊತೆಗೆ ನನ್ನನ್ನೂ ನಿಯಂತ್ರಿಸಿಕೊಂಡೆ. 'ಮನದ ಮಾತಿನ' 100 ನೇ ಸಂಚಿಕೆಗಾಗಿ ನೀವು ನನ್ನನ್ನು ಅಭಿನಂದಿಸಿದ್ದೀರಿ, ಆದರೆ ನಾನು ಮನಃ ಪೂರ್ವಕವಾಗಿ ಹೇಳುತ್ತಿದ್ದೇನೆ, ವಾಸ್ತವವಾಗಿ, ನೀವೆಲ್ಲರೂ 'ಮನದ ಮಾತಿನ' ಶ್ರೋತೃಗಳು, ನಮ್ಮ ದೇಶವಾಸಿಗಳು, ಅಭಿನಂದನೆಗೆ ಅರ್ಹರಾಗಿದ್ದೀರಿ. 'ಮನದ ಮಾತು' ಕೋಟ್ಯಂತರ ಭಾರತೀಯರ 'ಮನದ ಮಾತಾಗಿದೆ', ಅದು ಅವರ ಭಾವನೆಗಳ ಅಭಿವ್ಯಕ್ತಿಯಾಗಿದೆ.

ಪರಾಕ್ರಮ್ ದಿವಸ್ ದಂದು, ಲೋಕ ಕಲ್ಯಾಣ ಮಾರ್ಗ 7 ರಲ್ಲಿ 'ನೋ ಯುವರ್ ಲೀಡರ್' (ನಿಮ್ಮ ನಾಯಕನ ಬಗ್ಗೆ ತಿಳಿಯಿರಿ) ಕಾರ್ಯಕ್ರಮದ ಅಡಿಯಲ್ಲಿ ಸಂಸತ್ತಿನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಗೌರವಿಸುವ ಸಮಾರಂಭದಲ್ಲಿ ಭಾಗವಹಿಸಲು ಆಯ್ಕೆಯಾದ ಯುವಜನರೊಂದಿಗೆ ಪ್ರಧಾನಿ ಸಂವಾದ

January 23rd, 08:03 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಗೌರವಿಸುವ ಸಮಾರಂಭದಲ್ಲಿ ಭಾಗವಹಿಸಲು 'ನೋ ಯುವರ್ ಲೀಡರ್' (ನಿಮ್ಮ ನಾಯಕನ ಬಗ್ಗೆ ತಿಳಿಯಿರಿ) ಕಾರ್ಯಕ್ರಮದಡಿ ಆಯ್ಕೆಯಾದ ಯುವಜನರೊಂದಿಗೆ ಸಂವಾದ ನಡೆಸಿದರು. ಈ ಸಂವಾದವು ಲೋಕ ಕಲ್ಯಾಣ ಮಾರ್ಗದ 7 ನೇ ಸಂಖ್ಯೆಯ ಅವರ ನಿವಾಸದಲ್ಲಿ ನಡೆಯಿತು.

ಭಾರತದ ಜಿ20 ಅಧ್ಯಕ್ಷತೆಯ ಲಾಂಛನ, ಘೋಷವಾಕ್ಯ ಮತ್ತು ಜಾಲತಾಣ ಅನಾವರಣ

November 08th, 07:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತದ ಜಿ20 ಅಧ್ಯಕ್ಷತೆಯ ಲಾಂಛನ, ಘೋಷವಾಕ್ಯ ಮತ್ತು ಜಾಲತಾಣವನ್ನು ಅನಾವರಣಗೊಳಿಸಿದರು.

ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಅತ್ಯಂತ ಪರಿಣಾಮಕಾರಿ ಎಂದು ಜಗತ್ತು ಒಪ್ಪಿಕೊಂಡಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

September 25th, 11:00 am

ಕಳೆದ ಕೆಲವು ದಿನಗಳಲ್ಲಿ ನಮ್ಮ ಗಮನ ಸೆಳೆದ ವಿಷಯವೆಂದರೆ ಚೀತಾ. ಚೀತಾಗಳ ಬಗ್ಗೆ ಮಾತನಾಡುವಂತೆ ಸಾಕಷ್ಟು ಸಂದೇಶಗಳು ಬಂದಿವೆ. ಉತ್ತರ ಪ್ರದೇಶದ ಅರುಣ್ ಕುಮಾರ್ ಗುಪ್ತಾ ಅಥವಾ ತೆಲಂಗಾಣದ ಎನ್. ರಾಮಚಂದ್ರನ್ ರಘುರಾಮ್, ಗುಜರಾತ್ನ ರಾಜನ್ ಅಥವಾ ದೆಹಲಿಯ ಸುಬ್ರತಾ ಹೀಗೆ ದೇಶದ ಮೂಲೆ ಮೂಲೆಗಳಿಂದ ಚೀತಾಗಳು ಭಾರತಕ್ಕೆ ಮರಳಿದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. 130 ಕೋಟಿ ಭಾರತೀಯರು ಸಂತೋಷದಿಂದ, ಹೆಮ್ಮೆಯಿಂದ ಬೀಗಿದ್ದಾರೆ; ಇದು ಪ್ರಕೃತಿಯ ಬಗೆಗಿನ ಭಾರತದ ಪ್ರೀತಿ. ಈ ಬಗ್ಗೆ ಜನರು ಕೇಳುವ ಸಾಮಾನ್ಯ ಪ್ರಶ್ನೆಯೆಂದರೆ ಮೋದಿ ಜೀ, ಚೀತಾಗಳನ್ನು ನೋಡಲು ನಮಗೆ ಯಾವಾಗ ಅವಕಾಶ ಸಿಗುತ್ತದೆ?

ಹರ್ ಘರ್ ತಿರಂಗಾ ಆಂದೋಲನಕ್ಕೆ ಉತ್ಸಾಹಭರಿತ ಸ್ಪಂದನೆಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ

July 22nd, 02:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹರ್ ಘರ್ ತಿರಂಗಾ ಆಂದೋಲನಕ್ಕೆ ದೊರೆತ ಉತ್ಸಾಹಭರಿತ ಸ್ಪಂದನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.

ವ್ಯಾಪಕ ಸಮೃದ್ಧಿಗಾಗಿ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು ' ಸುಧಾರಣೆಗಳ 8 ವರ್ಷಗಳು' ಹಂಚಿಕೊಂಡ ಪ್ರಧಾನಿ

June 11th, 12:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಳೆದ 8 ವರ್ಷಗಳಲ್ಲಿ 'ಸುಲಭ ವ್ಯವಹಾರʼ ಕ್ಷೇತ್ರದಲ್ಲಿ ಮತ್ತು ವ್ಯಾಪಕ ಸಮೃದ್ಧಿಯನ್ನು ಹರಡಲು ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸಲು ಕೈಗೊಂಡಿರುವ ಸುಧಾರಣೆಗಳ ವಿವರಗಳನ್ನು ಹಂಚಿಕೊಂಡಿದ್ದಾರೆ. ಅವರು ʻಮೈಗವ್ʼನ(MyGov) ಟ್ವೀಟ್ ಥ್ರೆಡ್ ಅನ್ನು ಹಾಗೂ ತಮ್ಮ ವೆಬ್‌ಸೈಟ್‌ ಮತ್ತು ʻನಮೋ ಆ್ಯಪ್‌ʼನ ಲೇಖನಗಳನ್ನು ಹಂಚಿಕೊಂಡಿದ್ದಾರೆ.

'ಮಹಿಳಾ ಸಬಲೀಕರಣದ 8 ವರ್ಷಗಳು' ಕುರಿತ ವಿವರಗಳನ್ನು ಹಂಚಿಕೊಂಡ ಪ್ರಧಾನಿ

June 09th, 05:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾರಿ ಶಕ್ತಿಯ ಸಬಲೀಕರಣಕ್ಕಾಗಿ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿಯನ್ನು ಒಳಗೊಂಡಿರುವ, narendramodi.in ವೆಬ್‌ಸೈಟ್‌ನಲ್ಲಿ ಲಭ್ಯವಿರುವ ವಿವಿಧ ಲೇಖನಗಳ ವಿವರಗಳನ್ನು ಹಂಚಿಕೊಂಡಿದ್ದಾರೆ.

Start-ups are reflecting the spirit of New India: PM Modi during Mann Ki Baat

May 29th, 11:30 am

During Mann Ki Baat, Prime Minister Narendra Modi expressed his joy over India creating 100 unicorns. PM Modi said that start-ups were reflecting the spirit of New India and he applauded the mentors who had dedicated themselves to promote start-ups. PM Modi also shared thoughts on Yoga Day, his recent Japan visit and cleanliness.

ಅಸಂಖ್ಯಾತ ಭಾರತೀಯರಿಗೆ ತಮ್ಮ ಉದ್ಯಮಶೀಲತೆಯ ಕೌಶಲ್ಯಗಳನ್ನು ಪ್ರದರ್ಶಿಸಲು ಮತ್ತು ಉದ್ಯೋಗ ಸೃಷ್ಟಿಕರ್ತರಾಗಲು ಮುದ್ರಾ ಯೋಜನೆಯು ಅವಕಾಶವನ್ನು ನೀಡಿದೆ: ಪ್ರಧಾನಮಂತ್ರಿ

April 08th, 07:06 pm

ಪ್ರಧಾನಮಂತ್ರಿ ಮುದ್ರಾ ಯೋಜನೆ ಪ್ರಾರಂಭವಾದಾಗಿನಿಂದ, ಈ ಯೋಜನೆಯು ಅಸಂಖ್ಯಾತ ಭಾರತೀಯರಿಗೆ ತಮ್ಮ ಉದ್ಯಮಶೀಲತೆಯ ಕೌಶಲ್ಯಗಳನ್ನು ಪ್ರದರ್ಶಿಸಲು ಮತ್ತು ಏಳು ವರ್ಷಗಳಲ್ಲಿ ಉದ್ಯೋಗ ಸೃಷ್ಟಿಕರ್ತರಾಗಲು ಅವಕಾಶಗಳನ್ನು ಒದಗಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಈ ಏಳು ವರ್ಷಗಳಲ್ಲಿ ಮುದ್ರಾ ಯೋಜನೆಯು ಸಮೂಲಾಗ್ರ ಬದಲಾವಣೆಯನ್ನು ತಂದಿದೆ, ಹಾಗೂ ಘನತೆ ಮತ್ತು ಸಮೃದ್ಧಿಯನ್ನು ಹೆಚ್ಚಿಸಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.

ಸರಕಾರದ ಮುಖ್ಯಸ್ಥರಾಗಿ 20 ವರ್ಷಗಳನ್ನು ಪೂರ್ಣಗೊಳಿಸಿದ ಪ್ರಧಾನಮಂತ್ರಿಯವರ ಬಗ್ಗೆ ʻಮೈಗವ್ʼ ರಸಪ್ರಶ್ನೆ

October 07th, 11:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸರಕಾರದ ಮುಖ್ಯಸ್ಥರಾಗಿ 20 ವರ್ಷಗಳನ್ನು ಪೂರೈಸಿದ್ದಾರೆ. ಈ ಸಂದರ್ಭದಲ್ಲಿ, ʻಸೇವಾ ಸಮರ್ಪಣ್‌ ರಸಪ್ರಶ್ನೆ ಸ್ಪರ್ಧೆʼಯನ್ನು ʻಮೈಗವ್ಇಂಡಿಯಾʼ ಆಯೋಜಿಸುತ್ತಿದೆ.

ಮೈ ಗೌಗೆ 7 ವರ್ಷ ತುಂಬಿದ ಸಂದರ್ಭದಲ್ಲಿ ಮೈ ಗೌನ ಎಲ್ಲ ಸ್ವಯಂ ಸೇವಕರಿಗೆ ಮತ್ತು ಕೊಡುಗೆ ನೀಡಿದವರನ್ನು ಶ್ಲಾಘಿಸಿದ ಪ್ರಧಾನಮಂತ್ರಿ

July 26th, 06:41 pm

ಮೈ ಗೌ ವೇದಿಕೆಯನ್ನು ತಮ್ಮ ಕೊಡುಗೆಯ ಮೂಲಕ ಶ್ರೀಮಂತಗೊಳಿಸಿದ ಎಲ್ಲ ಸ್ವಯಂಸೇವಕರು ಮತ್ತು ಕೊಡುಗೆ ನೀಡಿದವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಭಾರತದ ವ್ಯಾಕ್ಸಿನೇಷನ್ ಅಭಿಯಾನವು ಜಗತ್ತಿಗೆ ಒಂದು ಅಧ್ಯಯನವಾಗಬಹುದು: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

June 27th, 11:30 am

ಮನ್ ಕಿ ಬಾತ್ ಸಂದರ್ಭದಲ್ಲಿ, ಮುಂಬರುವ ಟೋಕಿಯೊ ಒಲಿಂಪಿಕ್ಸ್ ಸೇರಿದಂತೆ ಹಲವಾರು ವಿಷಯಗಳ ಕುರಿತು ಪ್ರಧಾನಿ ಮೋದಿ ಮಾತನಾಡಿದರು, ದಿವಂಗತ ಮಿಲ್ಖಾ ಸಿಂಗ್ ಮತ್ತು ಅವರ ಕೊಡುಗೆಯನ್ನು ನೆನಪಿಸಿಕೊಂಡರು. ನಡೆಯುತ್ತಿರುವ ಲಸಿಕೆ ಅಭಿಯಾನದ ಬಗ್ಗೆ ಪ್ರಧಾನಿ ಮೋದಿ ಬೆಳಕು ಚೆಲ್ಲಿದರು ಮತ್ತು ಇದು ಜಗತ್ತಿಗೆ ಒಂದು ಅಧ್ಯಯನವಾಗಬಹುದು ಎಂದು ಹೇಳಿದರು. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಜನರೊಂದಿಗೆ ಮಾತನಾಡಿದ ಅವರು ಯಾವುದೇ ವದಂತಿಗಳಿಗೆ ಬಲಿಯಾಗದಂತೆ ಮತ್ತು ಲಸಿಕೆ ತೆಗೆದುಕೊಳ್ಳುವಂತೆ ಆಗ್ರಹಿಸಿದರು. ನೀರಿನ ಸಂರಕ್ಷಣೆ, ಅಮೃತ್ ಮಹೋತ್ಸವ್ ಮತ್ತು ಹೆಚ್ಚಿನವುಗಳ ಬಗ್ಗೆ ಪ್ರಧಾನಿ ಮಾತನಾಡಿದರು.