Mahayuti in Maharashtra, BJP-NDA in the Centre, this means double-engine government in Maharashtra: PM Modi in Chimur

November 12th, 01:01 pm

Campaigning in Maharashtra has gained momentum, with PM Modi addressing a public meeting in Chimur. Congratulating Maharashtra BJP on releasing an excellent Sankalp Patra, PM Modi said, “This manifesto includes a series of commitments for the welfare of our sisters, for farmers, for the youth, and for the development of Maharashtra. This Sankalp Patra will serve as a guarantee for Maharashtra's development over the next 5 years.

PM Modi addresses public meetings in Chimur, Solapur & Pune in Maharashtra

November 12th, 01:00 pm

Campaigning in Maharashtra has gained momentum, with PM Modi addressing multiple public meetings in Chimur, Solapur & Pune. Congratulating Maharashtra BJP on releasing an excellent Sankalp Patra, PM Modi said, “This manifesto includes a series of commitments for the welfare of our sisters, for farmers, for the youth, and for the development of Maharashtra. This Sankalp Patra will serve as a guarantee for Maharashtra's development over the next 5 years.

ಮಹಾರಾಷ್ಟ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

October 09th, 01:09 pm

ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಇತರ ಎಲ್ಲ ಗಣ್ಯರೇ ಮತ್ತು ಮಹಾರಾಷ್ಟ್ರದ ನನ್ನ ಪ್ರಿಯ ಸಹೋದರ ಸಹೋದರಿಯರೇ...

ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

October 09th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ ನಾಗ್ಪುರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಯೋಜನೆ ಮತ್ತು ಶಿರಡಿ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ಸೇರಿವೆ. ಶ್ರೀ ಮೋದಿ ಅವರು ಮಹಾರಾಷ್ಟ್ರದ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು ಮತ್ತು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್) ಮತ್ತು ಮಹಾರಾಷ್ಟ್ರದ ವಿದ್ಯಾ ಸಮೀಕ್ಷಾ ಕೇಂದ್ರ (ವಿಎಸ್ಕೆ) ಗಳನ್ನು ಉದ್ಘಾಟಿಸಿದರು.

ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ 'ಪಿಎಂ ವಿಶ್ವಕರ್ಮ' ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 20th, 11:45 am

2 ದಿನಗಳ ಹಿಂದೆಯಷ್ಟೇ ವಿಶ್ವಕರ್ಮ ಜಯಂತಿ ಆಚರಿಸಿದ್ದೆವು. ಇಂದು ನಾವು ವಾರ್ಧಾದ ಪವಿತ್ರ ಭೂಮಿಯಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಯಶಸ್ಸನ್ನು ಆಚರಿಸುತ್ತಿದ್ದೇವೆ. 1932ರ ಇದೇ ದಿನದಂದು ಮಹಾತ್ಮ ಗಾಂಧೀಜಿ ಅವರು ಅಸ್ಪೃಶ್ಯತೆಯ ವಿರುದ್ಧ ತಮ್ಮ ಅಭಿಯಾನ ಆರಂಭಿಸಿದ್ದರು ಎಂಬುದು ಇಂದಿನ ವಿಶೇಷ. ಈ ಹಿನ್ನೆಲೆಯಲ್ಲಿ ವಿನೋಬಾ ಭಾವೆ ಅವರ ಪುಣ್ಯಭೂಮಿ, ಮಹಾತ್ಮ ಗಾಂಧಿ ಅವರ ‘ಕರ್ಮಭೂಮಿ’ ಮತ್ತು ವಾರ್ಧಾ ಭೂಮಿಯಲ್ಲಿ ವಿಶ್ವಕರ್ಮ ಯೋಜನೆಯ 1 ವರ್ಷದ ಸಂಭ್ರಮಾಚರಣೆಯು ನಮ್ಮ ‘ವಿಕಸಿತ ಭಾರತ’(ಅಭಿವೃದ್ಧಿ ಹೊಂದಿದ ಭಾರತ)ದ ಸಂಕಲ್ಪಕ್ಕೆ ಹೊಸ ಚೈತನ್ಯ ನೀಡುವ ಸಾಧನೆ ಮತ್ತು ಸ್ಫೂರ್ತಿಯ ಸಂಗಮವಾಗಿದೆ. ವಿಶ್ವಕರ್ಮ ಯೋಜನೆ ಮೂಲಕ ನಾವು ಶ್ರಮದ ಮೂಲಕ ಸಮೃದ್ಧಿ ಮತ್ತು ಕೌಶಲ್ಯದ ಮೂಲಕ ಉತ್ತಮ ಭವಿಷ್ಯದ ಬದ್ಧತೆ ಹೊಂದಿದ್ದೇವೆ. ವಾರ್ಧಾದಲ್ಲಿ ಬಾಪು ಅವರ ಸ್ಫೂರ್ತಿಗಳು ಈ ಬದ್ಧತೆಗಳನ್ನು ಪೂರೈಸಲು ನಮಗೆ ಸಹಾಯ ಮಾಡುತ್ತದೆ. ಈ ಉಪಕ್ರಮಕ್ಕೆ ಸಂಬಂಧಿಸಿದ ಎಲ್ಲರಿಗೂ ಮತ್ತು ದೇಶಾದ್ಯಂತದ ಎಲ್ಲಾ ಫಲಾನುಭವಿಗಳಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

September 20th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ‘ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ’ಯೋಜನೆ ಮತ್ತು ‘ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ಮಹಿಳಾ ಸ್ಟಾರ್ಟಪ್ ಯೋಜನೆʼಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಫಲಾನುಭವಿಗಳಿಗೆ ಪ್ರಮಾಣಪತ್ರಗಳು ಮತ್ತು ಸಾಲಗಳನ್ನು ಬಿಡುಗಡೆ ಮಾಡಿದರು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಒಂದು ವರ್ಷದ ಪ್ರಗತಿಯನ್ನು ಗುರುತಿಸುವ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ಅಮರಾವತಿಯಲ್ಲಿ ಪ್ರಧಾನಮಂತ್ರಿ ಮೆಗಾ ಇಂಟಿಗ್ರೇಟೆಡ್ ಟೆಕ್ಸ್‌ಟೈಲ್ ರೀಜನ್‌ ಅಂಡ್‌ ಅಪಾರಲ್ (ಪಿಎಂ ಮಿತ್ರಾ) ಪಾರ್ಕ್‌ ಗೆ ಶ್ರೀ ಮೋದಿಯವರು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ಪ್ರಧಾನಿಯವರು ವೀಕ್ಷಿಸಿದರು.

ಇಂಡಿ ಅಲಯನ್ಸ್ ಗಣನೀಯ ಸಮಸ್ಯೆಗಳ ಕೊರತೆಯೊಂದಿಗೆ ಹೋರಾಡುತ್ತಿದೆ: ವಾರ್ಧಾದಲ್ಲಿ ಪ್ರಧಾನಿ ಮೋದಿ

April 19th, 06:00 pm

ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಸಭಿಕರ ಮನಸೂರೆಗೊಂಡರು. ಪ್ರಧಾನಮಂತ್ರಿಯವರು ಕೂಡ ನೆರೆದವರ ಮೇಲೆ ತಮ್ಮ ಪ್ರೀತಿ ಮತ್ತು ಅಭಿಮಾನವನ್ನು ಸುರಿಸಿದರು.

ಮಹಾರಾಷ್ಟ್ರದ ವಾರ್ಧಾದ ಉತ್ಸಾಹಿಗಳು ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿಯನ್ನು ಸ್ವಾಗತಿಸಿದರು

April 19th, 05:15 pm

ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಸಭಿಕರ ಮನಸೂರೆಗೊಂಡರು. ಪ್ರಧಾನಮಂತ್ರಿಯವರು ಕೂಡ ನೆರೆದವರ ಮೇಲೆ ತಮ್ಮ ಪ್ರೀತಿ ಮತ್ತು ಅಭಿಮಾನವನ್ನು ಸುರಿಸಿದರು.

ಮಹಾರಾಷ್ಟ್ರದ ಜನರು ದೇಶದ ಏಕತೆ ಮತ್ತು ಪ್ರಗತಿಗೆ ಮತ ನೀಡಬೇಕು, ಅವಕಾಶವಾದಿ ಮೈತ್ರಿಗಳ ವಿಭಜಕ ಅಜೆಂಡಾ ವಿರುದ್ಧ ಎಚ್ಚರಿಕೆ ವಹಿಸಬೇಕು: ರಾಮ್‌ಟೆಕ್‌ನಲ್ಲಿ ಪ್ರಧಾನಿ ಮೋದಿ

April 10th, 06:30 pm

ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ರಾಮ್‌ಟೆಕ್‌ನಲ್ಲಿ ಉತ್ಸಾಹಭರಿತ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಕೊಡುಗೆ ನೀಡಿದ ಗೌರವಾನ್ವಿತ ನಾಯಕರು ಮತ್ತು ಐತಿಹಾಸಿಕ ವ್ಯಕ್ತಿಗಳಿಗೆ ಕೃತಜ್ಞತೆ ಮತ್ತು ಗೌರವವನ್ನು ವ್ಯಕ್ತಪಡಿಸುವ ಮೂಲಕ ಅವರು ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಬಾಬಾ ಜುಮ್‌ದೇವ್‌ಜಿ, ಗೊಂಡ ರಾಜ ಭಕ್ತಿ ಬುಲಂದ್ ಶಾ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಂತಹ ಪೂಜ್ಯ ವ್ಯಕ್ತಿಗಳಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ, ಸಮಾಜಕ್ಕೆ ಅವರ ಅಮೂಲ್ಯ ಕೊಡುಗೆಗಳನ್ನು ಶ್ಲಾಘಿಸಿದರು.

ಮಹಾರಾಷ್ಟ್ರದ ರಾಮ್‌ಟೆಕ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

April 10th, 06:00 pm

ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ರಾಮ್‌ಟೆಕ್‌ನಲ್ಲಿ ಉತ್ಸಾಹಭರಿತ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಕೊಡುಗೆ ನೀಡಿದ ಗೌರವಾನ್ವಿತ ನಾಯಕರು ಮತ್ತು ಐತಿಹಾಸಿಕ ವ್ಯಕ್ತಿಗಳಿಗೆ ಕೃತಜ್ಞತೆ ಮತ್ತು ಗೌರವವನ್ನು ವ್ಯಕ್ತಪಡಿಸುವ ಮೂಲಕ ಅವರು ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಬಾಬಾ ಜುಮ್‌ದೇವ್‌ಜಿ, ಗೊಂಡ ರಾಜ ಭಕ್ತಿ ಬುಲಂದ್ ಶಾ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಂತಹ ಪೂಜ್ಯ ವ್ಯಕ್ತಿಗಳಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ, ಸಮಾಜಕ್ಕೆ ಅವರ ಅಮೂಲ್ಯ ಕೊಡುಗೆಗಳನ್ನು ಶ್ಲಾಘಿಸಿದರು.

ತೆಲಂಗಾಣದ ಮಹಬೂಬ್ ನಗರದಲ್ಲಿ ನಡೆದ ವಿವಿಧ ಯೋಜನೆಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

October 01st, 02:43 pm

ತೆಲಂಗಾಣ ರಾಜ್ಯಪಾಲೆ ಶ್ರೀಮತಿ ತಮಿಳಿಸೈ ಸೌಂದರರಾಜನ್ ಜಿ, ನನ್ನ ಸಹೋದ್ಯೋಗಿ ಮತ್ತು ಕೇಂದ್ರ ಸರ್ಕಾರದ ಸಚಿವರು ಶ್ರೀ ಜಿ. ಕಿಶನ್ ರೆಡ್ಡಿ ಜಿ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀ ಸಂಜಯ್ ಕುಮಾರ್ ಬಂಡಿ ಜೀ, ಇಲ್ಲಿ ಉಪಸ್ಥಿತರಿರುವ ಇತರ ಎಲ್ಲ ಗಣ್ಯರೇ, ಮಹಿಳೆಯರೇ ಮತ್ತು ಸಜ್ಜನರೇ!

ಪ್ರಧಾನಮಂತ್ರಿಯವರು ತೆಲಂಗಾಣದ ಮಹಬೂಬ್‌ ನಗರದಲ್ಲಿ 13,500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು

October 01st, 02:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಮಹಬೂಬ್‌ ನಗರದಲ್ಲಿ 13,500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಅಭಿವೃದ್ಧಿ ಯೋಜನೆಗಳು ರಸ್ತೆ, ರೈಲು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಉನ್ನತ ಶಿಕ್ಷಣದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡಿವೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರೈಲು ಸೇವೆಗೆ ಚಾಲನೆ ನೀಡಿದರು.

ಅಕ್ಟೋಬರ್ 1ರಂದು ತೆಲಂಗಾಣಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿಯವರು

September 29th, 02:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 2023ರ ಅಕ್ಟೋಬರ್ 1ರಂದು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2:15ರ ಸುಮಾರಿಗೆ ಪ್ರಧಾನಮಂತ್ರಿಯವರು ಮೆಹಬೂಬ್ ನಗರಕ್ಕೆ ತಲುಪಲಿದ್ದು, ಅವರು ರಸ್ತೆ, ರೈಲು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಉನ್ನತ ಶಿಕ್ಷಣದಂತಹ ಪ್ರಮುಖ ಕ್ಷೇತ್ರಗಳಲ್ಲಿ 13,500 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರೈಲು ಸೇವೆಗೂ ಹಸಿರು ನಿಶಾನೆಯನ್ನು ತೋರಲಿದ್ದಾರೆ.

ಮಹಾರಾಷ್ಟ್ರದ ಪುಣೆಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

August 01st, 02:00 pm

ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ರಮೇಶ್ ಬೈಸ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಅವರೇ ಮತ್ತು ಅಜಿತ್ ಪವಾರ್ ಅವರೇ, ದಿಲೀಪ್ ಅವರೇ, ಇತರ ಸಚಿವರೇ, ಸಂಸದರೇ, ಶಾಸಕರು ಮತ್ತು ಸಹೋದರ -ಸಹೋದರಿಯರೇ!

ಮಹಾರಾಷ್ಟ್ರದ ಪುಣೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ.

August 01st, 01:41 pm

ಪುಣೆಯ ಮೆಟ್ರೋದಲ್ಲಿ ಪೂರ್ಣಗೊಂಡ ವಿಭಾಗಗಳಲ್ಲಿ ಮೆಟ್ರೋ ರೈಲಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿದರು. ಪಿಂಪ್ರಿ ಚಿನ್ ಚನ್ ವಾಡ್ ನಗರ ಪಾಲಿಕೆ [ಪಿಸಿಎಂಸಿ] ವ್ಯಾಪ್ತಿಯಡಿ 1280 ಮನೆಗಳನ್ನು ಅವರು ಹಸ್ತಾಂತರಿಸಿದರು ಮತ್ತು ಪುಣೆ ನಗರ ಪಾಲಿಕೆಯಿಂದ ಪಿಎಂಎವೈ ಯೋಜನೆಯಡಿ 2650ಕ್ಕೂ ಹೆಚ್ಚು ಮನೆಗಳನ್ನು ಫಲಾನುಭವಿಗಳಿಗಾಗಿ ನಿರ್ಮಿಸಲಾಗಿದೆ. ಪಿಸಿಎಂಸಿಯಿಂದ ಸುಮಾರು 1190 ಪಿಎಂಎವೈ ಮನೆಗಳ ನಿರ್ಮಾಣಕ್ಕೆ ಅವರು ಶಿಲಾನ್ಯಾಸ ನೆರವೇರಿಸಿದರು. ಪುಣೆ ಮೆಟ್ರೋಪಾಲಿಟಿನ್ ಪ್ರದೇಶಾಭಿವೃದ್ಧಿ ಪ್ರಾಧಿಕಾರದಿಂದ 6400ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ. ಪಿಸಿಎಂಸಿ ಅಭಿವೃದ್ಧಿಯಿಂದ 300 ಕೋಟಿ ರೂಪಾಯಿ ವೆಚ್ಚದಲ್ಲಿ ತ್ಯಾಜ್ಯದಿಂದ ಇಂಧನ ಉತ್ಪಾದಿಸುವ ಘಟಕವನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು.

ಎನ್ಎಬಿಎಚ್ ಮಾನ್ಯತೆ ಪಡೆದ ನಾಗ್ಪುರದ ಎಐಐಎಂಎಸ್ ತಂಡವನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ

June 01st, 10:24 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎನ್ಎಬಿಎಚ್ ಮಾನ್ಯತೆ ಪಡೆದ ಎಲ್ಲಾ ಎಐಐಎಂಎಸ್ ಗಳ ಪೈಕಿ ಮೊದಲನೇ ಸ್ಥಾನ ಪಡೆದಿರುವ ಎಐಐಎಂಎಸ್ ನಾಗ್ಪುರದ ತಂಡವನ್ನು ಅಭಿನಂದಿಸಿದ್ದಾರೆ.

​​​​​​​ಬಿಲಾಸ್ಪುರ್, ರಾಯ್ಪುರ, ಸಂಬಲ್ಪುರ್, ನಾಗ್ಪುರ ಮತ್ತು ಛತ್ತೀಸ್ಗಢದ ವಾಲ್ಟೇರ್ ವಿಭಾಗಗಳಲ್ಲಿ 100% ರೈಲ್ವೆ ವಿದ್ಯುದ್ದೀಕರಣಕ್ಕೆ ಪ್ರಧಾನಮಂತ್ರಿ ಶ್ಲಾಘನೆ

March 25th, 11:21 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸ್ಗಢ ರಾಜ್ಯದ ಬಿಲಾಸ್ಪುರ ವಿಭಾಗ, ರಾಯ್ಪುರ ವಿಭಾಗ, ಸಂಬಲ್ಪುರ ವಿಭಾಗ, ನಾಗ್ಪುರ ವಿಭಾಗ ಮತ್ತು ವಾಲ್ಟೈರ್ ವಿಭಾಗಗಳಲ್ಲಿ ರೈಲ್ವೆಯ 100% ವಿದ್ಯುದ್ದೀಕರಣ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

108 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ (ISC) ನಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅವತರಣಿಕೆ

January 03rd, 10:40 am

'ಭಾರತೀಯ ವಿಜ್ಞಾನ ಕಾಂಗ್ರೆಸ್' ಆಯೋಜಿಸಿದ್ದಕ್ಕಾಗಿ ನಿಮಗೆಲ್ಲರಿಗೂ ಅಭಿನಂದನೆಗಳು. ಮುಂದಿನ 25 ವರ್ಷಗಳಲ್ಲಿ ಭಾರತ ಉತ್ತುಂಗಕ್ಕೇರುವಾಗ ಭಾರತದ ವೈಜ್ಞಾನಿಕ ಶಕ್ತಿಯ ಪಾತ್ರ ಬಹಳ ಮಹತ್ವದ್ದಾಗಿದೆ. ದೇಶಕ್ಕೆ ಸೇವೆ ಸಲ್ಲಿಸುವ ಸಂಕಲ್ಪವನ್ನು ವಿಜ್ಞಾನದ ಉತ್ಸಾಹದೊಂದಿಗೆ ಸಂಯೋಜಿಸಿದಾಗ ಅಭೂತಪೂರ್ವ ಫಲಿತಾಂಶಗಳು ಅದನ್ನು ಅನುಸರಿಸಿ ಬರುತ್ತವೆ. ದೇಶದ ವೈಜ್ಞಾನಿಕ ಸಮುದಾಯವು 21 ನೇ ಶತಮಾನದಲ್ಲಿ ಭಾರತಕ್ಕೆ ಅರ್ಹವಾದ ಸ್ಥಾನವನ್ನು ಗಳಿಸಲು ಸಹಾಯ ಮಾಡುತ್ತದೆ ಎಂಬ ಬಗ್ಗೆ ನನಗೆ ವಿಶ್ವಾಸವಿದೆ. ಈ ನಂಬಿಕೆಯ ಕಾರಣವನ್ನು ನಾನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ವೀಕ್ಷಣೆ ಅಥವಾ ನಿಕಟ ನಿಗಾ ವಿಜ್ಞಾನದ ಮೂಲ ಅಡಿಪಾಯ ಎಂದು ನಿಮಗೆಲ್ಲರಿಗೂ ತಿಳಿದಿದೆ. ವಿಜ್ಞಾನಿಗಳು ವೀಕ್ಷಣೆಯ ಮೂಲಕ ಮಾದರಿಗಳನ್ನು ಅನುಸರಿಸುತ್ತಾರೆ ಮತ್ತು ಆ ಮಾದರಿಗಳನ್ನು ವಿಶ್ಲೇಷಿಸಿದ ನಂತರ ಅವರು ತೀರ್ಮಾನಕ್ಕೆ ಬರುತ್ತಾರೆ.

​​​​​​​108ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದ ಪ್ರಧಾನಮಂತ್ರಿ

January 03rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 108ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ (ಐಎಸ್ ಸಿ)ಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಈ ವರ್ಷದ ಐಎಸ್ ಸಿಯ ಕೇಂದ್ರ ಧ್ಯೇಯವಾಕ್ಯ ಮಹಿಳಾ ಸಬಲೀಕರಣದೊಂದಿಗೆ ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬುದಾಗಿದ್ದು, ಇದು ಸುಸ್ಥಿರ ಅಭಿವೃದ್ಧಿ, ಮಹಿಳಾ ಸಬಲೀಕರಣ ಮತ್ತು ಇದನ್ನು ಸಾಧಿಸುವಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಪಾತ್ರದ ಬಗ್ಗೆ ಚರ್ಚೆಗಳಿಗೆ ಸಾಕ್ಷಿಯಾಗಲಿದೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ

December 11th, 11:50 am

ವೇದಿಕೆಯಲ್ಲಿರುವ ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಭಗತ್ ಸಿಂಗ್, ಜನಪ್ರಿಯ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಈ ಮಣ್ಣಿನ ಮಕ್ಕಳು ಮತ್ತು ಮಹಾರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸುತ್ತಿರುವವರು, ಶ್ರೀ ದೇವೇಂದ್ರಜಿ, ನಿತೀನ್‌ಜಿ, ರಾವ್ ಸಾಹೇಬ್ ದಾನ್ವೆ, ಡಾ. ಭಾರತಿ ತಾಯಿ. ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುಚ ನಾಗ್ಪುರದ ನನ್ನ ಪ್ರೀತಿಯ ಸಹೋದರ,ಸಹೋದರಿಯರೇ...