ಅಖಿಲ ಭಾರತ ಆಯುರ್ವೇದ ಸಂಸ್ಥೆ(ಎಐಐಎ)ಯಲ್ಲಿ ಬಹುಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 29th, 01:28 pm

ಈ ಅರ್ಥಪೂರ್ಣ ಸಮಾರಂಭದಲ್ಲಿ ಉಪಸ್ಥಿತರಿರುವ ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಜಿ, ಮನ್ಸುಖ್ ಮಾಂಡವಿಯಾ ಜಿ, ಪ್ರತಾಪ್ ರಾವ್ ಜಾಧವ್ ಜಿ, ಶ್ರೀಮತಿ. ಅನುಪ್ರಿಯಾ ಪಟೇಲ್ ಜಿ, ಮತ್ತು ಶೋಭಾ ಕರಂದ್ಲಾಜೆ ಜಿ, ಈ ಭಾಗದ ನನ್ನ ಸಂಸದ, ಶ್ರೀ ರಾಮ್‌ವೀರ್ ಸಿಂಗ್ ಬಿಧುರಿ ಜಿ, ವಿವಿಧ ರಾಜ್ಯಗಳಿಂದ ವಾಸ್ತವಿಕ(ವರ್ಚುವಲ್) ಸಂಪರ್ಕ ಹೊಂದಿರುವ ಗೌರವಾನ್ವಿತ ರಾಜ್ಯಪಾಲರು, ಮಾನ್ಯ ಮುಖ್ಯಮಂತ್ರಿಗಳು, ಸಂಸದರು, ಶಾಸಕರು, ಇತರೆ ಎಲ್ಲ ಗೌರವಾನ್ವಿತ ಪ್ರತಿನಿಧಿಗಳು, ವೈದ್ಯರು, ಆಯುರ್ವೇದ ವೈದ್ಯರು ಮತ್ತು ದೇಶದ ವಿವಿಧ ಭಾಗಗಳಿಂದ ಆರೋಗ್ಯ ಸಂಸ್ಥೆಗಳಿಗೆ ಸಂಬಂಧಿಸಿದ ಆಯುಷ್ ಮತ್ತು ಆರೋಗ್ಯ ವೃತ್ತಿಪರರು, ಆರೋಗ್ಯ ವ್ಯವಸ್ಥೆಯಲ್ಲಿ ತೊಡಗಿರುವ ಸಹೋದರ ಸಹೋದರಿಯರೆ, ಅಖಿಲ ಭಾರತ ಆಯುರ್ವೇದ ಸಂಸ್ಥೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿ, ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 12,850 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

October 29th, 01:00 pm

ಧನ್ವಂತರಿ ಜಯಂತಿ ಮತ್ತು 9ನೇ ಆಯುರ್ವೇದ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ (ಎಐಐಎ) ಸುಮಾರು 12,850 ಕೋಟಿ ರೂಪಾಯಿ ಮೌಲ್ಯದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಬಹು ಯೋಜನೆಗಳಿಗೆ ಚಾಲನೆ, ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

ಸ್ವಚ್ಛತಾ ಹಿ ಸೇವಾ​​​​​​​ 2024 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅನುವಾದ

October 02nd, 10:15 am

ಇಂದು ಪೂಜ್ಯ ಬಾಪೂ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜೀ ಅವರ ಜನ್ಮ ದಿನ. ಬಾಪು ಭಾರತೀಯ ಶ್ರೇಷ್ಠ ಪುತ್ರರಾಗಿದ್ದು, ಅವರಿಗಾಗಿ ಶಿರಬಾಗಿ ನಮಿಸುತ್ತೇನೆ. ಗಾಂಧೀಜಿ ಅವರ ಕನಸುಗಳನ್ನು ಸಾಕಾರಗೊಳಿಸಲು ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಲು ಇದು ಸ್ಫೂರ್ತಿಯ ದಿನ. ದೇಶದ ಈ ಮಹಾನ್ ವ್ಯಕ್ತಿಗಳು ಭಾರತದ ಭವಿಷ್ಯವನ್ನು ಆಗಲೇ ಕಲ್ಪನೆ ಮಾಡಿಕೊಂಡಿದ್ದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ದಿವಸ್ 2024 ರಲ್ಲಿ ಭಾಗವಹಿಸಿದರು

October 02nd, 10:10 am

ಸ್ವಚ್ಛತೆಗಾಗಿ ಅತ್ಯಂತ ಮಹತ್ವದ ಜನಾಂದೋಲನಗಳಲ್ಲಿ ಒಂದಾದ ಸ್ವಚ್ಛ ಭಾರತ ಅಭಿಯಾನ ಪ್ರಾರಂಭವಾಗಿ 10 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಕ್ಟೋಬರ್ 2 ರಂದು 155 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಸ್ವಚ್ಛ ಭಾರತ ದಿವಸ್ 2024 ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ. ಅಮೃತ್ ಮತ್ತು ಅಮೃತ್ 2.0, ಸ್ವಚ್ಛ ಗಂಗಾ ರಾಷ್ಟ್ರೀಯ ಮಿಷನ್ ಮತ್ತು ಗೋಬರ್ಧನ್ ಯೋಜನೆ ಸೇರಿದಂತೆ 9600 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹಲವಾರು ನೈರ್ಮಲ್ಯ ಮತ್ತು ಸ್ವಚ್ಛತೆ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಅಡಿಪಾಯ ಹಾಕಿದರು. ಸ್ವಚ್ಛತಾ ಹಿ ಸೇವಾ 2024 ರ ಧ್ಯೇಯ 'ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ' ಆಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜಲ ಸಂಚಯ್ ಜನ ಭಾಗೀದಾರಿʼ ಉಪಕ್ರಮಕ್ಕೆ ಚಾಲನೆ ನೀಡಿದರು

September 06th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್‌ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಜಲ ಸಂಚಯ್ ಜನ ಭಾಗೀದಾರಿ' ಉಪಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಡಿಯಲ್ಲಿ, ಮಳೆ ನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯ ನೀರಿನ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ರಚನೆಗಳನ್ನು ನಿರ್ಮಿಸಲಾಗುತ್ತಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜಲ ಸಂಚಯ್ ಜನ ಭಾಗೀದಾರಿʼ ಉಪಕ್ರಮಕ್ಕೆ ಚಾಲನೆ ನೀಡಿದರು

September 06th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್‌ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಜಲ ಸಂಚಯ್ ಜನ ಭಾಗೀದಾರಿ' ಉಪಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಡಿಯಲ್ಲಿ, ಮಳೆ ನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯ ನೀರಿನ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ರಚನೆಗಳನ್ನು ನಿರ್ಮಿಸಲಾಗುತ್ತಿದೆ.

Our govt is engaged in enhancing the capabilities of every poor, tribal, dalit & deprived person of country: PM

March 02nd, 03:00 pm

Prime Minister Narendra Modi dedicated to the nation and laid the foundation stone for multiple development projects worth Rs 21,400 crores in Aurangabad, Bihar. Addressing the gathering, the Prime Minister said that a new chapter of Bihar’s development is being written today on the land of Aurangabad which has given birth to many freedom fighters and great personalities such as Bihar Vibhuti Shri Anugrah Narayan.

ಬಿಹಾರದ ಔರಂಗಾಬಾದ್ ನಲ್ಲಿ ಸುಮಾರು 21,400 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ

March 02nd, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಔರಂಗಾಬಾದ್ ನಲ್ಲಿ ಇಂದು ಸುಮಾರು 21,400 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ರಸ್ತೆ, ರೈಲ್ವೆ ಮತ್ತು ನಮಾಮಿ ಗಂಗೆ ಮತ್ತಿತರ ಯೋಜನೆಗಳು ಸೇರಿವೆ. ಪ್ರಧಾನಮಂತ್ರಿ ಅವರು ಫೋಟೋ ಗ್ಯಾಲರಿಯಲ್ಲಿ ಓಡಾಡಿ ವೀಕ್ಷಿಸಿದರು.

ಸ್ವೀಕರಿಸಿದ ಸ್ಮರಣಿಕೆಗಳ ಹರಾಜಿನಲ್ಲಿ ಪಾಲ್ಗೊಳ್ಳಲು ನಾಗರಿಕರಿಗೆ ಪ್ರಧಾನಮಂತ್ರಿ ಉತ್ತೇಜನ

October 27th, 01:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತಾವು ಸ್ವೀಕರಿಸಿದ ಸ್ಮರಣಿಕೆಗಳನ್ನು ತಮ್ಮದಾಗಿಸಿಕೊಳ್ಳಲು ಹರಾಜಿನಲ್ಲಿ ಪಾಲ್ಗೊಳ್ಳುವಂತೆ ಮತ್ತು ತಮ್ಮ ಬಿಡ್ ಗಳನ್ನು ಸಲ್ಲಿಸುವಂತೆ ನಾಗರಿಕರನ್ನು ಉತ್ತೇಜಿಸಿದ್ದಾರೆ. ಇದರಿಂದ ಬರುವ ಹಣವನ್ನು ನಮಾಮಿ ಗಂಗೆಗೆ ಅರ್ಪಿಸಲಾಗಿದೆ ಎಂದು ಶ್ರೀ ನರೇಂದ್ರ ಮೋದಿ ಮಾಹಿತಿ ನೀಡಿದರು.

ಎನ್ ಜಿಎಂಎನಲ್ಲಿ ಪ್ರಧಾನಮಂತ್ರಿ ಅವರಿಗೆ ನೀಡಿದ ಉಡುಗೊರೆಗಳು ಮತ್ತು ಸ್ಮರಣಿಕೆಗಳನ್ನು ಪ್ರದರ್ಶಿಸುವ ಪ್ರದರ್ಶನ

October 02nd, 04:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ ನಲ್ಲಿ ತಮಗೆ ನೀಡಲಾದ ವ್ಯಾಪಕ ಶ್ರೇಣಿಯ ಉಡುಗೊರೆಗಳು ಮತ್ತು ಸ್ಮರಣಿಕೆಗಳನ್ನು ಪ್ರದರ್ಶಿಸುವ ಪ್ರದರ್ಶನದ ಬಗ್ಗೆ ಹಂಚಿಕೊಂಡಿದ್ದಾರೆ.

Lokmanya Tilak was a great institution builder and a nurturer of traditions: PM Modi

August 01st, 12:00 pm

PM Modi was conferred the Lokmanya Tilak National Award in Pune. PM Modi described the honour bestowed on him by the place and institution directly linked with the Lokmanya as ‘unforgettable’. He dedicated the Lokmanya Tilak Award to the 140 crore citizens of India. He assured them that the government will leave no stone unturned to help them achieve their dreams and aspirations. The Prime Minister also donated the cash prize to the Namami Gange Project.

ಮಹಾರಾಷ್ಟ್ರದ ಪುಣೆಯಲ್ಲಿ ಪ್ರಧಾನಮಂತ್ರಿಯವರಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

August 01st, 11:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಂದು ಮಹಾರಾಷ್ಟ್ರದ ಪುಣೆಯಲ್ಲಿ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಲೋಕಮಾನ್ಯ ತಿಲಕರ ಪರಂಪರೆಯನ್ನು ಉತ್ತೇಜಿಸಲು ಹಾಗೂ ಅವರ ಸ್ಮರಣಾರ್ಥ 1983ರಲ್ಲಿ ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ ಈ ಪ್ರಶಸ್ತಿಯನ್ನು ಸ್ಥಾಪಿಸಿತು. ನಗದು ಬಹುಮಾನವನ್ನು ನಮಾಮಿ ಗಂಗೆ ಯೋಜನೆಗೆ ಪ್ರಧಾನಮಂತ್ರಿ ಕೊಡುಗೆಯಾಗಿ ನೀಡಿದರು.

ಜಿ20 ಪರಿಸರ ಮತ್ತು ಹವಾಮಾನ ಸುಸ್ಥಿರತೆ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ

July 28th, 09:01 am

ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತ ನಗರವಾದ ಚೆನ್ನೈಗೆ ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ! ಮಾಮಲ್ಲಪುರಂನ ಯುನೆಸ್ಕೋ ವಿಶ್ವ ಪರಂಪರೆಯ ತಾಣವನ್ನು ಸಂದರ್ಶಿಸಲು ನಿಮಗೆ ಸ್ವಲ್ಪ ಸಮಯ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ. ಸ್ಪೂರ್ತಿದಾಯಕ ಕಲ್ಲಿನ ಕೆತ್ತನೆಗಳು ಮತ್ತು ಉತ್ತಮ ಸೌಂದರ್ಯದೊಂದಿಗೆ, ಇದೊಂದು ಭೇಟಿ ನೀಡಲೇಬೇಕಾದ ತಾಣವಾಗಿದೆ.

ಚೆನ್ನೈನಲ್ಲಿ `ಜಿ-20 ಪರಿಸರ ಮತ್ತು ಹವಾಮಾನ ಸಚಿವರ ಸಭೆ'ಯನ್ನು ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ

July 28th, 09:00 am

ಚೆನ್ನೈಗೆ ಗಣ್ಯರನ್ನು ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈ ನಗರವು ಶ್ರೀಮಂತ ಸಂಸ್ಕೃತಿ ಮತ್ತು ಇತಿಹಾಸವನ್ನು ಹೊಂದಿದೆ ಎಂದರು. ʻಯುನೆಸ್ಕೋʼ ವಿಶ್ವ ಪರಂಪರೆಯ ತಾಣವಾಗಿರುವ ಮಾಮಲ್ಲಪುರಂನ 'ನೋಡಲೇಬೇಕಾದ' ತಾಣವನ್ನು ಅನ್ವೇಷಿಸುವಂತೆ ಅವರು ಗಣ್ಯರನ್ನು ಒತ್ತಾಯಿಸಿದರು. ಅಲ್ಲಿನ ಸ್ಪೂರ್ತಿದಾಯಕ ಕಲ್ಲಿನ ಕೆತ್ತನೆಗಳು ಮತ್ತು ಅದರ ಅದ್ಭುತ ಸೌಂದರ್ಯವನ್ನು ಅನುಭವಿಸುವಂತೆ ಉತ್ತೇಜಿಸಿದರು.

ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

March 24th, 05:42 pm

ಇದು ಮಂಗಳಕರ ನವರಾತ್ರಿ ಅವಧಿಯಾಗಿದೆ. ಇಂದು ಚಂದ್ರಘಂಟಾ ಮಾತೆಯ ಆರಾಧನಾ ದಿನವಾಗಿದೆ. ಇಂದು ಕಾಶಿಯ ಈ ಶುಭ ಸಂದರ್ಭದಲ್ಲಿ ನಾನು ನಿಮ್ಮ ನಡುವೆ ಇರುವುದು ನನ್ನ ಸೌಭಾಗ್ಯ. ಚಂದ್ರಘಂಟಾ ಮಾತೆಯ ಆಶೀರ್ವಾದದಿಂದ, ಇಂದು ಬನಾರಸ್‌ನ ಸಂತೋಷ ಮತ್ತು ಸಮೃದ್ಧಿಗೆ ಮತ್ತೊಂದು ಅಧ್ಯಾಯ ಸೇರ್ಪಡೆಯಾಗುತ್ತಿದೆ. ಇಂದು ಇಲ್ಲಿ ಸಾರ್ವಜನಿಕ ಸಾರಿಗೆ ʻರೋಪ್ ವೇʼಗೆ ಶಂಕುಸ್ಥಾಪನೆ ಮಾಡಲಾಗಿದೆ. ಬನಾರಸ್‌ನ ಸರ್ವಾಂಗೀಣ ಅಭಿವೃದ್ಧಿಗೆ ಸಂಬಂಧಿಸಿದ ಸಾವಿರಾರು ಕೋಟಿ ರೂಪಾಯಿಗಳ ಇತರ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಅಥವಾ ಶಂಕುಸ್ಥಾಪನೆ ಮಾಡಲಾಗಿದೆ. ಇವುಗಳಲ್ಲಿ ಕುಡಿಯುವ ನೀರು, ಆರೋಗ್ಯ, ಶಿಕ್ಷಣ, ಗಂಗಾ ಮಾತೆಯ ಸ್ವಚ್ಛತೆ, ಪ್ರವಾಹ ನಿಯಂತ್ರಣ, ಪೊಲೀಸ್ ಘಟಕ, ಕ್ರೀಡಾ ಘಟಕ ಮುಂತಾದ ಅನೇಕ ಯೋಜನೆಗಳು ಸೇರಿವೆ. ಇಂದು, ʻಐಐಟಿ ಬಿಎಚ್‌ಯುʼನಲ್ಲಿ 'ಮೆಷಿನ್ ಟೂಲ್ಸ್ ಡಿಸೈನ್ ಕುರಿತಾದ ಉತ್ಕೃಷ್ಟತಾ ಕೇಂದ್ರʼಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಬನಾರಸ್ ಮತ್ತೊಂದು ವಿಶ್ವದರ್ಜೆಯ ಸಂಸ್ಥೆಯನ್ನು ಪಡೆಯಲಿದೆ. ಈ ಎಲ್ಲಾ ಯೋಜನೆಗಳಿಗಾಗಿ ಬನಾರಸ್ ಮತ್ತು ಪೂರ್ವಾಂಚಲದ ಜನರಿಗೆ ಅನೇಕ ಅಭಿನಂದನೆಗಳು.

​​​​​​​ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಮಂತ್ರಿಯವರು 1780 ಕೋಟಿ ರೂ.ಗೂ ಹೆಚ್ಚು ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು

March 24th, 01:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಾಣಸಿಯಲ್ಲಿ 1780 ಕೋಟಿ ರೂ.ಗೂ ಹೆಚ್ಚು ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಿದರು. ವಾರಾಣಸಿ ಕಂಟೋನ್ಮೆಂಟ್‌ ನಿಲ್ದಾಣದಿಂದ ಗೋಡೋಲಿಯಾವರೆಗಿನ ಪ್ರಯಾಣಿಕರ ರೋಪ್‌ವೇಗೆ ಶಂಕುಸ್ಥಾಪನೆ, ನಮಾಮಿ ಗಂಗಾ ಯೋಜನೆಯಡಿ ಭಗವಾನ್‌ಪುರದಲ್ಲಿ 55 ಎಂಎಲ್‌ಡಿ ಒಳಚರಂಡಿ ಸಂಸ್ಕರಣಾ ಘಟಕ, ಸೇವಾಪುರಿಯ ಇಸರ್ವಾರ್ ಗ್ರಾಮದಲ್ಲಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಿಂದ ನಿರ್ಮಾಣಗೊಳ್ಳಲಿರುವ ಎಲ್‌ಪಿಜಿ ಬಾಟ್ಲಿಂಗ್ ಘಟಕ, ಸಿಗ್ರಾ ಸ್ಟೇಡಿಯಂನ 2 ಮತ್ತು 3 ನೇ ಹಂತಗಳ ಪುನರಾಭಿವೃದ್ಧಿ, ಭರ್ತರಾ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಬಟ್ಟೆ ಬದಲಾಯಿಸುವ ಕೊಠಡಿಗಳೊಂದಿಗೆ ತೇಲುವ ಜೆಟ್ಟಿ ಈ ಯೋಜನೆಗಳಲ್ಲಿ ಸೇರಿವೆ. ಪ್ರಧಾನಮಂತ್ರಿಯವರು ಜಲ ಜೀವನ್ ಮಿಷನ್ ಅಡಿಯಲ್ಲಿ 19 ಕುಡಿಯುವ ನೀರಿನ ಯೋಜನೆಗಳನ್ನು ಲೋಕಾರ್ಪಣೆ ಮಾಡಿದರು, ಇದು 63 ಗ್ರಾಮ ಪಂಚಾಯತ್‌ಗಳ 3 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಮಿಷನ್ ಅಡಿಯಲ್ಲಿ 59 ಕುಡಿಯುವ ನೀರಿನ ಯೋಜನೆಗಳ ಶಂಕುಸ್ಥಾಪನೆಯನ್ನೂ ಅವರು ನೆರವೇರಿಸಿದರು. ಹಣ್ಣುಗಳು ಮತ್ತು ತರಕಾರಿಗಳ ಶ್ರೇಣೀಕರಣ, ವಿಂಗಡಣೆ ಮತ್ತು ಸಂಸ್ಕರಣೆಗಾಗಿ ಕಾರ್ಖಿಯಾನ್‌ನಲ್ಲಿ ನಿರ್ಮಿಸಿರುವ ಸಮಗ್ರ ಪ್ಯಾಕ್ ಹೌಸ್ ಅನ್ನು ಅವರು ದೇಶಕ್ಕೆ ಸಮರ್ಪಿಸಿದರು. ವಾರಾಣಸಿ ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ವಿವಿಧ ಯೋಜನೆಗಳನ್ನು ಪ್ರಧಾನಿ ಲೋಕಾರ್ಪಣೆ ಮಾಡಿದರು.

ಬ್ರಹ್ಮಕುಮಾರಿಯವರ 'ಜಲ-ಜನ ಅಭಿಯಾನ'ಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ನೀಡಿದ ವಿಡಿಯೋ ಸಂದೇಶದ ಇಂಗ್ಲಿಷ್ ಅವತರಣಿಕೆ

February 16th, 01:00 pm

ಬ್ರಹ್ಮಕುಮಾರೀಸ್ ಸಂಸ್ಥೆಯ ಪ್ರಮುಖ್ ರಾಜಯೋಗಿನಿ ದಾದಿ ರತನ್ ಮೋಹಿನಿ ಜೀ, ನನ್ನ ಸಂಪುಟ ಸಹೋದ್ಯೋಗಿ ಗಜೇಂದ್ರ ಸಿಂಗ್ ಶೇಖಾವತ್ ಜೀ, ಬ್ರಹ್ಮ ಕುಮಾರಿಸ್ ಸಂಘಟನೆಯ ಎಲ್ಲಾ ಸದಸ್ಯರೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ! ಬ್ರಹ್ಮಕುಮಾರಿಯವರು ಪ್ರಾರಂಭಿಸಿದ 'ಜಲ-ಜನ ಅಭಿಯಾನ'ದ ಉದ್ಘಾಟನೆಗೆ ನಾನು ಇಲ್ಲಿಗೆ ಬಂದಿರುವುದು ನನಗೆ ಸಂತೋಷ ತಂದಿದೆ. ನಿಮ್ಮೆಲ್ಲರ ನಡುವೆ ಬರುವುದು ಮತ್ತು ನಿಮ್ಮಿಂದ ಕಲಿಯುವುದು ನನಗೆ ಸದಾ ವಿಶೇಷ ಸಂಗತಿಯಾಗಿದೆ. ದಿವಂಗತ ರಾಜಯೋಗಿನಿ ದಾದಿ ಜಾನಕಿ ಜೀ ಅವರಿಂದ ನಾನು ಪಡೆದ ಆಶೀರ್ವಾದಗಳು ನನ್ನ ದೊಡ್ಡ ಆಸ್ತಿ. ದಾದಿ ಪ್ರಕಾಶ್ ಮಣಿ ಜಿ ಅವರ ನಿಧನದ ನಂತರ ಅಬು ರೋಡ್ ನಲ್ಲಿ ಅವರಿಗೆ ನನ್ನ ಶ್ರದ್ಧಾಂಜಲಿಯನ್ನು ಅರ್ಪಿಸಿದ್ದು ನನಗೆ ನೆನಪಿದೆ. ಕಳೆದ ಕೆಲವು ವರ್ಷಗಳಿಂದ, ವಿವಿಧ ಕಾರ್ಯಕ್ರಮಗಳಿಗೆ ಬ್ರಹ್ಮ ಕುಮಾರಿ ಸಹೋದರಿಯರಿಂದ ನನಗೆ ಅನೇಕ ಆತ್ಮೀಯ ಆಹ್ವಾನಗಳು ಬಂದಿವೆ. ಈ ಆಧ್ಯಾತ್ಮಿಕ ಕುಟುಂಬದ ಸದಸ್ಯನಾಗಿ ನಾನು ಸದಾ ನಿಮ್ಮ ನಡುವೆ ಇರಲು ಪ್ರಯತ್ನಿಸುತ್ತೇನೆ.

ವಿಡಿಯೋ ಸಂದೇಶದ ಮೂಲಕ 'ಜಲ-ಜನ ಅಭಿಯಾನ'ಕ್ಕೆ ಚಾಲನೆ ನೀಡಿದ ಪ್ರಧಾನ ಮಂತ್ರಿಯವರ ಭಾಷಣ

February 16th, 12:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಡಿಯೋ ಸಂದೇಶದ ಮೂಲಕ ಬ್ರಹ್ಮಕುಮಾರಿಯವರ 'ಜಲ-ಜನ ಅಭಿಯಾನ'ವನ್ನು ಉದ್ದೇಶಿಸಿ ಭಾಷಣ ಮಾಡಿದರು.

ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ-ಎಂವಿ ಗಂಗಾ ವಿಲಾಸ್ ಮತ್ತು ಟೆಂಟ್ ಸಿಟಿಯ ಉದ್ಘಾಟನಾ ಸಮಾರಂಭದಲ್ಲಿನ ಪ್ರಧಾನಮಂತ್ರಿಯವರ ಭಾಷಣದ ಪಠ್ಯ...

January 13th, 10:35 am

ಇಂದು ಲೋಹ್ರಿ ಹಬ್ಬವು ಉತ್ಸಾಹದಿಂದ ಕೂಡಿದೆ. ಮುಂದಿನ ದಿನಗಳಲ್ಲಿ ಉತ್ತರಾಯಣ, ಮಕರ ಸಂಕ್ರಾಂತಿ, ಭೋಗಿ, ಬಿಹು, ಪೊಂಗಲ್ ಹೀಗೆ ಹಲವು ಹಬ್ಬಗಳನ್ನೂ ಆಚರಿಸುತ್ತೇವೆ. ದೇಶ ಮತ್ತು ಪ್ರಪಂಚದಲ್ಲಿ ಈ ಹಬ್ಬಗಳನ್ನು ಆಚರಿಸುತ್ತಿರುವ ಎಲ್ಲ ಜನರನ್ನು ನಾನು ಅಭಿನಂದಿಸಿ ಎಲ್ಲರಿಗೂ ನನ್ನ ಶುಭಾಶಯಗಳನ್ನು ಕೋರುತ್ತೇನೆ.

ಪ್ರಧಾನಮಂತ್ರಿಯವರಿಂದ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ವಾರಾಣಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ - ಎಂವಿ ಗಂಗಾ ವಿಲಾಸ್‌ಗೆ ಚಾಲನೆ ಮತ್ತು ಟೆಂಟ್ ಸಿಟಿ ಉದ್ಘಾಟನೆ

January 13th, 10:18 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಶ್ವದ ಅತಿ ಉದ್ದದ ನದಿ ವಿಹಾರ-ಎಂವಿ ಗಂಗಾ ವಿಲಾಸ್‌ಗೆ ಹಸಿರು ನಿಶಾನೆ ತೋರಿದರು ಮತ್ತು ಟೆಂಟ್ ಸಿಟಿಯನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ 1000 ಕೋಟಿ ರೂ.ಗೂ ಅಧಿಕ ಮೊತ್ತದ ಇತರ ಹಲವು ಒಳನಾಡು ಜಲಮಾರ್ಗ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ಅವರು ನೆರವೇರಿಸಿದರು. ನದಿ ವಿಹಾರ (ರಿವರ್ ಕ್ರೂಸ್) ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಧಾನ ಮಂತ್ರಿಯವರ ಪ್ರಯತ್ನಕ್ಕೆ ಅನುಗುಣವಾಗಿ, ಈ ಸೇವೆಯು ನದಿ ವಿಹಾರದ ಬೃಹತ್ ಸಾಮರ್ಥ್ಯವನ್ನು ಬಳಸಿಕೊಳ್ಳುತ್ತದೆ ಮತ್ತು ಇದು ಭಾರತದಲ್ಲಿ ನದಿ ವಿಹಾರ ಪ್ರವಾಸೋದ್ಯಮದ ಹೊಸ ಯುಗಕ್ಕೆ ನಾಂದಿ ಹಾಡುತ್ತದೆ.