ಮುಂಬೈನಲ್ಲಿ ನಡೆದ 141ನೇ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅಧಿವೇಶನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 14th, 10:34 pm
ಐಒಸಿ ಅಧ್ಯಕ್ಷ ಶ್ರೀ ಥಾಮಸ್ ಬಾಕ್, ಐಒಸಿಯ ಗೌರವಾನ್ವಿತ ಸದಸ್ಯರು, ಎಲ್ಲಾ ಅಂತಾರಾಷ್ಟ್ರೀಯ ಕ್ರೀಡಾ ಒಕ್ಕೂಟಗಳ ಪ್ರತಿನಿಧಿಗಳು ಮತ್ತು ಭಾರತದಲ್ಲಿನ ರಾಷ್ಟ್ರೀಯ ಒಕ್ಕೂಟಗಳ ಪ್ರತಿನಿಧಿಗಳು. ಮಹಿಳೆಯರೇ ಮತ್ತು ಮಹನೀಯರೇ! ಈ ವಿಶೇಷ ಸಂದರ್ಭದಲ್ಲಿ ನಾನು ನಿಮ್ಮೆಲ್ಲರಿಗೂ 1.4 ಶತಕೋಟಿ ಭಾರತೀಯರ ಪರವಾಗಿ ಆತ್ಮೀಯ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ. ಭಾರತದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ 141 ನೇ ಅಧಿವೇಶನವು ನಿಜವಾಗಿಯೂ ಮಹತ್ವದ್ದಾಗಿದೆ. 40 ವರ್ಷಗಳ ನಂತರ ಭಾರತದಲ್ಲಿ ಐಒಸಿ ಅಧಿವೇಶನ ನಡೆಯುತ್ತಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ.ಮುಂಬೈನಲ್ಲಿ 141ನೇ ʻಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅಧಿವೇಶನʼ ಉದ್ಘಾಟಿಸಿದ ಪ್ರಧಾನಿ
October 14th, 06:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈನಲ್ಲಿ 141ನೇ ʻಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿʼ(ಐಒಸಿ) ಅಧಿವೇಶನವನ್ನು ಉದ್ಘಾಟಿಸಿದರು. ಕ್ರೀಡೆಗೆ ಸಂಬಂಧಿಸಿದ ವಿವಿಧ ಮಧ್ಯಸ್ಥಗಾರರ ನಡುವೆ ಸಂವಾದ ಮತ್ತು ಜ್ಞಾನ ಹಂಚಿಕೆಗೆ ಅವಕಾಶವನ್ನು ಒದಗಿಸುವುದು ಈ ಅಧಿವೇಶನದ ಉದ್ದೇಶವಾಗಿದೆ.ಗುಜರಾತ್ ನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ 4 ನೇ ಸ್ಮರಣಾರ್ಥ ಟೆಸ್ಟ್ ಪಂದ್ಯವನ್ನು ಪ್ರಧಾನಮಂತ್ರಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿಯವರು ವೀಕ್ಷಿಸಿದರು
March 09th, 12:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್ ಅವರು ಇಂದು ಗುಜರಾತ್ ನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಜರಗಿದ ಬಾರ್ಡರ್-ಗವಾಸ್ಕರ್ ಟ್ರೋಫಿಯ 4 ನೇ ಸ್ಮರಣಾರ್ಥ ಕ್ರಿಕೆಟ್ ಟೆಸ್ಟ್ ಪಂದ್ಯವನ್ನು ವೀಕ್ಷಿಸಿದರು.