Our government's intentions, policies and decisions are empowering rural India with new energy: PM
January 04th, 11:15 am
PM Modi inaugurated Grameen Bharat Mahotsav in Delhi. He highlighted the launch of campaigns like the Swamitva Yojana, through which people in villages are receiving property papers. He remarked that over the past 10 years, several policies have been implemented to promote MSMEs and also mentioned the significant contribution of cooperatives in transforming the rural landscape.PM Modi inaugurates the Grameen Bharat Mahotsav 2025
January 04th, 10:59 am
PM Modi inaugurated Grameen Bharat Mahotsav in Delhi. He highlighted the launch of campaigns like the Swamitva Yojana, through which people in villages are receiving property papers. He remarked that over the past 10 years, several policies have been implemented to promote MSMEs and also mentioned the significant contribution of cooperatives in transforming the rural landscape.Delhi's voters have resolved to free the city from 'AAP-da': PM Modi
January 03rd, 01:03 pm
PM Modi inaugurated key development projects in Delhi, including housing for poor families. He emphasized India’s vision for 2025 as a year of growth, entrepreneurship, and women-led development, reaffirming the goal of a pucca house for every citizen.PM Modi inaugurates and lays foundation stone of multiple development projects in Delhi
January 03rd, 12:45 pm
PM Modi inaugurated key development projects in Delhi, including housing for poor families. He emphasized India’s vision for 2025 as a year of growth, entrepreneurship, and women-led development, reaffirming the goal of a pucca house for every citizen.Prime Minister remembers Rani Velu Nachiyar on her birth anniversary
January 03rd, 10:59 am
The Prime Minister, Shri Narendra Modi remembered the courageous Rani Velu Nachiyar on her birth anniversary today. Shri Modi remarked that she waged a heroic fight against colonial rule, showing unparalleled valour and strategic brilliance.ಮಧ್ಯಪ್ರದೇಶದ ಖಜುರಾಹೊದಲ್ಲಿ ಕೆನ್- ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅವತರಣಿಕೆ
December 25th, 01:00 pm
ವೀರರ ನಾಡಾದ ಬುಂದೇಲ್ ಖಂಡದ ಎಲ್ಲ ಜನರಿಗೆ ನಾನು ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಮಧ್ಯಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಅವರಿಗೂ ನಾನು ಶುಭ ಕೋರುತ್ತೇನೆ. ಈ ಪ್ರದೇಶದ ಶ್ರದ್ಧಾಳು ಮುಖ್ಯಮಂತ್ರಿ ಭಾಯಿ ಮೋಹನ್ ಯಾದವ್ ಜೀ; ಕೇಂದ್ರ ಸಚಿವರಾದ ಭಾಯಿ ಶಿವರಾಜ್ ಸಿಂಗ್ ಜೀ, ವೀರೇಂದ್ರ ಕುಮಾರ್ ಜೀ ಮತ್ತು ಸಿಆರ್ ಪಾಟಿಲ್ ಜೀ; ಉಪ ಮುಖ್ಯಮಂತ್ರಿ ಜಗದೀಶ್ ದೇವ್ಡಾ ಜೀ; ರಾಜೇಂದ್ರ ಶುಕ್ಲಾ ಜೀ; ಇತರ ಸಚಿವರು, ಸಂಸದರು, ಶಾಸಕರು, ಹಾಗು ಇತರ ಗಣ್ಯರೇ, ಪೂಜ್ಯ ಸಾಧುಗಳು ಮತ್ತು ಮಧ್ಯಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿಕೆನ್-ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು
December 25th, 12:30 pm
ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಅವರು, ಭಾರತ ಮತ್ತು ವಿಶ್ವದ ಕ್ರಿಶ್ಚಿಯನ್ ಸಮುದಾಯದ ಜನತೆಗೆ ಕ್ರಿಸ್‌ಮಸ್ ಹಬ್ಬದ ಶುಭಾಶಯ ಕೋರಿದರು. ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿ ಒಂದು ವರ್ಷ ಪೂರೈಸಿದ್ದನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಇದಕ್ಕಾಗಿ ಮಧ್ಯಪ್ರದೇಶದ ಜನತೆಗೆ ಅಭಿನಂದನೆ ಸಲ್ಲಿಸಿದರು. ಕಳೆದ ಒಂದು ವರ್ಷದಲ್ಲಿಸಾವಿರಾರು ಕೋಟಿ ರೂಪಾಯಿಗಳ ಹೊಸ ಮೂಲಸೌಕರ್ಯ ಯೋಜನೆಗಳ ಅನುಷ್ಠಾನದೊಂದಿಗೆ ಅಭಿವೃದ್ಧಿ ಕಾರ್ಯಗಳು ವೇಗವನ್ನು ಪಡೆದುಕೊಂಡಿವೆ ಎಂದು ಅವರು ಹೇಳಿದರು. ಇಂದು ಐತಿಹಾಸಿಕ ಕೆನ್-ಬೆಟ್ವಾ ನದಿ ಜೋಡಣೆ ಯೋಜನೆ, ದೌಧನ್ ಅಣೆಕಟ್ಟು ಮತ್ತು ಮಧ್ಯಪ್ರದೇಶದ ಮೊದಲ ಸೌರ ವಿದ್ಯುತ್ ಸ್ಥಾವರವಾದ ಓಂಕಾರೇಶ್ವರ ತೇಲುವ ಸೌರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಪ್ರಧಾನಿ ಹೇಳಿದರು. ಇದಕ್ಕಾಗಿ ಅವರು ಮಧ್ಯಪ್ರದೇಶದ ಜನರನ್ನು ಅಭಿನಂದಿಸಿದರು.ಕ್ಯಾಥೊಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್ ಮಸ್ ಆಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 23rd, 09:24 pm
ಕ್ರಿಸ್ ಮಸ್ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ, ನನ್ನ ಎಲ್ಲ ದೇಶವಾಸಿಗಳಿಗೆ ಮತ್ತು ವಿಶೇಷವಾಗಿ ವಿಶ್ವದಾದ್ಯಂತ ಇರುವ ಕ್ರಿಶ್ಚಿಯನ್ ಸಮುದಾಯಕ್ಕೆ ಹಾರ್ದಿಕ ಶುಭಾಶಯಗಳು. ಮೆರ್ರಿ ಕ್ರಿಸ್ ಮಸ್!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕ್ಯಾಥೊಲಿಕ್ ಬಿಷಫ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಭಾಗವಹಿಸಿದರು
December 23rd, 09:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಿ.ಬಿ.ಸಿ.ಐ ಕೇಂದ್ರದ ಆವರಣದಲ್ಲಿ ಕ್ಯಾಥೊಲಿಕ್ ಬಿಷಫ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿ.ಬಿ.ಸಿ.ಐ.) ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಭಾಗವಹಿಸಿದ್ದರು. ಭಾರತದ ಕ್ಯಾಥೊಲಿಕ್ ಚರ್ಚ್‌ನ ಪ್ರಧಾನ ಕಚೇರಿಯಲ್ಲಿ ಪ್ರಧಾನಿಯೊಬ್ಬರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು. ಕಾರ್ಡಿನಲ್‌ಗಳು, ಬಿಷಪ್‌ಗಳು ಮತ್ತು ಚರ್ಚ್‌ನ ಪ್ರಮುಖ ನಾಯಕರು ಸೇರಿದಂತೆ ಕ್ರಿಶ್ಚಿಯನ್ ಸಮುದಾಯದ ಪ್ರಮುಖ ನಾಯಕರೊಂದಿಗೆ ಪ್ರಧಾನಿ ಸಂವಾದ ನಡೆಸಿದರು.ರಾಜಸ್ಥಾನದ ಜೈಪುರದಲ್ಲಿ 'ಏಕ್ ವರ್ಷ್-ಪರಿಣಾಮ್ ಉತ್ಕರ್ಷ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
December 17th, 12:05 pm
ಗೋವಿಂದ ನಗರದಲ್ಲಿ ನಾನು ಗೋವಿಂದ್ ದೇವ್ ಜೀ ಅವರಿಗೆ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಎಲ್ಲರಿಗೂ ನನ್ನ ನಮಸ್ಕಾರಗಳು!ರಾಜಸ್ಥಾನ ಸರ್ಕಾರ ಒಂದು ವರ್ಷ ಅಧಿಕಾರಾವಧಿ ಪೂರೈಸಿದ ಹಿನೆಲೆಯಲ್ಲಿ ಜೈಪುರದಲ್ಲಿ ನಡೆದ ʻಏಕ್ ವರ್ಷ್-ಪರಿನಾಮ್ ಉತ್ಕರ್ಷ್ʼ (ಒಂದು ವರ್ಷ-ಪರಿಣಾಮ ಶ್ರೇಷ್ಠ) ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 17th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಜೈಪುರದಲ್ಲಿ ನಡೆದ ʻಒಂದು ವರ್ಷ-ಪರಿಣಾಮ ಶ್ರೇಷ್ಠʼ(ಏಕ್ ವರ್ಷ್-ಪರಿನಾಮ್ ಉತ್ಕರ್ಷ್) ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ರಾಜ್ಯ ಸರ್ಕಾರದ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಾಜಸ್ಥಾನ ಸರ್ಕಾರ ಮತ್ತು ರಾಜಸ್ಥಾನದ ಜನರನ್ನು ಅಭಿನಂದಿಸಿದರು. ಈ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಜನರ ಆಶೀರ್ವಾದ ಪಡೆಯುವ ಅದೃಷ್ಟ ತಮ್ಮದಾಗಿದೆ ಎಂದು ಅವರು ಹೇಳಿದರು. ರಾಜಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಹೊಸ ದಿಕ್ಕು ಮತ್ತು ವೇಗವನ್ನು ನೀಡಲು ಕೈಗೊಂಡ ಪ್ರಯತ್ನಗಳಿಗಾಗಿ ಶ್ರೀ ಮೋದಿ ಅವರು ರಾಜಸ್ಥಾನದ ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಮೊದಲ ವರ್ಷವು ಮುಂಬರುವ ಹಲವು ವರ್ಷಗಳ ಅಭಿವೃದ್ಧಿಗೆ ಬಲವಾದ ಅಡಿಪಾಯವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದರು. ಇಂದಿನ ಕಾರ್ಯಕ್ರಮವು ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ್ದನ್ನು ಮಾತ್ರವಲ್ಲ, ರಾಜಸ್ಥಾನದ ಉಜ್ವಲತೆ ಮತ್ತು ರಾಜಸ್ಥಾನದ ಅಭಿವೃದ್ಧಿಯ ಹಬ್ಬವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ಇತ್ತೀಚೆಗೆ ನಡೆದ ʻರೈಸಿಂಗ್ ರಾಜಸ್ಥಾನ ಶೃಂಗಸಭೆ-2024ʼ ಕಾರ್ಯಕ್ರಮದಲ್ಲಿ ತಾವು ಭಾಗಿಯಾಗಿದ್ದನ್ನು ಸ್ಮರಿಸಿದ ಶ್ರೀ ಮೋದಿ, ವಿಶ್ವದ ವಿವಿಧ ಭಾಗಗಳ ಅನೇಕ ಹೂಡಿಕೆದಾರರು ಅಂದಿನ ಕಾರ್ಯಕ್ರಮದಲ್ಲಿ ಹಾಜರಿದ್ದರು ಮತ್ತು ಇಂದು 45,000 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳನ್ನು ರಾಜ್ಯದಲ್ಲಿ ಉದ್ಘಾಟಿಸಲಾಗಿದೆ ಎಂದರು. ಈ ಯೋಜನೆಗಳು ರಾಜಸ್ಥಾನದಲ್ಲಿ ನೀರಿಗೆ ಸಂಬಂಧಿಸಿದಂತೆ ಅಡೆತಡೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುತ್ತವೆ ಮತ್ತು ರಾಜಸ್ಥಾನವನ್ನು ಭಾರತದ ಉತ್ತಮ ಸಂಪರ್ಕ ಹೊಂದಿರುವ ರಾಜ್ಯಗಳಲ್ಲಿ ಒಂದಾಗಿ ಮಾಡುತ್ತವೆ ಎಂದು ಅವರು ಹೇಳಿದರು. ಈ ಅಭಿವೃದ್ಧಿ ಕಾರ್ಯಗಳು ಹೆಚ್ಚಿನ ಹೂಡಿಕೆದಾರರನ್ನು ಆಹ್ವಾನಿಸುತ್ತವೆ, ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ, ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸುತ್ತವೆ ಮತ್ತು ರಾಜಸ್ಥಾನದ ರೈತರು, ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ ಎಂದು ಪ್ರಧಾನಿ ಹೇಳಿದರು.ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
December 14th, 05:50 pm
ಇದು ನಮಗೆಲ್ಲರಿಗೂ ಅಪಾರವಾದ ಹೆಮ್ಮೆಯ ಕ್ಷಣವಾಗಿದೆ - ನಮ್ಮ ದೇಶವಾಸಿಗಳಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ನಾಗರಿಕರಿಗೆ, ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುವ ಸಂದರ್ಭವಿದು. ಸಂವಿಧಾನದ ಅಡಿಯಲ್ಲಿ 75 ವರ್ಷಗಳ ಪ್ರಯಾಣವು ಗಮನಾರ್ಹವಾಗಿದೆ ಮತ್ತು ಈ ಪ್ರಯಾಣದ ಹಾದಿಯಲ್ಲಿ ನಮ್ಮ ಸಂವಿಧಾನ-ರಚನಾಕಾರರ ದೈವಿಕ ದೃಷ್ಟಿ ಇದೆ, ಅವರ ಕೊಡುಗೆಗಳು ನಾವು ಮುಂದೆ ಸಾಗುತ್ತಿರುವಾಗ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ನಿಜಕ್ಕೂ ಮಹತ್ವದ ಸಂದರ್ಭವಾಗಿದೆ. ಈ ಸಂಭ್ರಮಾಚರಣೆಯಲ್ಲಿ ಸಂಸತ್ತು ಕೂಡ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಭಾಗವಹಿಸುವುದು ನನಗೆ ಅತೀವ ಸಂತಸ ತಂದಿದೆ. ನಾನು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಈ ಆಚರಣೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ಕುರಿತು ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು
December 14th, 05:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದರು. ಸದನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ನಾವು ಈ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುತ್ತಿರುವುದು ಭಾರತದ ಎಲ್ಲಾ ನಾಗರಿಕರಿಗೆ ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸುವ ಜಗತ್ತಿನಾದ್ಯಂತ ಇರುವ ಎಲ್ಲಾ ಜನರಿಗೆ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಹೇಳಿದರು. ನಮ್ಮ ಸಂವಿಧಾನದ 75 ವರ್ಷಗಳ ಈ ಗಮನಾರ್ಹ ಮತ್ತು ಮಹತ್ವದ ಪ್ರಯಾಣದಲ್ಲಿ ನಮ್ಮ ಸಂವಿಧಾನದ ರಚನೆಕಾರರ ದೂರದೃಷ್ಟಿ, ಚಿಂತನೆ ಮತ್ತು ಪ್ರಯತ್ನಗಳಿಗೆ ಧನ್ಯವಾದ ಹೇಳಿದ ಅವರು, 75 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಂತರ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವ ಸಮಯ ಬಂದಿದೆ ಎಂದು ಹೇಳಿದರು. ಸಂಸತ್ತಿನ ಸದಸ್ಯರು ಕೂಡ ಈ ಆಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿಯವರು, ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಿದರು ಮತ್ತು ಅಭಿನಂದಿಸಿದರು.ಹರಿಯಾಣದ ಪಾಣಿಪತ್ ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
December 09th, 05:54 pm
ಹರಿಯ ವಾಸಸ್ಥಾನ ಹರಿಯಾಣ, ಮತ್ತು ಇಲ್ಲಿ ಎಲ್ಲರೂ ಹೃತ್ಪೂರ್ವಕವಾಗಿ 'ರಾಮ್ ರಾಮ್' ಎಂದು ಪರಸ್ಪರ ಶುಭಾಶಯ ಕೋರುತ್ತಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ ಐ ಸಿಯ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದರು
December 09th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಪಾಣಿಪತ್ ನಲ್ಲಿ ಮಹಿಳಾ ಸಬಲೀಕರಣ ಮತ್ತು ಆರ್ಥಿಕ ಒಳಗೊಳ್ಳುವಿಕೆಯ ತಮ್ಮ ಬದ್ಧತೆಗೆ ಅನುಗುಣವಾಗಿ ಭಾರತೀಯ ಜೀವ ವಿಮಾ ನಿಗಮದ ‘ಬಿಮಾ ಸಖಿ ಯೋಜನೆʼಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಕರ್ನಾಲ್ ನಲ್ಲಿರುವ ಮಹಾರಾಣಾ ಪ್ರತಾಪ್ ತೋಟಗಾರಿಕಾ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್ ಗೆ ಶಂಕುಸ್ಥಾಪನೆ ಮಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು ಭಾರತವು ಮಹಿಳಾ ಸಬಲೀಕರಣದತ್ತ ಮತ್ತೊಂದು ಬಲವಾದ ಹೆಜ್ಜೆ ಇಡುತ್ತಿದೆ ಎಂದು ಹೇಳಿದರು. ಇಂದು ತಿಂಗಳ 9ನೇ ದಿನವಾಗಿರುವುದು ವಿಶೇಷವಾಗಿದೆ ಏಕೆಂದರೆ ನಮ್ಮ ಧರ್ಮಗ್ರಂಥಗಳಲ್ಲಿ 9 ನೇ ಸಂಖ್ಯೆಯನ್ನು ಮಂಗಳಕರವೆಂದು ಪರಿಗಣಿಸಲಾಗಿದೆ ಮತ್ತು ಇದು ನವರಾತ್ರಿಯಲ್ಲಿ ಪೂಜಿಸುವ ನವದುರ್ಗೆಯ ಒಂಬತ್ತು ರೂಪಗಳೊಂದಿಗೆ ಸಂಬಂಧ ಹೊಂದಿದೆ ಎಂದು ಅವರು ಹೇಳಿದರು. ಇಂದು ಸ್ತ್ರೀಶಕ್ತಿಯನ್ನು ಆರಾಧಿಸುವ ದಿನವೂ ಆಗಿದೆ ಎಂದರು.ಸುಪ್ರೀಂ ಕೋರ್ಟ್‌ನಲ್ಲಿ ಆಯೋಜಿತವಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 26th, 08:15 pm
ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಜಿ, ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಜಿ, ಸೂರ್ಕಕಾಂತ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ, ಅಟಾರ್ನಿ ಜನರಲ್ ಶ್ರೀ ವೆಂಕಟರಮಣಿ ಜಿ, ಬಾರ್ ಕೌನ್ಸಿಲ್ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಜಿ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಶ್ರೀ ಕಪಿಲ್ ಸಿಬಲ್ ಜಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, ಮಾಜಿ ಮುಖ್ಯ ನ್ಯಾಯಮೂರ್ತಿಗಳು, ಇತರೆ ಗೌರವಾನ್ವಿತ ಅತಿಥಿಗಳು, ಗೌರವಾನ್ವಿತ ಮಹಿಳೆಯರು ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ವೋಚ್ಛ ನ್ಯಾಯಾಲಯದಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರು
November 26th, 08:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಶ್ರೀ ಸಂಜೀವ್ ಖನ್ನಾ, ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಶ್ರೀ ಸೂರ್ಯಕಾಂತ್, ಕಾನೂನು ಮತ್ತು ನ್ಯಾಯ ಸಚಿವರಾದ ಶ್ರೀ ಅರ್ಜುನ್ ರಾಮ್ ಮೇಘವಾಲ್, ಭಾರತದ ಅಟಾರ್ನಿ ಜನರಲ್ ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.Maharashtra has witnessed the triumph of development, good governance, and genuine social justice: PM Modi
November 23rd, 10:58 pm
Prime Minister Narendra Modi addressed BJP workers at the party headquarters following the BJP-Mahayuti alliance's resounding electoral triumph in Maharashtra. He hailed the victory as a decisive endorsement of good governance, social justice, and development, expressing heartfelt gratitude to the people of Maharashtra for trusting BJP's leadership for the third consecutive time.PM Modi addresses passionate BJP Karyakartas at the Party Headquarters
November 23rd, 06:30 pm
Prime Minister Narendra Modi addressed BJP workers at the party headquarters following the BJP-Mahayuti alliance's resounding electoral triumph in Maharashtra. He hailed the victory as a decisive endorsement of good governance, social justice, and development, expressing heartfelt gratitude to the people of Maharashtra for trusting BJP's leadership for the third consecutive time.ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 15th, 11:20 am
ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್‌ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.