ರಾಷ್ಟ್ರೀಯ ಕಸ್ಟಮ್ಸ್, ಪರೋಕ್ಷ ತೆರಿಗೆಗಳು ಮತ್ತು ಮಾದಕವಸ್ತುಗಳ - ಎನ್ಎಸಿಐಎನ್ ಅಕಾಡೆಮಿಯನ್ನು ಉದ್ಘಾಟಿಸುವ ವೇಳೆ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 16th, 04:00 pm

ಆಂಧ್ರಪ್ರದೇಶದ ರಾಜ್ಯಪಾಲರಾದ ಶ್ರೀ ಎಸ್. ಅಬ್ದುಲ್ ನಜೀರ್ ಜೀ, ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳು, ನಿರ್ಮಲಾ ಸೀತಾರಾಮನ್ ಜೀ, ಪಂಕಜ್ ಚೌಧರಿ ಜೀ ಮತ್ತು ಭಗವತ್ ಕಿಶನ್ ರಾವ್ ಕರದ್ ಜೀ, ಇತರ ಪ್ರತಿನಿಧಿಗಳು, ಮಹಿಳೆಯರು ಮತ್ತು ಮಹನೀಯರೇ.

ಆಂಧ್ರಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಪಾಲಸಮುದ್ರಂನಲ್ಲಿ ರಾಷ್ಟ್ರೀಯ ಕಸ್ಟಮ್ಸ್, ಪರೋಕ್ಷ ತೆರಿಗೆ ಮತ್ತು ಮಾದಕವಸ್ತುಗಳ ಅಕಾಡೆಮಿಯ ಹೊಸ ಕ್ಯಾಂಪಸ್ಸನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

January 16th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಪಾಲಸಮುದ್ರಂನಲ್ಲಿ ರಾಷ್ಟ್ರೀಯ ಕಸ್ಟಮ್ಸ್, ಪರೋಕ್ಷ ತೆರಿಗೆ ಮತ್ತು ಮಾದಕವಸ್ತುಗಳ ಅಕಾಡೆಮಿಯ ಹೊಸ ಕ್ಯಾಂಪಸ್ಸನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನೂ ಅವರು ವೀಕ್ಷಿಸಿದರು. ಪ್ರಧಾನಮಂತ್ರಿಯವರು ಭಾರತೀಯ ಕಂದಾಯ ಸೇವೆಯ (ಕಸ್ಟಮ್ ಮತ್ತು ಪರೋಕ್ಷ ತೆರಿಗೆ) 74 ಮತ್ತು 75ನೇ ಬ್ಯಾಚ್ ಗಳ ತರಬೇತಿ ನಿರತ ಅಧಿಕಾರಿಗಳು ಮತ್ತು ಭೂತಾನ್ ನ ರಾಯಲ್ ಸಿವಿಲ್ ಸರ್ವಿಸ್ ನ ತರಬೇತಿ ನಿರತ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.