ದೇಶದಲ್ಲಿ ಸಹಕಾರ ಚಳವಳಿಯನ್ನು ಬಲಪಡಿಸಲು ಮತ್ತು ತಳಮಟ್ಟದವರೆಗೆ ಅದರ ವ್ಯಾಪ್ತಿಯನ್ನು ವಿಸ್ತರಿಸಲು ಸಂಪುಟದ ಅನುಮೋದನೆ
February 15th, 03:49 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ದೇಶದಲ್ಲಿ ಸಹಕಾರ ಚಳುವಳಿಯನ್ನು ಬಲಪಡಿಸಲು ಮತ್ತು ತಳಮಟ್ಟದವರೆಗೆ ಅದರ ವ್ಯಾಪ್ತಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಮತ್ತು ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರ ಸಮರ್ಥ ಮಾರ್ಗದರ್ಶನದಲ್ಲಿ ಸಹಕಾರ ಸಚಿವಾಲಯವು, ವ್ಯಾಪ್ತಿಯಿಂದ ಹೊರಗಿರುವ ಪ್ರತಿ ಪಂಚಾಯತ್‌ನಲ್ಲಿ ಕಾರ್ಯಸಾಧ್ಯವಾದ ಪಿಎಸಿಎಸ್, ಪ್ರತಿ ಪಂಚಾಯತ್/ಗ್ರಾಮಗಳಲ್ಲಿ ಕಾರ್ಯಸಾಧ್ಯವಾದ ಡೈರಿ ಸಹಕಾರ ಸಂಘಗಳು ಮತ್ತು ಕರಾವಳಿಯ ಪ್ರತಿ ಪಂಚಾಯತ್/ಗ್ರಾಮಗಳಲ್ಲಿ ಹಾಗೂ ದೊಡ್ಡ ಜಲಮೂಲಗಳನ್ನು ಹೊಂದಿರುವ ಪಂಚಾಯತ್/ಗ್ರಾಮಗಳಲ್ಲಿ ಕಾರ್ಯಸಾಧ್ಯವಾದ ಮೀನುಗಾರಿಕಾ ಸಹಕಾರ ಸಂಘಗಳನ್ನು ಸ್ಥಾಪಿಸಲು ಮತ್ತು ಅಸ್ತಿತ್ವದಲ್ಲಿರುವ ಪಿಎಸಿಎಸ್/ಡೈರಿಯನ್ನು ಬಲಪಡಿಸಲು ಯೋಜನೆಯನ್ನು ರೂಪಿಸಿದೆ. ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ವಿವಿಧ ಯೋಜನೆಗಳ ಸಮನ್ವಯದಲ್ಲಿ 'ಇಡೀ-ಸರ್ಕಾರದ' ವಿಧಾನವನ್ನು ಬಳಸಿಕೊಳ್ಳಲಿದೆ. ಆರಂಭದಲ್ಲಿ, ಮುಂದಿನ ಐದು ವರ್ಷಗಳಲ್ಲಿ 2 ಲಕ್ಷ ಪಿಎಸಿಎಸ್/ ಡೈರಿ/ ಮೀನುಗಾರಿಕಾ ಸಹಕಾರ ಸಂಘಗಳನ್ನು ಸ್ಥಾಪಿಸಲಾಗುವುದು. ಯೋಜನೆಯ ಅನುಷ್ಠಾನಕ್ಕಾಗಿ ಕ್ರಿಯಾ ಯೋಜನೆಯನ್ನು ನಬಾರ್ಡ್, ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ (ಎನ್ ಡಿ ಡಿ ಬಿ) ಮತ್ತು ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ (ಎನ್ ಎಫ್ ಡಿ ಬಿ) ಸಿದ್ಧಪಡಿಸುತ್ತವೆ.Strengthening India's dairy sector is one of the top priorities of our government: PM Modi
December 23rd, 11:15 am
Prime Minister Narendra Modi laid the foundation stone of ‘Banas Dairy Sankul’ in Varanasi, Uttar Pradesh. In his speech, PM Modi called for adoption of natural methods of farming and said, “For the rejuvenation of mother earth, to protect our soil, to secure the future of the coming generations, we must once again turn to natural farming.PM inaugurates and lays the foundation of multiple projects in Varanasi
December 23rd, 11:11 am
Prime Minister Narendra Modi laid the foundation stone of ‘Banas Dairy Sankul’ in Varanasi, Uttar Pradesh. In his speech, PM Modi called for adoption of natural methods of farming and said, “For the rejuvenation of mother earth, to protect our soil, to secure the future of the coming generations, we must once again turn to natural farming.ವಾರಾಣಸಿಯಲ್ಲಿ ಡಿಸೆಂಬರ್ 23ರಂದು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಪ್ರಧಾನ ಮಂತ್ರಿ ಚಾಲನೆ
December 21st, 07:41 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸ್ವಂತ ಸಂಸತ್ ಕ್ಷೇತ್ರ ವಾರಾಣಸಿಯ ಸಮಗ್ರ ಅಭಿವೃದ್ಧಿ ಮತ್ತು ಆರ್ಥಿಕ ಪ್ರಗತಿಗೆ ಸ್ಥಿರ ಪ್ರಯತ್ನಗಳನ್ನು ನಡೆಸುತ್ತಾ ಬಂದಿದ್ದಾರೆ. ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿರುವ ಅವರು, ವಾರಾಣಸಿಗೆ ಡಿಸೆಂಬರ್ 23ರಂದು ಭೇಟಿ ನೀಡಲಿದ್ದು, ಮಧ್ಯಾಹ್ನ 1 ಗಂಟೆಗೆ ನಾನಾ ಅಭಿವೃದ್ಧಿ ಯೋಜನೆಗಳಿಗೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.