ಭಾರತದ ಹಲವು ಭಾಗಗಳಲ್ಲಿ ವಿಪರೀತ ಮಳೆಯ ಹಿನ್ನೆಲೆಯಲ್ಲಿ ಪರಿಸ್ಥಿತಿ ಅವಲೋಕಿಸಿದ ಪ್ರಧಾನ ಮಂತ್ರಿಗಳು

July 10th, 04:37 pm

ಭಾರತದ ಹಲವು ಭಾಗಗಳಲ್ಲಿ ಅತಿಯಾದ ಮಳೆಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದಾರೆ.

ತುರ್ಕಿಯೆ ಮತ್ತು ಸಿರಿಯಾದಲ್ಲಿ 'ಆಪರೇಷನ್ ದೋಸ್ತ್' ನಲ್ಲಿ ಭಾಗಿಯಾಗಿದ್ದ ಎನ್‌ಡಿಆರ್‌ಎಫ್ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿಯವರ ಸಂವಾದ

February 20th, 06:20 pm

ಮಾನವೀಯತೆಗಾಗಿ ಮಹತ್ತರವಾದ ಕೆಲಸ ಮಾಡಿ ಹಿಂದಿರುಗಿರುವಿರಿ. ‘ಆಪರೇಷನ್ ದೋಸ್ತ್’ಗೆ ಸಂಬಂಧಿಸಿದ ಇಡೀ ತಂಡ ಎನ್‌ಡಿಆರ್‌ಎಫ್, ಸೈನ್ಯ, ವಾಯುಪಡೆ ಅಥವಾ ಇತರ ಸೇವಾ ಪಡೆಗಳು ಅದ್ಭುತ ಕೆಲಸ ಮಾಡಿದೆ. ನಮ್ಮ ಮಾತು ಬಾರದ ಸ್ನೇಹಿತರಾದ ಶ್ವಾನದಳದ ಸದಸ್ಯರು ಸಹ ಅದ್ಭುತ ಸಾಮರ್ಥ್ಯವನ್ನು ತೋರಿಸಿದ್ದಾರೆ. ನಿಮ್ಮೆಲ್ಲರ ಬಗ್ಗೆ ದೇಶವು ಬಹಳ ಹೆಮ್ಮೆಪಡುತ್ತದೆ.

​​​​​​​ಟರ್ಕಿ ಮತ್ತು ಸಿರಿಯಾದಲ್ಲಿ 'ಆಪರೇಷನ್ ದೋಸ್ತ್' ನಲ್ಲಿ ಭಾಗಿಯಾಗಿದ್ದ ಎನ್‌ ಡಿ ಆರ್‌ ಎಫ್‌ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿ ಸಂವಾದ

February 20th, 06:00 pm

ಭೂಕಂಪ ಪೀಡಿತ ಟರ್ಕಿ ಮತ್ತು ಸಿರಿಯಾದಲ್ಲಿ ‘ಆಪರೇಷನ್ ದೋಸ್ತ್ʼನಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ ನಡೆಸಿದರು.

ದಿಯೋಗರ್ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವರ ಜೊತೆ ಪ್ರಧಾನಮಂತ್ರಿ ನಡೆಸಿದ ಸಂವಾದದ ಕನ್ನಡ ಅವತರಣಿಕೆ

April 13th, 08:01 pm

ಗೃಹ ಸಚಿವ ಶ್ರೀ ಅಮಿತ್ ಶಾ ಜಿ, ಸಂಸದ ಶ್ರೀ ನಿಶಿಕಾಂತ್ ದುಬೆ ಜಿ, ಗೃಹ ಕಾರ್ಯದರ್ಶಿ, ಸೇನಾ ಮುಖ್ಯಸ್ಥರೇ, ವಾಯುಪಡೆ ಮುಖ್ಯಸ್ಥರೇ, ಜಾರ್ಖಂಡ್ ಡಿಜಿಪಿ, ಎನ್‌ಡಿಆರ್‌ಎಫ್ ಮಹಾನಿರ್ದೇಶಕರೇ, ಐಟಿಬಿಪಿ ಡಿಜಿ, ಸ್ಥಳೀಯ ಆಡಳಿತ ಸಿಬ್ಬಂದಿ, ನಮ್ಮೊಂದಿರುವ ಎಲ್ಲಾ ವೀರ ಸೈನಿಕರು, ಕಮಾಂಡೋಗಳೇ, ಪೊಲೀಸ್ ಸಿಬ್ಬಂದಿ ಮತ್ತು ನನ್ನ ಎಲ್ಲಾ ಇತರ ಸಹಚರರೇ..!

ದಿಯೋಘರ್‌ ರಕ್ಷ ಣಾ ಕಾರ್ಯಾಚರಣೆಯಲ್ಲಿತೊಡಗಿರುವವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು

April 13th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಯೋಘರ್‌ನ ರೋಪ್‌ ವೇ ಕೇಬಲ್‌ ಕಾರ್‌ ಅಪಘಾತದಲ್ಲಿರಕ್ಷ ಣಾ ಕಾರ್ಯಾಚರಣೆಯಲ್ಲಿತೊಡಗಿರುವ ಐಎಎಫ್‌, ಭಾರತೀಯ ಸೇನೆ, ಎನ್‌ಡಿಆರ್‌ಎಫ್‌, ಐಟಿಬಿಪಿ, ಸ್ಥಳೀಯ ಆಡಳಿತ ಮತ್ತು ನಾಗರಿಕ ಸಮಾಜದ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವ ಅಮಿತ್‌ ಶಾ, ಸಂಸದ ನಿಶಿಕಾಂತ್‌ ದುಬೆ, ಎಂಎಚ್‌ಎ ಕಾರ್ಯದರ್ಶಿ, ಸೇನಾ ಮುಖ್ಯಸ್ಥರು, ವಾಯುಪಡೆಯ ಮುಖ್ಯಸ್ಥರು, ಎನ್‌ಡಿಆರ್‌ಎಫ್‌ ಡಿಜಿ, ಐಟಿಬಿಪಿ ಡಿಜಿ ಈ ಸಂದರ್ಭದಲ್ಲಿಉಪಸ್ಥಿತರಿದ್ದರು.

ಪ್ರಧಾನಮಂತ್ರಿಯವರು NDRF ತಂಡಕ್ಕೆ ಅವರ ಸಂಸ್ಥಾಪನಾ ದಿನದಂದು ಶುಭಾಶಯ ಕೋರಿದರು

January 19th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಕ್ಕೆ ಅವರ ಸಂಸ್ಥಾಪನಾ ದಿನದಂದು ಶುಭಾಶಯ ಕೋರಿದ್ದಾರೆ.

ಹಿಮಾಚಲ ಪ್ರದೇಶದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕಾ ಫಲಾನುಭವಿಗಳ ಜೊತೆ ಪ್ರಧಾನ ಮಂತ್ರಿಗಳ ಸಂವಾದ

September 06th, 11:01 am

ಹಿಮಾಚಲ ಪ್ರದೇಶವು ಇಂದು ಪ್ರಧಾನ ಸೇವಕನಾಗಿ ಮಾತ್ರವಲ್ಲ ಕುಟುಂಬದ ಸದಸ್ಯನಾಗಿ ನನಗೆ ಹೆಮ್ಮೆಯ ಅವಕಾಶವನ್ನು ಒದಗಿಸಿಕೊಟ್ಟಿದೆ. ಹಿಮಾಚಲವು ಸಣ್ಣ ಸೌಲಭ್ಯಗಳಿಗಾಗಿ, ಅವಕಾಶಗಳಿಗಾಗಿ ಹೋರಾಟ ಮಾಡುತ್ತಿದ್ದುದನ್ನು ನಾನು ನೋಡಿದ್ದೆ, ಮತ್ತು ಇಂದು ಹಿಮಾಚಲ ಪ್ರದೇಶವು ಅಭಿವೃದ್ಧಿಯ ಕಥೆ ಬರೆಯುತ್ತಿರುವುದನ್ನೂ ನೋಡುತ್ತಿದ್ದೇನೆ. ಇದೆಲ್ಲ ಸಾಧ್ಯವಾಗಿರುವುದು ದೇವತೆಗಳ ಆಶೀರ್ವಾದದಿಂದ, ಹಿಮಾಚಲ ಪ್ರದೇಶ ಸರಕಾರದ ಪರಿಶ್ರಮದಿಂದ ಮತ್ತು ಹಿಮಾಚಲದ ಜನತೆಯ ಜಾಗೃತಿಯಿಂದ. ನನಗೆ ಸಂವಹನ ನಡೆಸಲು ಅವಕಾಶ ಮಾಡಿಕೊಟ್ಟಂತಹ ಎಲ್ಲರಿಗೂ ನಾನು ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಮತ್ತು ಇಡೀ ತಂಡಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಿಮ್ಮೆಲ್ಲರಿಗೂ ಶುಭವಾಗಲಿ!!

ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳು ಮತ್ತು ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ಪ್ರಧಾನಿ

September 06th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿಮಾಚಲ ಪ್ರದೇಶದ ಕೋವಿಡ್ ಲಸಿಕೆ ಕಾರ್ಯಕ್ರಮದ ಆರೋಗ್ಯ ಕಾರ್ಯಕರ್ತರು ಮತ್ತು ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಜೆ.ಪಿ. ನಡ್ಡಾ, ಶ್ರೀ ಅನುರಾಗ್ ಸಿಂಗ್ ಠಾಕೂರ್; ಸಂಸದರು, ಶಾಸಕರು, ಪಂಚಾಯತ್ ನಾಯಕರು ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

IPS Probationers interact with PM Modi

July 31st, 11:02 am

PM Narendra Modi had a lively interaction with the Probationers of Indian Police Service. The interaction with the Officer Trainees had a spontaneous air and the Prime Minister went beyond the official aspects of the Service to discuss the aspirations and dreams of the new generation of police officers.

ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಐ.ಪಿ.ಎಸ್. ಪ್ರೊಬೆಶನರಿಗಳನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ

July 31st, 11:01 am

ನಿಮ್ಮೆಲ್ಲರೊಂದಿಗೆ ಮಾತನಾಡುವುದು ನನಗೆ ಆನಂದದ ಸಂಗತಿ. ಪ್ರತೀ ವರ್ಷ ನಿಮ್ಮಂತಹ ಯುವ ಮಿತ್ರರ ಜೊತೆ ಸಂವಾದ ನಡೆಸಬೇಕು ಎನ್ನುವುದು ನನ್ನ ಆಶಯ. ಇದರಿಂದ ನಿಮ್ಮ ಚಿಂತನೆಗಳನ್ನು ತಿಳಿದುಕೊಳ್ಳಲು ಸಹಾಯವಾಗುತ್ತದೆ. ನಿಮ್ಮ ಮಾತುಗಳು, ಪ್ರಶ್ನೆಗಳು, ಮತ್ತು ವಿಚಾರ ಮಾಡುವ ಗುಣ ಭವಿಷ್ಯದ ಸವಾಲುಗಳನ್ನು ನಿಭಾಯಿಸಲು ನನಗೂ ಸಹಾಯ ಮಾಡುತ್ತದೆ.

ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

July 31st, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರಶಿಕ್ಷಣಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಅವರು ತರಬೇತಿಯಲ್ಲಿರುವ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಷಾ ಮತ್ತು ಗೃಹ ಖಾತೆ ರಾಜ್ಯ ಸಚಿವ ಶ್ರೀ ನಿತ್ಯಾನಂದ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಳೆದ 7 ವರ್ಷಗಳಲ್ಲಿ, ನಾವೆಲ್ಲರೂ 'ಟೀಮ್ ಇಂಡಿಯಾ' ಆಗಿ ಕೆಲಸ ಮಾಡಿದ್ದೇವೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

May 30th, 11:30 am

ಸ್ನೇಹಿತರೆ, 2 ನೇ ಅಲೆ ಬಂದಾಗ ಇದ್ದಕ್ಕಿದ್ದಂತೆ ಆಮ್ಲಜನಕದ ಬೇಡಿಕೆ ಬಹಳಷ್ಟು ಹೆಚ್ಚಾಯಿತು. ಇದು ಬಹುದೊಡ್ಡ ಸವಾಲಾಗಿತ್ತು. ವೈದ್ಯಕೀಯ ಆಮ್ಲಜನಕವನ್ನು ದೇಶದ ದೂರ ಪ್ರದೇಶಗಳಿಗೆ ತಲುಪಿಸುವುದು ಬಹುದೊಡ್ಡ ಸವಾಲಾಗಿತ್ತು. ಆಮ್ಲಜನಕದ ಟ್ಯಾಂಕರ್ ಗಳು ಹೆಚ್ಚು ವೇಗವಾಗಿ ತಲುಪಬೇಕು. ಸ್ವಲ್ಪ ಅಲಕ್ಷವಾದರೂ ವಿಸ್ಪೋಟವಾಗುವಂತಹ ಆತಂಕವಿರುತ್ತದೆ. ಔದ್ಯಮಿಕ ಆಮ್ಲಜನಕವನ್ನು ಉತ್ಪಾದಿಸುವ ಅನೇಕ ಘಟಕಗಳು ದೇಶದ ಪೂರ್ವಭಾಗದಲ್ಲಿವೆ. ಅಲ್ಲಿಂದ ದೇಶದ ಇತರ ಭಾಗಗಳಿಗೆ ಆಮ್ಲಜನಕ ಸರಬರಾಜು ಮಾಡಲು ಕೂಡ ಹಲವು ದಿನಗಳು ಬೇಕಾಗುತ್ತವೆ.

“ತೌಕ್ತೆ’ ಚಂಡಮಾರುತ ಎದುರಿಸಲು ಕೈಗೊಂಡಿರುವ ಸಿದ್ಧತೆಗಳ ಪರಾಮರ್ಶೆಗೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಮಂತ್ರಿ

May 15th, 06:54 pm

‘ತೌಕ್ತೆ’ ಚಂಡಮಾರುತದಿಂದಾಗಿ ಉದ್ಭವಿಸಲಿರುವ ಸ್ಥಿತಿಗತಿ ನಿರ್ವಹಣೆ ಕುರಿತಂತೆ ಸಂಬಂಧಿಸಿದ ರಾಜ್ಯಗಳು ಮತ್ತು ಕೇಂದ್ರ ಸಚಿವಾಲಯಗಳು/ಸಂಸ್ಥೆಗಳು ಕೈಗೊಂಡಿರುವ ಸಿದ್ಧತಾ ಕ್ರಮಗಳ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಿದರು.

ಎರಡನೇ ರಾಷ್ಟ್ರೀಯ ಯುವ ಸಂಸತ್ ಉತ್ಸವ ಸಮಾರೋಪ ಸಮಾರಂಭ: ಪ್ರಧಾನಮಂತ್ರಿ ಭಾಷಣ

January 12th, 10:36 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಎರಡನೇ ರಾಷ್ಟ್ರೀಯ ಯುವ ಸಂಸತ್ತು ಉತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮೂವರು ರಾಷ್ಟ್ರಮಟ್ಟದ ಸ್ಪರ್ಧೆಯ ವಿಜೇತರ ಅಭಿಪ್ರಾಯಗಳನ್ನು ಆಲಿಸಿದರು. ಲೋಕಸಭಾಧ್ಯಕ್ಷರು, ಕೇಂದ್ರ ಶಿಕ್ಷಣ ಸಚಿವರು ಮತ್ತು ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

2ನೇ ರಾಷ್ಟ್ರೀಯ ಯುವ ಸಂಸತ್ತು ಉತ್ಸವ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

January 12th, 10:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಎರಡನೇ ರಾಷ್ಟ್ರೀಯ ಯುವ ಸಂಸತ್ತು ಉತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮೂವರು ರಾಷ್ಟ್ರಮಟ್ಟದ ಸ್ಪರ್ಧೆಯ ವಿಜೇತರ ಅಭಿಪ್ರಾಯಗಳನ್ನು ಆಲಿಸಿದರು. ಲೋಕಸಭಾಧ್ಯಕ್ಷರು, ಕೇಂದ್ರ ಶಿಕ್ಷಣ ಸಚಿವರು ಮತ್ತು ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

‘ದೀಕ್ಷಾಂತ ಪರೇಡ್’ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ವಿಡಿಯೋ ಕಾನ್ಫರೆನ್ಸ್ ಭಾಷಣ

September 04th, 11:07 am

ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಅಮಿತ್ ಶಾ ಜಿ, ಡಾ. ಜಿತೇಂದ್ರ ಸಿಂಗ್ ಜಿ, ಜಿ.ಕಿಷನ್ ರೆಡ್ಡಿ ಜಿ ಅವರೇ, ದೀಕ್ಷಾಂತ (ಘಟಿಕೋತ್ಸವ) ಪರೇಡ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಅಧಿಕಾರಿಗಳೇ ಮತ್ತು ಭಾರತೀಯ ಪೊಲೀಸ್ ಸೇವೆಗಳನ್ನು ಮುನ್ನಡೆಸಲು ಅತ್ಯಂತ ಉತ್ಸಾಹದಿಂದ ಸಜ್ಜಾಗಿರುವ 71ನೇ ಆರ್ ಆರ್ ನ ನನ್ನ ಯುವ ಮಿತ್ರರೇ..

ಪ್ರೊಬೆಷನರಿ ಐಪಿಎಸ್ ಅಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ

September 04th, 11:06 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ನಡೆದ “ದೀಕ್ಷಾಂತ್ ಪೆರೇಡ್ ಕಾರ್ಯಕ್ರಮ’’ದ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರೊಬೆಷನರಿ ಐಪಿಎಸ್ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.

ನಿಮಗೆ ನಾಯಿ ಸಾಕುವ ಆಲೋಚನೆ ಇದ್ದರೆ, ಭಾರತೀಯ ತಳಿಯನ್ನು ಮನೆಗೆ ತನ್ನಿ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ

August 30th, 04:34 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಇತ್ತೀಚಿನ ಮನ್ ಕಿ ಬಾತ್ ನಲ್ಲಿ, ಸೇನಾ ಮುಖ್ಯಸ್ಥರ ‘ಪ್ರಶಂಸಾ ಪತ್ರ’ ಪಡೆದಿರುವ ಭಾರತೀಯ ಸೇನೆಯ ನಾಯಿಗಳಾದ ಸೋಫಿ ಮತ್ತು ವಿದಾ ಕುರಿತು ಮಾತನಾಡಿದರು. ಹಲವಾರು ಬಾಂಬ್ ಸ್ಫೋಟಗಳು ಮತ್ತು ಭಯೋತ್ಪಾದಕ ಪಿತೂರಿಗಳನ್ನು ತಡೆಯುವಲ್ಲಿ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಪಡೆಗಳು ಇಂತಹ ಅನೇಕ ಕೆಚ್ಚೆದೆಯ ನಾಯಿಗಳನ್ನು ಹೊಂದಿವೆ ಎಂದು ಅವರು ಹೇಳಿದರು. ಅವುಗಳು ಮದ್ದುಗುಂಡುಗಳನ್ನು ಮತ್ತು ಸ್ಫೋಟಕಗಳನ್ನು ಪತ್ತೆಹಚ್ಚಲು ಸಹಾಯ ಮಾಡುವ ಹಲವು ಉದಾಹರಣೆಗಳನ್ನು ನೀಡಿದರು. ಇತ್ತೀಚೆಗೆ ಬೀಡ್ ಪೊಲೀಸರು 300 ಕ್ಕೂ ಹೆಚ್ಚು ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರಿಗೆ ಸಹಾಯ ಮಾಡಿದ ತಮ್ಮ ಸಹೋದ್ಯೋಗಿ ನಾಯಿ ರಾಕಿಗೆ ಸಕಲ ಗೌರವಗಳೊಂದಿಗೆ ನೀಡಿದ ಅಂತಿಮ ವಿದಾಯ ಬಗ್ಗೆಯೂ ಉಲ್ಲೇಖಿಸಿದರು.

ಮಹಾರಾಷ್ಟ್ರದ ರಾಯಗಢದಲ್ಲಿ ಕಟ್ಟಡ ಕುಸಿತದಿಂದ ಸಂಭವಿಸಿದ ಪ್ರಾಣಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ

August 25th, 10:59 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ರಾಯಗಢದ ಮಹಾಡ್ ನಲ್ಲಿ ಕಟ್ಟಡ ಕುಸಿತದಿಂದ ಸಂಭವಿಸಿದ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

During Kargil War, Indian Army showed its might to the world: PM Modi during Mann Ki Baat

July 26th, 11:30 am

During Mann Ki Baat, PM Modi paid rich tributes to the martyrs of the Kargil War, spoke at length about India’s fight against the Coronavirus and shared several inspiring stories of self-reliant India. The Prime Minister also shared his conversation with youngsters who have performed well during the board exams this year.