2023-24ರ ಮಾರ್ಕೆಟಿಂಗ್ ಸೀಸನ್ ಗಾಗಿ ಮುಂಗಾರು(ಖಾರಿಫ್) ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (ಎಂ.ಎಸ್.ಪಿ) ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ
June 07th, 05:35 pm
ರೈತರಿಗೆ(ಬೆಳೆಗಾರರಿಗೆ) ಅವರ ಉತ್ಪನ್ನಗಳಿಗೆ ಲಾಭದಾಯಕ ಬೆಲೆಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಕೆಳಗಿನ ಕೋಷ್ಟಕದಲ್ಲಿ ಒದಗಿಸಿದಂತೆ ಬೆಳೆ ವೈವಿಧ್ಯತೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು 2023-24 ರ ಮಾರುಕಟ್ಟೆಗಾಗಿ ಮುಂಗಾರು ಬೆಳೆಗಳ ಎಂ.ಎಸ್.ಪಿ. ಅನ್ನು ಹೆಚ್ಚಿಸಿದೆ:ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಯನ್ನು ಇನ್ನೂ ಮೂರು ತಿಂಗಳವರೆಗೆ (2022ರ ಅಕ್ಟೋಬರ್ -2022ರ ಡಿಸೆಂಬರ್) ವಿಸ್ತರಿಸಿದ ಕೇಂದ್ರ ಸರಕಾರ
September 28th, 04:06 pm
2021 ರಲ್ಲಿ ಗೌರವಾನ್ವಿತ ಪ್ರಧಾನಮಂತ್ರಿಯವರು ಮಾಡಿದ ಜನಪರ ಘೋಷಣೆ ಮತ್ತು ಪಿಎಂಜಿಕೆಎವೈ ಅಡಿಯಲ್ಲಿ ಹೆಚ್ಚುವರಿ ಆಹಾರ ಭದ್ರತೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಹಿನ್ನೆಲೆಯಲ್ಲಿ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ-ಹಂತ 7) ಯನ್ನು ಇನ್ನೂ 3 ತಿಂಗಳ ಅವಧಿಗೆ ಅಂದರೆ 2022ರ ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟವು ತನ್ನ ಅನುಮೋದನೆ ನೀಡಿದೆ.ಸರ್ಕಾರದ ಎಲ್ಲಾ ಯೋಜನೆಗಳಲ್ಲಿ ಸಾರವರ್ಧಿತ ಅಕ್ಕಿ ವಿತರಣೆಗೆ ಸಂಪುಟ ಅನುಮೋದನೆ
April 08th, 03:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆ (ICDS), ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ-PM POSHAN [ಹಿಂದಿನ ಮಧ್ಯಾಹ್ನದ ಬಿಸಿಊಟದ ಯೋಜನೆ (MDM)] ಮತ್ತು ಭಾರತ ಸರ್ಕಾರದ ಇತರ ಕಲ್ಯಾಣ ಯೋಜನೆಗಳ (OWS) ಮೂಲಕ 2024 ರ ವೇಳೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ (UTs) ಹಂತ ಹಂತವಾಗಿ 'ಉದ್ದೇಶಿತ ಸಾರ್ವಜನಿಕ ವಿತರಣಾ ವ್ಯವಸ್ಥೆ' (ಟಿಪಿಡಿಎಸ್) ವ್ಯಾಪ್ತಿಯುದ್ದಕ್ಕೂ ಸಾರವರ್ಧಿತ ಅಕ್ಕಿಯನ್ನು ಪೂರೈಸಲು ತನ್ನ ಅನುಮೋದನೆಯನ್ನು ನೀಡಿದೆ.ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳ ಜತೆ ಗುಜರಾತ್ ನಲ್ಲಿ ನಾಳೆ ಪ್ರಧಾನ ಮಂತ್ರಿ ಸಂವಾದ
August 01st, 09:28 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಗುಜರಾತ್ ನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳ ಜತೆ ಸಂವಾದ ನಡೆಸಲಿದ್ದಾರೆ. ಆಗಸ್ಟ್ 3ರಂದು ಮಧ್ಯಾಹ್ನ 12.30ಕ್ಕೆ ವೀಡಿಯೊ ಕಾನ್ಫರೆನ್ಸ್ ಸಂವಾದ ಕಾರ್ಯಕ್ರಮ ಆಯೋಜಿತವಾಗಿದೆ.