ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರೀಯ ಗಂಗಾ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನ ಮಂತ್ರಿ
December 30th, 10:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ರಾಷ್ಟ್ರೀಯ ಗಂಗಾ ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದರು.ಪಶ್ಚಿಮ ಬಂಗಾಳದಲ್ಲಿ ಇಂದಿನ ನಿಗದಿತ ಕಾರ್ಯಕ್ರಮಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ ಪ್ರಧಾನಮಂತ್ರಿ
December 30th, 09:20 am
ಇಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಬೇಕಿರುವ ಪ್ರಧಾನ ಮಂತ್ರಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪಶ್ಚಿಮ ಬಂಗಾಳದಲ್ಲಿ ನಿಗದಿಯಾಗಿರುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.ಡಿಸೆಂಬರ್ 30 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
December 29th, 12:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಡಿಸೆಂಬರ್ 30 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.15ಕ್ಕೆ ಪ್ರಧಾನಮಂತ್ರಿ ಅವರು ಹೌರಾ ರೈಲ್ವೆ ನಿಲ್ದಾಣವನ್ನು ತಲುಪಲಿದ್ದು, ಅಲ್ಲಿ ಅವರು ಹೌರಾದಿಂದ ನ್ಯೂ ಜಲಪಾಯಿಗುರಿಯನ್ನು ಸಂಪರ್ಕಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರುವರು. ಅವರು ಕೋಲ್ಕತಾ ಮೆಟ್ರೋದ ನೇರಳೆ ಮಾರ್ಗದ ಜೋಕಾ-ತಾರತಲಾ ವಿಸ್ತರಣೆಯನ್ನು ಉದ್ಘಾಟಿಸಲಿದ್ದಾರೆ ಮತ್ತು ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಪ್ರಧಾನಮಂತ್ರಿ ಅವರು ಐಎನ್ಎಸ್ ನೇತಾಜಿ ಸುಭಾಸ್ ತಲುಪಿ, ನೇತಾಜಿ ಸುಭಾಷ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ ಮತ್ತು ಡಾ. ಶ್ಯಾಮ ಪ್ರಸಾದ್ ಮುಖರ್ಜಿ - ರಾಷ್ಟ್ರೀಯ ನೀರು ಮತ್ತು ನೈರ್ಮಲ್ಯ ಸಂಸ್ಥೆ (ಡಿಎಸ್ ಪಿಎಂ - ಎನ್ಐಡಬ್ಲ್ಯುಎಎಸ್) ಅನ್ನು ಉದ್ಘಾಟಿಸಲಿದ್ದಾರೆ. ಅವರು ಗಂಗಾ ಶುದ್ಧೀಕರಣಕ್ಕಾಗಿ ರಾಷ್ಟ್ರೀಯ ಅಭಿಯಾನದ ಅಡಿಯಲ್ಲಿ ಪಶ್ಚಿಮ ಬಂಗಾಳಕ್ಕಾಗಿ ಅನೇಕ ಒಳಚರಂಡಿ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 12.25ರ ಸುಮಾರಿಗೆ ಪ್ರಧಾನಮಂತ್ರಿ ಅವರು ರಾಷ್ಟ್ರೀಯ ಗಂಗಾ ಮಂಡಳಿಯ ಎರಡನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.Prime Minister reviews “Project Arth Ganga” : Correcting imbalances; connecting people
May 15th, 08:43 pm
Prime Minister Shri Narendra Modi today reviewed the plans being envisaged for implementing “Project Arth Ganga”.ಗಂಗಾ ರಾಷ್ಟ್ರೀಯ ಮಂಡಳಿ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
December 14th, 03:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಪ್ರದೇಶ ಕಾನ್ಪುರದಲ್ಲಿ ಗಂಗಾ ರಾಷ್ಟ್ರೀಯ ಮಂಡಳಿಯ ಪ್ರಥಮ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.