ವಿಜ್ಞಾನ, ಸರ್ಕಾರ ಮತ್ತು ಸಮಾಜ ಒಟ್ಟಾಗಿ ಕೆಲಸ ಮಾಡಿದಾಗ ಫಲಿತಾಂಶ ಉತ್ತಮವಾಗಿರುತ್ತದೆ: ಪ್ರಧಾನಿ ಮೋದಿ

September 28th, 11:01 am

ಪಿಎಂ ನರೇಂದ್ರ ಮೋದಿ ವಿಶೇಷ ಲಕ್ಷಣಗಳನ್ನು ಹೊಂದಿರುವ 35 ಬೆಳೆ ಪ್ರಭೇದಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಕಳೆದ 6-7 ವರ್ಷಗಳಲ್ಲಿ ಕೃಷಿಗೆ ಸಂಬಂಧಿಸಿದ ಸವಾಲುಗಳನ್ನು ಪರಿಹರಿಸಲು ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಆದ್ಯತೆಯ ಮೇಲೆ ಬಳಸಲಾಗುತ್ತಿದೆ ಎಂದು ಅವರು ಹೇಳಿದರು.

ವಿಶೇಷ ಗುಣಲಕ್ಷಣಗಳಿರುವ 35 ಬೆಳೆಗಳ ತಳಿಗಳನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ

September 28th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ಗುಣಲಕ್ಷಣಗಳಿರುವ 35 ಬೆಳೆಗಳ ತಳಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ರಾಯ್ಪುರದ ರಾಷ್ಟ್ರೀಯ ಜೈವಿಕ ಒತ್ತಡ ನಿರ್ವಹಣಾ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿಯವರು ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಕೃಷಿ ವಿಶ್ವವಿದ್ಯಾಲಯಗಳಿಗೆ ಹಸಿರು ಕ್ಯಾಂಪಸ್ ಪ್ರಶಸ್ತಿಗಳನ್ನು ಪ್ರದಾನಮಾಡಿದರು. ಅವರು ನಾವೀನ್ಯಪೂರ್ಣ ವಿಧಾನಗಳೊಂದಿಗೆ ಕೃಷಿ ಮಾಡುತ್ತಿರುವ ರೈತರೊಂದಿಗೆ ಸಂವಾದ ನಡೆಸಿದರು ಮತ್ತು ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು.

ಸೆಪ್ಟೆಂಬರ್ 28ರಂದು ವಿಶೇಷ ಲಕ್ಷಣಗಳನ್ನು ಒಳಗೊಂಡ 35 ಬೆಳೆಗಳ ತಳಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ

September 27th, 09:41 pm

ಹವಾಮಾನ ಸ್ಥಿತಿ ಸ್ಥಾಪಕತ್ವ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸೆಪ್ಟೆಂಬರ್ 28ರ ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ಲಕ್ಷಣಗಳುಳ್ಳ 35 ಬೆಳೆಗಳ ತಳಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಐಸಿಎಆರ್ ಕೇಂದ್ರಗಳು, ರಾಜ್ಯ ಹಾಗೂ ಕೇಂದ್ರ ಕೃಷಿ ವಿಶ್ವವಿದ್ಯಾಲಯಗಳು ಮತ್ತು ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ)ಗಳು ಈ ಕಾರ್ಯಕ್ರಮವನ್ನು ದೇಶಾದ್ಯಂತ ಹಮ್ಮಿಕೊಂಡಿವೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ರಾಯ್ಪುರದಲ್ಲಿ ಹೊಸದಾಗಿ ನಿರ್ಮಿಸಿರುವ ರಾಷ್ಟ್ರೀಯ ಬಯೋಟಿಕ್ ಒತ್ತಡ ಸಂಯಮ ಕೇಂದ್ರದ ಕ್ಯಾಂಪಸ್ ಅನ್ನು ಕೂಡ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.