ಸುಸ್ಥಿರ ಕೃಷಿಯನ್ನು ಉತ್ತೇಜಿಸಲು ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ- ಆರ್ ಕೆ ವಿ ವೈ) ಮತ್ತು ಸ್ವಾವಲಂಬನೆಗಾಗಿ ಆಹಾರ ಭದ್ರತೆಯನ್ನು ಸಾಧಿಸಲು ಕೃಷೋನ್ನತಿ ಯೋಜನೆ (ಕೆವೈ) ಗೆ ಸಂಪುಟ ಅನುಮೋದನೆ ನೀಡಿದೆ

October 03rd, 09:18 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಂದು ಕೃಷಿ ಮತ್ತು ರೈತರ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕೇಂದ್ರ ಪ್ರಾಯೋಜಿತ ಯೋಜನೆಗಳನ್ನು (ಸಿ ಎಸ್ ಎಸ್) ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ- ಆರ್ ಕೆ ವಿ ವೈ) ಮತ್ತು ಕೃಷೋನ್ನತಿ ಯೋಜನೆ (ಕೆವೈ) ಎಂಬ ಎರಡು ಸಮೂಹ ಯೋಜನೆಗಳಾಗಿ ತರ್ಕಬದ್ಧಗೊಳಿಸುವ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ (ಡಿಎ ಮತ್ತು ಎಫ್ ಡಬ್ಲ್ಯು) ಪ್ರಸ್ತಾವನೆಯನ್ನು ಅನುಮೋದಿಸಿತು. ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ- ಆರ್ ಕೆ ವಿ ವೈ) ಸುಸ್ಥಿರ ಕೃಷಿಯನ್ನು ಉತ್ತೇಜಿಸುತ್ತದೆ, ಕೃಷೋನ್ನತಿ ಯೋಜನೆಯು ಆಹಾರ ಭದ್ರತೆ ಮತ್ತು ಕೃಷಿ ಸ್ವಾವಲಂಬನೆಯನ್ನು ಸಾಧಿಸುತ್ತದೆ. ವಿವಿಧ ಘಟಕಗಳ ದಕ್ಷ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಘಟಕಗಳು ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತವೆ.

2024-25 ರಿಂದ 2030-31ರವರೆಗೆ ಖಾದ್ಯ ತೈಲಗಳು-ಎಣ್ಣೆಕಾಳುಗಳ ರಾಷ್ಟ್ರೀಯ ಮಿಷನ್‌ (ಎನ್‌ಎಂಇಒ-ಎಣ್ಣೆಕಾಳುಗಳು) ಗೆ ಸಂಪುಟದ ಅನುಮೋದನೆ

October 03rd, 09:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ದೇಶೀಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಮತ್ತು ಖಾದ್ಯ ತೈಲಗಳಲ್ಲಿಸ್ವಾವಲಂಬನೆ (ಆತ್ಮನಿರ್ಭರ ಭಾರತ್‌) ಸಾಧಿಸುವ ಗುರಿಯನ್ನು ಹೊಂದಿರುವ ಹೆಗ್ಗುರುತು ಉಪಕ್ರಮವಾದ ಖಾದ್ಯ ತೈಲಗಳು - ಎಣ್ಣೆಕಾಳುಗಳ ರಾಷ್ಟ್ರೀಯ ಮಿಷನ್‌ (ಎನ್‌.ಎಂ.ಇ.ಒ-ಎಣ್ಣೆಕಾಳುಗಳು)ಗೆ ತನ್ನ ಅನುಮೋದನೆ ನೀಡಿದೆ. ಈ ಮಿಷನ್‌ ಅನ್ನು 2024-25 ರಿಂದ 2030-31 ರವರೆಗೆ ಏಳು ವರ್ಷಗಳ ಅವಧಿಯಲ್ಲಿ10,103 ಕೋಟಿ ರೂ.ಗಳ ಹಣಕಾಸು ವೆಚ್ಚದೊಂದಿಗೆ ಜಾರಿಗೆ ತರಲಾಗುವುದು.

2022 ಕೇಂದ್ರ ಬಜೆಟ್ ನಲ್ಲಿ ಕೃಷಿ ರಂಗದ ಮೇಲೆ ಸಕಾರಾತ್ಮಕ ಪರಿಣಾಮ ಕುರಿತ ಪ್ರಧಾನ ಮಂತ್ರಿಗಳ ವೆಬಿನಾರ್ ಭಾಷಣ

February 24th, 10:13 am

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಮಿತ್ರರೆ, ರಾಜ್ಯ ಸರ್ಕಾರಗಳ ಪ್ರತಿನಿಧಿಗಳೇ, ಕೈಗಾರಿಕಾ ಮತ್ತು ಶಿಕ್ಷಣ ಕ್ಷೇತ್ರದ ಸಹೋದ್ಯೋಗಿಗಳೇ, ನನ್ನೆಲ್ಲಾ ರೈತ ಸಹೋದರ, ಸಹೋದರಿಯರೇ, ಕೃಷಿ ವಿಜ್ಞಾನ ಕೇಂದ್ರಗಳ ಸಹೋದ್ಯೋಗಿಗಳೆ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಗಣ್ಯರೆ,

ಕೃಷಿ ವಲಯದ ಮೇಲೆ ʻಕೇಂದ್ರ ಬಜೆಟ್-2022ʼರ ಸಕಾರಾತ್ಮಕ ಪರಿಣಾಮಗಳ ಬಗ್ಗೆ ವೆಬಿನಾರ್‌ ಉದ್ದೇಶಿಸಿ ಮಾತನಾಡಿದ ಪ್ರಧಾನಿ

February 24th, 10:03 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃಷಿ ಕ್ಷೇತ್ರದ ಮೇಲೆ ಕೇಂದ್ರ ಬಜೆಟ್-2022ರ ಸಕಾರಾತ್ಮಕ ಪರಿಣಾಮಗಳ ಬಗ್ಗೆ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. ಕೃಷಿ ವಲಯವನ್ನು ಬಲಪಡಿಸಲು ಬಜೆಟ್ ಯಾವ ರೀತಿಯಲ್ಲಿ ಕೊಡುಗೆ ನೀಡುತ್ತದೆ ಎಂಬುದನ್ನು ಅವರು ಚರ್ಚಿಸಿದರು. 'ಸ್ಮಾರ್ಟ್ ಕೃಷಿ-ಅನುಷ್ಠಾನದ ಕಾರ್ಯತಂತ್ರಗಳುʼ ವಿಷಯದ ಮೇಲೆ ವೆಬಿನಾರ್‌ ಕೇಂದ್ರೀಕೃತವಾಗಿತ್ತು. ಸಂಬಂಧಪಟ್ಟ ಕೇಂದ್ರ ಸಚಿವರು, ರಾಜ್ಯ ಸರ್ಕಾರಗಳ ಪ್ರತಿನಿಧಿಗಳು, ಕೈಗಾರಿಕೆ ಮತ್ತು ಶೈಕ್ಷಣಿಕ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ದೇಶದ ವಿವಿಧ ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ ರೈತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಪಿ.ಎಂ-ಕಿಸಾನ್ ಯೋಜನೆ ಅಡಿಯಲ್ಲಿ 10ನೇ ಕಂತಿನ ಹಣಕಾಸು ಪ್ರಯೋಜನಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

January 01st, 12:31 pm

ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಪಿಎಂ-ಕಿಸಾನ್ ನಿಧಿಯ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಮಂತ್ರಿ

January 01st, 12:30 pm

ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಖಾದ್ಯ ತೈಲದ ರಾಷ್ಟ್ರೀಯ ಅಭಿಯಾನದಲ್ಲಿ – ಆಯಿಲ್ ಪಾಮ್ ಜಾರಿಗೆ ಸಂಪುಟದ ಅನುಮೋದನೆ

August 18th, 11:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಈಶಾನ್ಯ ವಲಯ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ವಿಶೇಷ ಗಮನ ಕೇಂದ್ರೀಕರಿಸಿ ಹೊಸ ಕೇಂದ್ರ ಪ್ರಾಯೋಜಿತ ಯೋಜನೆಯಾಗಿ ಖಾದ್ಯ ತೈಲಗಳ ರಾಷ್ಟ್ರೀಯ ಅಭಿಯಾನ – ಆಯಿಲ್ ಪಾಮ್ (ಎನ್.ಎಂ.ಇ.ಒ–ಒಪಿ) ಎಂದು ಕರೆಯಲಾಗುವ ತೈಲ ತಾಳೆ (ಆಯಿಲ್ ಪಾಮ್) ಆರಂಭಿಸಲು ತನ್ನ ಅನುಮೋದನೆ ನೀಡಿದೆ. ಖಾದ್ಯ ತೈಲಗಳ ಆಮದಿನ ಮೇಲೆ ಭಾರಿ ಅವಲಂಬನೆಯಿಂದಾಗಿ, ಖಾದ್ಯ ತೈಲಗಳ ದೇಶೀಯ ಉತ್ಪಾದನೆಯನ್ನು ಹೆಚ್ಚಿಸುವ ಪ್ರಯತ್ನ ಮಾಡುವುದು ಮುಖ್ಯವಾಗಿದ್ದು, ತೈಲ ತಾಳೆಯ ಬೆಳೆ ಪ್ರದೇಶದ ಹೆಚ್ಚಳ ಮತ್ತು ಉತ್ಪಾದಕತೆಯು ಪ್ರಮುಖ ಪಾತ್ರ ವಹಿಸುತ್ತದೆ.