ಎರಡನೇ ರಾಷ್ಟ್ರೀಯ ಯುವ ಸಂಸತ್ ಸ್ಪರ್ಧೆ ವಿಜೇತರು ಮತ್ತು ಅಂತಿಮ ಹಂತ ತಲುಪಿದವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ
January 12th, 10:11 pm
ಎರಡನೇ ರಾಷ್ಟ್ರೀಯ ಯುವ ಸಂಸತ್ ಸ್ಪರ್ಧೆಯಲ್ಲಿ ವಿಜೇತರಾದ ಮತ್ತು ಅಂತಿಮ ಹಂತಕ್ಕೆ ಆಯ್ಕೆಯಾದವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ವಿಡಿಯೋ ಸಂವಾದದ ಮೂಲಕ ಭಾಷಣ ಮಾಡಿದ ಅವರು, “ಇಂದು ನಿಮ್ಮ ಸಂವಾದ ಮತ್ತು ಚರ್ಚೆಗಳು ಬಹಳ ಮುಖ್ಯವಾಗಿದೆ. ನೀವು ಮಾತನಾಡುವುದನ್ನು ಕೇಳಿಸಿಕೊಂಡೆ. ನಂತರ ತಮಗೆ ಆಲೋಚನೆ ಬಂತು ಮತ್ತು ನಿಮ್ಮ ಭಾಷಣಗಳನ್ನು ತಮ್ಮ ಟ್ವಿಟ್ಟರ್ ಹ್ಯಾಂಡಲ್ ಮೂಲಕ ಟ್ವೀಟ್ ಮಾಡಲು ತೀರ್ಮಾನಿಸಿದೆ.ರಾಜಕೀಯದಲ್ಲಿ ನಿಸ್ವಾರ್ಥ ಮತ್ತು ರಚನಾತ್ಮಕ ಕೊಡುಗೆ ನೀಡುವಂತೆ ಯುವಕರಿಗೆ ಪ್ರಧಾನಿ ಕರೆ
January 12th, 03:31 pm
ರಾಜಕೀಯದಲ್ಲಿ ನಿಸ್ವಾರ್ಥ ಮತ್ತು ರಚನಾತ್ಮಕ ಕೊಡುಗೆ ನೀಡುವಂತೆ ಪ್ರಧಾನಿ ಶ್ರೀ ನರೇಂದ್ರ ಮೋದಿ ದೇಶದ ಯುವಕರಿಗೆ ಕರೆ ನೀಡಿದ್ದಾರೆ. ಇಂದು ನಡೆದ ಎರಡನೇ ರಾಷ್ಟ್ರೀಯ ಯುವ ಸಂಸತ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿಯವರು, ಅರ್ಥಪೂರ್ಣ ಬದಲಾವಣೆಯನ್ನು ತರಲು ರಾಜಕೀಯ ಒಂದು ಬಹು ದೊಡ್ಡ ಮಾಧ್ಯಮವಾಗಿದೆ ಮತ್ತು ಇತರ ಎಲ್ಲ ಕ್ಷೇತ್ರಗಳಂತೆ ರಾಜಕೀಯದಲ್ಲೂ ಯುವಕರ ಉಪಸ್ಥಿತಿಯು ನಿರ್ಣಾಯಕವಾಗಿದೆ ಎಂದರು. ರಾಜಕೀಯವೆಂಬುದು ನೀತಿಬಾಹಿರ ಚಟುವಟಿಕೆಗಳ ತಾಣ ಎಂಬ ಹಳೆಯ ಕಲ್ಪನೆಯನ್ನು ಬದಲಾಯಿಸಿ, ಇಂದು ಪ್ರಾಮಾಣಿಕರಿಗೆ ಸೇವೆ ಸಲ್ಲಿಸುವ ಅವಕಾಶ ಸಿಗುತ್ತಿದೆ ಎಂದು ಪ್ರಧಾನಿ ಯುವಕರಿಗೆ ಭರವಸೆ ನೀಡಿದರು. ಪ್ರಾಮಾಣಿಕತೆ ಮತ್ತು ದಕ್ಷತೆ ಇಂದಿನ ಅಗತ್ಯವಾಗಿದೆ ಎಂದು ಅವರು ಹೇಳಿದರು.ಯುವಜನತೆಗೆ ಸ್ವಾಮಿ ವಿವೇಕಾನಂದರ ನಾಯಕತ್ವದ ಸಲಹೆ ವಿವರಿಸಿದ ಪ್ರಧಾನಿ ನರೇಂದ್ರ ಮೋದಿ
January 12th, 03:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೇಶದ ಯುವಜನರಿಗೆ ಸ್ವಾಮಿ ವಿವೇಕಾನಂದರ ಸಾಯಕತ್ವದ ಸಲಹೆ ಪಾಲಿಸುವಂತೆ ತಿಳಿಸಿದ್ದು, ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿಕಸನಕ್ಕೆ ಕೊಡುಗೆ ನೀಡಿದ ಹೆಮ್ಮೆಯ ಸನ್ಯಾಸಿಯನ್ನು ಶ್ಲಾಘಿಸಿದ್ದಾರೆ. ಎರಡನೇ ರಾಷ್ಟ್ರೀಯ ಯುವ ಸಂಸತ್ತು ಉತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ, ವ್ಯಕ್ತಿಯ ವಿಕಸನದಿಂದ ಸಾಂಸ್ಥಿಕ ನಿರ್ಮಾಣದವರೆಗೆ ಸದ್ಗುಣ ಚಕ್ರದ ಕುರಿತಂತೆ ಸ್ವಾಮೀಜಿಯವರ ಕೊಡುಗೆಯ ಬಗ್ಗೆ ಮಾತನಾಡಿದರು.ಎರಡನೇ ರಾಷ್ಟ್ರೀಯ ಯುವ ಸಂಸತ್ ಉತ್ಸವ ಸಮಾರೋಪ ಸಮಾರಂಭ: ಪ್ರಧಾನಮಂತ್ರಿ ಭಾಷಣ
January 12th, 10:36 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಎರಡನೇ ರಾಷ್ಟ್ರೀಯ ಯುವ ಸಂಸತ್ತು ಉತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮೂವರು ರಾಷ್ಟ್ರಮಟ್ಟದ ಸ್ಪರ್ಧೆಯ ವಿಜೇತರ ಅಭಿಪ್ರಾಯಗಳನ್ನು ಆಲಿಸಿದರು. ಲೋಕಸಭಾಧ್ಯಕ್ಷರು, ಕೇಂದ್ರ ಶಿಕ್ಷಣ ಸಚಿವರು ಮತ್ತು ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.2ನೇ ರಾಷ್ಟ್ರೀಯ ಯುವ ಸಂಸತ್ತು ಉತ್ಸವ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ
January 12th, 10:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಎರಡನೇ ರಾಷ್ಟ್ರೀಯ ಯುವ ಸಂಸತ್ತು ಉತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮೂವರು ರಾಷ್ಟ್ರಮಟ್ಟದ ಸ್ಪರ್ಧೆಯ ವಿಜೇತರ ಅಭಿಪ್ರಾಯಗಳನ್ನು ಆಲಿಸಿದರು. ಲೋಕಸಭಾಧ್ಯಕ್ಷರು, ಕೇಂದ್ರ ಶಿಕ್ಷಣ ಸಚಿವರು ಮತ್ತು ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಜನವರಿ 12 ರಂದು, ಎರಡನೇ ರಾಷ್ಟ್ರೀಯ ಯುವ ಸಂಸತ್ ಉತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಿಯವರಿಂದ ಭಾಷಣ
January 10th, 12:31 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಜನವರಿ 12 ರಂದು ಬೆಳಿಗ್ಗೆ 10: 30 ಕ್ಕೆ ಎರಡನೇ ರಾಷ್ಟ್ರೀಯ ಯುವ ಸಂಸತ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಉತ್ಸವದ ಮೂವರು ರಾಷ್ಟ್ರೀಯ ವಿಜೇತರು ಸಹ ಈ ಸಂದರ್ಭದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಾರೆ. ಲೋಕಸಭಾಧ್ಯಕ್ಷರು, ಕೇಂದ್ರ ಶಿಕ್ಷಣ ಸಚಿವರು ಮತ್ತು ಯುವಜನ ವ್ಯವಹಾರ ಮತ್ತು ಕ್ರೀಡಾ ರಾಜ್ಯ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.Words one speak may or may not be impressive but it should definitely be inspiring: PM Modi
February 27th, 10:01 am
PM Modi today conferred the Youth Parliament Festival Awards. Addressing a gathering, the PM highlighted how during the 16th Lok Sabha. He said, “Average productivity was 85%, nearly 205 bills were passed. The 16th Lok Sabha worked 20% more, in comparison to 15th Lok Sabha.” He urged the gathering that the words that we speak should reach its accurate point. “It may not be impressive, but it should be inspiring,” he said.ರಾಷ್ಟ್ರೀಯ ಯುವ ಸಂಸತ್ ಉತ್ಸವ 2019 ಪ್ರಶಸ್ತಿ ಪ್ರದಾನ ಮಾಡಿದ ಪ್ರಧಾನಮಂತ್ರಿ
February 27th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವ ದೆಹಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರೀಯ ಯುವ ಸಂಸತ್ ಉತ್ಸವ ಪ್ರಶಸ್ತಿ 2019 ಸಮಾರೋಪ ಸಮಾರಂಭದಲ್ಲಿ ಭಾಗಿಯಾದರು. ಅಲ್ಲಿ ಅವರು ರಾಷ್ಟ್ರೀಯ ಯುವ ಸಂಸತ್ ಉತ್ಸವ ಪ್ರಶಸ್ತಿ 2019 ಪ್ರದಾನ ಮಾಡಿ, ವಿಜೇತರಿಗೆ ಪ್ರಮಾಣ ಪತ್ರ ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಅವರು ಕ್ರೀಡಾ ಮಾಹಿತಿ ಒದಗಿಸುವ ಖೇಲೋ ಇಂಡಿಯಾ ಆಪ್ ಗೆ ಚಾಲನೆ ನೀಡಿದರು.