
ಭಾರತ್ ಗ್ರಾಮೀಣ ಮಹೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 04th, 11:15 am
ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಜೀ, ಹಣಕಾಸು ಖಾತೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಜೀ, ಇಲ್ಲಿ ಉಪಸ್ಥಿತರಿರುವ ನಬಾರ್ಡ್ನ ಹಿರಿಯ ಆಡಳಿತ ಮಂಡಳಿಯ ಗೌರವಾನ್ವಿತ ಸದಸ್ಯರು, ಸ್ವಸಹಾಯ ಗುಂಪುಗಳ ಸದಸ್ಯರು, ಸಹಕಾರಿ ಬ್ಯಾಂಕುಗಳು, ರೈತ ಉತ್ಪಾದಕ ಸಂಸ್ಥೆ (FPO) ಗಳು ಇತರ ಎಲ್ಲ ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ,
PM Modi inaugurates the Grameen Bharat Mahotsav 2025
January 04th, 10:59 am
PM Modi inaugurated Grameen Bharat Mahotsav in Delhi. He highlighted the launch of campaigns like the Swamitva Yojana, through which people in villages are receiving property papers. He remarked that over the past 10 years, several policies have been implemented to promote MSMEs and also mentioned the significant contribution of cooperatives in transforming the rural landscape.
ರಾಜಸ್ಥಾನದ ಜೈಪುರದಲ್ಲಿ 'ಏಕ್ ವರ್ಷ್-ಪರಿಣಾಮ್ ಉತ್ಕರ್ಷ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
December 17th, 12:05 pm
ಗೋವಿಂದ ನಗರದಲ್ಲಿ ನಾನು ಗೋವಿಂದ್ ದೇವ್ ಜೀ ಅವರಿಗೆ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಎಲ್ಲರಿಗೂ ನನ್ನ ನಮಸ್ಕಾರಗಳು!ರಾಜಸ್ಥಾನ ಸರ್ಕಾರ ಒಂದು ವರ್ಷ ಅಧಿಕಾರಾವಧಿ ಪೂರೈಸಿದ ಹಿನೆಲೆಯಲ್ಲಿ ಜೈಪುರದಲ್ಲಿ ನಡೆದ ʻಏಕ್ ವರ್ಷ್-ಪರಿನಾಮ್ ಉತ್ಕರ್ಷ್ʼ (ಒಂದು ವರ್ಷ-ಪರಿಣಾಮ ಶ್ರೇಷ್ಠ) ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 17th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಜೈಪುರದಲ್ಲಿ ನಡೆದ ʻಒಂದು ವರ್ಷ-ಪರಿಣಾಮ ಶ್ರೇಷ್ಠʼ(ಏಕ್ ವರ್ಷ್-ಪರಿನಾಮ್ ಉತ್ಕರ್ಷ್) ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ರಾಜ್ಯ ಸರ್ಕಾರದ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಾಜಸ್ಥಾನ ಸರ್ಕಾರ ಮತ್ತು ರಾಜಸ್ಥಾನದ ಜನರನ್ನು ಅಭಿನಂದಿಸಿದರು. ಈ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಜನರ ಆಶೀರ್ವಾದ ಪಡೆಯುವ ಅದೃಷ್ಟ ತಮ್ಮದಾಗಿದೆ ಎಂದು ಅವರು ಹೇಳಿದರು. ರಾಜಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಹೊಸ ದಿಕ್ಕು ಮತ್ತು ವೇಗವನ್ನು ನೀಡಲು ಕೈಗೊಂಡ ಪ್ರಯತ್ನಗಳಿಗಾಗಿ ಶ್ರೀ ಮೋದಿ ಅವರು ರಾಜಸ್ಥಾನದ ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಮೊದಲ ವರ್ಷವು ಮುಂಬರುವ ಹಲವು ವರ್ಷಗಳ ಅಭಿವೃದ್ಧಿಗೆ ಬಲವಾದ ಅಡಿಪಾಯವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದರು. ಇಂದಿನ ಕಾರ್ಯಕ್ರಮವು ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ್ದನ್ನು ಮಾತ್ರವಲ್ಲ, ರಾಜಸ್ಥಾನದ ಉಜ್ವಲತೆ ಮತ್ತು ರಾಜಸ್ಥಾನದ ಅಭಿವೃದ್ಧಿಯ ಹಬ್ಬವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ಇತ್ತೀಚೆಗೆ ನಡೆದ ʻರೈಸಿಂಗ್ ರಾಜಸ್ಥಾನ ಶೃಂಗಸಭೆ-2024ʼ ಕಾರ್ಯಕ್ರಮದಲ್ಲಿ ತಾವು ಭಾಗಿಯಾಗಿದ್ದನ್ನು ಸ್ಮರಿಸಿದ ಶ್ರೀ ಮೋದಿ, ವಿಶ್ವದ ವಿವಿಧ ಭಾಗಗಳ ಅನೇಕ ಹೂಡಿಕೆದಾರರು ಅಂದಿನ ಕಾರ್ಯಕ್ರಮದಲ್ಲಿ ಹಾಜರಿದ್ದರು ಮತ್ತು ಇಂದು 45,000 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳನ್ನು ರಾಜ್ಯದಲ್ಲಿ ಉದ್ಘಾಟಿಸಲಾಗಿದೆ ಎಂದರು. ಈ ಯೋಜನೆಗಳು ರಾಜಸ್ಥಾನದಲ್ಲಿ ನೀರಿಗೆ ಸಂಬಂಧಿಸಿದಂತೆ ಅಡೆತಡೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುತ್ತವೆ ಮತ್ತು ರಾಜಸ್ಥಾನವನ್ನು ಭಾರತದ ಉತ್ತಮ ಸಂಪರ್ಕ ಹೊಂದಿರುವ ರಾಜ್ಯಗಳಲ್ಲಿ ಒಂದಾಗಿ ಮಾಡುತ್ತವೆ ಎಂದು ಅವರು ಹೇಳಿದರು. ಈ ಅಭಿವೃದ್ಧಿ ಕಾರ್ಯಗಳು ಹೆಚ್ಚಿನ ಹೂಡಿಕೆದಾರರನ್ನು ಆಹ್ವಾನಿಸುತ್ತವೆ, ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ, ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸುತ್ತವೆ ಮತ್ತು ರಾಜಸ್ಥಾನದ ರೈತರು, ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ ಎಂದು ಪ್ರಧಾನಿ ಹೇಳಿದರು.ಹರಿಯಾಣದ ಪಾಣಿಪತ್ ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
December 09th, 05:54 pm
ಹರಿಯ ವಾಸಸ್ಥಾನ ಹರಿಯಾಣ, ಮತ್ತು ಇಲ್ಲಿ ಎಲ್ಲರೂ ಹೃತ್ಪೂರ್ವಕವಾಗಿ 'ರಾಮ್ ರಾಮ್' ಎಂದು ಪರಸ್ಪರ ಶುಭಾಶಯ ಕೋರುತ್ತಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ ಐ ಸಿಯ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದರು
December 09th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಪಾಣಿಪತ್ ನಲ್ಲಿ ಮಹಿಳಾ ಸಬಲೀಕರಣ ಮತ್ತು ಆರ್ಥಿಕ ಒಳಗೊಳ್ಳುವಿಕೆಯ ತಮ್ಮ ಬದ್ಧತೆಗೆ ಅನುಗುಣವಾಗಿ ಭಾರತೀಯ ಜೀವ ವಿಮಾ ನಿಗಮದ ‘ಬಿಮಾ ಸಖಿ ಯೋಜನೆʼಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಕರ್ನಾಲ್ ನಲ್ಲಿರುವ ಮಹಾರಾಣಾ ಪ್ರತಾಪ್ ತೋಟಗಾರಿಕಾ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್ ಗೆ ಶಂಕುಸ್ಥಾಪನೆ ಮಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು ಭಾರತವು ಮಹಿಳಾ ಸಬಲೀಕರಣದತ್ತ ಮತ್ತೊಂದು ಬಲವಾದ ಹೆಜ್ಜೆ ಇಡುತ್ತಿದೆ ಎಂದು ಹೇಳಿದರು. ಇಂದು ತಿಂಗಳ 9ನೇ ದಿನವಾಗಿರುವುದು ವಿಶೇಷವಾಗಿದೆ ಏಕೆಂದರೆ ನಮ್ಮ ಧರ್ಮಗ್ರಂಥಗಳಲ್ಲಿ 9 ನೇ ಸಂಖ್ಯೆಯನ್ನು ಮಂಗಳಕರವೆಂದು ಪರಿಗಣಿಸಲಾಗಿದೆ ಮತ್ತು ಇದು ನವರಾತ್ರಿಯಲ್ಲಿ ಪೂಜಿಸುವ ನವದುರ್ಗೆಯ ಒಂಬತ್ತು ರೂಪಗಳೊಂದಿಗೆ ಸಂಬಂಧ ಹೊಂದಿದೆ ಎಂದು ಅವರು ಹೇಳಿದರು. ಇಂದು ಸ್ತ್ರೀಶಕ್ತಿಯನ್ನು ಆರಾಧಿಸುವ ದಿನವೂ ಆಗಿದೆ ಎಂದರು.ಕಾರ್ಯಕಾರ್ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 07th, 05:52 pm
ಕಾರ್ಯಕಾರ್(ಕಾರ್ಯಕರ್ತರು) ಸುವರ್ಣ ಮಹೋತ್ಸವದ ಶುಭ ಸಂದರ್ಭದಲ್ಲಿ ನಾನು ಭಗವಾನ್ ಸ್ವಾಮಿನಾರಾಯಣ ಅವರ ಪಾದಗಳಿಗೆ ತಲೆಬಾಗಿ ನಮಸ್ಕರಿಸುತ್ತೇನೆ. ಇಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರ 103ನೇ ಜನ್ಮದಿನ ಆಚರಿಸಲಾಗುತ್ತಿದೆ, ಅವರಿಗೂ ಸಹ ನಾನು ಗೌರವಪೂರ್ವಕವಾಗಿ ನಮಸ್ಕರಿಸುತ್ತೇನೆ, ಏಕೆಂದರೆ ಅವರು ದೈವಿಕ ಗುರು ಹರಿ ಪ್ರಗತ್ ಬ್ರಹ್ಮನ ಮೂರ್ತರೂಪವಾಗಿದ್ದರು. ಭಗವಾನ್ ಸ್ವಾಮಿನಾರಾಯಣ ಅವರ ಬೋಧನೆಗಳು ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ಅವರ ಸಂಕಲ್ಪಗಳು ಮತ್ತು ನಿರ್ಣಯಗಳು ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಅವರ ಅವಿರತ ಪ್ರಯತ್ನ ಮತ್ತು ಸಮರ್ಪಣೆಯ ಮೂಲಕ ಇಂದು ಸಾಕಾರಗೊಳ್ಳುತ್ತಿವೆ. 1 ಲಕ್ಷ ಸ್ವಯಂಸೇವಕರು, ಯುವಕರು ಮತ್ತು ಮಕ್ಕಳನ್ನು ಒಳಗೊಂಡ ಈ ಭವ್ಯವಾದ ಸಾಂಸ್ಕೃತಿಕ ಕಾರ್ಯಕ್ರಮವು ಬೀಜ, ಮರ ಮತ್ತು ಹಣ್ಣುಗಳ ಸಾರವನ್ನು ಸುಂದರವಾಗಿ ಪ್ರತಿನಿಧಿಸುತ್ತಿದೆ. ನಾನು ನಿಮ್ಮ ನಡುವೆ ದೈಹಿಕವಾಗಿ ಇರಲು ಸಾಧ್ಯವಾಗದಿದ್ದರೂ, ಈ ಘಟನೆಯ ಚೈತನ್ಯ ಮತ್ತು ಶಕ್ತಿಯನ್ನು ನನ್ನ ಹೃದಯದಲ್ಲಿ ಆಳವಾಗಿ ಅನುಭವಿಸುತ್ತೇನೆ. ಇಂತಹ ಭವ್ಯವಾದ ಮತ್ತು ದಿವ್ಯವಾದ ಆಚರಣೆಯನ್ನು ಆಯೋಜಿಸಿದ್ದಕ್ಕಾಗಿ ಪರಮ ಪೂಜ್ಯ ಗುರು ಹರಿ ಮಹಂತ್ ಸ್ವಾಮಿ ಮಹಾರಾಜ್ ಮತ್ತು ಎಲ್ಲಾ ಪೂಜ್ಯ ಸಾಧು ಸಂತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರಿಗೆ ಅಪಾರ ಗೌರವದಿಂದ ನಮಸ್ಕರಿಸುತ್ತೇನೆ.ಅಹಮದಾಬಾದ್‌ನಲ್ಲಿ ಕಾರ್ಯಕರ್ತರ ಸುವರ್ಣ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
December 07th, 05:40 pm
ಅಹಮದಾಬಾದ್‌ನಲ್ಲಿ ಆಯೋಜಿತವಾಗಿದ್ದ ಕಾರ್ಯಕರ್ತರ ಸುವರ್ಣ ಮಹೋತ್ಸವವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಉದ್ದೇಶಿಸಿ ಭಾಷಣ ಮಾಡಿದರು. ಪರಮಪೂಜ್ಯ ಗುರು ಹರಿ ಮಹಂತ ಸ್ವಾಮಿ ಮಹಾರಾಜ್, ಪೂಜ್ಯ ಸಾಧು ಸಂತರು ಮತ್ತು ಸತ್ಸಂಗಿ ಕುಟುಂಬದ ಸದಸ್ಯರು ಮತ್ತು ಇತರೆ ಗಣ್ಯರು ಮತ್ತು ಪ್ರತಿನಿಧಿಗಳನ್ನು ಅವರು ಸ್ವಾಗತಿಸಿದರು. ಕಾರ್ಯಕರ್ತರ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಶ್ರೀ ಮೋದಿ ಅವರು ಭಗವಾನ್ ಸ್ವಾಮಿ ನಾರಾಯಣರ ಪಾದಗಳಿಗೆ ನಮಸ್ಕರಿಸಿ, ಇಂದು ಪ್ರಮುಖ್ ಸ್ವಾಮಿ ಮಹಾರಾಜರ 103ನೇ ಜನ್ಮದಿನವೂ ಆಗಿದೆ. ಭಗವಾನ್ ಸ್ವಾಮಿ ನಾರಾಯಣರ ಬೋಧನೆಗಳು, ಪ್ರಮುಖ ಸ್ವಾಮಿ ಮಹಾರಾಜರ ಸಂಕಲ್ಪಗಳು ಪರಮ ಪೂಜ್ಯ ಗುರು ಹರಿಮಹಂತ ಸ್ವಾಮಿ ಮಹಾರಾಜರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಇಂದು ಫಲ ನೀಡುತ್ತಿವೆ. ಯುವಕರು ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸುಮಾರು 1 ಲಕ್ಷ ಕಾರ್ಯಕರ್ತರು ಸೇರಿದಂತೆ ಇಂತಹ ಬೃಹತ್ ಕಾರ್ಯಕ್ರಮವನ್ನು ವೀಕ್ಷಿಸುತ್ತಿರುವುದು ಸಂತಸ ತಂದಿದೆ. ಸ್ಥಳದಲ್ಲಿ ದೈಹಿಕವಾಗಿ ಇಲ್ಲದಿದ್ದರೂ, ಈ ಕಾರ್ಯಕ್ರಮದ ಶಕ್ತಿಯನ್ನು ಅನುಭವಿಸಬಹುದಾಗಿದೆ. ಮಹಾರಥೋತ್ಸವದಲ್ಲಿ ಭಾಗಿಯಾಗಿರುವ ಪರಮಪೂಜ್ಯ ಗುರು ಹರಿಮಹಾಂತ ಸ್ವಾಮಿ ಮಹಾರಾಜರು, ಸಕಲ ಸಾಧು ಸಂತರಿಗೆ ಅವರು ಶುಭ ಕೋರಿದರು.ನೈಸರ್ಗಿಕ ಕೃಷಿಗಾಗಿ ರಾಷ್ಟ್ರೀಯ ಮಿಷನ್ ಪ್ರಾರಂಭ
November 25th, 08:39 pm
ಈ ನೈಸರ್ಗಿಕ ಕೃಷಿಯ ರಾಷ್ಟ್ರೀಯ ಮಿಷನ್ (ಎನ್.ಎಂ.ಎನ್.ಎಫ್.) ಯೋಜನೆಯು 15 ನೇ ಹಣಕಾಸು ಆಯೋಗದ (2025-26) ವರೆಗೆ ಒಟ್ಟು ರೂ.2481 ಕೋಟಿ (ಭಾರತ ಸರ್ಕಾರದ ಪಾಲು - ರೂ. 1584 ಕೋಟಿ; ರಾಜ್ಯ ಸರ್ಕಾರಗಳ ಪಾಲು - ರೂ. 897 ಕೋಟಿ) ವೆಚ್ಚವನ್ನು ಹೊಂದಿದೆ.ಅಂತಾರಾಷ್ಟ್ರೀಯ ಅಭಿಧಮ್ಮ ದಿನ ಉದ್ಘಾಟಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
October 17th, 10:05 am
ಸಂಸ್ಕೃತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರೆನ್ ರಿಜಿಜು ಜೀ, ಬಂದಂತ್ ರಾಹುಲ್ ಬೊಧಿ ಮಹಥೆರೋ ಜೀ, ವೆನವರಬಲ್ ಜುಂಗ್ ಚುಪ್ ಚೋಡೆನ್ ಜೀ, ಮಹಾಸಂಘದ ಎಲ್ಲಾ ಗಣ್ಯ ಸದಸ್ಯರೇ, ರಾಯಭಾರಿ ಸಮುದಾಯದ ಸದಸ್ಯರೇ,. ಬೌದ್ಧ ಚಿಂತಕರೇ, ಬೌದ್ಧ ಧರ್ಮದ ಅನುಯಾಯಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು
October 17th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು. ಅಭಿಧಮ್ಮ ದಿನವನ್ನು ಅಭಿಧಮ್ಮನಿಗೆ ಕಲಿಸಿದ ನಂತರ ಭಗವಾನ್ ಬುದ್ಧನು ಆಕಾಶಲೋಕದಿಂದ ಇಳಿದದ್ದನ್ನು ಸ್ಮರಿಸಲಾಗುತ್ತದೆ. ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಇತ್ತೀಚೆಗೆ ಗುರುತಿಸಿರುವುದು ಈ ವರ್ಷದ ಅಭಿಧಮ್ಮ ದಿವಸ್ ಆಚರಣೆಯ ಮಹತ್ವವನ್ನು ಹೆಚ್ಚಿಸುತ್ತದೆ, ಏಕೆಂದರೆ ಭಗವಾನ್ ಬುದ್ಧನ ಅಭಿಧಮ್ಮದ ಬೋಧನೆಗಳು ಮೂಲತಃ ಪಾಲಿ ಭಾಷೆಯಲ್ಲಿ ಲಭ್ಯವಿದೆ.“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣ
August 31st, 10:39 pm
“ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಮ್” ನ ಈ ನೂತನ ಆವೃತ್ತಿಯಲ್ಲಿ ಭಾಗವಹಿಸುತ್ತಿರುವಾಗ, ಹಲವಾರು ಪರಿಚಿತ ಮುಖಗಳನ್ನು ನೋಡಲು ನನಗೆ ಸಂತೋಷವಾಗುತ್ತಿದೆ. ಭಾರತದ ಉಜ್ವಲ ಭವಿಷ್ಯದ ಬಗ್ಗೆ ಇಲ್ಲಿ ಅತ್ಯುತ್ತಮ ಚರ್ಚೆಗಳು ನಡೆದಿವೆ ಎಂದು ನನಗೆ ವಿಶ್ವಾಸವಿದೆ, ಅದರಲ್ಲೂ ವಿಶೇಷವಾಗಿ ಇಡೀ ಜಗತ್ತು ಭಾರತದ ಬಗ್ಗೆ ವಿಶ್ವಾಸ ಹೊಂದಿರುವ ಈ ಸಮಯದಲ್ಲಿ ಚರ್ಚೆಗಳು ನಡೆದಿವೆ ಎಂಬುದು ವಿಶೇಷ.ನವದೆಹಲಿಯಲ್ಲಿ ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 31st, 10:13 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ(ವರ್ಲ್ಡ್ ಲೀಡರ್ಸ್ ಫೋರಂ) ಉದ್ದೇಶಿಸಿ ಭಾಷಣ ಮಾಡಿದರು.ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಲಖ್ಪತಿ ದೀದಿಗಳೊಂದಿಗೆ ಪ್ರಧಾನಿ ಮೋದಿಯವರ ಸಂಭಾಷಣೆ
August 26th, 01:46 pm
ಪ್ರಧಾನಿ ಮೋದಿ ಅವರು ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಲಖ್ಪತಿ ದೀದಿಗಳೊಂದಿಗೆ ಸಮೃದ್ಧ ಸಂವಾದ ನಡೆಸಿದರು. ವಿವಿಧ ಸ್ವ-ಸಹಾಯ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಮಹಿಳೆಯರು ತಮ್ಮ ಜೀವನ ಪಯಣಗಳನ್ನು ಮತ್ತು ಲಖ್ಪತಿ ದೀದಿ ಉಪಕ್ರಮವು ತಮ್ಮ ಜೀವನವನ್ನು ಹೇಗೆ ಪರಿವರ್ತಿಸುತ್ತಿದೆ ಎಂಬುದನ್ನು ಹಂಚಿಕೊಂಡರು.ಲಖ್ಪತಿ ದೀದಿ ಉಪಕ್ರಮವು ಹಳ್ಳಿಗಳ ಸಂಪೂರ್ಣ ಆರ್ಥಿಕತೆಯನ್ನು ಬದಲಾಯಿಸುತ್ತಿದೆ: ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಪ್ರಧಾನಿ ಮೋದಿ
August 25th, 01:00 pm
ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ನಡೆದ ಲಖಪತಿ ದೀದಿ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು, ಅಲ್ಲಿ ಅವರು ಮಹಿಳಾ ಸಬಲೀಕರಣ ಮತ್ತು ಆರ್ಥಿಕ ಸ್ವಾತಂತ್ರ್ಯದ ಮೇಲೆ ಲಖ್ಪತಿ ದೀದಿ ಉಪಕ್ರಮದ ಪರಿವರ್ತಕ ಪರಿಣಾಮವನ್ನು ಎತ್ತಿ ತೋರಿಸಿದರು. ಗ್ರಾಮೀಣ ಮಹಿಳೆಯರನ್ನು ಮೇಲೆತ್ತಲು ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದ ಅವರು, ಸ್ವ-ಸಹಾಯ ಗುಂಪುಗಳಿಂದ ಯಶಸ್ವಿ ಉದ್ಯಮಿಗಳಾಗುವ ಅವರ ಪಯಣವನ್ನು ಆಚರಿಸಿದರು. ಈ ಘಟನೆಯು ಆರ್ಥಿಕ ಒಳಗೊಳ್ಳುವಿಕೆಯ ಪ್ರಾಮುಖ್ಯತೆ ಮತ್ತು ರಾಷ್ಟ್ರದಾದ್ಯಂತ ತಳಮಟ್ಟದ ಅಭಿವೃದ್ಧಿಗೆ ಚಾಲನೆ ನೀಡುವಲ್ಲಿ ಮಹಿಳೆಯರ ಪಾತ್ರವನ್ನು ಒತ್ತಿಹೇಳಿತು.ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಲಖ್ಪತಿ ದೀದಿ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
August 25th, 12:30 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಜಲಗಾಂವ್ ನಲ್ಲಿ ನಡೆದ ಲಖ್ಪತಿ ದೀದಿ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಪ್ರಸ್ತುತ ಸರ್ಕಾರದ ಮೂರನೇ ಅವಧಿಯಲ್ಲಿ ಇತ್ತೀಚೆಗೆ ಲಖ್ಪತಿಯಾದ 11 ಲಕ್ಷ ಹೊಸ ಲಖ್ಪತಿ ದೀದಿಗಳಿಗೆ ಅವರು ಪ್ರಮಾಣಪತ್ರಗಳನ್ನು ವಿತರಿಸಿದರು ಮತ್ತು ಸನ್ಮಾನಿಸಿದರು.3 ನೇ ವಾಯ್ಸ್ ಆಫ್ ಗ್ಲೋಬಲ್ ಶೃಂಗಸಭೆ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಸಮಾರೋಪ ಭಾಷಣದ ಇಂಗ್ಲೀಷ್ ಅನುವಾದ
August 17th, 12:00 pm
ನಿಮ್ಮ ಮೌಲ್ಯಯುತ ಚಿಂತನೆಗಳು ಮತ್ತು ಸಲಹೆಗಳಿಗೆ ಕೃತಜ್ಞನಾಗಿದ್ದೇನೆ. ನೀವೆಲ್ಲರೂ ನಮ್ಮ ಸಾಮಾನ್ಯ ಕಳವಳ ಮತ್ತು ನಿರೀಕ್ಷೆಗಳ ಬಗ್ಗೆ ಬೆಳಕು ಚೆಲ್ಲಿದ್ದೀರಿ. ನಿಮ್ಮ ಅಭಿಪ್ರಾಯಗಳಿಂದ ಜಾಗತಿಕ ದಕ್ಷಿಣ ವಲಯ ಏಕತೆಯಿಂದ ಇದೆ ಎಂಬುದು ಸ್ಪಷ್ಟವಾಗಿದೆ. ನಿಮ್ಮ ಸಲಹೆಗಳು ನಮ್ಮ ಸಮಗ್ರ ಪಾಲ್ಗೊಳ್ಳುವಿಕೆಯನ್ನು ಪ್ರತಿಬಿಂಬಿಸಿದೆ. ಇಂದು ನಮ್ಮ ಚರ್ಚೆಗಳು ನಾವು ಪರಸ್ಪರ ಅರ್ಥಮಾಡಿಕೊಂಡು ಮುನ್ನಡೆಯಲು ಶಿಲಾನ್ಯಾಸ ನೆರವೇರಿಸಿದಂತಾಗಿದೆ. ನಮ್ಮ ಸಾಮಾನ್ಯ ಗುರಿಗಳನ್ನು ತ್ವರಿತವಾಗಿ ಸಾಧಿಸಲು ಇದು ತಮಗೆಲ್ಲರಿಗೂ ದೊರೆತ ಅವಕಾಶವಾಗಿದೆ ಎಂಬ ವಿಶ್ವಾಸ ತಮ್ಮದಾಗಿದೆ.ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಕಿಸಾನ್ ಸಮ್ಮಾನ್ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
June 18th, 05:32 pm
ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ನನ್ನ ಸಂಪುಟ ಸಹೋದ್ಯೋಗಿಗಳಾದ ಶಿವರಾಜ್ ಸಿಂಗ್ ಚೌಹಾಣ್, ಭಾಗೀರಥ್ ಚೌಧರಿ, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ, ಬ್ರಜೇಶ್ ಪಾಠಕ್, ವಿಧಾನ ಪರಿಷತ್ ಸದಸ್ಯ ಮತ್ತು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ. ಭೂಪೇಂದ್ರ ಚೌಧರಿ, ರಾಜ್ಯ ಸರ್ಕಾರದ ಸಚಿವರೆ, ಸಾರ್ವಜನಿಕ ಪ್ರತಿನಿಧಿಗಳೆ, ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ನೆರೆದಿರುವ ನನ್ನ ರೈತ ಬಂಧುಗಳೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆ!ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಿಸಾನ್ ಸಮ್ಮಾನ್ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
June 18th, 05:00 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿಂದು ಕಿಸಾನ್ ಸಮ್ಮಾನ್ ಸಮ್ಮೇಳನ ಉದ್ದೇಶಿಸಿ ಮಾತನಾಡಿದರು. ಸಮಾರಂಭದಲ್ಲಿ ಅವರು ಸುಮಾರು 9.26 ಕೋಟಿ ರೈತ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ 20,000 ಕೋಟಿ ರೂ. ಮೊತ್ತದ ಪ್ರಧಾನ ಮಂತ್ರಿಗಳ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್)ಯ 17ನೇ ಕಂತು ವಿತರಿಸಿದರು. ಕಾರ್ಯಕ್ರಮದಲ್ಲಿ ಅವರು ಸ್ವಸಹಾಯ ಗುಂಪು(ಎಸ್‌ಎಚ್‌ಜಿ)ಗಳ 30,000ಕ್ಕೂ ಹೆಚ್ಚು ಮಹಿಳೆಯರಿಗೆ ‘ಕೃಷಿ ಸಖಿ’ ಪ್ರಮಾಣಪತ್ರಗಳನ್ನು ವಿತರಿಸಿದರು. ದೇಶದೆಲ್ಲೆಡೆಯ ರೈತರನ್ನು ತಂತ್ರಜ್ಞಾನದ ಮೂಲಕ ಕಾರ್ಯಕ್ರಮಕ್ಕೆ ಸಂಪರ್ಕ ಕಲ್ಪಿಸಲಾಗಿತ್ತು.ತನ್ನ ತುಷ್ಟೀಕರಣ ರಾಜಕೀಯವನ್ನು ಅನುಸರಿಸುತ್ತಿರುವಾಗ, ಬಿಆರ್‌ಎಸ್ ಮುಸ್ಲಿಂ ಐಟಿ ಪಾರ್ಕ್‌ನ ಪ್ರಸ್ತಾಪವನ್ನೂ ಮಾಡಿದೆ: ವಾರಂಗಲ್‌ನಲ್ಲಿ ಪ್ರಧಾನಿ ಮೋದಿ
May 08th, 10:20 am
ದಿನದ ಎರಡನೇ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ನನ್ನ ಹೃದಯದಲ್ಲಿ ಮತ್ತು ಬಿಜೆಪಿಯ ಪಯಣದಲ್ಲಿ ವಾರಂಗಲ್ ವಿಶೇಷ ಸ್ಥಾನವನ್ನು ಹೊಂದಿದೆ. 40 ವರ್ಷಗಳ ಹಿಂದೆ ಬಿಜೆಪಿ ಕೇವಲ 2 ಸಂಸದರನ್ನು ಹೊಂದಿದ್ದಾಗ ಅವರಲ್ಲಿ ಒಬ್ಬರು ಹನಮಕೊಂಡ. ನಿಮ್ಮ ಆಶೀರ್ವಾದ ಮತ್ತು ಪ್ರೀತಿಯನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ನಮಗೆ ಕಷ್ಟ ಬಂದಾಗಲೆಲ್ಲಾ ವಾರಂಗಲ್‌ನ ಜನರು ನಮ್ಮನ್ನು ಬೆಂಬಲಿಸಿದ್ದಾರೆ.