ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 09th, 11:00 am

ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,

ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 09th, 10:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.

ಭಾರತದಲ್ಲಿ ಹುಲಿಗಳ ಸಂಖ್ಯೆ ಕಾಲಕ್ರಮೇಣ ಹೆಚ್ಚುತ್ತಿದ್ದು ಸಾಮೂಹಿಕ ಪ್ರಯತ್ನಗಳಿಗೆ ವಂದನೆಗಳು : ಪ್ರಧಾನಮಂತ್ರಿ

December 03rd, 07:10 pm

ಹುಲಿಗಳ ಸಂರಕ್ಷಣೆಯ ಸಾಮೂಹಿಕ ಪ್ರಯತ್ನಗಳನ್ನು ಇಂದು ಶ್ಲಾಘಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಹುಲಿಗಳ ಸಂಖ್ಯೆಯು ಕಾಲಕ್ರಮೇಣ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ. ಭಾರತದಲ್ಲಿ 57ನೇ ಹುಲಿ ಸಂರಕ್ಷಿತ ಪ್ರದೇಶದ ಸೇರ್ಪಡೆಯು ನಮ್ಮ ಶತಮಾನಗಳಷ್ಟು ಹಳೆಯದಾದ ಪ್ರಕೃತಿಯ ಕಾಳಜಿಯ ತತ್ವಕ್ಕೆ ಅನುಗುಣವಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

Khodaldham Trust has always pioneered Jan-Seva: PM Modi

January 21st, 12:00 pm

PM Modi addressed the foundation stone laying ceremony of Shri Khodaldham Trust-Cancer Hospital. He added how the Khodaldham Trust has always pioneered Jan-Seva. He remarked that cancer has been a critical disease and the over the last 9 years over 30 cancer hospitals have been developed and 10 more hospitals are in the works.

ಶ್ರೀ ಖೋಡಲ್‌ ಧಾಮ್ ಟ್ರಸ್ಟ್-ಕ್ಯಾನ್ಸರ್ ಆಸ್ಪತ್ರೆಯ ಶಂಕುಸ್ಥಾಪನೆ ಸಮಾರಂಭ ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದ ಪ್ರಧಾನಮಂತ್ರಿಗಳು

January 21st, 11:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಶ್ರೀ ಖೋಡಲ್‌ ಧಾಮ್ ಟ್ರಸ್ಟ್-ಕ್ಯಾನ್ಸರ್ ಆಸ್ಪತ್ರೆʼಯ ಶಂಕುಸ್ಥಾಪನೆ ಸಮಾರಂಭ ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದರು.

ಡೆಹ್ರಾಡೂನ್‌ನಲ್ಲಿ ಉತ್ತರಾಖಂಡ ಜಾಗತಿಕ ಹೂಡಿಕೆದಾರರ ಶೃಂಗಸಭೆ-2023 ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

December 08th, 12:00 pm

ಉತ್ತರಾಖಂಡದ ದೈವ ಭೂಮಿಗೆ ಬರುವುದು ನನ್ನ ಹೃದಯಕ್ಕೆ ಸದಾ ಅಪಾರ ಸಂತೋಷ ತರುತ್ತದೆ. ಕೆಲವು ವರ್ಷಗಳ ಹಿಂದೆ, ನಾನು ಬಾಬಾ ಕೇದಾರನಾಥನ ದರ್ಶನಕ್ಕೆ ಹೊರಟಾಗ, 21ನೇ ಶತಮಾನದ 3ನೇ ದಶಕವು ಉತ್ತರಾಖಂಡದ ದಶಕ ಎಂದು ನಾನು ಸ್ವಯಂಪ್ರೇರಿತನಾಗಿ ಹೇಳಿದ್ದೆ. ನನ್ನ ಹೇಳಿಕೆಯು ನಿರಂತರ ಸತ್ಯವೆಂದು ಸಾಬೀತು ಆಗಿರುವುದನ್ನು ನೋಡಿ ನನಗೆ ಸಂತೋಷವಾಗಿದೆ. ನಿಮ್ಮೆಲ್ಲರಿಗೂ, ಉತ್ತರಾಖಂಡದ ಹೆಮ್ಮೆಯೊಂದಿಗೆ ಸಂಪರ್ಕ ಸಾಧಿಸಲು, ಅದರ ಅಭಿವೃದ್ಧಿಯ ಪಯಣದ ಭಾಗವಾಗಲು ಮಹತ್ವದ ಅವಕಾಶವಿದೆ. ಉತ್ತರ ಕಾಶಿಯ ಸುರಂಗದಿಂದ ನಮ್ಮ ವಲಸಿಗ ಸಹೋದರರನ್ನು ಸುರಕ್ಷಿತವಾಗಿ ರಕ್ಷಿಸಲು ಯಶಸ್ವಿ ಅಭಿಯಾನ ಮುನ್ನಡೆಸುತ್ತಿರುವ ರಾಜ್ಯ ಸರ್ಕಾರ ಸೇರಿದಂತೆ ಪ್ರತಿಯೊಬ್ಬರನ್ನು ನಾನು ಇಲ್ಲಿ ಅಭಿನಂದನೆ ಸಲ್ಲಿಸುತ್ತೇನೆ.

​​​​​​​'ಉತ್ತರಾಖಂಡ ಜಾಗತಿಕ ಹೂಡಿಕೆದಾರರ ಸಮಾವೇಶ-2023' ಉದ್ಘಾಟಿಸಿದ ಪ್ರಧಾನಿ

December 08th, 11:26 am

ಉದ್ಯಮದ ಪ್ರಮುಖರು ಈ ಸಂದರ್ಭದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಅದಾನಿ ಗ್ರೂಪ್‌ನ ನಿರ್ದೇಶಕ ಮತ್ತು ವ್ಯವಸ್ಥಾಪಕ ನಿರ್ದೇಶಕ (ಕೃಷಿ, ತೈಲ ಮತ್ತು ಅನಿಲ) ಶ್ರೀ ಪ್ರಣವ್ ಅದಾನಿ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಉತ್ತರಾಖಂಡವು ತನ್ನ ಬೆಳವಣಿಗೆ ಮತ್ತು ಅಭಿವೃದ್ಧಿಯ ವಿಧಾನದಿಂದಾಗಿ ಖಾಸಗಿ ವಲಯದ ಹೂಡಿಕೆಗೆ ಅತ್ಯಂತ ಆಕರ್ಷಕ ತಾಣಗಳಲ್ಲಿ ಒಂದಾಗಿದೆ. ಏಕೆಂದರೆ ಏಕ-ಗವಾಕ್ಷಿ ಮಾದರಿಯಲ್ಲಿ ಅನುಮತಿಗಳು, ಸ್ಪರ್ಧಾತ್ಮಕ ಭೂಮಿಯ ಬೆಲೆಗಳು, ಕೈಗೆಟುಕುವ ವಿದ್ಯುತ್ ಹಾಗೂ ಪರಿಣಾಮಕಾರಿ ವಿತರಣೆ, ಹೆಚ್ಚು ನುರಿತ ಮಾನವಶಕ್ತಿ ಮತ್ತು ರಾಷ್ಟ್ರ ರಾಜಧಾನಿಗೆ ಸಾಮೀಪ್ಯ ಮತ್ತು ಅತ್ಯಂತ ಸ್ಥಿರವಾದ ಕಾನೂನು-ಸುವ್ಯವಸ್ಥೆ ವಾತಾವರಣದ ಸಂಯೋಜನೆಯು ರಾಜ್ಯವನ್ನು ಹೂಡಿಕೆಗೆ ಆಕರ್ಷಕ ತಾಣವನ್ನಾಗಿಸಿದೆ ಎಂದರು. ಶ್ರೀ ಅದಾನಿ ಅವರು ರಾಜ್ಯದಲ್ಲಿ ವಿಸ್ತರಿಸಲಿರುವ ಹಾಗೂ ಹೆಚ್ಚಿನ ಹೂಡಿಕೆ ಮತ್ತು ಉದ್ಯೋಗಗಳನ್ನು ತರುವ ತಮ್ಮ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಉತ್ತರಾಖಂಡ ರಾಜ್ಯಕ್ಕೆ ನಿರಂತರ ಬೆಂಬಲ ನೀಡುತ್ತಿರುವ ಪ್ರಧಾನಮಂತ್ರಿಯವರಿಗೆ ಧನ್ಯವಾದ ಅರ್ಪಿಸಿದ ಅವರು, ಭಾರತದ ಜನರು ತಮ್ಮ ಮೇಲೆ ಅಭೂತಪೂರ್ವ ವಿಶ್ವಾಸ ಮತ್ತು ವಿಶ್ವಾಸವನ್ನು ಇಟ್ಟಿದ್ದಾರೆ ಎಂದರು.

ಮಾದಕ ವ್ಯಸನದ ವಿರುದ್ಧದ ಅಭಿಯಾನದಲ್ಲಿ ಯುವಕರ ಹೆಚ್ಚುತ್ತಿರುವ ಭಾಗವಹಿಸುವಿಕೆ ತುಂಬಾ ಉತ್ತೇಜನಕಾರಿಯಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

July 30th, 11:30 am

'ಮನದ ಮಾತಿಗೆ' ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಜುಲೈ ತಿಂಗಳು ಎಂದರೆ ಮುಂಗಾರಿನ ತಿಂಗಳು, ಮಳೆಯ ಋತುಮಾನ. ಕಳೆದ ಕೆಲವು ದಿನಗಳಿಂದ ಪ್ರಕೃತಿ ವಿಕೋಪದಿಂದ ಚಿಂತೆ ಮತ್ತು ಆತಂಕ ಕವಿದಿತ್ತು. ಯಮುನೆ ಸೇರಿದಂತೆ ಹಲವು ನದಿಗಳ ಪ್ರವಾಹದಿಂದಾಗಿ ಹಲವು ಪ್ರದೇಶಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತವೂ ಸಂಭವಿಸಿದೆ. ಇದೇ ಸಮಯದಲ್ಲಿ, ದೇಶದ ಪಶ್ಚಿಮ ಭಾಗ ಮತ್ತು ಕೆಲವು ದಿನಗಳ ಹಿಂದೆ ಗುಜರಾತ್ ನ ಕೆಲ ಪ್ರದೇಶಗಳಿಗೆ ಬಿಪರ್ಜೋಯ್ ಚಂಡಮಾರುತವು ಸಹ ಅಪ್ಪಳಿಸಿತ್ತು. ಆದರೆ ಸ್ನೇಹಿತರೇ, ಈ ವಿಪತ್ತುಗಳ ಮಧ್ಯೆ, ನಾವು ದೇಶವಾಸಿಗಳೆಲ್ಲರೂ ಮತ್ತೊಮ್ಮೆ ಸಾಮೂಹಿಕ ಪ್ರಯತ್ನದ ಶಕ್ತಿಯನ್ನು ತೋರಿಸಿದ್ದೇವೆ. ಸ್ಥಳೀಯ ಜನತೆ, ನಮ್ಮ ಎನ್‌ಡಿಆರ್‌ಎಫ್ ಯೋಧರು, ಸ್ಥಳೀಯ ಆಡಳಿತ ಇಂತಹ ವಿಪತ್ತುಗಳನ್ನು ಎದುರಿಸಲು ಹಗಲಿರುಳು ಶ್ರಮಿಸಿದ್ದಾರೆ. ಯಾವುದೇ ವಿಪತ್ತನ್ನು ಎದುರಿಸುವಲ್ಲಿ ನಮ್ಮ ಸಾಮರ್ಥ್ಯ ಮತ್ತು ಸಂಪನ್ಮೂಲಗಳು ಬಹು ದೊಡ್ಡ ಪಾತ್ರವನ್ನು ವಹಿಸುತ್ತವೆ - ಆದರೆ ಅದೇ ವೇಳೆ, ನಾವು ತೋರುವ ಸಂವೇದನಶೀಲತೆ ಮತ್ತು ಪರಸ್ಪರರಿಗೆ ಆಸರೆಯಾಗಿ ನಿಲ್ಲುವ ಮನೋಭಾವವು ಮಹತ್ವಪೂರ್ಣವಾಗಿರುತ್ತದೆ. ಸರ್ವಜನ ಹಿತ ಎಂಬ ಭಾವನೆಯೇ ಭಾರತದ ಹೆಗ್ಗುರುತಾಗಿದೆ ಮತ್ತು ಭಾರತದ ಶಕ್ತಿಯಾಗಿದೆ.

‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 18.06.2023 ರಂದು ಮಾಡಿದ ‘ಮನ್ ಕಿ ಬಾತ್’ – 102 ನೇ ಸಂಚಿಕೆಯ ಕನ್ನಡ ಅವತರಣಿಕೆ

June 18th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ, 'ಮನದ ಮಾತಿ’ಗೆ ಮತ್ತೊಮ್ಮೆ ನಿಮ್ಮೆಲ್ಲರಿಗೂ ಸ್ವಾಗತ. ಸಾಮಾನ್ಯವಾಗಿ, 'ಮನದ ಮಾತು' ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ, ಆದರೆ, ಈ ಬಾರಿ ಅದು ಒಂದು ವಾರ ಮುಂಚಿತವಾಗಿ ಪ್ರಸಾರವಾಗುತ್ತಿದೆ. ನಾನು ಮುಂದಿನ ವಾರ ಅಮೆರಿಕಾದಲ್ಲಿ ಇರುತ್ತೇನೆ ಮತ್ತು ಅಲ್ಲಿ ಬಹಳ ವ್ಯಸ್ತವಾಗಿರುತ್ತೇನೆ ಎಂಬುದು ನಿಮಗೆಲ್ಲ ಗೊತ್ತು, ಹಾಗಾಗಿ ನಾನು ತೆರಳುವ ಮೊದಲು ನಿಮ್ಮೊಂದಿಗೆ ಮಾತನಾಡಬೇಕೆಂದು ಯೋಚಿಸಿದೆ. ಇದಕ್ಕಿಂತ ಉತ್ತಮವಾದದ್ದು ಇನ್ನೇನಿದೆ? ನಿಮ್ಮೆಲ್ಲರ ಆಶೀರ್ವಾದ, ನಿಮ್ಮ ಸ್ಫೂರ್ತಿ, ನನ್ನ ಶಕ್ತಿಯನ್ನು ಹೆಚ್ಚಿಸುತ್ತದೆ.

‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.04.2023 ರಂದು ಮಾಡಿದ ‘ಮನ್ ಕಿ ಬಾತ್’ – 100 ನೇ ಸಂಚಿಕೆಯ ಕನ್ನಡ ಅವತರಣಿಕೆ

April 30th, 11:31 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು 'ಮನದ ಮಾತಿನ' ನೂರನೇ ಸಂಚಿಕೆ. ನಿಮ್ಮೆಲ್ಲರಿಂದ ನನಗೆ ಸಾವಿರಾರು ಪತ್ರಗಳು, ಲಕ್ಷಗಟ್ಟಲೆ ಸಂದೇಶಗಳು ಬಂದಿವೆ ಮತ್ತು ನಾನು ಸಾಧ್ಯವಾದಷ್ಟು ಪತ್ರಗಳನ್ನು ಓದಲು, ಅವುಗಳನ್ನು ನೋಡಲು ಮತ್ತು ಸಂದೇಶಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ್ದೇನೆ. ನಿಮ್ಮ ಪತ್ರಗಳನ್ನು ಓದುವಾಗ ಹಲವು ಬಾರಿ ನಾನು ಭಾವುಕನಾದೆ, ಭಾವೋದ್ವೇಗಕ್ಕೆ ಒಳಗಾದೆ, ಭಾವೋದ್ವೇಗದ ಹೊಳೆಯಲ್ಲಿ ತೇಲಿ ಹೋದೆ ಜೊತೆಗೆ ನನ್ನನ್ನೂ ನಿಯಂತ್ರಿಸಿಕೊಂಡೆ. 'ಮನದ ಮಾತಿನ' 100 ನೇ ಸಂಚಿಕೆಗಾಗಿ ನೀವು ನನ್ನನ್ನು ಅಭಿನಂದಿಸಿದ್ದೀರಿ, ಆದರೆ ನಾನು ಮನಃ ಪೂರ್ವಕವಾಗಿ ಹೇಳುತ್ತಿದ್ದೇನೆ, ವಾಸ್ತವವಾಗಿ, ನೀವೆಲ್ಲರೂ 'ಮನದ ಮಾತಿನ' ಶ್ರೋತೃಗಳು, ನಮ್ಮ ದೇಶವಾಸಿಗಳು, ಅಭಿನಂದನೆಗೆ ಅರ್ಹರಾಗಿದ್ದೀರಿ. 'ಮನದ ಮಾತು' ಕೋಟ್ಯಂತರ ಭಾರತೀಯರ 'ಮನದ ಮಾತಾಗಿದೆ', ಅದು ಅವರ ಭಾವನೆಗಳ ಅಭಿವ್ಯಕ್ತಿಯಾಗಿದೆ.

ಭೂಮಿ ದಿನದ ಸಂದರ್ಭದಲ್ಲಿ ನಮ್ಮ ಗ್ರಹವನ್ನು ಉತ್ತಮಗೊಳಿಸಲು ಶ್ರಮಿಸುತ್ತಿರುವವರ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ

April 22nd, 09:53 am

ಭೂಮಿ ದಿನದ ಸಂದರ್ಭದಲ್ಲಿ ನಮ್ಮ ಗ್ರಹವನ್ನು ಉತ್ತಮಗೊಳಿಸಲು ಶ್ರಮಿಸುತ್ತಿರುವವರ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು

Assam is becoming an A-One state: PM Modi

April 14th, 06:00 pm

PM Modi dedicated projects worth Rs. 10,900 crores to the nation in Guwahati. He also inaugurated the TPD Menthol plant in Namrup. PM Modi then also attended the colorful Bihu programme performed by more than 10,000 professional Bihu dancers

PM lays foundation stone, inaugurates and dedicates to the nation projects worth more than Rs. 10,900 crores at Sarusajai Stadium in Guwahati, Assam

April 14th, 05:30 pm

PM Modi dedicated projects worth Rs. 10,900 crores to the nation in Guwahati. He also inaugurated the TPD Menthol plant in Namrup. PM Modi then also attended the colorful Bihu programme performed by more than 10,000 professional Bihu dancers

Naga culture is synonymous with vibrancy, valour and respect towards nature: PM

April 06th, 11:24 am

Responding to the tweet thread by PHED and Cooperation Minister in Government of Nagaland, Shri Jacob Zhimomi, the Prime Minister said A good thread on the spectacular Naga culture on display during one of the G20 programmes. Naga culture is synonymous with vibrancy, valour and respect towards nature.

ಕರ್ನಾಟಕದ ಶಿವಮೊಗ್ಗದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

February 27th, 12:45 pm

‘ಏಕ ಭಾರತ ಶ್ರೇಷ್ಠ ಭಾರತ’ಸ್ಫೂರ್ತಿಯನ್ನು ಎತ್ತಿ ಹಿಡಿದ ರಾಷ್ಟ್ರಕವಿ ಕುವೆಂಪು ಅವರ ನಾಡಿಗೆ ಗೌರವಪೂರ್ವಕವಾಗಿ ನಮಿಸುತ್ತೇನೆ. ಇಂದು ಮತ್ತೊಮ್ಮೆ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದ ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ.

​​​​​​​ಕರ್ನಾಟಕದ ಶಿವಮೊಗ್ಗದಲ್ಲಿ 3,600 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ

February 27th, 12:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಶಿವಮೊಗ್ಗದಲ್ಲಿ 3,600 ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಿದರು. ಅವರು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದರು ಹಾಗೂ ಅದರ ಸೌಲಭ್ಯಗಳನ್ನು ವೀಕ್ಷಿಸಿದರು. ಶಿವಮೊಗ್ಗ - ಶಿಕಾರಿಪುರ - ರಾಣೆಬೆನ್ನೂರು ಹೊಸ ರೈಲು ಮಾರ್ಗ ಮತ್ತು ಕೋಟೆಗಂಗೂರು ರೈಲ್ವೇ ಕೋಚಿಂಗ್ ಡಿಪೋ ಸೇರಿದಂತೆ ಶಿವಮೊಗ್ಗದಲ್ಲಿ ಎರಡು ರೈಲ್ವೆ ಯೋಜನೆಗಳಿಗೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ನೆರವೇರಿಸಿದರು. 215 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಿರುವ ಬಹು ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಜಲ ಜೀವನ್ ಮಿಷನ್ ಅಡಿಯಲ್ಲಿ 950 ಕೋಟಿ ರೂ.ಗೂ ಹೆಚ್ಚು ಮೊತ್ತದ ಬಹುಗ್ರಾಮ ಯೋಜನೆಗಳನ್ನು ಉದ್ಘಾಟಿಸಿದರು ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಶಿವಮೊಗ್ಗ ನಗರದಲ್ಲಿ 895 ಕೋಟಿ ರೂ.ಗೂ ಅಧಿಕ ಮೊತ್ತದ 44 ಸ್ಮಾರ್ಟ್ ಸಿಟಿ ಯೋಜನೆಗಳನ್ನು ಉದ್ಘಾಟಿಸಿದರು.

ನವದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ "ಆದಿ ಮಹೋತ್ಸವ" ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 16th, 10:31 am

ನನ್ನ ಕ್ಯಾಬಿನೆಟ್ ಸಹೋದ್ಯೋಗಿಗಳಾದ ಶ್ರೀ ಅರ್ಜುನ್ ಮುಂಡಾ ಜೀ, ಶ್ರೀ ಫಗ್ಗನ್ ಸಿಂಗ್ ಕುಲಸ್ತೆ ಜೀ, ಶ್ರೀಮತಿ ರೇಣುಕಾ ಸಿಂಗ್ ಜೀ, ಡಾ. ಭಾರತಿ ಪವಾರ್ ಜೀ, ಶ್ರೀ ಬಿಶೇಶ್ವರ್ ಟುಡು ಜೀ, ಇತರ ಗಣ್ಯರೇ ಮತ್ತು ದೇಶದ ವಿವಿಧ ರಾಜ್ಯಗಳ ನನ್ನ ಎಲ್ಲ ಬುಡಕಟ್ಟು ಸಹೋದರ ಸಹೋದರಿಯರೇ! ನಿಮ್ಮೆಲ್ಲರಿಗೂ ಆದಿ ಮಹೋತ್ಸವದ ಹಾರ್ದಿಕ ಶುಭಾಶಯಗಳು.

​​​​​​​ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆದಿ ಮಹೋತ್ಸವವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

February 16th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬೃಹತ್ ರಾಷ್ಟ್ರೀಯ ಬುಡಕಟ್ಟು ಉತ್ಸವವಾದ ಆದಿ ಮಹೋತ್ಸವವನ್ನು ಉದ್ಘಾಟಿಸಿದರು. ಆದಿ ಮಹೋತ್ಸವವು ಬುಡಕಟ್ಟು ಸಂಸ್ಕೃತಿಯನ್ನು ರಾಷ್ಟ್ರೀಯ ವೇದಿಕೆಯಲ್ಲಿ ಪ್ರದರ್ಶಿಸುವ ಪ್ರಯತ್ನವಾಗಿದೆ ಮತ್ತು ಇದು ಬುಡಕಟ್ಟು ಸಂಸ್ಕೃತಿ, ಕರಕುಶಲತೆ, ಪಾಕಪದ್ಧತಿ, ವಾಣಿಜ್ಯ ಮತ್ತು ಸಾಂಪ್ರದಾಯಿಕ ಕಲೆಯ ಹುಮ್ಮಸ್ಸನ್ನು ಆಚರಿಸುತ್ತದೆ. ಇದು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಬುಡಕಟ್ಟು ಸಹಕಾರಿ ಮಾರುಕಟ್ಟೆ ಅಭಿವೃದ್ಧಿ ಒಕ್ಕೂಟ ಲಿಮಿಟೆಡ್ (TRIFED) ನ ವಾರ್ಷಿಕ ಕಾರ್ಯಕ್ರಮವಾಗಿದೆ.

ಅಹಮದಾಬಾದ್ ನ ಪುಪ್ಪ ಪ್ರದರ್ಶನಕ್ಕೆ ಪ್ರಧಾನಿಯವರಿಂದ ಶ್ಲಾಘನೆ

January 04th, 11:34 pm

ಅಹಮದಾಬಾದ್ ನ ಪುಪ್ಪ ಪ್ರದರ್ಶನವು ಹೂವು ಮತ್ತು ಪ್ರಕೃತಿ ಬಗ್ಗೆ ಸಾಕಷ್ಟು ಆಸಕ್ತಿಯಿರುವ ಹಲವಾರು ಜನರನ್ನು ಆಕರ್ಷಿಸಿದೆಯೆಂದು ಪ್ರಧಾನ ಮಂತ್ರಿಗಳಾದ ಶ್ರೀ.ನರೇಂದ್ರ ಮೋದಿಯವರು ಇಂದು ಹೇಳಿದ್ದಾರೆ.

ಆಕಾಶವೇ ಮಿತಿಯಲ್ಲ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ

November 27th, 11:00 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. 'ಮನದ ಮಾತಿಗೆ' ನಿಮಗೆಲ್ಲರಿಗೂ ಮತ್ತೊಮ್ಮೆ ಸ್ವಾಗತ. ಈ ಕಾರ್ಯಕ್ರಮವು 95 ನೇ ಸಂಚಿಕೆಯಾಗಿದೆ. ನಾವು 'ಮನದ ಮಾತಿನ’ ಶತಕದತ್ತ ಬಹು ವೇಗವಾಗಿ ಸಾಗುತ್ತಿದ್ದೇವೆ. ಈ ಕಾರ್ಯಕ್ರಮವು 130 ಕೋಟಿ ದೇಶವಾಸಿಗಳೊಂದಿಗೆ ಸಂಪರ್ಕ ಸಾಧಿಸಲು ನನಗೆ ಮತ್ತೊಂದು ಮಾಧ್ಯಮವಾಗಿದೆ. ಪ್ರತಿ ಸಂಚಿಕೆಗೂ ಮುನ್ನ ಗ್ರಾಮಗಳು-ನಗರಗಳಿಂದ ಬರುವ ಸಾಕಷ್ಟು ಪತ್ರಗಳನ್ನು ಓದುವುದು, ಮಕ್ಕಳಿಂದ ಹಿರಿಯರವರೆಗೆ ಆಡಿಯೋ ಸಂದೇಶಗಳನ್ನು ಕೇಳುವುದು ನನಗೆ ಒಂದು ಆಧ್ಯಾತ್ಮಿಕ ಅನುಭವದಂತಿದೆ.