ಮಹಾಕುಂಭ ಕುರಿತು ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

ಮಹಾಕುಂಭ ಕುರಿತು ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

March 18th, 01:05 pm

ಪ್ರಯಾಗ್ರಾಜ್ ನಲ್ಲಿ ನಡೆದ ಭವ್ಯ ಮಹಾಕುಂಭದ ಬಗ್ಗೆ ಹೇಳಿಕೆ ನೀಡಲು ನಾನು ಇಲ್ಲಿದ್ದೇನೆ. ಈ ಗೌರವಾನ್ವಿತ ಸದನದ ಮೂಲಕ, ಮಹಾಕುಂಭವನ್ನು ಯಶಸ್ವಿಗೊಳಿಸಿದ ಲಕ್ಷಾಂತರ ದೇಶವಾಸಿಗಳಿಗೆ ನನ್ನ ವಂದನೆಗಳನ್ನು ಸಲ್ಲಿಸುತ್ತೇನೆ. ಮಹಾಕುಂಭದ ಯಶಸ್ಸನ್ನು ಖಚಿತಪಡಿಸಿಕೊಳ್ಳುವಲ್ಲಿ ಅನೇಕ ವ್ಯಕ್ತಿಗಳು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ನಾನು ಸರ್ಕಾರ, ಸಮಾಜ ಮತ್ತು ಎಲ್ಲಾ ಸಮರ್ಪಿತ ಕಾರ್ಮಿಕರನ್ನು ಅಭಿನಂದಿಸುತ್ತೇನೆ. ದೇಶದಾದ್ಯಂತದ ಭಕ್ತರಿಗೆ, ಉತ್ತರ ಪ್ರದೇಶದ ಜನರಿಗೆ ಮತ್ತು ವಿಶೇಷವಾಗಿ ಪ್ರಯಾಗ್ ರಾಜ್ ನಾಗರಿಕರಿಗೆ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ.

ಮಹಾ ಕುಂಭ ಮೇಳ ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಮಹಾ ಕುಂಭ ಮೇಳ ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 18th, 12:10 pm

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಯಶಸ್ವಿಯಾಗಿ ಸಮಾರೋಪಗೊಂಡ ಹಿನ್ನೆಲೆಯಲ್ಲಿ ಇಂದು ಲೋಕಸಭೆಯನ್ನುದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಮಹಾಕುಂಭದ ಅದ್ಧೂರಿ ಯಶಸ್ಸಿಗೆ ಕಾರಣರಾದ ದೇಶದ ಅಸಂಖ್ಯಾತ ನಾಗರಿಕರಿಗೆ ಪ್ರಧಾನಿ ತಮ್ಮ ಹೃತ್ಪೂರ್ವಕ ವಂದನೆಗಳನ್ನು ಸಲ್ಲಿಸಿದರು. ಮಹಾಕುಂಭವನ್ನು ಯಶಸ್ವಿಗೊಳಿಸುವಲ್ಲಿ ವಿವಿಧ ವ್ಯಕ್ತಿಗಳು ಮತ್ತು ಗುಂಪುಗಳ ಸಾಮೂಹಿಕ ಕೊಡುಗೆಗಳು ಮಹತ್ತರವಾಗಿವೆ. ಸರ್ಕಾರ, ಸಮಾಜ ಮತ್ತು ಎಲ್ಲಾ ಸಮರ್ಪಿತ ಕಾರ್ಮಿಕರ ಪ್ರಯತ್ನಗಳನ್ನು ಅವರು ಗುರುತಿಸಿದರು ಮತ್ತು ಶ್ಲಾಘಿಸಿದರು. ದೇಶಾದ್ಯಂತದ ಭಕ್ತರಿಗೆ, ಉತ್ತರ ಪ್ರದೇಶದ ಜನರು ಮತ್ತು ವಿಶೇಷವಾಗಿ ಪ್ರಯಾಗ್‌ರಾಜ್ ನಾಗರಿಕರ ಅಮೂಲ್ಯ ಬೆಂಬಲ ಮತ್ತು ಪರಿಶ್ರಮಕ್ಕಾಗಿ ಶ್ರೀ ಮೋದಿ ಅವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿಯವರು ನಡೆಸಿದ ಸಂಭಾಷಣೆಯ ಇಂಗ್ಲಿಷ್ ಅನುವಾದ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿಯವರು ನಡೆಸಿದ ಸಂಭಾಷಣೆಯ ಇಂಗ್ಲಿಷ್ ಅನುವಾದ

January 23rd, 04:26 pm

2047ರ ವೇಳೆಗೆ ದೇಶದ ಗುರಿ ಏನು

ಪರಾಕ್ರಮ್ ದಿವಸ್‌ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

January 23rd, 03:36 pm

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸುವ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಂವಿಧಾನ್ ಸದನದ ಸೆಂಟ್ರಲ್ ಹಾಲ್‌ನಲ್ಲಿ ಯುವ ಸ್ನೇಹಿತರೊಂದಿಗೆ ವಿಶೇಷ ಸಂವಾದ ನಡೆಸಿದರು. 2047ರ ವೇಳೆಗೆ ರಾಷ್ಟ್ರದ ಗುರಿ ಏನು ಎಂದು ವಿದ್ಯಾರ್ಥಿಗಳಿಗೆ ವಿಚಾರಿಸಿದ ಪ್ರಧಾನಿ, ಇದಕ್ಕೆ ಅತ್ಯಂತ ಆತ್ಮವಿಶ್ವಾಸದಿಂದ ವಿದ್ಯಾರ್ಥಿಯೊಬ್ಬರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು (ವಿಕಸಿತ ಭಾರತ) ಎಂದು ಉತ್ತರಿಸಿದರು.2047 ರವರೆಗೆ ಮಾತ್ರ ಏಕೆ ಎಂದು ಪ್ರಧಾನ ಮಂತ್ರಿಯವರು ಕೇಳಿದಾಗ, ಇನ್ನೊಬ್ಬ ವಿದ್ಯಾರ್ಥಿಯು ಉತ್ತರಿಸಿದರು, ಭಾರತವು ತನ್ನ ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುತ್ತಿರುವಾಗ ನಮ್ಮ ಈಗಿನ ಪೀಳಿಗೆಯು ದೇಶ ಸೇವೆಗೆ ಸಿದ್ಧವಾಗಲಿದೆ ಎಂದು.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಪ್ರಧಾನಮಂತ್ರಿಗಳಿಂದ ಗೌರವ ನಮನ

January 23rd, 08:53 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪರಾಕ್ರಮ ದಿನದ ಅಂಗವಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಗೌರವ ನಮನ ಸಲ್ಲಿಸಿದರು. ಭಾರತದ ಸ್ವಾತಂತ್ರ್ಯ ಚಳವಳಿಗೆ ನೇತಾಜಿಯವರ ಕೊಡುಗೆ ಅನನ್ಯ; ಅವರು ಶೌರ್ಯ ಮತ್ತು ಧೈರ್ಯದ ಪ್ರತೀಕ ಎಂದು ಪ್ರಧಾನಮಂತ್ರಿ ಬಣ್ಣಿಸಿದ್ದಾರೆ.

ಚುನಾವಣಾ ಆಯೋಗವು ಕಾಲಕಾಲಕ್ಕೆ ನಮ್ಮ ಮತದಾನ ಪ್ರಕ್ರಿಯೆಯನ್ನು ಬಲಪಡಿಸಿದೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

January 19th, 11:30 am

In the 118th episode of Mann Ki Baat, PM Modi reflected on key milestones, including the upcoming 75th Republic Day celebrations and the significance of India’s Constitution in shaping the nation’s democracy. He highlighted India’s achievements and advancements in space sector like satellite docking. He spoke about the Maha Kumbh in Prayagraj and paid tributes to Netaji Subhas Chandra Bose.

ಹಿಂದೂಸ್ತಾನ್ ಟೈಮ್ಸ್ ಲೀಡರ್ಶಿಪ್ ಶೃಂಗಸಭೆ 2024 ರಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

November 16th, 10:15 am

100 ವರ್ಷಗಳ ಹಿಂದೆ, ಹಿಂದೂಸ್ತಾನ್ ಟೈಮ್ಸ್ ಅನ್ನು ಪೂಜ್ಯ ಬಾಪು ಉದ್ಘಾಟಿಸಿದರು ... ಅವರು ಗುಜರಾತಿ ಭಾಷಣಕಾರರಾಗಿದ್ದರು, ಮತ್ತು ನೀವು 100 ವರ್ಷಗಳ ನಂತರ ಇನ್ನೊಬ್ಬ ಗುಜರಾತಿಯನ್ನು ಆಹ್ವಾನಿಸಿದ್ದೀರಿ. ನಾನು, ಹಿಂದೂಸ್ತಾನ್ ಟೈಮ್ಸ್ ಮತ್ತು ಕಳೆದ 100 ವರ್ಷಗಳಲ್ಲಿ ಈ ಐತಿಹಾಸಿಕ ಪ್ರಯಾಣದೊಂದಿಗೆ ಸಂಬಂಧ ಹೊಂದಿರುವವರು, ಅದನ್ನು ಪೋಷಿಸಲು ಕೊಡುಗೆ ನೀಡಿದವರು, ಹೋರಾಡಿದ ಮತ್ತು ಸವಾಲುಗಳನ್ನು ಎದುರಿಸಿದ ಆದರೆ ದೃಢವಾಗಿ ನಿಂತ ಎಲ್ಲರನ್ನೂ ಅಭಿನಂದಿಸುತ್ತೇನೆ. ಅವರೆಲ್ಲರೂ ಇಂದು ಅಭಿನಂದನೆಗೆ ಅರ್ಹರು ಮತ್ತು ಗೌರವಕ್ಕೆ ಅರ್ಹರು. 100 ವರ್ಷಗಳ ಪ್ರಯಾಣವನ್ನು ಪೂರ್ಣಗೊಳಿಸುವುದು ನಿಜಕ್ಕೂ ಮಹತ್ವದ್ದಾಗಿದೆ. ನೀವೆಲ್ಲರೂ ಈ ಮನ್ನಣೆಗೆ ಅರ್ಹರು, ಮತ್ತು ಭವಿಷ್ಯಕ್ಕಾಗಿ ನನ್ನ ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ. ನಾನು ಇಲ್ಲಿಗೆ ಬಂದಾಗ, ನಾನು ಕುಟುಂಬದ ಸದಸ್ಯರನ್ನು ಭೇಟಿಯಾದೆ ಮತ್ತು ಹಿಂದೂಸ್ತಾನ್ ಟೈಮ್ಸ್ ನ 100 ವರ್ಷಗಳ ಪ್ರಯಾಣವನ್ನು ಪ್ರದರ್ಶಿಸುವ ಗಮನಾರ್ಹ ಪ್ರದರ್ಶನವನ್ನು ವೀಕ್ಷಿಸುವ ಅವಕಾಶ ಸಿಕ್ಕಿತು. ನಿಮಗೆ ಸಮಯವಿದ್ದರೆ ಹೊರಡುವ ಮೊದಲು ಅಲ್ಲಿಗೆ ಭೇಟಿ ನೀಡಿ ಸ್ವಲ್ಪ ಸಮಯ ಕಳೆಯಲು ನಾನು ನಿಮ್ಮೆಲ್ಲರನ್ನೂ ಪ್ರೋತ್ಸಾಹಿಸುತ್ತೇನೆ. ಇದು ಕೇವಲ ಪ್ರದರ್ಶನವಲ್ಲ, ಆದರೆ ಒಂದು ಅನುಭವ. 100 ವರ್ಷಗಳ ಇತಿಹಾಸ ನನ್ನ ಕಣ್ಣ ಮುಂದೆ ಹಾದುಹೋದಂತೆ ಭಾಸವಾಯಿತು. ದೇಶ ಸ್ವಾತಂತ್ರ್ಯ ಪಡೆದ ದಿನದಿಂದ ಮತ್ತು ಸಂವಿಧಾನವನ್ನು ಜಾರಿಗೆ ತಂದ ದಿನದಿಂದ ನಾನು ಪತ್ರಿಕೆಗಳನ್ನು ನೋಡಿದೆ. ಮಾರ್ಟಿನ್ ಲೂಥರ್ ಕಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ ಮತ್ತು ಡಾ.ಎಂ.ಎಸ್.ಸ್ವಾಮಿನಾಥನ್ ಅವರಂತಹ ಪ್ರಸಿದ್ಧ ಮತ್ತು ಪ್ರಖ್ಯಾತ ವ್ಯಕ್ತಿಗಳು ಹಿಂದೂಸ್ತಾನ್ ಟೈಮ್ಸ್ ಗೆ ಬರೆಯುತ್ತಿದ್ದರು. ಅವರ ಬರಹಗಳು ಪತ್ರಿಕೆಯನ್ನು ಅಪಾರವಾಗಿ ಶ್ರೀಮಂತಗೊಳಿಸಿದವು. ನಿಜವಾಗಿಯೂ, ನಾವು ಬಹಳ ದೂರ ಸಾಗಿದ್ದೇವೆ. ಸ್ವಾತಂತ್ರ್ಯಕ್ಕಾಗಿ ಹೋರಾಡುವುದರಿಂದ ಹಿಡಿದು ಸ್ವಾತಂತ್ರ್ಯದ ನಂತರ ಮಿತಿಯಿಲ್ಲದ ಭರವಸೆಯ ಅಲೆಗಳ ಮೇಲೆ ಸವಾರಿ ಮಾಡುವವರೆಗೆ, ಈ ಪ್ರಯಾಣವು ಅಸಾಧಾರಣ ಮತ್ತು ನಂಬಲಾಗದಂತಹದ್ದಾಗಿದೆ. ನಿಮ್ಮ ಪತ್ರಿಕೆಯಲ್ಲಿ, 1947 ರ ಅಕ್ಟೋಬರ್ ನಲ್ಲಿ ಕಾಶ್ಮೀರದ ಸೇರ್ಪಡೆಯ ನಂತರ ಇದ್ದ ಉತ್ಸಾಹವನ್ನು ನಾನು ಗ್ರಹಿಸಿದೆ, ಅದನ್ನು ಪ್ರತಿಯೊಬ್ಬ ನಾಗರಿಕರೂ ಅನುಭವಿಸಿದ್ದಾರೆ. ಆ ಕ್ಷಣದಲ್ಲಿ, ನಿರ್ಧಾರ ತೆಗೆದುಕೊಳ್ಳದಿರುವಿಕೆಯು ಕಾಶ್ಮೀರವನ್ನು ಏಳು ದಶಕಗಳ ಕಾಲ ಹಿಂಸಾಚಾರದಲ್ಲಿ ಮುಳುಗಿಸಿತು ಎಂಬುದನ್ನು ನಾನು ಅರಿತುಕೊಂಡೆ. ಇಂದು, ನಿಮ್ಮ ಪತ್ರಿಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆಯ ಮತದಾನದ ಸುದ್ದಿಗಳನ್ನು ವರದಿ ಮಾಡುತ್ತದೆ, ಇದು ಹಿಂದಿನದಕ್ಕೆ ತೀವ್ರವಾಗಿ ವ್ಯತಿರಿಕ್ತವಾಗಿದೆ. ಮತ್ತೊಂದು ಪತ್ರಿಕೆಯ ಪುಟವು ಗಮನ ಸೆಳೆಯುತ್ತದೆ ಮತ್ತು ಓದುಗರನ್ನು ಆಕರ್ಷಿಸುತ್ತದೆ. ಒಂದು ವಿಭಾಗವು ಅಸ್ಸಾಂ ಪ್ರಕ್ಷುಬ್ಧ ಪ್ರದೇಶವೆಂದು ಘೋಷಿಸಲಾಗಿದೆ ಎಂದು ವರದಿ ಮಾಡಿದರೆ, ಇನ್ನೊಂದು ವಿಭಾಗವು ಅಟಲ್ ಜಿ ಬಿಜೆಪಿಗೆ ಅಡಿಪಾಯ ಹಾಕಿದ ಬಗ್ಗೆ ಮಾತನಾಡಿತು. ಇಂದು ಅಸ್ಸಾಂನಲ್ಲಿ ಶಾಶ್ವತ ಶಾಂತಿಯನ್ನು ತರುವಲ್ಲಿ ಬಿಜೆಪಿ ಪ್ರಮುಖ ಪಾತ್ರ ವಹಿಸುತ್ತಿರುವುದು ಆಹ್ಲಾದಕರ ಕಾಕತಾಳೀಯವಾದ ಸಂಗತಿಯಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು

November 16th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಹಿಂದೂಸ್ತಾನ್ ಟೈಮ್ಸ್ ಅನ್ನು 100 ವರ್ಷಗಳ ಹಿಂದೆ ಮಹಾತ್ಮ ಗಾಂಧಿಯವರು ಉದ್ಘಾಟಿಸಿದರು ಎಂದು ಹೇಳಿದರು. ಹಿಂದೂಸ್ತಾನ್ ಟೈಮ್ಸ್ ನ 100 ವರ್ಷಗಳ ಐತಿಹಾಸಿಕ ಪ್ರಯಾಣಕ್ಕಾಗಿ ಮತ್ತು ಅದರ ಉದ್ಘಾಟನೆಯಿಂದ ಅದರೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದರು. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸಿದರು. ಸ್ಥಳದಲ್ಲಿ ಹಿಂದೂಸ್ತಾನ್ ಟೈಮ್ಸ್ ಪ್ರದರ್ಶನಕ್ಕೆ ಭೇಟಿ ನೀಡಿದ ಶ್ರೀ ಮೋದಿ, ಇದೊಂದು ಅಪೂರ್ವ ಅನುಭವವಾಗಿದೆ ಎಂದು ಹೇಳಿದರು ಮತ್ತು ಎಲ್ಲಾ ಪ್ರತಿನಿಧಿಗಳು ಇಲ್ಲಿಗೆ ಭೇಟಿ ನೀಡುವಂತೆ ಒತ್ತಾಯಿಸಿದರು. ಭಾರತಕ್ಕೆ ಸ್ವಾತಂತ್ರ್ಯ ದೊರೆತು ಸಂವಿಧಾನ ಜಾರಿಯಾದ ಕಾಲದ ಹಳೆಯ ದಿನಪತ್ರಿಕೆಗಳನ್ನು ಕಣ್ಣಾರೆ ಕಂಡಿದ್ದೇನೆ ಎಂದರು. ಮಾರ್ಟಿನ್ ಲೂಥರ್ ಕಿಂಗ್, ನೇತಾಜಿ ಸುಭಾಷಚಂದ್ರ ಬೋಸ್, ಡಾ.ಶ್ಯಾಮಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಎಂ.ಎಸ್. ಸ್ವಾಮಿನಾಥನ್ ಅವರಂತಹ ಅನೇಕ ದಿಗ್ಗಜರು ಹಿಂದೂಸ್ತಾನ್ ಟೈಮ್ಸ್ ಗಾಗಿ ಲೇಖನಗಳನ್ನು ಬರೆದಿದ್ದಾರೆ ಎಂದು ಶ್ರೀ ಮೋದಿ ಹೇಳಿರು. ಸ್ವಾತಂತ್ರ್ಯದ ನಂತರದ ಅವಧಿಯಲ್ಲಿ ಭರವಸೆಯೊಂದಿಗೆ ಮುನ್ನಡೆಯುವ ಜೊತೆಗೆ ಸ್ವಾತಂತ್ರ್ಯ ಹೋರಾಟಕ್ಕೆ ಸಾಕ್ಷಿಯಾದ ಸುದೀರ್ಘ ಪ್ರಯಾಣವು ಅಸಾಧಾರಣ ಮತ್ತು ಅದ್ಭುತವಾಗಿದೆ ಎಂದು ಅವರು ಹೇಳಿದರು. 1947ರ ಅಕ್ಟೋಬರ್‌ನಲ್ಲಿ ಕಾಶ್ಮೀರವನ್ನು ಭಾರತದೊಂದಿಗೆ ವಿಲೀನದ ಸುದ್ದಿಯನ್ನು ಓದಿದ ನಂತರ ಪ್ರತಿಯೊಬ್ಬ ಪ್ರಜೆಯಂತೆ ನಾನು ಉತ್ಸುಕನಾಗಿದ್ದೇನೆ ಎಂದು ಪ್ರಧಾನಿ ಹೇಳಿದರು. ಆದಾಗ್ಯೂ, ಏಳು ದಶಕಗಳ ಕಾಲ ಅನಿರ್ದಿಷ್ಟತೆಯು ಕಾಶ್ಮೀರವನ್ನು ಹೇಗೆ ಹಿಂಸಾಚಾರದಲ್ಲಿ ಮುಳುಗಿಸಿತು ಎಂಬುದನ್ನೂ ಆ ಕ್ಷಣದಲ್ಲಿ ತಾನು ಅರಿತುಕೊಂಡೆನು ಎಂದು ಅವರು ಹೇಳಿದರು. ಆದರೆ ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ದಾಖಲೆಯ ಮತದಾನದ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು. ಶ್ರೀ ಮೋದಿ ಅವರು ಪತ್ರಿಕೆಯಲ್ಲಿ ಅದರ ಒಂದು ಬದಿಯಲ್ಲಿ ಅಸ್ಸಾಂ ಅನ್ನು ಪ್ರಕ್ಷುಬ್ಧ ಪ್ರದೇಶವೆಂದು ಘೋಷಿಸಲಾಗಿದೆ ಎಂಬ ಸುದ್ದಿ ಇದೆ, ಇನ್ನೊಂದು ಬದಿಯಲ್ಲಿ ಅಟಲ್ ಜಿ ಅವರು ಭಾರತೀಯ ಜನತಾ ಪಕ್ಷದ ಅಡಿಪಾಯವನ್ನು ಹಾಕಿದರು ಎಂಬ ಸುದ್ದಿಯು ಪ್ರಕಟವಾಗಿರುವುದನ್ನು ಗಮನಿಸಿದರು. ಇಂದು ಅಸ್ಸಾಂನಲ್ಲಿ ಶಾಶ್ವತ ಶಾಂತಿಯನ್ನು ತರುವಲ್ಲಿ ಬಿಜೆಪಿ ದೊಡ್ಡ ಪಾತ್ರವನ್ನು ವಹಿಸುತ್ತಿರುವುದು ಕಾಕತಾಳೀಯವಾಗಿದೆ ಎಂದು ಅವರು ಹೇಳಿದರು.

ಭಾರತದ ಮುಂದಿನ ಸಾವಿರ ವರ್ಷಗಳಿಗೆ ನಾವು ಬಲವಾದ ಅಡಿಪಾಯವನ್ನು ಹಾಕುತ್ತಿದ್ದೇವೆ: ಆಸ್ಟ್ರಿಯಾದಲ್ಲಿ ಪ್ರಧಾನಿ ಮೋದಿ

July 10th, 11:00 pm

ವಿಯೆನ್ನಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಕಳೆದ 10 ವರ್ಷಗಳಲ್ಲಿ ದೇಶವು ಸಾಧಿಸಿರುವ ಪರಿವರ್ತಕ ಪ್ರಗತಿಯ ಕುರಿತು ಮಾತನಾಡಿದ ಅವರು, ಭಾರತವು ಮುಂದಿನ ದಿನಗಳಲ್ಲಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ, 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ದೇಶವಾಗಿ - ವಿಕಸಿತ್ ಭಾರತ್ - ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿಯವರು ಆಸ್ಟ್ರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ ಮಾಡಿದರು

July 10th, 10:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಯೆನ್ನಾದಲ್ಲಿ ತಮ್ಮ ಗೌರವಾರ್ಥವಾಗಿ ಅನಿವಾಸಿ ಭಾರತೀಯರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನ ಮಂತ್ರಿಯವರನ್ನು ಭಾರತೀಯರು ವಿಶೇಷ ಪ್ರೀತಿ ಮತ್ತು ಅಕ್ಕರೆಯಿಂದ ಸ್ವಾಗತಿಸಿದರು. ಆಸ್ಟ್ರಿಯನ್ ಫೆಡರಲ್ ನ ಕಾರ್ಮಿಕ ಮತ್ತು ಆರ್ಥಿಕ ಸಚಿವ ಶ್ರೀ ಮಾರ್ಟಿನ್ ಕೋಚರ್ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಆಸ್ಟ್ರಿಯಾದಾದ್ಯಂತ ನೆಲೆಸಿರುವ ಭಾರತೀಯರು ಭಾಗವಹಿಸುವಿಸಿದ್ದು ವಿಶೇಷವಾಗಿತ್ತು.

ಪ್ರಜಾಪ್ರಭುತ್ವಕ್ಕಾಗಿ ಬಂಗಾಳದ ಉತ್ಸಾಹ ಶ್ಲಾಘನೀಯ: ಮಾಲ್ಡಾ ಉತ್ತರದಲ್ಲಿ ಪ್ರಧಾನಿ

April 26th, 11:15 am

ಪಶ್ಚಿಮ ಬಂಗಾಳದ ಮಾಲ್ಡಾ ಉತ್ತರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಪ್ರಸ್ತುತ ನಡೆಯುವ ಚುನಾವಣೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಸಂವಿಧಾನವನ್ನು ಎತ್ತಿಹಿಡಿಯುವಲ್ಲಿ ಪ್ರತಿ ಮತದ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.

প্রধানমন্ত্রী মোদী পশ্চিমবঙ্গের উত্তর মালদায় একটি জনসভায় ভাষণ দিয়েছেন

April 26th, 10:46 am

ಪಶ್ಚಿಮ ಬಂಗಾಳದ ಮಾಲ್ಡಾ ಉತ್ತರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಪ್ರಸ್ತುತ ನಡೆಯುವ ಚುನಾವಣೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಸಂವಿಧಾನವನ್ನು ಎತ್ತಿಹಿಡಿಯುವಲ್ಲಿ ಪ್ರತಿ ಮತದ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಪರಾಕ್ರಮ ದಿನದಂದು ಭಾರತದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

January 23rd, 09:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪರಾಕ್ರಮ ದಿನದಂದು ಭಾರತದ ಜನತೆಗೆ ಶುಭ ಕೋರಿದ್ದಾರೆ.

​​​​​​​ಜನವರಿ 23 ರಂದು ಕೆಂಪು ಕೋಟೆಯಲ್ಲಿ ನಡೆಯುವ ʼಪರಾಕ್ರಮ್ ದಿನಾಚರಣೆʼ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿಗಳು

January 22nd, 05:56 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 23ರಂದು ಸಂಜೆ 6.30ಕ್ಕೆ ಕೆಂಪು ಕೋಟೆಯಲ್ಲಿ ನಡೆಯುವ 'ಪರಾಕ್ರಮ ದಿನಾಚರಣೆʼ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನವದೆಹಲಿಯಲ್ಲಿ ಅಧೀನಂ ಅವರೊಂದಿಗಿನ ಸಂವಾದದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

May 27th, 11:31 pm

ಮೊದಲನೆಯದಾಗಿ, ನಾನು ತಲೆಬಾಗಿ ನಮಸ್ಕರಿಸುತ್ತೇನೆ ಮತ್ತು ವಿವಿಧ 'ಆಧೀನಂ'ಗಳೊಂದಿಗೆ ಸಂಬಂಧ ಹೊಂದಿರುವ ನಿಮ್ಮಂತಹ ಎಲ್ಲಾ ಪೂಜ್ಯ ಋಷಿಗಳನ್ನು ಅಭಿನಂದಿಸುತ್ತೇನೆ. ಇಂದು ನನ್ನ ನಿವಾಸದಲ್ಲಿ ನಿಮ್ಮನ್ನು ಕಾಣಲು ನಾನು ತುಂಬಾ ಅದೃಷ್ಟಶಾಲಿ ಎಂದು ಭಾವಿಸುತ್ತೇನೆ. ಶಿವನ ಅನುಗ್ರಹದಿಂದಾಗಿ ನಿಮ್ಮಂತಹ ಶಿವನ ಎಲ್ಲಾ ಭಕ್ತರನ್ನು ಒಟ್ಟಿಗೆ ನೋಡುವ ಅವಕಾಶ ನನಗೆ ಸಿಕ್ಕಿದೆ. ನಾಳೆ ನೂತನ ಸಂಸತ್ ಭವನದ ಉದ್ಘಾಟನೆಗೆ ನೀವೆಲ್ಲರೂ ಖುದ್ದಾಗಿ ಆಗಮಿಸಿ ಆಶೀರ್ವಾದ ಮಾಡಲಿದ್ದೀರಿ ಎಂಬುದಕ್ಕೆ ನನಗೆ ತುಂಬಾ ಸಂತೋಷವಾಗಿದೆ.

ಹೊಸ ಸಂಸತ್ ಭವನದಲ್ಲಿ ರಾಜದಂಡ(ಸೆಂಗೋಲ್) ಪ್ರತಿಷ್ಠಾಪನೆಗೆ ಮುನ್ನ ತಂಜಾವೂರಿನ ಅಧೀನಂರಿಂದ(ಪುರೋಹಿತರು) ಆಶೀರ್ವಾದ ಪಡೆದ ಪ್ರಧಾನಮಂತ್ರಿ

May 27th, 09:14 pm

ನೂತನ ಸಂಸತ್ ಭವನದಲ್ಲಿ ನಾಳೆ ಸೆಂಗೋಲ್ ಪ್ರತಿಷ್ಠಾಪನೆಗೂ ಮುನ್ನ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಧೀನರಿಂದ(ಪುರೋಹಿತರು) ಇಂದು ಆಶೀರ್ವಾದ ಪಡೆದರು.

​​​​​​​ನವದೆಹಲಿಯಲ್ಲಿ ಮಹರ್ಷಿ ದಯಾನಂದ ಸರಸ್ವತಿ ಅವರ 200 ನೇ ಜಯಂತಿ ಆಚರಣೆಯಲ್ಲಿ ಪ್ರಧಾನ ಮಂತ್ರಿ ಅವರು ಭಾಷಣದ ಕನ್ನಡ ಅನುವಾದ

February 12th, 11:00 am

ಕಾರ್ಯಕ್ರಮದಲ್ಲಿರುವ ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜೀ, ಸರ್ವದೇಶಿಕ್ ಆರ್ಯ ಪ್ರತಿನಿಧಿ ಸಭಾದ ಅಧ್ಯಕ್ಷರಾದ ಶ್ರೀ ಸುರೇಶ್ ಚಂದ್ರ ಆರ್ಯ ಜೀ, ದೆಹಲಿ ಆರ್ಯ ಪ್ರತಿನಿಧಿ ಸಭಾದ ಅಧ್ಯಕ್ಷರಾದ ಶ್ರೀ ಧರಂಪಾಲ್ ಆರ್ಯ ಜೀ, ಶ್ರೀ ವಿನಯ್ ಆರ್ಯ ಜೀ ಮತ್ತು ಉಪಸ್ಥಿತರಿರುವ ನನ್ನ ಸಂಪುಟ ಸಹೋದ್ಯೋಗಿಗಳಾದ ಕಿಶನ್ ರೆಡ್ಡಿ ಜೀ, ಮೀನಾಕ್ಷಿ ಲೇಖಿ ಜೀ ಮತ್ತು ಅರ್ಜುನ್ ರಾಮ್ ಮೇಘವಾಲ್ ಜೀ, ಎಲ್ಲಾ ಪ್ರತಿನಿಧಿಗಳು ಹಾಗೂ ಸಹೋದರ ಸಹೋದರಿಯರೇ!

ನವದೆಹಲಿಯಲ್ಲಿ ಮಹರ್ಷಿ ದಯಾನಂದ ಸರಸ್ವತಿ ಅವರ 200 ನೇ ಜಯಂತಿ ಆಚರಣೆ ಉದ್ಘಾಟಿಸಿದ ಪ್ರಧಾನಿ

February 12th, 10:55 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಇಂದಿರಾಗಾಂಧಿ ಒಳ ಕ್ರೀಡಾಂಗಣದಲ್ಲಿ ಮಹರ್ಷಿ ದಯಾನಂದ ಸರಸ್ವತಿ ಅವರ 200 ನೇ ಜಯಂತಿ ಸ್ಮರಣಾರ್ಥ ಒಂದು ವರ್ಷವಿಡೀ ನಡೆಯುವ ಆಚರಣೆಗೆ ಚಾಲನೆ ನೀಡಿದರು. ಅಲ್ಲದೆ ಅವರು ಅದರ ಸ್ಮರಣಾರ್ಥ ಲಾಂಛನವನ್ನೂ ಸಹ ಬಿಡುಗಡೆ ಮಾಡಿದರು.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಿ ಮಂತ್ರಿ ಅವರಿಂದ ಉತ್ತರ

February 09th, 02:15 pm

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತ ಚರ್ಚೆಯಲ್ಲಿ ಭಾಗವಹಿಸುತ್ತಿರುವಾಗ, ನಾನು ಗೌರವಾನ್ವಿತ ರಾಷ್ಟ್ರಪತಿಗಳಿಗೆ ನನ್ನ ವಿನಮ್ರ ಕೃತಜ್ಞತೆಗಳನ್ನು ಸಲ್ಲಿಸುತ್ತಾ, ನಾನು ಅವರನ್ನು ಅಭಿನಂದಿಸುತ್ತೇನೆ. ಗೌರವಾನ್ವಿತ ಸಭಾಪತಿಗಳೆ, ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವಾಗ, ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ನೀಲನಕ್ಷೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಣಯಗಳಿಗೆ ಮಾರ್ಗಸೂಚಿಯನ್ನು ಪ್ರಸ್ತುತಪಡಿಸಿದ್ದಾರೆ.

ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿಯವರ ಉತ್ತರ

February 09th, 02:00 pm

ಸಂಸತ್ತಿನಲ್ಲಿ ರಾಷ್ಟ್ರಪತಿಯವರು ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿ ಶ‍್ರೀ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಉತ್ತರ ನೀಡಿದರು. “ಅಭಿವೃದ್ದಿ ಹೊಂದಿದ ಭಾರತ”ದ ದೃಷ್ಟಿಕೋನವನ್ನು ರಾಷ್ಟ್ರಪತಿ ಜೀ ಅವರು ತಮ್ಮ ಭಾಷಣದಲ್ಲಿ ಪ್ರತಿಬಿಂಬಿಸಿದ್ದು, ಅದಕ್ಕಾಗಿ ಪ್ರಧಾನಮಂತ್ರಿ ಅವರು ಧನ್ಯವಾದಗಳನ್ನು ಸಲ್ಲಿಸಿದರು.