ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಗೆ ಕೇಂದ್ರ ಸಂಪುಟದ ಅನುಮೋದನೆ ಈ ನೀತಿಯು ಏಕೀಕೃತ ಲಾಜಿಸ್ಟಿಕ್ಸ್ ಇಂಟರ್ಫೇಸ್ ಪ್ಲಾಟ್‌ಫಾರ್ಮ್, ಪ್ರಮಾಣೀಕರಣ, ಮೇಲ್ವಿಚಾರಣಾ ಚೌಕಟ್ಟು ಮತ್ತು ಲಾಜಿಸ್ಟಿಕ್ಸ್ ಸೇವೆಗಳಲ್ಲಿ ಹೆಚ್ಚಿನ ದಕ್ಷತೆಗಾಗಿ ಕೌಶಲ್ಯ ಅಭಿವೃದ್ಧಿಯನ್ನು ಪರಿಚಯಿಸುತ್ತದೆ
September 21st, 04:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಗೆ ಅನುಮೋದನೆ ನೀಡಿದೆ. ಈ ನೀತಿಯು ಲಾಜಿಸ್ಟಿಕ್ಸ್ ವಲಯಕ್ಕೆ ಅಂತರ್ಶಿಸ್ತೀಯ, ಬಹು ವಲಯ, ಬಹು-ವ್ಯಾಪ್ತಿ ಮತ್ತು ಸಮಗ್ರ ನೀತಿಯ ಚೌಕಟ್ಟನ್ನು ರೂಪಿಸುತ್ತದೆ. ಈ ನೀತಿಯು ಪ್ರಧಾನಮಂತ್ರಿ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್‌ಗೆ ಪೂರಕವಾಗಿದೆ. ಪ್ರಧಾನಮಂತ್ರಿ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಯ ಗುರಿಯನ್ನು ಹೊಂದಿದೆ, ಹಾಗೆಯೇ ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಯನ್ನು ಲಾಜಿಸ್ಟಿಕ್ಸ್ ಸೇವೆಗಳು ಮತ್ತು ಮಾನವ ಸಂಪನ್ಮೂಲಗಳನ್ನು ಸುವ್ಯವಸ್ಥಿತ ಪ್ರಕ್ರಿಯೆಗಳು, ನಿಯಂತ್ರಣ ಚೌಕಟ್ಟು, ಕೌಶಲ್ಯ ಅಭಿವೃದ್ಧಿ, ಉನ್ನತ ಶಿಕ್ಷಣದಲ್ಲಿ ಮುಖ್ಯವಾಹಿನಿಯ ಲಾಜಿಸ್ಟಿಕ್ಸ್ ಮತ್ತು ಸೂಕ್ತ ತಂತ್ರಜ್ಞಾನಗಳ ಅಳವಡಿಕೆಯ ಮೂಲಕ ದಕ್ಷತೆಯನ್ನು ತರಲು ಯೋಜಿಸಲಾಗಿದೆ.