ಅಕ್ಟೋಬರ್ 20ರಂದು ವಾರಣಾಸಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 19th, 05:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 20, 2024ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2:00 ಗಂಟೆಗೆ ಆರ್.ಜೆ. ಶಂಕರ ಕಣ್ಣಿನ ಆಸ್ಪತ್ರೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ. ನಂತರ, ಸಂಜೆ 4:15 ರ ಸುಮಾರಿಗೆ, ಅವರು ವಾರಣಾಸಿಯಲ್ಲಿ ಬಹುವಿಧದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.ಬಿಹಾರದ ಬಿಹ್ತಾದಲ್ಲಿ ರೂ.1413 ಕೋಟಿ ಅಂದಾಜು ವೆಚ್ಚದಲ್ಲಿ ಹೊಸ ಸಿವಿಲ್ ಎನ್‌ಕ್ಲೇವ್ ಅಭಿವೃದ್ಧಿಗೆ ಸಂಪುಟ ಅನುಮೋದನೆ
August 16th, 09:27 pm
ಬಿಹಾರ್‌ನ ಬಿಹ್ತಾದಲ್ಲಿ ಹೊಸ ಸಿವಿಲ್ ಎನ್‌ಕ್ಲೇವ್‌ನ ಅಭಿವೃದ್ಧಿ: ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್, ಬಿಹಾರ್‌ನ ಬಿಹ್ತಾದಲ್ಲಿ ಹೊಸ ಸಿವಿಲ್ ಎನ್‌ಕ್ಲೇವ್‌ನ ಅಭಿವೃದ್ಧಿಗೆ ಅನುಮೋದನೆ ನೀಡಿದೆ, ಇದರ ಅಂದಾಜು ವೆಚ್ಚ ರೂ. 1,413 ಕೋಟಿ. ಈ ಯೋಜನೆಯು ಪ್ರದೇಶದಲ್ಲಿ ಸಂಪರ್ಕ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ, ವಿಮಾನ ಪ್ರಯಾಣಕ್ಕಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುತ್ತದೆ.ರೂ.1549 ಕೋಟಿ ಅಂದಾಜು ವೆಚ್ಚದಲ್ಲಿ ಪಶ್ಚಿಮ ಬಂಗಾಳದ ಬಾಗ್ದ್ ಗೋರಾ ವಿಮಾನ ನಿಲ್ದಾಣದಲ್ಲಿ ಹೊಸ ಸಾರ್ವಜನಿಕರ ಸೌಕರ್ಯ ಸಂಕೀರ್ಣ ಅಭಿವೃದ್ಧಿಗೆ ಕೇಂದ್ರ ಸಂಪುಟ ಅನುಮೋದನೆ
August 16th, 09:22 pm
ಪಶ್ಚಿಮ ಬಂಗಾಳದ ಸಿಲಿಗುರಿಯ ಬಾಗ್ದ್ ಗೋರಾ ವಿಮಾನ ನಿಲ್ದಾಣದಲ್ಲಿ ರೂ.1549 ಕೋಟಿ ಅಂದಾಜು ವೆಚ್ಚದಲ್ಲಿ ಹೊಸ ಸಾರ್ವಜನಿಕರ ಸೌಕರ್ಯ ಸಂಕೀರ್ಣ (ಸಿವಿಲ್ ಎನ್ಕ್ಲೇವ್) ಅಭಿವೃದ್ಧಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ - ಎ.ಎ.ಐ.) ಸಲ್ಲಿಸಿದ ಪ್ರಸ್ತಾವನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಅಂಗೀಕಾರ ನೀಡಿ ಅನುಮೋದಿಸಿದೆ.