Today the youth of India is full of new confidence, succeeding in every sector: PM Modi
December 23rd, 11:00 am
PM Modi addressed the Rozgar Mela and distributed more than 71,000 appointment letters to newly appointed youth in Government departments and organisations. PM Modi underlined that in the last one and a half years, around 10 lakh permanent government jobs have been offered, setting a remarkable record. These jobs are being provided with complete transparency, and the new recruits are serving the nation with dedication and integrity.PM Modi distributes more than 71,000 appointment letters to newly appointed recruits
December 23rd, 10:30 am
PM Modi addressed the Rozgar Mela and distributed more than 71,000 appointment letters to newly appointed youth in Government departments and organisations. PM Modi underlined that in the last one and a half years, around 10 lakh permanent government jobs have been offered, setting a remarkable record. These jobs are being provided with complete transparency, and the new recruits are serving the nation with dedication and integrity.PM Modi remembers former PM Chaudhary Charan Singh on his birth anniversary
December 23rd, 09:38 am
The Prime Minister, Shri Narendra Modi, remembered the former PM Chaudhary Charan Singh on his birthday anniversary today.The relationship between India and Kuwait is one of civilizations, seas and commerce: PM Modi
December 21st, 06:34 pm
PM Modi addressed a large gathering of the Indian community in Kuwait. Indian nationals representing a cross-section of the community in Kuwait attended the event. The PM appreciated the hard work, achievement and contribution of the community to the development of Kuwait, which he said was widely recognised by the local government and society.Prime Minister Shri Narendra Modi addresses Indian Community at ‘Hala Modi’ event in Kuwait
December 21st, 06:30 pm
PM Modi addressed a large gathering of the Indian community in Kuwait. Indian nationals representing a cross-section of the community in Kuwait attended the event. The PM appreciated the hard work, achievement and contribution of the community to the development of Kuwait, which he said was widely recognised by the local government and society.ಅಹಮದಾಬಾದ್‌ನ ರಾಮಕೃಷ್ಣ ಮಠ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ವಿಡಿಯೋ ಕಾನ್ಫರೆನ್ಸ್ ಭಾಷಣ
December 09th, 01:30 pm
ಗೌರವಾನ್ವಿತ ಸ್ವಾಮಿ ಗೌತಮಾನಂದ ಜೀ ಮಹಾರಾಜ್, ದೇಶ ಮತ್ತು ವಿದೇಶಗಳಲ್ಲಿರುವ ರಾಮಕೃಷ್ಣ ಮಿಷನ್ ಮತ್ತು ಮಠದ ಗೌರವಾನ್ವಿತ ಸಾಧು ಸಂತರು, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಮತ್ತು ಈ ಕಾರ್ಯಕ್ರಮಕ್ಕೆ ಭಾಗವಹಿಸಿರುವ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ, ನಮಸ್ಕಾರ!ಗುಜರಾತ್‌ನ ರಾಮಕೃಷ್ಣ ಮಠ ಆಯೋಜಿಸಿದ್ದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
December 09th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ರಾಮಕೃಷ್ಣ ಮಠದಲ್ಲಿಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಪೂಜ್ಯ ಶ್ರೀಮತ್ ಸ್ವಾಮಿ ಗೌತಮಾನಂದ ಜಿ ಮಹಾರಾಜ್, ಭಾರತ ಮತ್ತು ವಿದೇಶಗಳ ರಾಮಕೃಷ್ಣ ಮಠ ಮತ್ತು ಮಿಷನ್ ನ ಪೂಜ್ಯ ಸಾಧು ಸಂತರು, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಮತ್ತು ಇತರೆ ಗಣ್ಯರಿಗೆ ಶುಭಾಶಯಗಳನ್ನು ತಿಳಿಸಿದರು. ಶ್ರೀ ಮೋದಿ ಅವರು ಶಾರದಾ ದೇವಿ, ಗುರುದೇವ ರಾಮಕೃಷ್ಣ ಪರಮಹಂಸರು ಮತ್ತು ಸ್ವಾಮಿ ವಿವೇಕಾನಂದರಿಗೆ ನಮನ ಸಲ್ಲಿಸಿದರು. ಇಂದಿನ ಕಾರ್ಯಕ್ರಮವನ್ನು ಶ್ರೀಮತ್ ಸ್ವಾಮಿ ಪ್ರೇಮಾನಂದ ಮಹಾರಾಜರ ಜನ್ಮದಿನದಂದು ಆಯೋಜಿಸಲಾಗಿದ್ದು, ಅವರಿಗೂ ನಮನ ಸಲ್ಲಿಸಿದರು.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 06th, 02:10 pm
ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 06th, 02:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.ವಿಕಸಿತ ಭಾರತ ಯುವ ನಾಯಕರ ಸಂವಾದದ ಭಾಗವಾಗುವುದನ್ನು ಖಾತರಿಪಡಿಸುವ ರಸಪ್ರಶ್ನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರಿಗೆ ಪ್ರಧಾನಮಂತ್ರಿ ಕರೆ
November 27th, 01:45 pm
ಯುವಕರು ಐತಿಹಾಸಿಕ ವಿಕಸಿತ ಭಾರತ ಯುವ ನಾಯಕರ ಸಂವಾದದ ಭಾಗವಾಗುವುದನ್ನು ಖಚಿತಪಡಿಸಿಕೊಳ್ಳಲು ರಸಪ್ರಶ್ನೆಯಲ್ಲಿ ಭಾಗವಹಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುವಸಮೂಹಕ್ಕೆ ಕರೆ ನೀಡಿದ್ದಾರೆ. ಇದು ವಿಕಸಿತ ಭಾರತದ ನಮ್ಮ ಗುರಿಯನ್ನು ಸಾಧಿಸಲು ಅಚ್ಚಳಿಯದ ಕೊಡುಗೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭದ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಸಾರ
November 25th, 10:31 am
ಇದು ಚಳಿಗಾಲದ ಅಧಿವೇಶನ ಮತ್ತು ವಾತಾವರಣವೂ ಸಹ ತಣ್ಣಗಿದೆ. ನಾವೆಲ್ಲರೂ ಇದೀಗ 2024ರ ಅಂತಿಮ ಘಟ್ಟದಲ್ಲಿದ್ದೇವೆ ಮತ್ತು ದೇಶ ಹೊಸ ಶಕ್ತಿ ಮತ್ತು ಕುತೂಹಲದೊಂದಿಗೆ 2025 ಅನ್ನು ಸ್ವಾಗತಿಸಲು ಭಾರಿ ಉತ್ಸಾಹದಿಂದ ತಯಾರಿ ನಡೆಸುತ್ತಿದೆ.ಆಹಾರ ಭದ್ರತೆ ಉತ್ತೇಜನಕ್ಕೆ ಮತ್ತು ಬಡತನ ನಿರ್ಮೂಲನೆಗೆ ಭಾರತ ಬದ್ಧ: ಪ್ರಧಾನಮಂತ್ರಿ
November 18th, 11:52 pm
ಆಹಾರ ಭದ್ರತೆಯನ್ನು ಉತ್ತೇಜಿಸಲು ಮತ್ತು ಬಡತನ ನಿರ್ಮೂಲನೆ ಮಾಡಲು ಭಾರತ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒತ್ತಿ ಹೇಳಿದ್ದಾರೆ. ಭಾರತವು ತನ್ನ ಯಶಸ್ಸಿನ ಮೇಲೆ ರೂಪುಗೊಳ್ಳುತ್ತದೆ ಹಾಗೂ ಎಲ್ಲರಿಗೂ ಉಜ್ವಲ ಭವಿಷ್ಯವನ್ನು ಖಾತರಿಪಡಿಸಲು ನಮ್ಮ ಸಾಮೂಹಿಕ ಶಕ್ತಿ ಮತ್ತು ಸಂಪನ್ಮೂಲಗಳ ಸಮರ್ಪಕ ಬಳಕೆ ಮಾಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ನೈಜೀರಿಯಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 17th, 07:20 pm
ಇಂದು, ನೀವು ನಿಜವಾಗಿಯೂ ಅಬುಜಾದಲ್ಲಿ ಅದ್ಭುತ ವಾತಾವರಣವನ್ನು ಸೃಷ್ಟಿಸಿದ್ದೀರಿ. ನಿನ್ನೆ ಸಂಜೆಯಿಂದ ಎಲ್ಲವನ್ನೂ ನೋಡಿದಾಗ, ನಾನು ಅಬುಜಾದಲ್ಲಿಲ್ಲ ಆದರೆ ಭಾರತದ ನಗರದಲ್ಲಿ ಇದ್ದೇನೆ ಎಂದು ಅನಿಸುತ್ತದೆ. ನಿಮ್ಮಲ್ಲಿ ಅನೇಕರು ಲಾಗೋಸ್, ಕಾನೊ, ಕಡುನಾ ಮತ್ತು ಪೋರ್ಟ್ ಹಾರ್ಕೋರ್ಟ್ ನಿಂದ ಅಬುಜಾಗೆ ಪ್ರಯಾಣಿಸಿದ್ದೀರಿ, ವಿವಿಧ ಸ್ಥಳಗಳಿಂದ ಬಂದಿದ್ದೀರಿ ಮತ್ತು ನಿಮ್ಮ ಮುಖದ ಮೇಲಿನ ಹೊಳಪು, ನೀವು ಹೊರಸೂಸುವ ಶಕ್ತಿ ಮತ್ತು ಉತ್ಸಾಹವು ಇಲ್ಲಿರಲು ನಿಮ್ಮ ಉತ್ಸುಕತೆಯನ್ನು ಪ್ರತಿಬಿಂಬಿಸುತ್ತದೆ. ನಾನು ಕೂಡ ನಿಮ್ಮನ್ನು ಭೇಟಿಯಾಗುವ ಈ ಅವಕಾಶಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದೆ. ನಿಮ್ಮ ಪ್ರೀತಿ ಮತ್ತು ವಾತ್ಸಲ್ಯ ನನಗೆ ಅಪಾರ ನಿಧಿಯಾಗಿದೆ. ನಿಮ್ಮ ನಡುವೆ ಇದ್ದು, ನಿಮ್ಮೊಂದಿಗೆ ಸಮಯ ಕಳೆಯುವುದರಿಂದ, ಈ ಕ್ಷಣಗಳು ನನ್ನ ಜೀವಮಾನವಿಡೀ ನೆನಪಿನಲ್ಲಿ ಉಳಿಯುತ್ತವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನೈಜೀರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ
November 17th, 07:15 pm
ಪ್ರಧಾನಮಂತ್ರಿಯಾಗಿ ನೈಜೀರಿಯಾಕ್ಕೆ ಇದು ಅವರ ಮೊದಲ ಭೇಟಿ ಎಂದು ಹೇಳಿದ ಶ್ರೀ ಮೋದಿ, ತಮ್ಮೊಂದಿಗೆ ಕೋಟ್ಯಂತರ ಭಾರತೀಯರ ಶುಭ ಹಾರೈಕೆಗಳನ್ನು ತಂದಿರುವೆನು ಎಂದು ಹೇಳಿದರು. ನೈಜೀರಿಯಾದಲ್ಲಿರುವ ಭಾರತೀಯರ ಪ್ರಗತಿಯ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ ಎಂದು ಅವರು ಹೇಳಿದರು. ಅಧ್ಯಕ್ಷ ಟಿನುಬು ಮತ್ತು ನೈಜೀರಿಯಾದ ಜನರಿಗೆ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಶ್ರೀ ಮೋದಿ ಅವರು ಎಲ್ಲಾ ವಿನಮ್ರತೆಯೊಂದಿಗೆ ಪ್ರಶಸ್ತಿಯನ್ನು ಕೋಟಿಗಟ್ಟಲೆ ಭಾರತೀಯರಿಗೆ ಅರ್ಪಿಸಿದರು.ಹಿಂದೂಸ್ತಾನ್ ಟೈಮ್ಸ್ ಲೀಡರ್ಶಿಪ್ ಶೃಂಗಸಭೆ 2024 ರಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
November 16th, 10:15 am
100 ವರ್ಷಗಳ ಹಿಂದೆ, ಹಿಂದೂಸ್ತಾನ್ ಟೈಮ್ಸ್ ಅನ್ನು ಪೂಜ್ಯ ಬಾಪು ಉದ್ಘಾಟಿಸಿದರು ... ಅವರು ಗುಜರಾತಿ ಭಾಷಣಕಾರರಾಗಿದ್ದರು, ಮತ್ತು ನೀವು 100 ವರ್ಷಗಳ ನಂತರ ಇನ್ನೊಬ್ಬ ಗುಜರಾತಿಯನ್ನು ಆಹ್ವಾನಿಸಿದ್ದೀರಿ. ನಾನು, ಹಿಂದೂಸ್ತಾನ್ ಟೈಮ್ಸ್ ಮತ್ತು ಕಳೆದ 100 ವರ್ಷಗಳಲ್ಲಿ ಈ ಐತಿಹಾಸಿಕ ಪ್ರಯಾಣದೊಂದಿಗೆ ಸಂಬಂಧ ಹೊಂದಿರುವವರು, ಅದನ್ನು ಪೋಷಿಸಲು ಕೊಡುಗೆ ನೀಡಿದವರು, ಹೋರಾಡಿದ ಮತ್ತು ಸವಾಲುಗಳನ್ನು ಎದುರಿಸಿದ ಆದರೆ ದೃಢವಾಗಿ ನಿಂತ ಎಲ್ಲರನ್ನೂ ಅಭಿನಂದಿಸುತ್ತೇನೆ. ಅವರೆಲ್ಲರೂ ಇಂದು ಅಭಿನಂದನೆಗೆ ಅರ್ಹರು ಮತ್ತು ಗೌರವಕ್ಕೆ ಅರ್ಹರು. 100 ವರ್ಷಗಳ ಪ್ರಯಾಣವನ್ನು ಪೂರ್ಣಗೊಳಿಸುವುದು ನಿಜಕ್ಕೂ ಮಹತ್ವದ್ದಾಗಿದೆ. ನೀವೆಲ್ಲರೂ ಈ ಮನ್ನಣೆಗೆ ಅರ್ಹರು, ಮತ್ತು ಭವಿಷ್ಯಕ್ಕಾಗಿ ನನ್ನ ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ. ನಾನು ಇಲ್ಲಿಗೆ ಬಂದಾಗ, ನಾನು ಕುಟುಂಬದ ಸದಸ್ಯರನ್ನು ಭೇಟಿಯಾದೆ ಮತ್ತು ಹಿಂದೂಸ್ತಾನ್ ಟೈಮ್ಸ್ ನ 100 ವರ್ಷಗಳ ಪ್ರಯಾಣವನ್ನು ಪ್ರದರ್ಶಿಸುವ ಗಮನಾರ್ಹ ಪ್ರದರ್ಶನವನ್ನು ವೀಕ್ಷಿಸುವ ಅವಕಾಶ ಸಿಕ್ಕಿತು. ನಿಮಗೆ ಸಮಯವಿದ್ದರೆ ಹೊರಡುವ ಮೊದಲು ಅಲ್ಲಿಗೆ ಭೇಟಿ ನೀಡಿ ಸ್ವಲ್ಪ ಸಮಯ ಕಳೆಯಲು ನಾನು ನಿಮ್ಮೆಲ್ಲರನ್ನೂ ಪ್ರೋತ್ಸಾಹಿಸುತ್ತೇನೆ. ಇದು ಕೇವಲ ಪ್ರದರ್ಶನವಲ್ಲ, ಆದರೆ ಒಂದು ಅನುಭವ. 100 ವರ್ಷಗಳ ಇತಿಹಾಸ ನನ್ನ ಕಣ್ಣ ಮುಂದೆ ಹಾದುಹೋದಂತೆ ಭಾಸವಾಯಿತು. ದೇಶ ಸ್ವಾತಂತ್ರ್ಯ ಪಡೆದ ದಿನದಿಂದ ಮತ್ತು ಸಂವಿಧಾನವನ್ನು ಜಾರಿಗೆ ತಂದ ದಿನದಿಂದ ನಾನು ಪತ್ರಿಕೆಗಳನ್ನು ನೋಡಿದೆ. ಮಾರ್ಟಿನ್ ಲೂಥರ್ ಕಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ ಮತ್ತು ಡಾ.ಎಂ.ಎಸ್.ಸ್ವಾಮಿನಾಥನ್ ಅವರಂತಹ ಪ್ರಸಿದ್ಧ ಮತ್ತು ಪ್ರಖ್ಯಾತ ವ್ಯಕ್ತಿಗಳು ಹಿಂದೂಸ್ತಾನ್ ಟೈಮ್ಸ್ ಗೆ ಬರೆಯುತ್ತಿದ್ದರು. ಅವರ ಬರಹಗಳು ಪತ್ರಿಕೆಯನ್ನು ಅಪಾರವಾಗಿ ಶ್ರೀಮಂತಗೊಳಿಸಿದವು. ನಿಜವಾಗಿಯೂ, ನಾವು ಬಹಳ ದೂರ ಸಾಗಿದ್ದೇವೆ. ಸ್ವಾತಂತ್ರ್ಯಕ್ಕಾಗಿ ಹೋರಾಡುವುದರಿಂದ ಹಿಡಿದು ಸ್ವಾತಂತ್ರ್ಯದ ನಂತರ ಮಿತಿಯಿಲ್ಲದ ಭರವಸೆಯ ಅಲೆಗಳ ಮೇಲೆ ಸವಾರಿ ಮಾಡುವವರೆಗೆ, ಈ ಪ್ರಯಾಣವು ಅಸಾಧಾರಣ ಮತ್ತು ನಂಬಲಾಗದಂತಹದ್ದಾಗಿದೆ. ನಿಮ್ಮ ಪತ್ರಿಕೆಯಲ್ಲಿ, 1947 ರ ಅಕ್ಟೋಬರ್ ನಲ್ಲಿ ಕಾಶ್ಮೀರದ ಸೇರ್ಪಡೆಯ ನಂತರ ಇದ್ದ ಉತ್ಸಾಹವನ್ನು ನಾನು ಗ್ರಹಿಸಿದೆ, ಅದನ್ನು ಪ್ರತಿಯೊಬ್ಬ ನಾಗರಿಕರೂ ಅನುಭವಿಸಿದ್ದಾರೆ. ಆ ಕ್ಷಣದಲ್ಲಿ, ನಿರ್ಧಾರ ತೆಗೆದುಕೊಳ್ಳದಿರುವಿಕೆಯು ಕಾಶ್ಮೀರವನ್ನು ಏಳು ದಶಕಗಳ ಕಾಲ ಹಿಂಸಾಚಾರದಲ್ಲಿ ಮುಳುಗಿಸಿತು ಎಂಬುದನ್ನು ನಾನು ಅರಿತುಕೊಂಡೆ. ಇಂದು, ನಿಮ್ಮ ಪತ್ರಿಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆಯ ಮತದಾನದ ಸುದ್ದಿಗಳನ್ನು ವರದಿ ಮಾಡುತ್ತದೆ, ಇದು ಹಿಂದಿನದಕ್ಕೆ ತೀವ್ರವಾಗಿ ವ್ಯತಿರಿಕ್ತವಾಗಿದೆ. ಮತ್ತೊಂದು ಪತ್ರಿಕೆಯ ಪುಟವು ಗಮನ ಸೆಳೆಯುತ್ತದೆ ಮತ್ತು ಓದುಗರನ್ನು ಆಕರ್ಷಿಸುತ್ತದೆ. ಒಂದು ವಿಭಾಗವು ಅಸ್ಸಾಂ ಪ್ರಕ್ಷುಬ್ಧ ಪ್ರದೇಶವೆಂದು ಘೋಷಿಸಲಾಗಿದೆ ಎಂದು ವರದಿ ಮಾಡಿದರೆ, ಇನ್ನೊಂದು ವಿಭಾಗವು ಅಟಲ್ ಜಿ ಬಿಜೆಪಿಗೆ ಅಡಿಪಾಯ ಹಾಕಿದ ಬಗ್ಗೆ ಮಾತನಾಡಿತು. ಇಂದು ಅಸ್ಸಾಂನಲ್ಲಿ ಶಾಶ್ವತ ಶಾಂತಿಯನ್ನು ತರುವಲ್ಲಿ ಬಿಜೆಪಿ ಪ್ರಮುಖ ಪಾತ್ರ ವಹಿಸುತ್ತಿರುವುದು ಆಹ್ಲಾದಕರ ಕಾಕತಾಳೀಯವಾದ ಸಂಗತಿಯಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
November 16th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಹಿಂದೂಸ್ತಾನ್ ಟೈಮ್ಸ್ ಅನ್ನು 100 ವರ್ಷಗಳ ಹಿಂದೆ ಮಹಾತ್ಮ ಗಾಂಧಿಯವರು ಉದ್ಘಾಟಿಸಿದರು ಎಂದು ಹೇಳಿದರು. ಹಿಂದೂಸ್ತಾನ್ ಟೈಮ್ಸ್ ನ 100 ವರ್ಷಗಳ ಐತಿಹಾಸಿಕ ಪ್ರಯಾಣಕ್ಕಾಗಿ ಮತ್ತು ಅದರ ಉದ್ಘಾಟನೆಯಿಂದ ಅದರೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದರು. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸಿದರು. ಸ್ಥಳದಲ್ಲಿ ಹಿಂದೂಸ್ತಾನ್ ಟೈಮ್ಸ್ ಪ್ರದರ್ಶನಕ್ಕೆ ಭೇಟಿ ನೀಡಿದ ಶ್ರೀ ಮೋದಿ, ಇದೊಂದು ಅಪೂರ್ವ ಅನುಭವವಾಗಿದೆ ಎಂದು ಹೇಳಿದರು ಮತ್ತು ಎಲ್ಲಾ ಪ್ರತಿನಿಧಿಗಳು ಇಲ್ಲಿಗೆ ಭೇಟಿ ನೀಡುವಂತೆ ಒತ್ತಾಯಿಸಿದರು. ಭಾರತಕ್ಕೆ ಸ್ವಾತಂತ್ರ್ಯ ದೊರೆತು ಸಂವಿಧಾನ ಜಾರಿಯಾದ ಕಾಲದ ಹಳೆಯ ದಿನಪತ್ರಿಕೆಗಳನ್ನು ಕಣ್ಣಾರೆ ಕಂಡಿದ್ದೇನೆ ಎಂದರು. ಮಾರ್ಟಿನ್ ಲೂಥರ್ ಕಿಂಗ್, ನೇತಾಜಿ ಸುಭಾಷಚಂದ್ರ ಬೋಸ್, ಡಾ.ಶ್ಯಾಮಪ್ರಸಾದ್ ಮುಖರ್ಜಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಎಂ.ಎಸ್. ಸ್ವಾಮಿನಾಥನ್ ಅವರಂತಹ ಅನೇಕ ದಿಗ್ಗಜರು ಹಿಂದೂಸ್ತಾನ್ ಟೈಮ್ಸ್ ಗಾಗಿ ಲೇಖನಗಳನ್ನು ಬರೆದಿದ್ದಾರೆ ಎಂದು ಶ್ರೀ ಮೋದಿ ಹೇಳಿರು. ಸ್ವಾತಂತ್ರ್ಯದ ನಂತರದ ಅವಧಿಯಲ್ಲಿ ಭರವಸೆಯೊಂದಿಗೆ ಮುನ್ನಡೆಯುವ ಜೊತೆಗೆ ಸ್ವಾತಂತ್ರ್ಯ ಹೋರಾಟಕ್ಕೆ ಸಾಕ್ಷಿಯಾದ ಸುದೀರ್ಘ ಪ್ರಯಾಣವು ಅಸಾಧಾರಣ ಮತ್ತು ಅದ್ಭುತವಾಗಿದೆ ಎಂದು ಅವರು ಹೇಳಿದರು. 1947ರ ಅಕ್ಟೋಬರ್‌ನಲ್ಲಿ ಕಾಶ್ಮೀರವನ್ನು ಭಾರತದೊಂದಿಗೆ ವಿಲೀನದ ಸುದ್ದಿಯನ್ನು ಓದಿದ ನಂತರ ಪ್ರತಿಯೊಬ್ಬ ಪ್ರಜೆಯಂತೆ ನಾನು ಉತ್ಸುಕನಾಗಿದ್ದೇನೆ ಎಂದು ಪ್ರಧಾನಿ ಹೇಳಿದರು. ಆದಾಗ್ಯೂ, ಏಳು ದಶಕಗಳ ಕಾಲ ಅನಿರ್ದಿಷ್ಟತೆಯು ಕಾಶ್ಮೀರವನ್ನು ಹೇಗೆ ಹಿಂಸಾಚಾರದಲ್ಲಿ ಮುಳುಗಿಸಿತು ಎಂಬುದನ್ನೂ ಆ ಕ್ಷಣದಲ್ಲಿ ತಾನು ಅರಿತುಕೊಂಡೆನು ಎಂದು ಅವರು ಹೇಳಿದರು. ಆದರೆ ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ದಾಖಲೆಯ ಮತದಾನದ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು. ಶ್ರೀ ಮೋದಿ ಅವರು ಪತ್ರಿಕೆಯಲ್ಲಿ ಅದರ ಒಂದು ಬದಿಯಲ್ಲಿ ಅಸ್ಸಾಂ ಅನ್ನು ಪ್ರಕ್ಷುಬ್ಧ ಪ್ರದೇಶವೆಂದು ಘೋಷಿಸಲಾಗಿದೆ ಎಂಬ ಸುದ್ದಿ ಇದೆ, ಇನ್ನೊಂದು ಬದಿಯಲ್ಲಿ ಅಟಲ್ ಜಿ ಅವರು ಭಾರತೀಯ ಜನತಾ ಪಕ್ಷದ ಅಡಿಪಾಯವನ್ನು ಹಾಕಿದರು ಎಂಬ ಸುದ್ದಿಯು ಪ್ರಕಟವಾಗಿರುವುದನ್ನು ಗಮನಿಸಿದರು. ಇಂದು ಅಸ್ಸಾಂನಲ್ಲಿ ಶಾಶ್ವತ ಶಾಂತಿಯನ್ನು ತರುವಲ್ಲಿ ಬಿಜೆಪಿ ದೊಡ್ಡ ಪಾತ್ರವನ್ನು ವಹಿಸುತ್ತಿರುವುದು ಕಾಕತಾಳೀಯವಾಗಿದೆ ಎಂದು ಅವರು ಹೇಳಿದರು.ಮಹಾರಾಷ್ಟ್ರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ, ಸಮರ್ಪಣೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
September 29th, 12:45 pm
ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರೇ, ಜನಪ್ರಿಯ ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂದೆ ಅವರೇ, ಉಪಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರೇ ಮತ್ತು ಶ್ರೀ ಅಜಿತ್ ಪವಾರ್ ಅವರೇ, ಪುಣೆಯಿಂದ ಬಂದಿರುವ ಸಂಸದರು ಮತ್ತು ನನ್ನ ಕ್ಯಾಬಿನೆಟ್ನ ಯುವ ಸಹೋದ್ಯೋಗಿ ಶ್ರೀ ಮುರಳೀಧರ್ ಅವರೇ, ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕ ಹೊಂದಿರುವ ಇತರ ಕೇಂದ್ರ ಸಚಿವರೇ, ನನ್ನ ಮುಂದೆ ಕಾಣುತ್ತಿರುವ ಮಹಾರಾಷ್ಟ್ರದ ಎಲ್ಲಾ ಹಿರಿಯ ಸಚಿವರೇ, ಸಂಸದರೇ, ಶಾಸಕರೇ ಮತ್ತು ಈ ಕಾರ್ಯಕ್ರಮದೊಂದಿಗೆ ಸಂಬಂಧಪಟ್ಟಿರುವ ಎಲ್ಲಾ ಸಹೋದರ ಸಹೋದರಿಯರೇ!ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಹಾರಾಷ್ಟ್ರದಲ್ಲಿ 11,200 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ದೇಶಕ್ಕೆ ಸಮರ್ಪಿಸಿದ ಪ್ರಧಾನ ಮಂತ್ರಿ
September 29th, 12:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಹಾರಾಷ್ಟ್ರದಲ್ಲಿ 11,200 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ದೇಶಕ್ಕೆ ಸಮರ್ಪಿಸಿದರು.ಕಾಂಗ್ರೆಸ್, ಎನ್‌ಸಿ ಮತ್ತು ಪಿಡಿಪಿಯ ಮೂರು ಕುಟುಂಬಗಳ ಆಡಳಿತದಿಂದ ಜಮ್ಮು ಮತ್ತು ಕಾಶ್ಮೀರದ ಜನರು ಬೇಸತ್ತಿದ್ದಾರೆ: ಪ್ರಧಾನಿ ಮೋದಿ
September 28th, 12:35 pm
ಜಮ್ಮುವಿನಲ್ಲಿ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಶಹೀದ್ ಸರ್ದಾರ್ ಭಗತ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಲಕ್ಷಾಂತರ ಭಾರತೀಯ ಯುವಕರಿಗೆ ಸ್ಫೂರ್ತಿಯ ಮೂಲವಾಗಿ ಅವರನ್ನು ಗೌರವಿಸಿದರು. J&K ವಿಧಾನಸಭಾ ಚುನಾವಣೆಯ ಅಂತಿಮ ರ್ಯಾಲಿಯಲ್ಲಿ, PM ಮೋದಿ ಅವರು ಕಳೆದ ವಾರಗಳಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ತಮ್ಮ ಭೇಟಿಗಳನ್ನು ಪ್ರತಿಬಿಂಬಿಸಿದರು, ಅವರು ಹೋದಲ್ಲೆಲ್ಲಾ ಬಿಜೆಪಿಯ ಪ್ರಚಂಡ ಉತ್ಸಾಹವನ್ನು ಗಮನಿಸಿದರು.ಜಮ್ಮು ರ್ಯಾಲಿಯಲ್ಲಿ ಸಭಿಕರನ್ನು ಆಕರ್ಷಿಸಿದ ಪ್ರಧಾನಿ ಮೋದಿ
September 28th, 12:15 pm
ಜಮ್ಮುವಿನಲ್ಲಿ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಶಹೀದ್ ಸರ್ದಾರ್ ಭಗತ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಲಕ್ಷಾಂತರ ಭಾರತೀಯ ಯುವಕರಿಗೆ ಸ್ಫೂರ್ತಿಯ ಮೂಲವಾಗಿ ಅವರನ್ನು ಗೌರವಿಸಿದರು. J&K ವಿಧಾನಸಭಾ ಚುನಾವಣೆಯ ಅಂತಿಮ ರ್ಯಾಲಿಯಲ್ಲಿ, PM ಮೋದಿ ಅವರು ಕಳೆದ ವಾರಗಳಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ತಮ್ಮ ಭೇಟಿಗಳನ್ನು ಪ್ರತಿಬಿಂಬಿಸಿದರು, ಅವರು ಹೋದಲ್ಲೆಲ್ಲಾ ಬಿಜೆಪಿಯ ಪ್ರಚಂಡ ಉತ್ಸಾಹವನ್ನು ಗಮನಿಸಿದರು.