ಕೇರಳದ ವಯನಾಡ್ ನ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
August 10th, 07:40 pm
ಈ ದುರಂತದ ಬಗ್ಗೆ ನಾನು ಮೊದಲು ತಿಳಿದಾಗಿನಿಂದ, ನಾನು ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಕೇಂದ್ರ ಸರ್ಕಾರದ ಎಲ್ಲಾ ಸಂಬಂಧಿತ ಇಲಾಖೆಗಳನ್ನು ವಿಳಂಬವಿಲ್ಲದೆ ಸಜ್ಜುಗೊಳಿಸುವುದು ಕಡ್ಡಾಯವಾಗಿದೆ ಮತ್ತು ಈ ದುರಂತ ಘಟನೆಯಿಂದ ಬಾಧಿತರಾದವರನ್ನು ಬೆಂಬಲಿಸುವ ನಮ್ಮ ಪ್ರಯತ್ನಗಳಲ್ಲಿ ನಾವು ಒಂದಾಗಿದ್ದೇವೆ.ವಯನಾಡಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದವರ ಜೊತೆ ನಮ್ಮ ಪ್ರಾರ್ಥನೆ ಇದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ, ಪರಿಹಾರ ಕಾರ್ಯಗಳಲ್ಲಿ ನೆರವು ನೀಡಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ಕೇಂದ್ರವು ಭರವಸೆ ನೀಡುತ್ತದೆ
August 10th, 07:36 pm
ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ ಬಾಧಿತರಾದವರಿಗೆ ನಮ್ಮ ಪ್ರಾರ್ಥನೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ ಮತ್ತು ಪರಿಹಾರ ಕಾರ್ಯದಲ್ಲಿ ಕೇಂದ್ರದಿಂದ ಎಲ್ಲ ಸಾಧ್ಯ ಬೆಂಬಲದ ಭರವಸೆ ನೀಡಿದ್ದಾರೆ. ಪರಿಹಾರ ಕಾರ್ಯ ಮತ್ತು ಎಲ್ಲಾ ನೆರವನ್ನು ನೀಡಲು ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಅವರು ಹೇಳಿದ್ದಾರೆ. ಪ್ರಧಾನಮಂತ್ರಿ ಇಂದು ಕೇರಳದ ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಭೂಕುಸಿತದಿಂದ ಬಾಧಿತವಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಕ್ಕಳೊಂದಿಗೆ ರಕ್ಷಾ ಬಂಧನವನ್ನು ಆಚರಿಸಿದ ಪ್ರಧಾನಮಂತ್ರಿಯವರು
August 30th, 04:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು 7, ಲೋಕ ಕಲ್ಯಾಣ ಮಾರ್ಗದಲ್ಲಿ ಮಕ್ಕಳೊಂದಿಗೆ ರಕ್ಷಾ ಬಂಧನವನ್ನು ಆಚರಿಸಿದರು.4800 ಕೋಟಿ ರೂ. ಗಳ ಹಣ ಹಂಚಿಕೆಯೊಂದಿಗೆ 2022-23 ರಿಂದ 2025-26ನೇ ಹಣಕಾಸು ವರ್ಷದವರೆಗೆ ಕೇಂದ್ರ ಪ್ರಾಯೋಜಿತ ಯೋಜನೆ "ರೋಮಾಂಚಕ ಗ್ರಾಮಗಳ ಕಾರ್ಯಕ್ರಮ"ಕ್ಕೆ ಸಂಪುಟದ ಅನುಮೋದನೆ
February 15th, 03:51 pm
ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 4800 ಕೋಟಿ ರೂ.ಗಳ ಹಣ ಹಂಚಿಕೆಯೊಂದಿಗೆ 2022-23ರಿಂದ 2025-26ರ ಹಣಕಾಸು ವರ್ಷದವರೆಗೆ ಕೇಂದ್ರ ಪ್ರಾಯೋಜಿತ ಯೋಜನೆ ರೋಮಾಂಚಕ ಗ್ರಾಮ ಕಾರ್ಯಕ್ರಮ (ವಿವಿಪಿ)ಕ್ಕೆ ತನ್ನ ಅನುಮೋದನೆ ನೀಡಿದೆ.ಪ್ರಧಾನಿ ಅವರಿಂದ ಸೆಪ್ಟಂಬರ್ 10ರಂದು ‘ಕೇಂದ್ರ- ರಾಜ್ಯ ವಿಜ್ಞಾನ ಸಮಾವೇಶ’ ಉದ್ಘಾಟನೆ
September 09th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಸೆಪ್ಟೆಂಬರ್ 10 ರಂದು ಬೆಳಿಗ್ಗೆ 10:30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ‘ಕೇಂದ್ರ-ರಾಜ್ಯ ವಿಜ್ಞಾನ ಸಮಾವೇಶ’ವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.